Virat Kohli: ಲಂಕಾ ಸರಣಿಯಲ್ಲಿ ರನ್​ ದಾಖಲೆ ಬರೆಯಲು ಸಜ್ಜಾದ ವಿರಾಟ್​ ಕೊಹ್ಲಿ - Vistara News

ಕ್ರೀಡೆ

Virat Kohli: ಲಂಕಾ ಸರಣಿಯಲ್ಲಿ ರನ್​ ದಾಖಲೆ ಬರೆಯಲು ಸಜ್ಜಾದ ವಿರಾಟ್​ ಕೊಹ್ಲಿ

Virat Kohli:ಸದ್ಯ 292* ಏಕದಿನ ಪಂದ್ಯಗಳನ್ನಾಡಿರುವ ವಿರಾಟ್​ ಕೊಹ್ಲಿ 13,848* ರನ್(virat kohli odi runs)​ ಬಾರಿಸಿದ್ದಾರೆ. ಲಂಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಕೊಹ್ಲಿ 152 ರನ್​ ಬಾರಿಸಿದರೆ 14 ಸಾವಿರ ರನ್​ ಪೂರೈಸಲಿದ್ದಾರೆ

VISTARANEWS.COM


on

Virat Kohli
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಟೀಮ್​ ಇಂಡಿಯಾ ಬ್ಯಾಟರ್, ಹಲವು ದಾಖಲೆಗಳ ಸರದಾರ​ ವಿರಾಟ್​ ಕೊಹ್ಲಿಗೆ(Virat Kohli) ಶ್ರೀಲಂಕಾ(India tour of Sri Lanka) ವಿರುದ್ಧದ ಏಕದಿನ ಸರಣಿಯಲ್ಲಿ ವಿಶೇಷ ದಾಖಲೆಯೊಂದನ್ನು ಬರೆಯುವ ಅವಕಾಶವಿದೆ. ಹೌದು, ಕೊಹ್ಲಿ 152 ರನ್ ಗಳಿಸಿದರೆ ಏಕದಿನ ಕ್ರಿಕೆಟ್​ನಲ್ಲಿ 14 ಸಾವಿರ ರನ್ ಪೂರೈಸಲಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಲಂಕಾ ವಿರುದ್ಧದ ಏಕದಿನ ಸರಣಿ ಆಗಸ್ಟ್​ 2ರಿಂದ ಆರಂಭಗೊಳ್ಳಲಿದೆ.

ಸದ್ಯ 292* ಏಕದಿನ ಪಂದ್ಯಗಳನ್ನಾಡಿರುವ ವಿರಾಟ್​ ಕೊಹ್ಲಿ 13,848* ರನ್(virat kohli odi runs)​ ಬಾರಿಸಿದ್ದಾರೆ. ಲಂಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಕೊಹ್ಲಿ 152 ರನ್​ ಬಾರಿಸಿದರೆ 14 ಸಾವಿರ ರನ್​ ಮೈಲುಗಲ್ಲು ತಲುಪಲಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 14000ಕ್ಕೂ ಹೆಚ್ಚು ರನ್ ಗಳಿಸಿದ ಸಾರ್ವಕಾಲಿದ ದಾಖಲೆ ಸಚಿನ್ ತೆಂಡೂಲ್ಕರ್ ಮತ್ತು ಕುಮಾರ ಸಂಗಕ್ಕಾರ ಹೆಸರಿನಲ್ಲಿದೆ. ಸಚಿನ್ 463 ಏಕದಿನ ಪಂದ್ಯಗಳಲ್ಲಿ 18,426 ರನ್ ಗಳಿಸಿದ್ದರೆ, ಕುಮಾರ ಸಂಗಕ್ಕಾರ 404 ಪಂದ್ಯಗಳನ್ನಾಡಿ 14,234 ರನ್ ಬಾರಿಸಿದ್ದಾರೆ. ಕೊಹ್ಲಿಗೆ ಸಂಗಕ್ಕಾರ ದಾಖಲೆ ಮುರಿಯುವ ಅವಕಾಶವಿದೆ. ಆದರೆ ಸಚಿನ್​ ದಾಖಲೆ ಮುರಿಯುವುದು ಕಷ್ಟ ಸಾಧ್ಯ.

ಟಿ20 ವಿಶ್ವಕಪ್​ ಬಳಿಕ ಲಂಡನ್​ಗೆ ತೆರಳಿ ಕುಟುಂಬದ ಜತೆ ಕಾಲ ಕಳೆಯುತ್ತಿದ್ದ ವಿರಾಟ್​ ಕೊಹ್ಲಿ ಲಂಕಾ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ ಎಂದು ಹೇಳಲಾಗಿತ್ತು. ಕೊಹ್ಲಿ ಜತೆ ರೋಹಿತ್​ ಕೂಡ ವಿಶ್ರಾಂತಿ ಪಡೆಯಲು ನಿರ್ದರಿಸಿದ್ದಾರೆ ಎನ್ನಲಾಗಿತ್ತು. ಆದರೆ, ಗಂಭೀರ್​ ಎಲ್ಲ ಹಿರಿಯ ಆಟಗಾರರರು ಕೂಡ ಈ ಸರಣಿಯಲ್ಲಿ ಆಡುವಂತೆ ಸೂಚನೆ ನೀಡಿದ್ದರು. ಗುರುವಾರ ತಂಡ ಪ್ರಕಟಗೊಳ್ಳುವ ವೇಳೆ ಅಚ್ಚರಿ ಎಂಬಂತೆ ಎಲ್ಲ ಹಿರಿಯ ಆಟಗಾರರು ಕೂಡ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ Virat Kohli: ಮೊದಲ ಬಾರಿಗೆ ಮಗ ಅಕಾಯ್ ಜತೆ ಕಾಣಿಸಿಕೊಂಡ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

