Site icon Vistara News

Virat Kohli: ಫೈನಲ್ ಪಂದ್ಯದಲ್ಲಿ ಬೆಸ್ಟ್​ ಫೀಲ್ಡರ್​ ಪ್ರಶಸ್ತಿ ಗೆದ್ದ ವಿರಾಟ್​ ಕೊಹ್ಲಿ

virat kohli

ಅಹಮದಾಬಾದ್: ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಟೀಮ್​ ಇಂಡಿಯಾ ಮ್ಯಾನೆಜ್​ಮೆಂಟ್​ ಆಟಗಾರರಲ್ಲಿ ಹೆಚ್ಚಿನ ಸ್ಫೂರ್ತಿ ತುಂಬವ ನಿಟ್ಟಿನಲ್ಲಿ, ಪಂದ್ಯವೊಂದರಲ್ಲಿ ಉತ್ತಮ ಫೀಲ್ಡಿಂಗ್ ನಡೆಸಿದರೆ ಆತನನ್ನು ಗುರುತಿಸಿ ಚಿನ್ನದ ಪದಕ ನೀಡುವ ಕಾರ್ಯವನ್ನು ಜಾರಿಗೆ ತಂದಿತ್ತು. ಫೈನಲ್​ ಪಂದ್ಯದಲ್ಲಿ ಈ ಪ್ರಶಸ್ತಿ ವಿರಾಟ್​ ಕೊಹ್ಲಿಗೆ(Virat Kohli) ಲಭಿಸಿದೆ.

ಅಚ್ಚರಿ ಎಂದರೆ ಆದಿ ಮತ್ತು ಅಂತ್ಯದ ಈ ಪ್ರಶಸ್ತಿ ವಿರಾಟ್​ ಕೊಹ್ಲಿಗೆ ದೊರಕಿದೆ. ಭಾರತ ವಿಶ್ವಕಪ್​ ಅಭಿಮಾನ ಆರಂಭಿಸಿದ್ದು ಆಸ್ಟ್ರೇಲಿಯಾ ವಿರುದ್ಧ ಈ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಅತ್ಯುತ್ತಮ ಫೀಲ್ಡರ್​ ಪ್ರಶಸ್ತಿ ಗೆದ್ದಿದ್ದರು. ಇದೀಗ ಕೊನೆಯ ಪಂದ್ಯದಲ್ಲಿಯೂ ಅವರಿಗೆ ಈ ಪ್ರಶಸ್ತಿ ಲಭಿಸಿದೆ.

ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಸ್ಲಿಪ್​​ನಲ್ಲಿ ಆಕರ್ಷಕ ಕ್ಯಾಚ್​ ಪಡೆದ ಕಾರಣ ಕೊಹ್ಲಿಗೆ ಈ ಪ್ರಶಸ್ತಿ ಲಭಿಸಿತು. ತಂಡದ ಫೀಲ್ಡಿಂಗ್​ ಕೋಚ್​ ಟಿ.ದಿಲೀಪ್​ ಅವರು ಈ ಪ್ರಶಸ್ತಿ ಘೋಷಣೆ ಮಾಡಿದರು. ಕೊಹ್ಲಿಗೆ ರವೀಂದ್ರ ಜಡೇಜ ಪ್ರಶಸ್ತಿ ನೀಡಿ ಗೌರವಿಸಿದರು. ಸೆಮಿಫೈನಲ್​ ಪಂದ್ಯದಲ್ಲಿ ಜಡೇಜಾಗೆ ಈ ಪ್ರಶಸ್ತಿ ಲಭಿಸಿತ್ತು. ಸೋಲಿನ ಬೇಸರದಲ್ಲಿದ್ದ ಕೊಹ್ಲಿ ಈ ಪ್ರಶಸ್ತಿಯನ್ನು ಒಲ್ಲದ ಮನಸ್ಸಿಂದಲೇ ಸ್ವೀಕರಿಸಿದರು. ಅವರ ಮುಖದಲ್ಲಿ ಬೇಸರ ಎದ್ದು ಕಾಣುತ್ತಿತ್ತು.

