Site icon Vistara News

RCB: ಆರ್​ಸಿಬಿಗೆ ಮತ್ತೆ ಕಿಂಗ್​ ಕೊಹ್ಲಿ ಸಾರಥಿ

virat kohli

ಬೆಂಗಳೂರು: ಇದೇ ವರ್ಷ ನಡೆಯುವ ಬಹುನಿರೀಕ್ಷಿತ ಐಪಿಎಲ್(IPL 2024)​ 17ನೇ ಆವೃತ್ತಿಯಲ್ಲಿ ಕನ್ನಡಿಗರ ನೆಚ್ಚಿನ ತಂಡದವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು(Royal Challengers Bangalore) ತಂಡದಲ್ಲಿ ದೊಡ್ಡ ಬದಲಾವಣೆಯೊಂದು ಸಂಭವಿಸುವು ಮುನ್ಸೂಚನೆಯೊಂದು ಲಭಿಸಿದೆ. ಈ ಹಿಂದೆ ತಂಡದ ನಾಯಕನಾಗಿದ್ದ ವಿರಾಟ್​ ಕೊಹ್ಲಿ(Virat Kohli) ಮತ್ತೆ ನಾಯಕತ್ವ ವಹಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ವಿರಾಟ್​ ಕೊಹ್ಲಿ ಅವರು ಭಾರತ ತಂಡದ ಮೂರು ಮಾದರಿಯ ನಾಯಕತ್ವ ವಹಿಸಿಕೊಂಡಿದ್ದ ವೇಳೆ ಐಪಿಎಲ್​ನಲ್ಲಿಯೂ ತಂಡವನ್ನು ಮುನ್ನಡೆಸುವುದು ಕಷ್ಟವಾಗುತ್ತದೆ, ಕೆಲಸದ ಒತ್ತಡದಿಂದಾಗಿ ಆಟದ ಕಡೆ ಸರಿಯಾಗಿ ಗಮನ ಕೊಡಲು ಸಾಧ್ಯವಾಗುತ್ತಿಲ್ಲ ಎಂದು ಐಪಿಎಲ್​ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಸೂಕ್ತ ನಾಯಕನ ಸ್ಥಾನಕ್ಕೆ ಚೆನ್ನೈ ತಂಡದಲ್ಲಿದ್ದ ಫಾಫ್​ ಡುಪ್ಲೆಸಿಸ್​ ಅವರನ್ನು ಖರೀದಿ ಮಾಡಿ ಅವರಿಗೆಎ ನಾಯಕತ್ವ ನೀಡಲಾಗಿತ್ತು.


ಎರಡು ಸೀಸನ್​ನಲ್ಲಿ ಡುಪ್ಲೆಸಿಸ್ ಆರ್​ಸಿಬಿ ತಂಡವನ್ನು ಮುನ್ನಡೆಸಿದರೂ ತಂಡದ ಭವಿಷ್ಯ ಮಾತ್ರ ಬದಲಾಗಲಿಲ್ಲ. ಕಳೆದ ಬಾರಿಯಂತೂ ಲೀಗ್​ನಿಂದಲೇ ಹೊರಬಿದ್ದಿತ್ತು. ಇದೀಗ ಯಾವುದೇ ನಾಯಕತ್ವದ ಹೊರೆ ಇಲ್ಲದ ಕೊಹ್ಲಿಯನ್ನು ತಂಡದ ನಾಯಕನಾಗಿ ಮಾಡಲು ಫ್ರಾಂಚೈಸಿ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ Virat Kohli: ಕುಮಾರ ಸಂಗಕ್ಕರ ವಿಶ್ವ ದಾಖಲೆ ಮುರಿದ ‘ಕಿಂಗ್​’ ವಿರಾಟ್​ ಕೊಹ್ಲಿ