ಗಂಭೀರ್​ ಕೋಚ್​ ಆಗುತ್ತಿದ್ದಂತೆಯೇ ಕೆಲ ನೆಟ್ಟಿಗರು ಗಂಭೀರ್​ ಮತ್ತು ಕೊಹ್ಲಿ ನಡುವಣ ಆನ್ ಫೀಲ್ಡ್ ಜಗಳ ಮತ್ತೆ ಶುರುವಾಗಿ ಇದು ತಂಡಕ್ಕೆ ಭಾದಿಸಲಿದೆ ಎಂದು ಹೇಳಲಾಗಿತ್ತು. ಅಲ್ಲದೆ ಗಂಭೀರ್​ ಅವರನ್ನು ಕೋಚ್​ ಆಗಿ ಆಯ್ಕೆ ಮಾಡುವ ಮುನ್ನ ವಿರಾಟ್​ ಕೊಹ್ಲಿ(virat kohli) ಜತೆ ಬಿಸಿಸಿಐ ಅಭಿಪ್ರಾಯ ಕೇಳಿಲ್ಲ ಎಂಬ ಮಾತುಗಳು ಕೇಳಿಬಂದಿತ್ತು. ಆದರೆ, ವರದಿಗಳ ಪ್ರಕಾರ ಕೊಹ್ಲಿ ಬಿಸಿಸಿಐ ಅಧಿಕಾರಿಗಳನ್ನು ಸಂಪರ್ಕಿಸಿ ಗಂಭೀರ್ ಜತೆಗೆ ನಡೆಸಿದ ಕಿತ್ತಾಟಗಳನ್ನು ಮರೆತು ಅವರೊಂದಿಗೆ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವುದಾಗಿ ಆಶ್ವಾಸ ನೀಡಿರುವುದಾಗಿ ತಿಳಿದುಬಂದಿದೆ.

ಏಕದಿನ ತಂಡ


ರೋಹಿತ್ ಶರ್ಮ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್ (ವಿ.ಕೀ), ರಿಷಬ್ ಪಂತ್ (ವಿ.ಕೀ), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Shami-Sania Mirza: ಸಾನಿಯಾ ಮಿರ್ಜಾ ಜತೆ ಮದುವೆ?; ಮೊದಲ ಬಾರಿಗೆ ಸ್ಪಷ್ಟನೆ ಕೊಟ್ಟ ಶಮಿ

Shami-Sania Mirza: ದೈರ್ಯವಿದ್ದರೆ, ನೀವು ನಿಮ್ಮ ಅಧಿಕೃತಕ ಖಾತೆಯಿಂದ ಈ ಎಲ್ಲಾ ವಿಷಯಗಳನ್ನು ಹಂಚಿಕೊಳ್ಳಿ. ಆಗ ನಾನು ಉತ್ತರ ನೀಡುತ್ತೇನೆ. ಬದಲಾಗಿ ನಕಲಿ ಖಾತೆಯಿಂದ ಬರುವಂತಹ ಪೋಸ್ಟ್ ಬಗ್ಗೆ ನಾನು ತಲೆಕೆಸಿಕೊಂಡಿಲ್ಲ ಎಂದು ಶಮಿ ನೆಟ್ಟಿಗರಿಗೆ ಖಡಕ್​ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Shami-Sania Mirza
Koo

ಬೆಂಗಳೂರು: ಭಾರತದ ಮಾಜಿ ಟೆನಿಸ್​ ತಾರೆ ಸಾನಿಯಾ ಮಿರ್ಜಾ(Sania Mirza) ಅವರು ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರಿಂದ ವಿಚ್ಛೇದನ ಪಡೆದ ಬಳಿಕ ಸಾನಿಯ ಮರು ಮದುವೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಗಾಗ ಸುದ್ದಿಗಳು ಹರಿದಾಡುತ್ತಿತ್ತು. ಇತ್ತೀಚೆಗೆ ಟೀಮ್​ ಇಂಡಿಯಾದ ಕ್ರಿಕೆಟಿಗ ಮೊಹಮ್ಮದ್ ಶಮಿ(Mohammed Shami) ಜತೆಗೆ ಸಾನಿಯಾ ಮಿರ್ಜಾ ಮದುವೆಯಾಗುತ್ತಾರೆ ಎಂಬ ಊಹಾಪೋಹಾ ಹಬ್ಬಿತ್ತು. ಈ ಬಗ್ಗೆ ಸಾನಿಯಾ ತಂದೆ ಇದು ಸುಳ್ಳು ಸುದ್ದಿ, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಸುದ್ದಿಯನ್ನು ನಂಬಬೇಡಿ ಎಂದು ಸ್ಪಷ್ಟನೆ ನೀಡಿದ್ದರು. ಆದರೂ ಕೂಡ ಕೆಲ ನೆಟ್ಟಿಗರು ಈ ಜೋಡಿ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳುತ್ತಲೇ ಇದ್ದರು. ಇದೀಗ ಈ ವದಂತಿ​ ಬಗ್ಗೆ ಸ್ವತಃ ಶಮಿಯೇ(Shami-Sania Mirza) ಸ್ಪಷ್ಟನೆ ನೀಡಿದ್ದಾರೆ.

ಯೂಟ್ಯೂಬರ್ ಶುಭಂಕರ್ ಮಿಶ್ರಾ ಅವರೊಂದಿಗಿನ ಸಂವಾದದಲ್ಲಿ ಶಮಿ ಅವರು ಸಾನಿಯಾ ಜತೆಗಿನ ಮದುವೆಯ ವಿಚಾರದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಜತೆಗೆ ನೆಟ್ಟಿಗರಿಗೆ ಎಚ್ಚರಿಯನ್ನು ಕೂಡ ನೀಡಿದ್ದಾರೆ.” ಸಾಮಾಜಿಕ ಜಾಲತಾಣದಲ್ಲಿ ನನ್ನ ಮತ್ತು ಸಾನಿಯಾ ಮದುವೆಯ ವಿಚಾರವಾಗಿ ಹರಿದಾಡುತ್ತಿರುವ ಸುದ್ದಿ ಸತ್ಯಕ್ಕೆ ದೂರವಾಗಿದೆ. ಇಂತಹ ಮೀಮ್ಸ್​ಗಳು ಕೆಲವರಿಗೆ ಮನರಂಜನೆ ನೀಡಬಹುದು. ಆದರೆ, ಅದರಿಂದ ಉಂಟಾಗುವ ಕೆಟ್ಟ ಪರಿಣಾಮವನ್ನು ಒಮ್ಮೆ ಯೋಚಿಸಿದರೆ ಉತ್ತಮ. ಸಾಮಾಜಿಕ ಜಾಲತಾಣ ಇರುವುದು ಒಳ್ಳೆಯ ಉದ್ದೇಶಗಳನ್ನು ತಿಳಿಸುವ ಸಲುವಾಗಿ. ಯಾರೇ ಆದರೂ ಜಾಲತಾಣದಲ್ಲಿ ಪೋಸ್ಟ್​ ಮಾಡುವಾಗ ಅದಕ್ಕೆ ಜವಾಬ್ದಾರರಾಗಿರಬೇಕು. ಇಂತಹ ಆಧಾರರಹಿತ ಸುದ್ದಿಗಳನ್ನು ಹರಡುವುದನ್ನು ಮೊದಲು ನಿಲ್ಲಿಸಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ Mohammed Shami: ಕೊಹ್ಲಿ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ ಶಮಿ; ವಿಡಿಯೊ ವೈರಲ್​

