ನ್ಯೂಯಾರ್ಕ್: ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್, ಹಲವು ದಾಖಲೆಗಳ ಸರದಾರ ವಿರಾಟ್ ಕೊಹ್ಲಿ(Virat Kohli) ಅವರ ಆಳೆತ್ತರದ ಪ್ರತಿಮೆಯೊಂದು(Virat Kohli statue) ಅಮೆರಿಕದ ನ್ಯೂಯಾರ್ಕ್ನಲ್ಲಿ ನಿರ್ಮಿಸಲಾಗಿದೆ. ನ್ಯೂಯಾರ್ಕ್ನ ಪ್ರಸಿದ್ದ ಟೈಮ್ಸ್ ಸ್ಕ್ಯಾರ್ ನಲ್ಲಿ ಕೊಹ್ಲಿಯ ಈ ಪ್ರತಿಮೆಯನ್ನು ನಿಲ್ಲಿಸಲಾಗಿದೆ.
2028 ರಲ್ಲಿ ಲಾಸ್ ಏಂಜಲೀಸ್ ಒಲಿಂಪಿಕ್ಸ್ ನಲ್ಲಿ ಕ್ರಿಕೆಟ್ ಸೇರ್ಪಡೆಗೊಳ್ಳುವಲ್ಲಿ ಕೊಹ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದೇ ಕಾರಣದಿಂದ ಕೊಹ್ಲಿಯ ಪ್ರತಿಮೆಯನ್ನು ಬ್ರಾಂಡ್ ಅಂಬಾಸಿಡರ್ ಆಗಿರುವ ಮ್ಯಾಟ್ರೆಸ್ ಕಂಪನಿಯೊಂದರ ಮಾರ್ಕೆಟಿಂಗ್ ಅಭಿಯಾನದ ಭಾಗವಾಗಿ ನಿರ್ಮಿಸಲಾಗಿದೆ. ಹಾಸಿಗೆಗಳಿಂದ ಒದಗಿಸಲಾದ ಸೌಕರ್ಯವನ್ನು ಹೈಲೈಟ್ ಮಾಡಲು ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಈ ವಿಡಿಯೋವನ್ನು ಮ್ಯಾಟ್ರೆಸ್ ಕಂಪನಿ ಹಂಚಿಕೊಂಡಿದೆ.
ಕಳೆದ ತಿಂಗಳು ಮುಕ್ತಾಯ ಕಂಡಿದ್ದ ಐಪಿಎಲ್ ಟೂರ್ನಿಯಲ್ಲಿ 700ಕ್ಕೂ ಅಧಿಕ ರನ್ ಗಳಿಸಿ ಟೂರ್ನಿಯಲ್ಲೇ ಗರಿಷ್ಠ ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದ ಕೊಹ್ಲಿಯ ಮೇಲೆ ಟಿ20 ವಿಶ್ವಕಪ್ ಟೂರ್ನಿಯಲ್ಲಿಯೂ ಭಾರೀ ನಿರೀಕ್ಷೆ ಇಡಲಾಗಿತ್ತು. ಆದರೆ ಕೊಹ್ಲಿ ಕಳಪೆ ಬ್ಯಾಟಿಂಗ್ ಮೂಲಕ ಈ ನಿರೀಕ್ಷೆಯನ್ನು ಹುಸಿಗೊಳಿಸಿದ್ದಾರೆ.ಆಡಿದ 6 ಪಂದ್ಯಗಳ ಪೈಲಿ 2 ಪಂದ್ಯದಲ್ಲಿ ಶೂನ್ಯ ಸುತ್ತಿದ್ದಾರೆ. ಸೋಮವಾರ ಡೇರೆನ್ ಸಾಮಿ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಪುರುಷರ ಟಿ 20 ವಿಶ್ವಕಪ್ನ ಆಸ್ಟ್ರೇಲಿಯಾ ವಿರುದ್ಧದ ನಿರ್ಣಾಯಕ ಸೂಪರ್ 8 ಪಂದ್ಯದಲ್ಲಿ ಕೊಹ್ಲಿ ಶೂನ್ಯಕ್ಕೆ ಔಟಾಗಿರುವುದು ಮಂಡೆ ಬಿಸಿಗೆ ಕಾರಣವಾಗಿದೆ. ಐದು ಎಸೆತಗಳನ್ನು ಬಳಸಿಕೊಂಡು ರನ್ ಬಾರಿಸದೇ ನಿರ್ಗಮಿಸಿದರು.
