ಬೆಂಗಳೂರು: ವಿರಾಟ್ ಕೊಹ್ಲಿ(Virat Kohli) ಅವರು ಪಂಜಾಬ್ ಕಿಂಗ್ಸ್(Punjab Kings) ವಿರುದ್ಧ ತಮ್ಮ ತಂಡ ಆರ್ಸಿಬಿ(RCB) ಗೆಲುವು ಸಾಧಿಸಿದ ಬಳಿಕ ಪತ್ನಿ ಅನುಷ್ಕಾ ಶರ್ಮಾ(Anushka Sharma) ಅವರಿಗೆ ಮೈದಾನದಿಂದಲೇ ವಿಡಿಯೊ ಕಾಲ್(Virat Kohli’s video call) ಮಾಡಿ ಸಂತಸ ಹಂಚಿಕೊಂಡಿದ್ದಾರೆ. ಈ ವಿಡಿಯೊ ವೈರಲ್ ಆಗಿದೆ. ಅನುಷ್ಕಾ ಫೆಬ್ರವರಿ 15 ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು. ಸದ್ಯ ಅವರು ಲಂಡನ್ ನಲ್ಲೇ ಇದ್ದಾರೆ. ಹೀಗಾಗಿ ಈ ಬಾರಿ ಅನುಷ್ಕಾ ಐಪಿಎಲ್ ಪಂದ್ಯಗಳನ್ನು ವೀಕಿಸಲು ಭಾರತಕ್ಕೆ ಬಂದಿಲ್ಲ.
ಕೊಹ್ಲಿ ವಿಡಿಯೊ ಕರೆ ಮಾಡಿ ಅನುಷ್ಕಾ ಶರ್ಮಾ ಮತ್ತು ತಮ್ಮ ಮಕ್ಕಳ ಜತೆ ಮುದ್ದಾಗಿ ಮಾತನಾಡಿದ್ದಾರೆ. ಪುಟ್ಟ ಮಗುವಿಗೆ ಫ್ಲೈಯಿಂಗ್ ಕಿಸ್ ನೀಡಿದ್ದು ಕೂಡ ವಿಡಿಯೊದಲ್ಲಿ ಗಮನಿಸಬಹುದು. ಕುಟುಂಬಕ್ಕೆ ಮೊದಲ ಪ್ರಾಧಾನ್ಯತೆ ನೀಡುವ ಕೊಹ್ಲಿ ಯಾವುದೇ ಕ್ರಿಕೆಟ್ ಸರಣಿ ಇದ್ದರೂ ಕೂಡ ಇದರಿಂದ ಹಿಂದೆ ಸರಿದು ಕುಟುಂಬದ ಜತೆ ಕಾಲ ಕಳೆಯುತ್ತಾರೆ.
Virat Kohli on video call with his family.
— Satyam (@iamsatypandey) March 25, 2024
Look at his cute expressions 🫶🏼😭#ViratKohli𓃵 #RCBvsPBKS pic.twitter.com/PEdIpdWwQR
ಕೊಹ್ಲಿಗೆ ಸ್ಫೂರ್ತಿ ತುಂಬಲು ಶೀಘ್ರದಲ್ಲೇ ಐಪಿಎಲ್ಗೆ ಬರಲಿದ್ದಾರೆ ಪತ್ನಿ ಅನುಷ್ಕಾ
ಮೂಲಗಳ ಪ್ರಕಾರ ಅನುಷ್ಕಾ ಅವರು ವಿರಾಟ್ ಕೊಹ್ಲಿಗೆ(Virat Kohli) ಸ್ಫೂರ್ತಿ ನೀಡಲೆಂದೇ ಐಪಿಎಲ್ನ ದ್ವಿತಿಯಾರ್ಧದ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಎರಡನೇ ಮಗುವಾದ ಬಳಿಕ ಅನುಷ್ಕಾ ಇದುವರೆಗೂ ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಇದೀಗ ಎರಡನೇ ಹಂತದ ಐಪಿಎಲ್ ಪಂದ್ಯದ ವೇಳೆಗೆ ತಮ್ಮ ಪತಿ ವಿರಾಟ್ ಪ್ರತಿನಿಧಿಸುವ ಆರ್ಸಿಬಿ ಪಂದ್ಯ ವೀಕ್ಷಣೆಗೆ ಮೈದಾನಕ್ಕೆ ಬರಲಿದ್ದಾರೆ ಎನ್ನಲಾಗಿದೆ. ಹಿಂದೆ ಅನೇಕ ಬಾರಿ ಅನುಷ್ಕಾ ಮೈದಾನದಲ್ಲಿದ್ದು, ಪತಿ ಕೊಹ್ಲಿಗೆ ಚಿಯರ್ ಅಪ್ ಮಾಡಿದ್ದರು. ಕಳೆದ ಬಾರಿ ಏಕದಿನ ವಿಶ್ವಕಪ್ ಟೂರ್ನಿಯ ವೇಳೆಯೂ ಬಹುತೇಖ ಪಂದ್ಯಗಳಲ್ಲಿ ಅನುಷ್ಕಾ ಅವರು ಕೊಹ್ಲಿಗೆ ಹುರಿದುಂಬಿಸಿದ ಫೋಟೊ ಮತ್ತು ವಿಡಿಯೊಗಳು ವೈರಲ್ ಆಗಿತ್ತು.