“ನಾನು ಇಲ್ಲಿ ಒಂದು ವಿಷಯ ಸ್ಪಷ್ಟಪಡಿಸ ಬಯಸುತ್ತೇನೆ. ಇಂತಹ ಸುದ್ದಿಗಳನ್ನು ಹಂಚಿಕೊಳ್ಳುವ ವ್ಯಕ್ತಿಗಳಿಗೆ ದೈರ್ಯವಿದ್ದರೆ, ನೀವು ನಿಮ್ಮ ಅಧಿಕೃತಕ ಖಾತೆಯಿಂದ ಈ ಎಲ್ಲಾ ವಿಷಯಗಳನ್ನು ಹಂಚಿಕೊಳ್ಳಿ. ಆಗ ನಾನು ಉತ್ತರ ನೀಡುತ್ತೇನೆ. ಬದಲಾಗಿ ನಕಲಿ ಖಾತೆಯಿಂದ ಬರುವಂತಹ ಪೋಸ್ಟ್ ಬಗ್ಗೆ ನಾನು ತಲೆಕೆಸಿಕೊಂಡಿಲ್ಲ” ಎಂದು ಹೇಳುವ ಮೂಲಕ ಸುಳ್ಳು ಸುದ್ದಿ ಹಬ್ಬಿ ಜನರನ್ನು ದಾರಿತಪ್ಪಿಸುವಂತೆ ಮಾಡುವ ನೆಟ್ಟಿಗರಿಗೆ ಖಡಕ್​ ಎಚ್ಚರಿಕೆ ನೀಡಿದ್ದಾರೆ.

ಪಾಕಿಸ್ತಾನ ಕ್ರಿಕೆಟ್​ ತಂಡದ ಮಾಜಿ ಆಟಗಾರ ಶೋಯೆಬ್‌ ಮಲಿಕ್‌(Shoaib Malik) ಅವರಿಗೆ ಸಾನಿಯಾ ವಿಚ್ಚೇದನ ನೀಡಿದ ಬಳಿಕ ಡೀಪ್‌ಫೇಕ್‌(Deepfake) ಮೂಲಕ ಶಮಿ ಮತ್ತು ಸಾನಿಯಾ ಮಿರ್ಜಾ ಅವರ ಮುಖವನ್ನು ಈ ಹಿಂದೆ ಸಾನಿಯಾ ಅವರು ಮಲಿಕ್ ಜತೆಗೆ ತೆಗಿಸಿಕೊಂಡಿದ್ದ​ ಮದುವೆಯ ಫೋಟೊಗೆ ಫೋಟೊಗೆ ಶಮಿಯ ಮುಖವನ್ನು ಎಡಿಟ್​ ಮಾಡಿ ಶಮಿ ಮತ್ತು ಸಾನಿಯಾ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೋಂಡಿದ್ದಾರೆ ಎಂದು ಟ್ವೀಟರ್​ ಎಕ್ಸ್​ನಲ್ಲಿ ಕಿಡಿಗೇಡಿಗಳು ವೈರಲ್​ ಮಾಡಿದ್ದರು.

ಪಾದದ ಶಸ್ತ್ರಚಿಕಿತ್ಸೆಗೆ(mohammed shami injury update) ಒಳಗಾಗಿ ಚೇತರಿಕೆ ಕಾಣುತ್ತಿರುವ ಶಮಿ  ಕ್ರಿಕೆಟ್​ಗೆ ಮರಳುವು ಸಿದ್ಧತೆಯಲ್ಲಿದ್ದಾರೆ. ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್​ಸಿಎ)ಯಲ್ಲಿ ಬೌಲಿಂಗ್​ ಅಭ್ಯಾಸ ಆರಂಭಿಸಿದ್ದಾರೆ. ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಶಮಿ ಅವರು ತಮ್ಮ ಮೊನಚಾದ ಬೌಲಿಂಗ್​ ದಾಳಿಯ ಮೂಲಕ ಟೂರ್ನಿಯಲ್ಲಿಯೇ ಅತ್ಯಧಿಕ ವಿಕೆಟ್​ ಪಡೆದ ಬೌಲರ್​ ಎನಿಸಿಕೊಂಡಿದ್ದರು. ಆಡಿದ 7 ಪಂದ್ಯಗಳಲ್ಲಿ 24 ವಿಕೆಟ್‌ ಉರುಳಿಸಿದ್ದರು. 

Continue Reading

ಕ್ರೀಡೆ

First Drug Testing Olympics: ಒಲಿಂಪಿಕ್ಸ್​ನಲ್ಲಿ ಮೊದಲ ಬಾರಿಗೆ ಮಾದಕ ದ್ರವ್ಯ ಸೇವನೆ ಪ್ರಕರಣ ಬೆಳಕಿಗೆ ಬಂದದ್ದು ಯಾವಾಗ?