ಇದನ್ನೂ ಓದಿ Virat Kohli : ವಿರಾಟ್ ಕೊಹ್ಲಿ ಕತೆ ಮುಗೀತು… ಮತ್ತೆ ಶೂನ್ಯಕ್ಕೆ ಔಟಾದ ಸ್ಟಾರ್ ಬ್ಯಾಟರ್!
ಟಿ20 ವಿಶ್ವಕಪ್ಗೆ ತಂಡ ಪ್ರಕಟಿಸುವ ಮುನ್ನ ಅಮೆರಿಕ ಮತ್ತು ವಿಂಡೀಸ್ ಪಿಚ್ಗಳು ನಿಧಾನಗತಿಯದ್ದಾಗಿದ್ದು, ಕೊಹ್ಲಿಗೆ ಇದು ಸೂಕ್ತವಾಗಿಲ್ಲ ಹೀಗಾಗಿ ಅವರನ್ನು ಆಯ್ಕೆ ಮಾಡುವುದು ಅನುಮಾನ ಎನ್ನಲಾಗಿತ್ತು. ಆದರೆ, ಸ್ಟಾರ್ ಆಟಗಾರನನ್ನು ಕೈ ಬಿಟ್ಟರೆ ಬಿಸಿಸಿಐ ವಿರುದ್ಧ ಭಾರೀ ಟೀಕೆ ಮತ್ತು ವಿರೋಧ ವ್ಯಕ್ತವಾಗುವುದು ಎನ್ನುವ ನಿಟ್ಟಿನಲ್ಲಿ ಅವರಿಗೆ ಅವಕಾಶ ನೀಡಲಾಗಿತ್ತು. ಅಂದು ಊಹೆ ಮಾಡಿದಂತೆ ಇದೀಗ ಕೊಹ್ಲಿ ನಿಧಾನಗತಿಯ ಪಿಚ್ನಲ್ಲಿ ರನ್ ಗಳಿಸಲು ಪರದಾಡುತ್ತಿದ್ದಾರೆ.
ಕೊಹ್ಲಿಯನ್ನು ಆರಂಭಿಕನಾಗಿ ಆಡಿಸಿದ್ದು ಕೂಡ ಅವರ ಬ್ಯಾಟಿಂಗ್ ವೈಫಲ್ಯಕ್ಕೆ ಕಾರಣವಿರಬಹುದು. ಕೆಲ ವರ್ಷಗಳಿಂದ ಐಪಿಎಲ್ನಲ್ಲಿ ಕೊಹ್ಲಿ ಆರಂಭಿಕನಾಗಿ ಆಡಿದ್ದರೂ ಕೂಡ ಐಸಿಸಿ ಟೂರ್ನಿಯಲ್ಲಿ ಇದುವರೆಗೂ ಆಡಿರಲಿಲ್ಲ. ಶೈನಿಂಗ್ ಬಾಲ್ನಲ್ಲಿ ಅವರಿಗೆ ಆಡಿದ ಅನುಭವ ಕೂಡ ಅಷ್ಟಾಗಿ ಇಲ್ಲ. ಏನಿದ್ದರೂ ಮಧ್ಯಮ ಕ್ರಮಾಂಕದಲ್ಲಿಯೇ ಅವರು ಹೆಚ್ಚು ಸಕ್ಸನ್ ಕಂಡಿರುವುದು. ಹೀಗಾಗಿ ಮುಂದಿನ ಪಂದ್ಯದಲ್ಲಿ ಅವರನ್ನು ಎಂದಿನಂತೆ ದ್ವಿತೀಯ ಕ್ರಮಾಂಕದಲ್ಲಿಯೇ ಆಡಿಸುವುದು ಸೂಕ್ತ ಎನ್ನುವಂತಿದೆ.