Site icon Vistara News

Virat Kohli: ನಿಯಮ ಉಲ್ಲಂಘಿಸಿದರೇ ವಿರಾಟ್‌ ಕೊಹ್ಲಿ?; ಕ್ರಮ ಕೈಗೊಳ್ಳುವ ಸಾಧ್ಯತೆ!

virat and anushka

ಬೆಂಗಳೂರು: ಭಾರತ ತಂಡ ವಿಶ್ವಕಪ್​ನ ಕೊನೆಯ ಪಂದ್ಯವನ್ನು ನೆದರ್ಲೆಂಡ್ಸ್​ ವಿರುದ್ಧ ಆಡಲಿದೆ. ಈ ಪಂದ್ಯ ಭಾನುವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈಗಾಗಲೇ ಎಲ್ಲ ಆಟಗಾರರು ಬೆಂಗಳೂರಿಗೆ ತಲುಪಿದ್ದು ಅಭ್ಯಾಸ ಕೂಡ ಆರಂಭಿಸಿದ್ದಾರೆ. ಆದರೆ ವಿರಾಟ್​ ಕೊಹ್ಲಿ(Virat Kohli) ಅವರು ನಿಯಮವೊಂದನ್ನು ಬ್ರೇಕ್​ ಮಾಡಿದ್ದಾರೆ ಎಂವ ಆರೋಪ ಕೇಳಿಬಂದಿದೆ.

ಬಿಸಿಸಿಐ ನಿಯಮದ ಪ್ರಕಾರ ತಂಡದ ಸದಸ್ಯರು ಉಳಿದುಕೊಳ್ಳುವ ಹೋಟೆಲ್‌ನಲ್ಲಿ ಆಟಗಾರರನ್ನು ಹೊರತು ಪಡಿಸಿ ಉಳಿದ ಯಾರಿಗೂ ಇಲ್ಲಿ ತಂಗುವ ಅವಕಾಶವಿರುವುದಿಲ್ಲ. ಆದರೆ, ವಿರಾಟ್ ಕೊಹ್ಲಿ ಜತೆ ಅವರ ಪತ್ನಿ ಅನುಷ್ಕಾ ಶರ್ಮಾ((anushka sharma)) ಕೂಡ ಇರುವುದು ಕಂಡುಬಂದಿದೆ. ಕೊಹ್ಲಿ-ಅನುಷ್ಕಾ ಹೋಟೆಲ್‌ನಿಂದ ಹೊರ ಹೋಗುತ್ತಿರುವ ವಿಡಿಯೊ ಇದೀಗ ವೈರಲ್ ಆಗಿದೆ. ಹೀಗಾಗಿ ಕೊಹ್ಲಿ ಅವರು ಈ ನಿಯಮವನ್ನು ಬ್ರೇಕ್‌ ಮಾಡಿದ್ದಾರೆ ಎಂದು ವರದಿಯಾಗಿದೆ. ಕೊಹ್ಲಿ ನಿಜವಾಗಿಯೂ ಈ ನಿಯಮವನ್ನು ಪಾಲಿಸದೇ ಇದಲ್ಲಿ ಬಿಸಿಸಿಐ ಕ್ರಮ ಕೈಗೊಳ್ಳುವ ಸಾಧ್ಯತೆಯೂ ಇದೆ. ಸದ್ಯಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

2ನೇ ಮಗುವಿನ ನಿರೀಕ್ಷೆಯಲ್ಲಿ ವಿರುಷ್ಕಾ ದಂಪತಿ

ವಿರಾಟ್‌ ಕೊಹ್ಲಿ ಅವರು ಸದ್ಯದಲ್ಲೇ ಎರಡನೇ ಮಗುವಿನ ತಂದೆಯಾಗುವ ನಿರೀಕ್ಷೆಯಲ್ಲಿದ್ದಾರೆ. ಹೌದು, ಅನುಷ್ಕಾ ಶರ್ಮಾ (Anushka Sharma) ಅವರು ಗರ್ಭಿಣಿಯಾಗಿದ್ದು, ‘ವಿರುಷ್ಕಾ’ ಜೋಡಿಯು ಒಟ್ಟಿಗೆ ತಿರುಗಾಡಿರುವ ವಿಡಿಯೊ ಈಗ ವೈರಲ್‌ ಆಗಿದೆ. ಅನುಷ್ಕಾ ಶರ್ಮಾ ಬೇಬಿ ಬಂಪ್‌ ವಿಡಿಯೊದಲ್ಲಿ ಸೆರೆಯಾಗಿದೆ.