First Drug Testing Olympics:

VISTARANEWS.COM


on

First Drug Testing Olympics
Koo

ಬೆಂಗಳೂರು​: ಪ್ಯಾರಿಸ್​ ಒಲಿಂಪಿಕ್ಸ್(Paris Olympics 2024)​ ಆರಂಭಕ್ಕೆ ಕೆಲವೇ ದಿನ ಬಾಕಿ ಇರುವಾಗಲೇ ಜಪಾನ್‌ ಆರ್ಟಿಸ್ಟಿಕ್‌ ಜಿಮ್ನಾಸ್ಟಿಕ್ಸ್‌ ತಂಡದ ನಾಯಕಿಯಾಗಿದ್ದ 19 ವರ್ಷದ ಶೊಕೊ ಮಿಯಾಟಾ ತರಬೇತಿ ಶಿಬಿರಲ್ಲಿ ಮಧ್ಯಪಾನ ಹಾಗೂ ಧೂಪಮಾನ ಮಾಡಿರುವ ಕಾರಣ ಅವರನ್ನು ತಂಡದಿಂದ ಕೈಬಿಡಲಾಗಿದೆ. ಹೀಗಾಗಿ ಅವರು ಈ ಬಾರಿಯ ಒಲಿಂಪಿಕ್ಸ್​ನಿಂದ ಹೊರಬಿದ್ದಿದ್ದಾರೆ. ಒಲಿಂಪಿಕ್ಸ್‌ಗಳಲ್ಲಿಯೂ ಉದ್ದೀಪನ ಪರೀಕ್ಷೆ ಕಟ್ಟುನಿಟ್ಟಾಗಿ ನಡೆಯುತ್ತದೆ. ಒಲಿಂಪಿಕ್ಸ್‌ ಇತಿಹಾಸದಲ್ಲಿ ಮೊದಲ ಬಾರಿಗೆ ಮಾದಕ ದ್ರವ್ಯ ಸೇವನೆ(First Drug Testing Olympics) ಪ್ರಕರಣ ಬೆಳಕಿಗೆ ಬಂದದ್ದು ಯಾವಾಗ? ಎನ್ನುವ ಮಾಹಿತಿ ಇಂತಿದೆ.

ಒಲಿಂಪಿಕ್ಸ್‌ ಇತಿಹಾಸದಲ್ಲಿ ಮೊದಲ ಬಾರಿಗೆ ಮಾದಕ ದ್ರವ್ಯ ಸೇವನೆ ಪ್ರಕರಣ ಬೆಳಕಿಗೆ ಬಂದದ್ದು 1968ರ ಮೆಕ್ಸಿಕೊ ಗೇಮ್ಸ್‌ನಲ್ಲಿ. ಬಿಯರ್‌ ಕುಡಿದಿದ್ದಕ್ಕಾಗಿ ಸ್ವೀಡನ್‌ ಆ್ಯತ್ಲೀಟ್‌ ಹನ್ಸ್‌-ಗುನ್ನಾರ್‌ ಲಿಲಿಜೆನ್‌ವಾಲ್‌ ನಿಷೇಧ ಶಿಕ್ಷೆ ಅನುಭವಿಸಬೇಕಾಯಿತು! ಇದಕ್ಕಾಗಿ ಅವರು ಗೆದ್ದಿದ್ದ ಕಂಚಿನ ಪದಕವನ್ನೂ ವಾಪಸ್‌ ಪಡೆಯಲಾಗಿತ್ತು. ಲಿಲಿಜೆನ್‌ವಾಲ್‌ ಅವರಿಗೆ ಈಗ 83 ವರ್ಷ ವಯಸ್ಸು. ಜೀವಿತಾವಧಿಯಲ್ಲೇ ಇದ್ದಾರೆ.


ಇತ್ತೀಚಿನ ದಿನಗಳಲ್ಲಿ ಕ್ರೀಡಾಪಟುಗಳು ತಮ್ಮ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಉದ್ದೀಪನ ಮದ್ದುಗಳನ್ನು ತೆಗೆದುಕೊಳ್ಳುವುದೂ ವ್ಯಾಪಕವಾಗಿದೆ. ಕ್ರೀಡಾ ಮನೋಭಾವಕ್ಕೆ ವಿರುದ್ಧವಾದ ಉದ್ದೀಪನ ಮದ್ದು ಸೇವನೆಯನ್ನು ಜಗತ್ತಿನಾದ್ಯಂತ ಟೀಕಿಸಲಾಗುತ್ತಿದೆ. ಆದ್ದರಿಂದ ವಿವಿಧ ಕ್ರೀಡೆಗಳಿಗೆ ಸಂಬಂಧಿಸಿದ ಸಂಸ್ಥೆಗಳು ಮದ್ದು ತೆಗೆದುಕೊಳ್ಳುವುದನ್ನೂ ವ್ಯವಸ್ಥಿತ ರೀತಿಯಲ್ಲಿ ನಿಯಂತ್ರಿಸುತ್ತಿವೆ.

ಸ್ಟಿರಾಯಿಡ್‌ಗಳು ಹಾಗೂ ಸಾಮರ್ಥ್ಯವರ್ಧಕಗಳನ್ನು ಸೇವಿಸಿದವರು ಉದ್ದೀಪನ ಮದ್ದು ಪರೀಕ್ಷೆಯಲ್ಲಿ ಸಿಕ್ಕಿಬೀಳುವುದು ಹೆಚ್ಚು. ಪ್ರತಿವರ್ಷ ‘ವಿಶ್ವ ಉದ್ದೀಪನ ಮದ್ದು ನಿಷೇಧ ಸಂಸ್ಥೆ’ಯು ನಿಷೇಧಿತ ಮದ್ದುಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತದೆ. ಕೆಲವು ಔಷಧಗಳನ್ನು ನಿರ್ದಿಷ್ಟ ಕ್ರಮದಲ್ಲಿ ತೆಗೆದುಕೊಳ್ಳುವುದು ಸರಿಯಲ್ಲ ಎನ್ನುವುದನ್ನು ಕೂಡ ತಿಳಿಸುತ್ತದೆ.

