Site icon Vistara News

Virat Kohli: ಲಂಕಾ ಸರಣಿಯಲ್ಲಿ ರನ್​ ದಾಖಲೆ ಬರೆಯಲು ಸಜ್ಜಾದ ವಿರಾಟ್​ ಕೊಹ್ಲಿ

Virat Kohli

Virat Kohli: Virat Kohli is all set to write a run record in the Lankan series

ಮುಂಬಯಿ: ಟೀಮ್​ ಇಂಡಿಯಾ ಬ್ಯಾಟರ್, ಹಲವು ದಾಖಲೆಗಳ ಸರದಾರ​ ವಿರಾಟ್​ ಕೊಹ್ಲಿಗೆ(Virat Kohli) ಶ್ರೀಲಂಕಾ(India tour of Sri Lanka) ವಿರುದ್ಧದ ಏಕದಿನ ಸರಣಿಯಲ್ಲಿ ವಿಶೇಷ ದಾಖಲೆಯೊಂದನ್ನು ಬರೆಯುವ ಅವಕಾಶವಿದೆ. ಹೌದು, ಕೊಹ್ಲಿ 152 ರನ್ ಗಳಿಸಿದರೆ ಏಕದಿನ ಕ್ರಿಕೆಟ್​ನಲ್ಲಿ 14 ಸಾವಿರ ರನ್ ಪೂರೈಸಲಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಲಂಕಾ ವಿರುದ್ಧದ ಏಕದಿನ ಸರಣಿ ಆಗಸ್ಟ್​ 2ರಿಂದ ಆರಂಭಗೊಳ್ಳಲಿದೆ.

ಸದ್ಯ 292* ಏಕದಿನ ಪಂದ್ಯಗಳನ್ನಾಡಿರುವ ವಿರಾಟ್​ ಕೊಹ್ಲಿ 13,848* ರನ್(virat kohli odi runs)​ ಬಾರಿಸಿದ್ದಾರೆ. ಲಂಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಕೊಹ್ಲಿ 152 ರನ್​ ಬಾರಿಸಿದರೆ 14 ಸಾವಿರ ರನ್​ ಮೈಲುಗಲ್ಲು ತಲುಪಲಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 14000ಕ್ಕೂ ಹೆಚ್ಚು ರನ್ ಗಳಿಸಿದ ಸಾರ್ವಕಾಲಿದ ದಾಖಲೆ ಸಚಿನ್ ತೆಂಡೂಲ್ಕರ್ ಮತ್ತು ಕುಮಾರ ಸಂಗಕ್ಕಾರ ಹೆಸರಿನಲ್ಲಿದೆ. ಸಚಿನ್ 463 ಏಕದಿನ ಪಂದ್ಯಗಳಲ್ಲಿ 18,426 ರನ್ ಗಳಿಸಿದ್ದರೆ, ಕುಮಾರ ಸಂಗಕ್ಕಾರ 404 ಪಂದ್ಯಗಳನ್ನಾಡಿ 14,234 ರನ್ ಬಾರಿಸಿದ್ದಾರೆ. ಕೊಹ್ಲಿಗೆ ಸಂಗಕ್ಕಾರ ದಾಖಲೆ ಮುರಿಯುವ ಅವಕಾಶವಿದೆ. ಆದರೆ ಸಚಿನ್​ ದಾಖಲೆ ಮುರಿಯುವುದು ಕಷ್ಟ ಸಾಧ್ಯ.

ಟಿ20 ವಿಶ್ವಕಪ್​ ಬಳಿಕ ಲಂಡನ್​ಗೆ ತೆರಳಿ ಕುಟುಂಬದ ಜತೆ ಕಾಲ ಕಳೆಯುತ್ತಿದ್ದ ವಿರಾಟ್​ ಕೊಹ್ಲಿ ಲಂಕಾ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ ಎಂದು ಹೇಳಲಾಗಿತ್ತು. ಕೊಹ್ಲಿ ಜತೆ ರೋಹಿತ್​ ಕೂಡ ವಿಶ್ರಾಂತಿ ಪಡೆಯಲು ನಿರ್ದರಿಸಿದ್ದಾರೆ ಎನ್ನಲಾಗಿತ್ತು. ಆದರೆ, ಗಂಭೀರ್​ ಎಲ್ಲ ಹಿರಿಯ ಆಟಗಾರರರು ಕೂಡ ಈ ಸರಣಿಯಲ್ಲಿ ಆಡುವಂತೆ ಸೂಚನೆ ನೀಡಿದ್ದರು. ಗುರುವಾರ ತಂಡ ಪ್ರಕಟಗೊಳ್ಳುವ ವೇಳೆ ಅಚ್ಚರಿ ಎಂಬಂತೆ ಎಲ್ಲ ಹಿರಿಯ ಆಟಗಾರರು ಕೂಡ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ Virat Kohli: ಮೊದಲ ಬಾರಿಗೆ ಮಗ ಅಕಾಯ್ ಜತೆ ಕಾಣಿಸಿಕೊಂಡ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

ಗಂಭೀರ್​ ಕೋಚ್​ ಆಗುತ್ತಿದ್ದಂತೆಯೇ ಕೆಲ ನೆಟ್ಟಿಗರು ಗಂಭೀರ್​ ಮತ್ತು ಕೊಹ್ಲಿ ನಡುವಣ ಆನ್ ಫೀಲ್ಡ್ ಜಗಳ ಮತ್ತೆ ಶುರುವಾಗಿ ಇದು ತಂಡಕ್ಕೆ ಭಾದಿಸಲಿದೆ ಎಂದು ಹೇಳಲಾಗಿತ್ತು. ಅಲ್ಲದೆ ಗಂಭೀರ್​ ಅವರನ್ನು ಕೋಚ್​ ಆಗಿ ಆಯ್ಕೆ ಮಾಡುವ ಮುನ್ನ ವಿರಾಟ್​ ಕೊಹ್ಲಿ(virat kohli) ಜತೆ ಬಿಸಿಸಿಐ ಅಭಿಪ್ರಾಯ ಕೇಳಿಲ್ಲ ಎಂಬ ಮಾತುಗಳು ಕೇಳಿಬಂದಿತ್ತು. ಆದರೆ, ವರದಿಗಳ ಪ್ರಕಾರ ಕೊಹ್ಲಿ ಬಿಸಿಸಿಐ ಅಧಿಕಾರಿಗಳನ್ನು ಸಂಪರ್ಕಿಸಿ ಗಂಭೀರ್ ಜತೆಗೆ ನಡೆಸಿದ ಕಿತ್ತಾಟಗಳನ್ನು ಮರೆತು ಅವರೊಂದಿಗೆ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವುದಾಗಿ ಆಶ್ವಾಸ ನೀಡಿರುವುದಾಗಿ ತಿಳಿದುಬಂದಿದೆ.

ಏಕದಿನ ತಂಡ


ರೋಹಿತ್ ಶರ್ಮ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್ (ವಿ.ಕೀ), ರಿಷಬ್ ಪಂತ್ (ವಿ.ಕೀ), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.

Exit mobile version