ಹೌದು, ವಿರಾಟ್‌ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಅವರು ಬೆಂಗಳೂರಿನಲ್ಲಿ ಒಟ್ಟಿಗೆ ತಿರುಗಾಡುವುದನ್ನು ಪಾಪರಾಜಿಗಳು ಸೆರೆ ಹಿಡಿದಿದ್ದಾರೆ. ಅನುಷ್ಕಾ ಶರ್ಮಾ ಅವರ ಬೆಬಿ ಬಂಪ್‌ ದೃಶ್ಯವು ವಿಡಿಯೊದಲ್ಲಿ ಸೆರೆಯಾಗಿದೆ. ಹಾಗಾಗಿ, ವಿರಾಟ್‌ ಕೊಹ್ಲಿ ಪತ್ನಿಯು ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಭಾರತ ಹಾಗೂ ನೆದರ್ಲೆಂಡ್ಸ್‌ ವಿರುದ್ಧ ವಿಶ್ವಕಪ್‌ ಲೀಗ್‌ ಹಂತದ ಕೊನೆಯ ಪಂದ್ಯ ನವೆಂಬರ್‌ 12ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಹಾಗಾಗಿ, ಜೋಡಿಯು ಬೆಂಗಳೂರಿನಲ್ಲಿ ಕಾಣಿಸಿಕೊಂಡಿದೆ.

ಇದನ್ನೂ ಓದಿ ಬರ್ತ್‌ಡೇ, ಸೆಂಚುರಿ ಬೆನ್ನಲ್ಲೇ ವಿರಾಟ್‌ ಕೊಹ್ಲಿಗೆ ಮತ್ತೊಂದು ಖುಷಿ, ಅನುಷ್ಕಾ ಶರ್ಮಾ ಪ್ರೆಗ್ನೆಂಟ್

ವಿರಾಟ್‌ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಅವರ ವಿಡಿಯೊ ವೈರಲ್‌ ಆಗುತ್ತಲೇ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. “ಶೀಘ್ರವೇ ಮರಿ ವಿರಾಟ್‌ ಬರಲಿದ್ದಾನೆ” ಎಂದು ಒಬ್ಬ ಪ್ರತಿಕ್ರಿಯಿಸಿದರೆ, “ಅಭಿನಂದನೆಗಳು ವಿರಾಟ್‌ ಭಾಯ್.‌ ಶುಭವಾಗಲಿ” ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ. ಹೀಗೆ ನೂರಾರು ಅಭಿಮಾನಿಗಳು ವಿರುಷ್ಕಾ ಜೋಡಿಗೆ ಶುಭ ಹಾರೈಸಿದ್ದಾರೆ. ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ 2017ರ ಡಿ11ರಂದು ವಿವಾಹವಾಗಿದ್ದರು. 2021ರ ಜನವರಿಯಲ್ಲಿ ಅನುಷ್ಕಾ ಶರ್ಮಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಈ ಮಗುವಿಗೆ ವಾಮಿಕಾ ಎಂದು ಹೆಸರಿಡಲಾಗಿದೆ. 

ನೆದರ್ಲೆಂಡ್ಸ್ ವಿರುದ್ಧ ವಿರಾಟ್ ಆಡುತ್ತಾರಾ?

ಭಾರತ ಈಗಾಗಲೇ ವಿಶ್ವಕಪ್​​ಗೆ ಅರ್ಹತೆ ಪಡೆದಿರುವುದರಿಂದ, ನಾಯಕ ರೋಹಿತ್ ಮತ್ತು ಕೋಚ್ ರಾಹುಲ್ ದ್ರಾವಿಡ್ ಕೆಲವು ಆಟಗಾರರಿಗೆ ವಿಶ್ರಾಂತಿ ನೀಡುವ ಬಗ್ಗೆ ಯೋಚಿಸಬಹುದು. ಏಷ್ಯಾಕಪ್ ಬಳಿಕದಿಂದ ನಿರಂತರವಾಗಿ ಕ್ರಿಕೆಟ್ ಆಡುತ್ತಿರುವ ಕೊಹ್ಲಿ ಅವರಲ್ಲಿ ಕೊಹ್ಲಿಯೂ ಒಬ್ಬರಾಗಿದ್ದಾರೆ. ಕೊಹ್ಲಿ ಬದಲಿಗೆ ಇಶಾನ್ ಕಿಶನ್ ಅವರನ್ನು ಮೂರನೇ ಕ್ರಮಾಂಕದಲ್ಲಿ ಆಡಿಸುವ ಆಯ್ಕೆ ಭಾರತಕ್ಕಿದೆ ಎಂದು ಮೂಲಗಳು ತಿಳಿಸಿವೆ.

Exit mobile version