ಇದನ್ನೂ ಓದಿ Paris Olympics: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಕನ್ನಡತಿ ಭಾವನಾ ಪ್ರದ್ಯುಮ್ನ

ಒಲಿಂಪಿಕ್‌ ನಡೆಯುವ ಮುನ್ನವೇ ಕ್ರೀಡಾಪಟುಗಳು ತಮ್ಮ ರಕ್ತ ಹಾಗೂ ಮೂತ್ರವನ್ನು ಪರೀಕ್ಷೆಗೆ ನೀಡಬೇಕಾಗುತ್ತದೆ. ಇದಾದ ಬಳಿಕ ಕೂಟದಲ್ಲಿ ನಿರ್ದಿಷ್ಟ ಆಟ ಅಥವಾ ಸ್ಪರ್ಧೆಯಲ್ಲಿ ಮೊದಲ ಐದು ಸ್ಥಾನ ಪಡೆದವರ ರಕ್ತ ಹಾಗೂ ಮೂತ್ರವನ್ನು ತಕ್ಷಣವೇ ಮತ್ತೊಮ್ಮೆ ಪರೀಕ್ಷೆಗೆ ಕಳುಹಿಸಿಕೊಡಲಾಗುತ್ತದೆ. ಸ್ಪರ್ಧೆ ನಡೆಯುವ ಸ್ಥಳಗಳಲ್ಲೇ ಪದೇ ಪದೇ ಇಂಥ ಪರೀಕ್ಷೆಗಳನ್ನು ನಡೆಸಬಹುದಾಗಿದೆ.

ಪ್ರತಿ ಅಥ್ಲೀಟ್‌ನಿಂದ ಎರಡು ‘ಸ್ಯಾಂಪಲ್‌’ಗಳನ್ನು ತೆಗೆದುಕೊಳ್ಳುತ್ತಾರೆ. ಮೊದಲ ‘ಸ್ಯಾಂಪಲ್‌’ನಲ್ಲಿ ನಿಷೇಧಿತ ಮದ್ದು ಸೇವಿಸಿರುವುದು ಪರೀಕ್ಷೆಯಲ್ಲಿ ದೃಢಪಟ್ಟರೆ, ಅಥ್ಲೀಟ್‌ಗಳು ಎರಡನೇ ಸ್ಯಾಂಪಲ್‌ ಅನ್ನೂ ಪರೀಕ್ಷಿಸುವಂತೆ ಮನವಿ ಮಾಡಿಕೊಳ್ಳಬಹುದು. ರಕ್ತ ಅಥವಾ ಮೂತ್ರದ ‘ಸ್ಯಾಂಪಲ್‌’ಗಳನ್ನು (ನಮೂನೆಗಳನ್ನು) ಶೈತ್ಯಾಗಾರದಲ್ಲಿ ಸಂಗ್ರಹಿಸಿಟ್ಟು, ಎಂಟು ಹತ್ತು ವರ್ಷಗಳ ನಂತರ ಕೂಡ ಪರೀಕ್ಷಿಸಬಹುದಾಗಿದೆ.

Continue Reading

ಕ್ರೀಡೆ

Paris Olympics: ಟ್ರ್ಯಾಕ್‌ & ಫೀಲ್ಡ್ ವಿಭಾಗದಲ್ಲಿ ಚಿನ್ನ ಗೆದ್ದರೆ ಅಥ್ಲೀಟ್​ಗಳಿಗೆ ಸಿಗಲಿದೆ ಭಾರೀ ಮೊತ್ತದ ನಗದು ಬಹುಮಾನ

Paris Olympics: ಟೋಕಿಯೊ ಒಲಿಂಪಿಕ್​ನಲ್ಲಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಜಯಿಸಿದ್ದ ನೀರಜ್​ ಚೋಪ್ರಾ ಅವರು ಈ ಬಾರಿ ಚೆನ್ನ ಗೆದ್ದರೆ ಅವರಿಗೆ 50,000 ಅಮೆರಿಕನ್‌ ಡಾಲರ್‌ ಬಹುಮಾನ ದೊರೆಯಲಿದೆ.

VISTARANEWS.COM


on

Paris Olympics
Koo

ಮೊನಾಕೊ: ಬಹುನಿರೀಕ್ಷಿತ ಪ್ಯಾರಿಸ್ ಒಲಿಂಪಿಕ್ಸ್(Paris Olympics)​ ಕ್ರೀಡಾಕೂಟ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ವಿಶೇಷವೆಂದರೆ ಇದೇ ಮೊದಲ ಬಾರಿಗೆ ಒಲಿಂಪಿಕ್ ಕೂಟದಲ್ಲಿ ನಗದು ಪ್ರಶಸ್ತಿ ನೀಡಲಾಗುತ್ತಿದೆ. ಟ್ರ್ಯಾಕ್ ಮತ್ತು ಫೀಲ್ಡ್(track & field gold medallists) ವಿಭಾಗದಲ್ಲಿ ಚಿನ್ನ ಜಯಿಸುವ ಅಥ್ಲೀಟ್‌ಗಳಿಗೆ 41.60 ಲಕ್ಷ ನಗದು ಪ್ರಶಸ್ತಿ ನೀಡಲು ವಿಶ್ವ ಅಥ್ಲೆಟಿಕ್ (ಡಬ್ಲ್ಯುಎ) ಸಂಸ್ಥೆ ತೀರ್ಮಾನಿಸಿದೆ.

ಟೋಕಿಯೊ ಒಲಿಂಪಿಕ್​ನಲ್ಲಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಜಯಿಸಿದ್ದ ನೀರಜ್​ ಚೋಪ್ರಾ ಅವರು ಈ ಬಾರಿ ಚೆನ್ನ ಗೆದ್ದರೆ ಅವರಿಗೆ 50,000 ಅಮೆರಿಕನ್‌ ಡಾಲರ್‌ ಬಹುಮಾನ ದೊರೆಯಲಿದೆ. ನೀರಜ್​ ಅವರು ಟ್ರ್ಯಾಕ್‌ ಮತ್ತು ಫೀಲ್ಡ್ ವಿಭಾಗದಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಕ್ರೀಡಾಪಟು ಎಂಬ ಹೆಗ್ಗಳಿಕೆ ಹೊಂದಿದ್ದು ಈ ಬಾರಿಯೂ ಅವರು ಚಿನ್ನದ ಪದಕ ಗೆಲ್ಲುವ ಆತ್ಮವಿಶ್ವಾಸದಲ್ಲಿದ್ದಾರೆ.