ಕಳೆದ ಆವೃತ್ತಿಯಲ್ಲಿ ವಿರಾಟ್​ ಕೊಹ್ಲಿ ಅವರು ಡು ಪ್ಲೆಸಿಸ್​ ಅನುಪಸ್ಥಿತಿಯಲ್ಲಿ ಮೂರು ಪಂದ್ಯಗಳಲ್ಲಿ ಹಂಗಾಮಿಯಾಗಿ ತಂಡದ ನಾಯಕತ್ವ ವಹಿಸಿದ್ದರು. ಅಲ್ಲದೆ ಮೂರು ಪಂದ್ಯಗಳಲ್ಲಿಯೂ ತಂಡ ಗೆದ್ದಿತ್ತು. ಇದೇ ವೇಳೆ ಕೊಹ್ಲಿಗೆ ಮತ್ತೆ ನಾಯಕತ್ವ ನೀಡುವುದು ಸೂಕ್ತ ಎಂದು ಆರ್​ಸಿಬಿ ಅಭಿಮಾನಿಗಳು ಕೂಡ ಒತ್ತಾಯ ಮಾಡಿದ್ದರು. ಸದ್ಯದ ಮಾಹಿತಿ ಪ್ರಕಾರ ಕೊಹ್ಲಿ ನಾಯಕನಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬಂದರೂ ಕೂಡ ಕೊಹ್ಲಿ ಇದಕ್ಕೆ ಒಪ್ಪಲಿದ್ದಾರಾ ಎನ್ನುವುದು ಕುತೂಹಲ.


ಕೊಹ್ಲಿಯ ನಾಕಯತ್ವ ಹೇಗಿದೆ

ವಿರಾಟ್​ ಕೊಹ್ಲಿ 2013ರಲ್ಲಿ ಆರ್​ಸಿಬಿಯ ಪೂರ್ಣ ಪ್ರಮಾಣದ ನಾಯಕನಾಗಿ ನೇಮಕಗೊಂಡಿದ್ದರು. 2021ರ ತನಕ ಅವರು ಆರ್​ಸಿಬಿಯನ್ನು ಮುನ್ನಡೆಸಿದ್ದರು. ಕೊಹ್ಲಿ ನಾಯಕತ್ವದಲ್ಲಿ ಒಟ್ಟು 140 ಪಂದ್ಯಗಳನ್ನು ಆಡಿದ್ದ ಆರ್​​ಸಿಬಿ 66 ಪಂದ್ಯಗಳನ್ನು ಜಯಿಸಿದೆ. 70 ಪಂದ್ಯಗಳಲ್ಲಿ ಸೋಲು ಕಂಡಿದೆ. ಐಪಿಎಲ್​ ಇತಿಹಾಸದಲ್ಲಿ ವಿನ್ನಿಂಗ್ಸ್​ ಸರಾಸರಿಯಲ್ಲಿ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಅವರ ನಾಯಕತ್ವದ ಸರಾಸರಿ ಗೆಲುವು ಶೇ. 46.15 ರಷ್ಟಿದೆ. ದಾಖಲೆ ಧೋನಿ ಹೆಸರಿನಲ್ಲಿದೆ. ಧೋನಿ ನಾಯಕತ್ವದ ಗೆಲುವಿನ ಸರಾಸರಿ 60.38 ರಷ್ಟಿದೆ.

ಇದನ್ನೂ ಓದಿ IPL 2024 : ತವರು ಮೈದಾನವನ್ನೇ ಬದಲಿಸಿದ ಪಂಜಾಬ್​ ಕಿಂಗ್ಸ್​, ಮೊಹಾಲಿಯಲ್ಲಿಲ್ಲ ಪಂದ್ಯ!

ಹರಾಜಿನಲ್ಲಿ ಆರ್​ಸಿಬಿ ಖರೀದಿಸಿದ ಆಟಗಾರರು

ಅಲ್ಜಾರಿ ಜೋಸೆಫ್ (11.5 ಕೋಟಿ), ಯಶ್ ದಯಾಳ್ (5 ಕೋಟಿ), ಟಾಮ್ ಕರ್ರನ್ (1.5 ಕೋಟಿ), ಲಾಕಿ ಫರ್ಗುಸನ್ (2 ಕೋಟಿ), ಸ್ವಪ್ನಿಲ್ ಸಿಂಗ್ (0.2 ಕೋಟಿ), ಸೌರವ್ ಚೌಹಾಣ್ (0.2 ಕೋಟಿ).

ಆರ್​ಸಿಬಿ ತಂಡ

ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್ವೆಲ್, ವಿರಾಟ್ ಕೊಹ್ಲಿ, ಕ್ಯಾಮೆರಾನ್ ಗ್ರೀನ್, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಾಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಯಾಂಕ್ ದಾಗರ್, ಮಹಿಪಾಲ್ ಲೊಮ್ರೊರ್, ಕರಣ್ ಶರ್ಮಾ, ಮನೋಜ್ ಭಾಂಡಗೆ, ವೈಶಾಕ್ ವಿಜಯ್ ಕುಮಾರ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟಾಪ್ಲೆ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರ್ರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್.

Exit mobile version