ದುಬೈ: ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ(Virat Kohli) ಮತ್ತು ಪತ್ನಿ ಅನುಷ್ಕಾ ಶರ್ಮಾ ಸದ್ಯ ರಜಾ ದಿನಗಳ ಸಂಭ್ರಮದಲ್ಲಿದ್ದಾರೆ. ಜತೆಗೆ ಹೊಸ ವರ್ಷದ ಆಚರಣೆಯನ್ನು ಭರ್ಜರಿಯಾಗಿ ಸಂಭ್ರಮಿಸಲು ಎಲ್ಲ ರೀತಿಯ ತಯಾರಿ ನಡೆಸಿದ್ದಾರೆ. ಈ ಕುರಿತ ಕೆಲ ಫೋಟೊಗಳನ್ನು ವಿರುಷ್ಕಾ ಜೋಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಬಾಂಗ್ಲಾದೇಶ ವಿರುದ್ಧದ ಸರಣಿ ಬಳಿಕ ಬಿಡುವಿನಲ್ಲಿರುವ ವಿರಾಟ್ ಕೊಹ್ಲಿ ಸದ್ಯ ಪತ್ನಿ ಅನುಷ್ಕಾ ಜತೆ ದುಬೈನಲ್ಲಿ ಕಾಲ ಕಳೆಯುತ್ತಿದ್ದಾರೆ. ಅದರಂತೆ ಹೊಸ ವರ್ಷವನ್ನು(2023) ವಿರುಷ್ಕಾ ದಂಪತಿ ಇಲ್ಲೇ ಆಚರಿಸಲು ತೀರ್ಮಾನಿಸಿದ್ದಾರೆ.
ದುಬೈನಲ್ಲಿರುವ ಕೊಹ್ಲಿ ತಮ್ಮ ಪತ್ನಿಯೊಂದಿಗಿನ ಫೋಟೊವನ್ನು ಹಂಚಿಕೊಂಡು “ವರ್ಷದ ಕೊನೆಯ ಅರುಣೋದಯ ಎಂದು” ಶೀರ್ಷಿಕೆ ನೀಡಿ ಟ್ವೀಟ್ ಮಾಡಿದ್ದಾರೆ. ಅನುಷ್ಕಾ ಶರ್ಮಾ ಕೂಡ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಲವು ಫೋಟೊಗಳನ್ನು ಹಂಚಿಕೊಂಡು “ಹೊಸ ವರ್ಷವನ್ನು ಹೊಸ ನಿರೀಕ್ಷೆಯೊಂದಿಗೆ ಬರಮಾಡಿಕೊಳ್ಳಲಿದ್ದೇವೆ” ಎಂದು ತಿಳಿಸಿದ್ದಾರೆ.
ಇದನ್ನೂ ಓದಿ | Virat Kohli | ಟಿ20 ಕ್ರಿಕೆಟ್ನಿಂದ ತಾತ್ಕಾಲಿಕ ಬ್ರೇಕ್ ಪಡೆದ ವಿರಾಟ್ ಕೊಹ್ಲಿ; ಇದು ನಿವೃತ್ತಿಯ ಸೂಚನೆಯೇ?