ಈ ಬಾರಿ ಚಿನ್ನ ಗೆದ್ದ ಅಥ್ಲೀಟ್​ಗಳಿಗೆ ಮಾತ್ರ ನಗುದು ಬಹುಮಾನ ದೊರಕಲಿದೆ. 2028ರಲ್ಲಿ ಲಾಸ್‌ ಏಂಜಲಿಸ್​ನಲ್ಲಿ ನಡೆಯುವ ಒಲಿಂಪಿಕ್ ಕೂಟದಲ್ಲಿ ಮೊದಲ ಮೂರು ಸ್ಥಾನ ಪಡೆಯುವ ಎಲ್ಲರಿಗೂ ನಗದು ಪ್ರಶಸ್ತಿ ನೀಡುವುದಾಗಿವಿಶ್ವ ಅಥ್ಲೆಟಿಕ್ ಸಂಸ್ಥೆ ಘೋಷಿಸಿದೆ. ಡೈಮಂಡ್ ಲೀಗ್, ಕಾಂಟಿನೆಂಟಲ್ ಕಪ್‌ಗಳಲ್ಲಿ ಪದಕ ಗೆದ್ದಾಗ ನಗದು ಬಹುಮಾನ ನೀಡಲಾಗುತ್ತಿತ್ತು. ಆದರೆ ಒಲಿಂಪಿಕ್ಸ್​ ಬಹುಮಾನದಲ್ಲಿ ಈ ಸೌಕರ್ಯ ಇರಲಿಲ್ಲ. ಇದೀಗ ಒಲಿಂಪಿಕ್ಸ್​ನಲ್ಲಿಯೂ ಈ ನಿಯಮ ಬಂದಿರುವುದು ಸಂತಸ ತಂದಿದೆ ಎಂದು ಡಬ್ಲ್ಯುಎ ಅಧ್ಯಕ್ಷ ಸೆಬಾಸ್ಟಿಯನ್ ಕೊ ಹೇಳಿದ್ದಾರೆ.

ಭಾರತದಿಂದ ಈ ಬಾರಿ ಅಥ್ಲೆಟಿಕ್ಸ್​ನಲ್ಲಿ 29 ಸ್ಪರ್ಧಿಗಳು ಸ್ಪರ್ಧಿಸಲಿದ್ದಾರೆ. 18 ಪುರುಷರು ಹಾಗೂ 11 ಮಹಿಳೆಯರು ಸೇರಿದ್ದಾರೆ. ಆರಂಭದಲ್ಲಿ ಅಥ್ಲೀಟ್​ಗಳ ಸಂಖ್ಯೆ​ 30 ಇತ್ತು. ಆದರೆ ವನಿತಾ ಶಾಟ್‌ಪುಟರ್‌ ಅಭಾ ಖತುವಾ ಗೈರಿನಿಂದ 29ಕ್ಕೆ ಇಳಿಯಿತು. ಆದರೆ ಅವರನ್ನು ಕೈಬಿಟ್ಟ ಬಗ್ಗೆ ಯಾವುದೇ ಕಾರಣ ಅಥವಾ ವಿವರಣೆ ನೀಡಲಾಗಿಲ್ಲ.  29 ಸದಸ್ಯರನ್ನು ಒಳಗೊಂಡ ಟ್ರ್ಯಾಕ್ ಆ್ಯಂಡ್ ಫೀಲ್ಡ್ ತಂಡಕ್ಕೆ ಟೋಕಿಯೊ ಒಲಿಂಪಿಕ್​ ಚಿನ್ನದ ಪದಕ ವಿಜೇತ, ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ನಾಯಕನಾಗಿದ್ದಾರೆ.

ಇದನ್ನೂ ಓದಿ Paris Olympics: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಕನ್ನಡತಿ ಭಾವನಾ ಪ್ರದ್ಯುಮ್ನ

ಅತ್ಯಧಿಕ 18 ಮಂದಿ ಸಹಾಯಕ ಸಿಬಂದಿಯನ್ನು ಶೂಟಿಂಗ್‌ ತಂಡಕ್ಕೆ ಒದಗಿಸಲಾಗಿದೆ. ಕುಸ್ತಿಗೆ 12, ಬಾಕ್ಸಿಂಗ್‌ಗೆ 11, ಹಾಕಿಗೆ 10, ಟಿಟಿ ಮತ್ತು ಬ್ಯಾಡ್ಮಿಂಟನ್‌ಗೆ 9, ಗಾಲ್ಫ್​ಗೆ 5, ಆರ್ಚರಿ, ಹಾಯಿದೋಣಿ ಮತ್ತು ವೇಟ್‌ಲಿಫ್ಟಿಂಗ್‌ಗೆ
4, ಟೆನಿಸ್‌ಗೆ 3, ಈಜಿಗೆ 2 ಹಾಗೂ ಜೂಡೋಗೆ ಒಬ್ಬರು ಸಹಾಯಕ ಸಿಬ್ಬಂದಿ ನೀಡಲಾಗಿದೆ. ಒಟ್ಟು 140 ಮಂದಿ ಅಧಿಕಾರಿಗಳು ಹಾಗೂ ಸಹಾಯಕ ಸಿಬ್ಬಂದಿಗಳು ಪಾಲ್ಗೊಳ್ಳಲಿದ್ದಾರೆ.

ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಪದಕ ಗೆಲ್ಲುವುದು ಭಾರತದ ಪ್ರಮುಖ ಗುರಿಯಾಗಿದೆ. ಟೋಕಿಯೊದಲ್ಲಿ ಭಾರತ ಒಟ್ಟು 7 ಪದಕ ಜಯಿಸಿತ್ತು. ಇದರಲ್ಲಿ ಒಂದು ಚಿನ್ನ, 2 ಬೆಳ್ಳಿ ಮತ್ತು 4 ಕಂಚಿನ ಪದಕ ಒಳಗೊಂಡಿತ್ತು. ಒಟ್ಟಾರೆಯಾಗಿ ಭಾರತ ಪದಕ ಪಟ್ಟಿಯಲ್ಲಿ 48ನೇ ಸ್ಥಾನ ಪಡೆದಿತ್ತು. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ. 2

Continue Reading

ಕ್ರೀಡೆ

Hardik-Natasa Divorce: ಹಾರ್ದಿಕ್-ನತಾಶಾ ವಿಚ್ಛೇದನದ ಅಸಲಿ ಕಾರಣ ಬಯಲು; ರಹಸ್ಯ ಬಿಚ್ಚಿಟ್ಟ ಆಪ್ತ ಮೂಲಗಳು

Hardik-Natasa Divorce: ಇಬ್ಬರ ನಡುವಿನ ಮನಸ್ತಾಪ ಮತ್ತು ಜಗಳಕ್ಕೆ ಪರಿಹಾರ ಕಂಡುಕೊಳ್ಳುವ ತಾಳ್ಮೆ ಇಬ್ಬರಲ್ಲೂ ಇರಲಿಲ್ಲ. ಹೀಗಾಗಿ ಮನಸ್ತಾಪ ದೊಡ್ಡದಾಗಿ ಡಿವೋರ್ಸ್​ಗೆ ಕಾರಣವಾಯಿತು ಎಂದು ಹಾರ್ದಿಕ್​ ಮತ್ತು ನತಾಶಾರ ಆಪ್ತ ಮೂಲಗಳು ತಿಳಿಸಿವೆ.

