ಬೆಂಗಳೂರು: ಆರ್‌ಸಿಬಿ(RCB) ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ(Virat Kohli) ಐಪಿಎಲ್ನಲ್ಲಿ(IPL 2024) ಒಂದೇ ತಾಣದಲ್ಲಿ ಅತ್ಯಧಿಕ ರನ್ ಗಳಿಸಿದ ಆಟಗಾರ ಎಂದ ದಾಖಲೆ ಬರೆದಿದ್ದಾರೆ. ಈ ಮೂಲಕ ರೋಹಿತ್ ಶರ್ಮ ದಾಖಲೆಯನ್ನು ಮುರಿದಿದ್ದಾರೆ. ವಿರಾಟ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಈ ಮೈಲುಗಲ್ಲು ನೆಟ್ಟರು.
ಚೆನ್ನೈ ವಿರುದ್ಧದ ಪಂದ್ಯದಲ್ಲಿ 3 ರನ್ ಗಳಿಸುತ್ತಿದ್ದಂತೆ ಕೊಹ್ಲಿ ಅವರು ರೋಹಿತ್ ದಾಖಲೆಯನ್ನು ಹಿಂದಿಕ್ಕಿದರು. ರೋಹಿತ್ ವಾಂಖೆಡೆ ಸ್ಟೇಡಿಯಂನಲ್ಲಿ 2295 ರನ್ ಬಾರಿಸಿದ್ದರು. ಇದೀಗ ಕೊಹ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 3005* ರನ್ ಬಾರಿಸಿ ದಾಖಲೆಯನ್ನು ತಮ್ಮ ಹೆಸರಿಗೆ ಬರೆದಿದ್ದಾರೆ. ಎಬಿಡಿ ವಿಲಿಯರ್ಸ್ ಚಿನ್ನಸ್ವಾಮಿಯಲ್ಲಿ 1960 ರನ್ ಬಾರಿಸಿದ್ದಾರೆ.
ಮಳೆಯಿಂದ ಪಂದ್ಯ ಸ್ಥಗಿತ
ಹವಾಮಾನ ಇಲಾಖೆ ನೀಡಿದ ಎಚ್ಚರಿಕೆಯ ಪ್ರಕಾರ ಸದ್ಯ ಪಂದ್ಯ ಭಾರೀ ಮಳೆಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಟಾಸ್ ಸೋತು ಬ್ಯಾಟಿಂಗ್ ಆಹ್ವಾನ ಪಡೆದ ಆರ್‌ಸಿಬಿ ಉತ್ತಮವಾಗು ಆಡುತ್ತಿದ್ದ ವೇಳೆ ಮಳೆ ಸುರಿದಿದೆ. ಸದ್ಯ ಆರ್‌ಸಿಬಿ ವಿಕೆಟ್ ನಷ್ಟವಿಲ್ಲದೆ 3 ಓವರ್ಗೆ 31 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದೆ. ವಿರಾಟ್ ಕೊಹ್ಲಿ(19) ಮತ್ತು ಫಾಫ್ ಡುಪ್ಲೆಸಿಸ್ (12) ರನ್ ಗಳಿಸಿ ಕ್ರೀಸ್ನಲ್ಲಿದ್ದಾರೆ.