ಈ ಬಾರಿಯ ವಿಶ್ವಕಪ್​ ಜರ್ನಿಯಲ್ಲಿ ಉತ್ತಮ ಫೀಲ್ಡರ್​ ಪ್ರಶಸ್ತಿ ಗೆದ್ದ ಸಾಧಕರೆಂದರೆ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್,ಶಾರ್ದೂಲ್​ ಠಾಕೂರ್, ಶ್ರೇಯಸ್ ಅಯ್ಯರ್, ರೋಹಿತ್ ಶರ್ಮಾ, ರವೀಂದ್ರ ಜಡೇಜಾ ಮತ್ತು ಸೂರ್ಯಕುಮಾರ್ ಯಾದವ್.

ಇದನ್ನೂ ಓದಿ Rahul Dravid: ಕೋಚ್​ ಹುದ್ದೆ ತ್ಯಜಿಸಲಿದ್ದಾರಾ ದ್ರಾವಿಡ್​?; ಸೋಲಿನ ಬಳಿಕ ಹೇಳಿದ್ದೇನು?

ಸರಣಿ ಶ್ರೇಷ್ಠ ಪ್ರಶಸ್ತಿ ಗೆದ್ದ ವಿರಾಟ್​​ ಕೊಹ್ಲಿ

ವಿಶ್ವಕಪ್​ ಆವೃತ್ತಿಯಲ್ಲಿ ಅಮೋಘ ಬ್ಯಾಟಿಂಗ್​ ಪ್ರದರ್ಶನ ತೋರಿದ ಟೀಮ್​ ಇಂಡಿಯಾದ ಸ್ಟಾರ್​ ಆಟಗಾರ ಕಿಂಗ್​ ಖ್ಯಾತಿಯ ವಿರಾಟ್​ ಕೊಹ್ಲಿ (Virat Kohli) ಅವರು ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಟೂರ್ನಿಯಲ್ಲಿ ಅವರು 11 ಪಂದ್ಯಗಳನ್ನು ಆಡಿ ಒಟ್ಟು 765 ರನ್​ ಬಾರಿಸಿ ಅತ್ಯಧಿಕ ರನ್​ಗಳಿಸಿದ ಆಟಗಾರ ಎನಿಸಿಕೊಂಡರು. ಅವರ ಈ ಸಾಧನೆಗೆ ಈ ಪ್ರಶಸ್ತಿ ಒಲಿದಿದೆ.

ಈ ಬಾರಿಯ ವಿಶ್ವಕಪ್​ ಟೂರ್ನಿಯಲ್ಲಿ ಬ್ಯಾಟಿಂಗ್​ ವಿರಾಟ ದರ್ಶನ ತೋರಿದ ಕೊಹ್ಲಿ ಟೂರ್ನಿಯ ಟಾಪ್‌ ಸ್ಕೋರರ್‌ ಆಗಿ ಹೊರಮೊಮ್ಮಿದ್ದಾರೆ. ಅಲ್ಲದೆ ತಮ್ಮ ಹೆಸರಿಗೆ ನಾನಾ ದಾಖಲೆಗಳನ್ನೂ ಬರೆಸಿಕೊಂಡಿದ್ದಾರೆ. ಆಸೀಸ್​ ವಿರುದ್ಧದ ಮೊದಲ ಲೀಗ್​ ಪಂದ್ಯದಲ್ಲಿ ಕುಸಿದಿದ್ದ ಭಾರತ ತಂಡಕ್ಕೆ ಆಸರೆಯಾದ ಕೊಹ್ಲಿ 85 ರನ್‌ ಗಳಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದ್ದರು. ಅಫಘಾನಿಸ್ತಾನ ವಿರುದ್ಧ ನಡೆದ 2ನೇ ಪಂದ್ಯದಲ್ಲಿ ಕೊಹ್ಲಿ 55 ರನ್‌ ಬಾರಿಸಿದ್ದರು. ಬಾಂಗ್ಲಾ ವಿರುದ್ಧ ಅಮೋಘ ಪ್ರದರ್ಶನ ನೀಡಿದ ಕೊಹ್ಲಿ 97 ಎಸೆತಗಳಲ್ಲಿ 103 ರನ್‌ ಗಳಿಸಿದರು.

Exit mobile version