ಮುಂಬಯಿ: ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ(Virat Kohli) ಸದ್ಯ ಟಿ20 ಕ್ರಿಕೆಟ್ನಿಂದ ತಾತ್ಕಾಲಿಕ ಬ್ರೇಕ್ ಪಡೆದಿದ್ದಾರೆ ಎಂದು ವರದಿಯಾಗಿದೆ. ಈ ಮೂಲಕ ಮುಂಬರುವ ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಕೊಹ್ಲಿ ಅಲಭ್ಯರಾಗುತ್ತಿರುವುದು ಬಹುತೇಕ ಖಚಿತ ಎನ್ನುವಂತಿದೆ.
ಟಿ20 ವಿಶ್ವ ಕಪ್ ಸೋಲಿನ ಬಳಿಕ ಭಾರತ ಕ್ರಿಕೆಟ್ ತಂಡದಲ್ಲಿ ಈಗಾಗಲೇ ಹಲವು ಬದಲಾವಣೆಗಳು ಸಂಭವಿಸಿದೆ. ಜತೆಗೆ ಹಿರಿಯ ಆಟಗಾರರನ್ನು ಚುಟುಕು ಮಾದರಿಯ ಕ್ರಿಕೆಟ್ನಿಂದ ಕೈ ಬಿಟ್ಟು ಯುವ ಆಟಗಾರರಿಗೆ ಹೆಚ್ಚು ಮಣೆ ಹಾಕುವ ಚಿಂತನೆಯೂ ಬಿಸಿಸಿಐ ನಡೆಸಿದೆ. ಈ ಮಧ್ಯೆ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ನಿಂದ ತಾತ್ಕಾಲಿಕ ಬ್ರೇಕ್ ಪಡೆಯಲು ನಿರ್ಧರಿಸಿದ್ದು ಹಲವು ಅನುಮಾನಗಳಿಗೆ ಎಡೆಮಾಡಿದಂತಿದೆ.
ಒಂದೊಮ್ಮೆ ಕೊಹ್ಲಿ ಯುವ ಆಟಗಾರರಿಗೆ ತಂಡದಲ್ಲಿ ಅವಕಾಶ ನೀಡುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಂಡಿದ್ದು ಅವರು ಟಿ20 ಕ್ರಿಕೆಟ್ನಿಂದ ಹಿಂದೆ ಸರಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದೆ. ಇದರ ಬೆನ್ನಲ್ಲೇ ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿದೆ. ಆದರೆ ವಿರಾಟ್ ತಾತ್ಕಾಲಿಕ ವಿಶ್ರಾಂತಿ ಪಡೆದಿರುವ ಕುರಿತು ಯಾವುದೇ ಖಚಿತ ಮಾಹಿತಿ ಇಲ್ಲ.
ಇದನ್ನೂ ಓದಿ | Indian Cricket Team | 2011ರಿಂದ ಭಾರತ ತಂಡದ ಪರ ವರ್ಷವೊಂದರಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಬ್ಯಾಟ್ಸ್ಮನ್ಗಳು