ಕೊಹ್ಲಿ ಮತ್ತು ಅನುಷ್ಕಾ ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿದ್ದಾರೆ. ಈ ಜೋಡಿ ಸೇವಾ (seVVA) ಎಂಬ ಹೆಸರಿನ ಎನ್ಜಿವೊ ನಡೆಸುತ್ತಿದ್ದು ಈ ಮೂಲಕ ಹಲವರಿಗೆ ಸಹಾಯವನ್ನು ಮಾಡುತ್ತಿದ್ದಾರೆ. ಕೊಹ್ಲಿಯ ಎಲ್ಲ ಏರಿಳಿತದಲ್ಲಿಯೂ ಪತ್ನಿ ಅನುಷ್ಕಾ ಬೆಂಬಲಕ್ಕೆ ನಿಂತು ಅವರಿಗೆ ಸಾದಾ ಪ್ರೋತ್ಸಾಹವನ್ನು ನೀಡುತ್ತಲೇ ಬಂದಿದ್ದಾರೆ. ಕೊಹ್ಲಿ ಕೂಡ ತನ್ನ ಬದುಕಿನಲ್ಲಿ ಅನುಷ್ಕಾ ಮುಖ್ಯ ಪಾತ್ರಹಿಸಿರುದಾಗಿ ಹಿಂದೊಮ್ಮೆ ಸಂದರ್ಶನದಲ್ಲಿ ಹೇಳಿದ್ದರು. “ಅನುಷ್ಕಾ ಅವರ ಭೇಟಿ ನನ್ನ ಜೀವನದಲ್ಲಿ ಹೊಸ ದೃಷ್ಟಿಕೋನವನ್ನು ಕೊಟ್ಟಿದೆ. ಹಾಗೇ ಎಲ್ಲವನ್ನೂ ಸ್ವೀಕರಿಸುವ ಭಾವನೆಯನ್ನು ಬೆಳೆಸಿಕೊಳ್ಳಲು ಸಹಕರಿಸಿದೆ” ಎಂದು ಕೊಹ್ಲಿ ಹೇಳಿದ್ದರು.
ಇದನ್ನೂ ಓದಿ IPL 2024 Points Table: ಆರ್ಸಿಬಿ ಗೆಲುವಿನ ಬಳಿಕ ಅಂಕಪಟ್ಟಿ ಹೇಗಿದೆ?
Cutest video in the Internet…!!!
— Johns. (@CricCrazyJohns) March 25, 2024
– Virat Kohli 👑👌pic.twitter.com/BPCrVRH6Jy
“ನನ್ನ ಜೀವನವು ಸಂಪೂರ್ಣವಾಗಿ ವಿಭಿನ್ನ ದೃಷ್ಟಿಕೋನವನ್ನು ಹೊಂದಿತ್ತು. ನೀವು ಒಬ್ಬ ವ್ಯಕ್ತಿಯೊಂದಿಗೆ ಪ್ರೀತಿಯಲ್ಲಿ ಬಿದ್ದಾಗ, ನಿಮ್ಮೊಳಗೆ ಆ ಬದಲಾವಣೆಗಳನ್ನು ಪ್ರಕ್ರಿಯೆಗೊಳಿಸಲು ಪ್ರಾರಂಭಿಸುತ್ತೀರಿ. ಅವಳ ಜೀವನದ ದೃಷ್ಟಿಕೋನವು ವಿಭಿನ್ನವಾಗಿತ್ತು ಮತ್ತು ಅದು ನನ್ನನ್ನು ಉತ್ತಮವಾಗಿ ಬದಲಾಯಿಸಲು ಮತ್ತು ವಿಷಯಗಳನ್ನು ಹೆಚ್ಚು ಒಪ್ಪಿಕೊಳ್ಳುವಂತೆ ಪ್ರೇರೇಪಿಸಿತು. ತಾಯಿಯಾಗಿ ಅನುಷ್ಕಾ ಮಾಡಿದ ತ್ಯಾಗಗಳು ದೊಡ್ಡವು. ಅವಳನ್ನು ನೋಡಿದಾಗ, ನನಗೆ ಏನೇ ಸಮಸ್ಯೆಗಳಿದ್ದರೂ ಏನೂ ಅಲ್ಲ ಎಂದು ಎನಿಸಿಬಿಡುತ್ತದೆ” ಎಂದು ಕೊಹ್ಲಿ ಪತ್ನಿ ಅನುಷ್ಕಾ ಬಗ್ಗೆ ಮೆಚ್ಚುಗೆಯ ಮಾತುಗಳನಾಡಿದ್ದರು.