VISTARANEWS.COM


on

Hardik-Natasa Divorce
Koo

ಮುಂಬಯಿ: ಹಾರ್ದಿಕ್​ ಪಾಂಡ್ಯ(Hardik Pandya) ಮತ್ತು ನತಾಶಾ ಸ್ಟಾಂಕೋವಿಕ್(Natasa Stankovic) ಈಗಾಗಲೇ ಅಧಿಕೃತವಾಗಿ ವಿಚ್ಛೇದನ(Hardik-Natasa Divorce) ಪಡೆದುಕೊಂಡಿದ್ದಾರೆ. ಈ ಜಂಟಿ ಹೇಳಿಕೆ ಪ್ರಕಟಿಸುವ ಮೂಲಕ ಇವರಿಬ್ಬರು ತಮ್ಮ 4 ವರ್ಷಗಳ ದಾಂಪತ್ಯ ಜೀವನಕ್ಕೆ ಬ್ರೇಕ್ ಹಾಕಿದ್ದಾರೆ. ಈ ಜೋಡಿ ಡಿವೋರ್ಸ್​ ಪಡೆಯಲು ಕಾರಣ ಏನಿರಬಹುದು ಎಂಬ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ಶುರುವಾಗಿದೆ. ಇದರ ಬೆನ್ನಲ್ಲೇ ಹಾರ್ದಿಕ್​ ಮತ್ತು ನತಾಶಾರ ಆಪ್ತ ಮೂಲಗಳು ಸ್ಫೋಟಕ ಸಂಗತಿಯೊಂದನ್ನು ಬಹಿರಂಗಪಡಿಸಿವೆ.

ಹೌದು, ಹಾರ್ದಿಕ್​ ಮತ್ತು ನತಾಶಾ ನಡುವಿನ ಬ್ರೇಕಪ್​ಗೆ ಸಂವಹನ ಕೊರತೆಯೇ ಮುಖ್ಯ ಕಾರಣ ಎಂದು ಆಪ್ತ ಮೂಲಗಳು ಮಾಹಿತಿ ನೀಡಿದೆ. ಇಬ್ಬರ ನಡುವಿನ ಮನಸ್ತಾಪ ಮತ್ತು ಜಗಳಕ್ಕೆ ಪರಿಹಾರ ಕಂಡುಕೊಳ್ಳುವ ತಾಳ್ಮೆ ಇಬ್ಬರಲ್ಲೂ ಇರಲಿಲ್ಲ. ಹೀಗಾಗಿ ಮನಸ್ತಾಪ ದೊಡ್ಡದಾಗಿ ಡಿವೋರ್ಸ್​ಗೆ ಕಾರಣವಾಯಿತು. ಇದನ್ನು ಬಿಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಇವರಿಬ್ಬರ ಬಗ್ಗೆ ಯಾವುದೇ ತಪ್ಪು ಸುದ್ದಿ ಹಬ್ಬಿಸಬಾರದು ಎಂದು ಆಪ್ತ ಮೂಲಗಳು ತಿಳಿಸಿವೆ.

“ನಾಲ್ಕು ವರ್ಷಗಳ ಕಾಲ ಒಂದಾಗಿ ಜೀವನ ನಡೆಸಿದ್ದ ನತಾಶಾ ಮತ್ತು ನಾನು ಪರಸ್ಪರ ಬೇರೆಯಾಗಲು ನಿರ್ಧರಿಸಿದ್ದೇವೆ. ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸಿದ್ದೇವೆ. ಇದು ನಮ್ಮಿಬ್ಬರ ಹಿತಾಸಕ್ತಿಗಾಗಿ ಎಂದು ನಾವು ನಂಬುತ್ತೇವೆ. ಇದು ಕಠಿಣ ನಿರ್ಧಾರವಾಗಿದೆ. ನಾವು ಒಟ್ಟಿಗೆ ಆನಂದಿಸಿದ ಸಂತೋಷ, ಪರಸ್ಪರ ಗೌರವ ಮತ್ತು ಒಡನಾಟವನ್ನು ಹೊಂದಿದ್ದೇವೆ. ಮಗ ನಮ್ಮಿಬ್ಬರ ಜೀವನದ ಕೇಂದ್ರದಲ್ಲಿ ಮುಂದುವರಿಯುತ್ತಾನೆ” ಎಂದು ಬರೆದುಕೊಂಡು ಪಾಂಡ್ಯ ವಿಚ್ಛೇದನವನ್ನು ಖಚಿತಪಡಿಸಿದ್ದರು.

ಇದನ್ನೂ ಓದಿ Hardik Pandya: ವಿಚ್ಛೇದಿತ ಪತ್ನಿ ನತಾಶಾಗೆ ಶೇ.70ರಷ್ಟು ಜೀವನಾಂಶ ನೀಡಲಿದ್ದಾರಾ ಹಾರ್ದಿಕ್​ ಪಾಂಡ್ಯ?

ಮಗ ಯಾರ ಬಳಿ ಇರುತ್ತಾನೆ?