ಎಷ್ಟೇ ಮಳೆಯಾದರೂ ಕೂಡ ಮಳೆ ನಿಂತ ಕೆಲವೇ ಕ್ಷಣದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ(M Chinnaswamy Stadium) ಪಂದ್ಯವನ್ನು ಆರಂಭಗೊಳ್ಳುವಂತೆ ಮಾಡುವ ವಿಶೇಷ ಸಬ್ ಏರ್ ಸಿಸ್ಟಮ್(SubAir facility) ತಂತ್ರಜ್ಞಾನ(SubAir facility Chinnaswamy)ವಿದೆ. ಸಬ್ ಏರ್ ಸಿಸ್ಟಮ್ ಅಳವಡಿಸಿಕೊಂಡ ವಿಶ್ವದ ಮೊದಲ ಕ್ರಿಕೆಟ್ ಕ್ರೀಡಾಂಗಣ ಎಂಬ ಖ್ಯಾತಿ ಚಿನ್ನಸ್ವಾಮಿ ಕ್ರೀಡಾಂಗಣದ್ದಾಗಿದೆ. ಉದಾಹರಣೆಗೆ ಒಂದು ಗಂಟೆ ಭಾರಿ ಮಳೆ ಸುರಿದರೆ 7 ನಿಮಿಷಗಳಲ್ಲಿ ಕ್ರೀಡಾಂಗಣ ಪಂದ್ಯಕ್ಕೆ ಸಿದ್ಧವಾಗಿರುತ್ತದೆ. ನೀರನ್ನು ಹೀರಿಕೊಂಡ ನಂತರ ಸಬ್ ಏರ್ ಯಂತ್ರದ ಮೂಲಕ ಅದೇ ಕೊಳವೆಗಳಲ್ಲಿ ಔಟ್‌ಫೀಲ್ಡ್‌ಗೆ ಬಿಸಿ ಗಾಳಿಯನ್ನು ಹಾಯಿಸಿ ಮೈದಾನವನ್ನು ಒಣಗಿಸುವ ವ್ಯವಸ್ಥೆಯಿದೆ. ಒಂದೊಮ್ಮೆ ಮಳೆಯ ಆರ್ಭಟ ನಿಲ್ಲದೇ ಹೋದಲ್ಲಿ, ಆಗ ಎಷ್ಟೇ ದೊಡ್ಡ ತಂತ್ರಜ್ಞಾನವಿದ್ದರೂ ಇದು ಉಪಯೋಗಕ್ಕೆ ಬಾರದು. ಹೀಗಾಗಿ ಪಂದ್ಯದ ಅಳಿವು ಉಳಿವಿನ ಭವಿಷ್ಯ ಮಳೆಯ ಕೈಯಲ್ಲಿದೆ.
ಇದನ್ನೂ ಓದಿ IPL 2024 : ಹಾರ್ದಿಕ್ ಪಾಂಡ್ಯಗೆ ನಿಷೇಧ ಹೇರಿದ ಬಿಸಿಸಿಐ; ಮುಂದಿನ ಪಂದ್ಯದಲ್ಲಿ ಆಡದಂತೆ ತಾಕೀತು
ನೆಟ್ ರನ್‌ರೇಟ್‌ನಲ್ಲಿ ಚೆನ್ನೈ ಮುಂದಿದೆ (0.528). ಆರ್‌ಸಿಬಿ 0.387 ರನ್‌ರೇಟ್ ಹೊಂದಿದೆ. ಹೀಗಾಗಿ ಆರ್‌ಸಿಬಿ ಪ್ಲೇ ಆಫ್ ಪ್ರವೇಶಿಸಬೇಕಾದರೆ, ಆರ್‌ಸಿಬಿ ಕನಿಷ್ಠ 18 ರನ್ ಅಂತರದಿಂದ ಗೆಲ್ಲಬೇಕು ಅಥವಾ 11 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಬೇಕು ಆಗ ಮಾತ್ರ ಆರ್‌ಸಿಬಿ ಪ್ಲೇ ಆಫ್ ಪ್ರವೇಶಿಸಲಿದೆ. ಈ ಎರಡು ಲೆಕ್ಕಾಚಾರದ ಗೆಲುವು ಒಲಿಯದೇ ಹೋದರೆ ಆರ್‌ಸಿಬಿ ನಿರಾಸೆಗೆ ಒಳಗಾಗಲಿದೆ. 5ನೇ ಸ್ಥಾನಿಯಾಗಿ ಟೂರ್ನಿಯಿಂದ ನಿರ್ಗಮಿಸಲಿದೆ. ಚೆನ್ನೈ ಮುನ್ನಡೆಗೆ ಸಾಮಾನ್ಯ ಗೆಲುವು ಸಾಕು. 16 ಅಂಕ ಗಳಿಸಿ 4ನೇ ತಂಡವಾಗಿ ಪ್ಲೇ ಆಫ್ಗೆ ಲಗ್ಗೆ ಇಡಲಿದೆ.