ದಂಪತಿ ಬೇರೆಯಾದ ಬಳಿಕ ಮಗ ಯಾರ ಬಳಿಯಿರುತ್ತಾನೆ ಎಂಬ ಪ್ರಶ್ನೆಗಳಿಗೂ ಪಾಂಡ್ಯ ಮತ್ತು ನತಾಶ ಜಂಟಿ ಹೇಳಿಕೆಯಲ್ಲಿ ಉತ್ತರಿಸಿದ್ದಾರೆ. “ನಾನು ಮತ್ತು ನತಾಶಾ ಇಬ್ಬರೂ ಪುತ್ರ ಅಗಸ್ತ್ಯನನ್ನು ಸಹ-ಪೋಷಕರಾಗಿ ನೋಡಿಕೊಳ್ಳುತ್ತೇವೆ. ಅವನಿಗೆ ಯಾವುದೇ ಕಾರಣಕ್ಕೂ ಯಾವ ಕೊರತೆಯೂ ಆಗದಂತೆ ನಾವಿಬ್ಬರೂ ಸಮನಾಗಿ ಅವನ ಜವಾಬ್ದಾರಿ ಹಂಚಿಕೊಳ್ಳಲಿದ್ದೇವೆ” ಎಂದು ಹೇಳಿದ್ದಾರೆ.

ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇದಕ್ಕೂ ಮುನ್ನ ಈ ಜೋಡಿ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು.

ಪಾಂಡ್ಯ ತನ್ನ ಆಸ್ತಿಯಲ್ಲಿ ಪತ್ನಿಗೆ ಜೀವನಾಂಶವಾಗಿ ಶೇ. 70 ಪ್ರತಿಶತವನ್ನು ಬಿಟ್ಟುಕೊಡಬೇಕು ಎನ್ನುವ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ಶುರುವಾಗಿದೆ. ಸದ್ಯ ಪಾಂಡ್ಯ ಅವರು ಪತ್ನಿಗೆ ಜೀವನಾಂಶ ನೀಡುವ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಇಲ್ಲ. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿಗಳು ಸುಳ್ಳಾಗಿದೆ. ನತಾಶ ಇದುವರೆಗೆ ಹಾರ್ದಿಕ್‌ ಅವರಿಂದ ಜೀವನಾಂಶವಾಗಿ ಯಾವುದೇ ರೀತಿಯ ಪಾಲು ಕೇಳಿಲ್ಲ. ಹೀಗಾಗಿ ಪಾಂಡ್ಯ ಮತ್ತು ನತಾಶ ಜೀವನಾಂಶದ ಬಗ್ಗೆ ಹರಿದಾಡುತ್ತಿರುವ ಸುದ್ದಿಯಲ್ಲಿ ಸತ್ಯಾಂಶವಿಲ್ಲ.

Continue Reading
Advertisement
Shami-Sania Mirza
ಕ್ರೀಡೆ6 mins ago

Shami-Sania Mirza: ಸಾನಿಯಾ ಮಿರ್ಜಾ ಜತೆ ಮದುವೆ?; ಮೊದಲ ಬಾರಿಗೆ ಸ್ಪಷ್ಟನೆ ಕೊಟ್ಟ ಶಮಿ

Viral Video
ವೈರಲ್ ನ್ಯೂಸ್20 mins ago

Viral Video: ನೋಡ ನೋಡ್ತಿದ್ದಂತೆ ಕುಸಿದು ಬಿತ್ತು ಕ್ಲಾಸ್‌ರೂಂ ಗೋಡೆ; ಒಳಗಿದ್ದ ಮಕ್ಕಳ ಕತೆ ಏನಾಯ್ತು ಗೊತ್ತಾ? ವಿಡಿಯೋ ಇದೆ

karnataka Rain
ಮಳೆ42 mins ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

First Drug Testing Olympics
ಕ್ರೀಡೆ48 mins ago

First Drug Testing Olympics: ಒಲಿಂಪಿಕ್ಸ್​ನಲ್ಲಿ ಮೊದಲ ಬಾರಿಗೆ ಮಾದಕ ದ್ರವ್ಯ ಸೇವನೆ ಪ್ರಕರಣ ಬೆಳಕಿಗೆ ಬಂದದ್ದು ಯಾವಾಗ?

Actor Darshan Renuka Swamy assault scene recorded on iPhone
ಸಿನಿಮಾ55 mins ago

Actor Darshan: ರೇಣುಕಾ ಸ್ವಾಮಿ ಹಲ್ಲೆ ದೃಶ್ಯ ಐಫೋನ್‌ನಲ್ಲಿ ರೆಕಾರ್ಡ್‌; ಸಿನಿಮಾ ಶೈಲಿಯಲ್ಲಿ ನಡೆದಿತ್ತು ಕೃತ್ಯ!

Doda Encounter
ದೇಶ1 hour ago

Doda Encounter: ಜಮ್ಮು ದಾಳಿ ಹಿಂದೆ ಇದ್ಯಾ ಪಾಕ್‌ ಮಾಜಿ ಸೈನಿಕರ ಕೈವಾಡ? ಉಗ್ರರಿಗಿದ್ಯಾ ಸೇನಾ ತರಬೇತಿ?

Rajakaluve Encroachment
ಬೆಂಗಳೂರು1 hour ago

Rajakaluve Encroachment: ರಾಜಕಾಲುವೆ ಒತ್ತುವರಿದಾರರಿಗೆ ಮತ್ತೆ ನಡುಕ, ತೆರವಿಗೆ ಬಿಬಿಎಂಪಿ ಸಿದ್ಧತೆ

Paris Olympics
ಕ್ರೀಡೆ2 hours ago

Paris Olympics: ಟ್ರ್ಯಾಕ್‌ & ಫೀಲ್ಡ್ ವಿಭಾಗದಲ್ಲಿ ಚಿನ್ನ ಗೆದ್ದರೆ ಅಥ್ಲೀಟ್​ಗಳಿಗೆ ಸಿಗಲಿದೆ ಭಾರೀ ಮೊತ್ತದ ನಗದು ಬಹುಮಾನ

Murder case
ಕೊಡಗು2 hours ago

Murder Case : ಪತ್ನಿಗೆ ಗುಂಡು ಹಾರಿಸಿ ಕೊಂದು ಪೊಲೀಸರಿಗೆ ಶರಣಾದ ಪತಿ!

Shraddha Kapoor On Rumours Of Wedding To Rahul Mody
ಬಾಲಿವುಡ್2 hours ago

Shraddha Kapoor: ಮದುವೆ ಬಗ್ಗೆ ಶ್ರದ್ಧಾ ಕಪೂರ್ ಹೇಳಿದ್ದೇನು? ಹುಡುಗ ಯಾರು?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ42 mins ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ24 hours ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ1 day ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ2 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ4 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ5 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ5 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ5 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

ಟ್ರೆಂಡಿಂಗ್‌