Site icon Vistara News

Virat Kohli: ಐಸಿಸಿ ವರ್ಷದ ಏಕದಿನ ಆಟಗಾರ ಪ್ರಶಸ್ತಿ ಸ್ವೀಕರಿಸಿದ ವಿರಾಟ್ ಕೊಹ್ಲಿ

Virat Kohli

Virat Kohli:Kohli receives ICC ODI Player of the Year 2023 award

ನ್ಯೂಯಾರ್ಕ್​: ಭಾರತ ತಂಡದ ಸ್ಟಾರ್​ ಆಟಗಾರ ವಿರಾಟ್ ಕೊಹ್ಲಿ(Virat Kohli) ಅವರು ಐಸಿಸಿ ವರ್ಷದ(ICC ODI Player Of The Year 2023) ಏಕದಿನ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಭಾನುವಾರ ಕೊಹ್ಲಿ ಈ ಪ್ರಶಸ್ತಿ ಸ್ವೀಕರಿಸಿದರು. ಈ ಮೂಲಕ ವೃತ್ತಿಜೀವನದಲ್ಲಿ ಮತ್ತೊಂದು ಬೃಹತ್ ಉತ್ತುಂಗಕ್ಕೆ ಏರಿದ್ದಾರೆ. ಟಿ20 ವಿಶ್ವಕಪ್​ ಆಡುವ ಸಲುವಾಗಿ ನ್ಯೂಯಾರ್ಕ್​ನಲ್ಲಿರು ಕೊಹ್ಲಿ ಈ ಪ್ರಶಸ್ತಿಯನ್ನು ಇಲ್ಲಿಯೇ ಸ್ವೀಕರಿಸಿದ್ದಾರೆ. ಇದರ ವಿಡಿಯೊವನ್ನು ಐಸಿಸಿ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ. 2012, 2017, 2018 ರಲ್ಲಿಯೂ ಕೊಹ್ಲಿ ಈ ಪ್ರಶಸ್ತಿ ಪಡೆದಿದ್ದರು.

2022ರ ದ್ವಿತೀಯಾರ್ಧದಲ್ಲಿ ಮತ್ತೆ ಹಳೆಯ ಬ್ಯಾಟಿಂಗ್​ ಫಾರ್ಮ್​ಗೆ ಮರಳಿದ ವಿರಾಟ್​ ಕೊಹ್ಲಿ ಟೆಸ್ಟ್ ಮತ್ತು ಏಏಕದಿನ ಕ್ರಿಕೆಟ್​ನಲ್ಲಿ ರನ್​ಗಳ ಮಳೆಯನ್ನೇ ಸುರಿಸಿದ್ದರು. ಅಲ್ಲದೆ ಹಲವು ವಿಶ್ವ ದಾಖಲೆಯನ್ನು ಕೂಡ ತಮ್ಮ ಹೆಸೆರಿಗೆ ಬರೆದಿದ್ದರು. 2023ರಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಬಾರ್ಡರ್-ಗವಾಸ್ಕರ್ ಸರಣಿಯ ಅಂತಿಮ ಪಂದ್ಯದಲ್ಲಿ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕೊಹ್ಲಿ 186 ರನ್ ಸಿಡಿಸಿದ್ದರು. ಇದು 2019 ರ ನಂತರ ಅವರ ಮೊದಲ ಟೆಸ್ಟ್ ಶತಕವಾಗಿತ್ತು.

ಆಸೀಸ್​ ಬಳಿಕ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್​ನಲ್ಲಿ 121 ರನ್ ಗಳಿಸುವ ತಮ್ಮ ಶತಕದ ಸಂಖ್ಯೆಯನ್ನು ಮತ್ತೆ ಹೆಚ್ಚಿಸಿದರು. ಏಕದಿನ ಮಾದರಿಯಲ್ಲಿ ಹಲವಾರು ದಾಖಲೆಗಳನ್ನು ಪುಡಿಮಾಡಿ ಕಳೆದ ವರ್ಷ ಆರು ಶತಕಗಳನ್ನು ಬಾರಿಸಿದ್ದಾರೆ. ಜತೆಗೆ ಏಕದಿನ ಕ್ರಿಕೆಟ್​ನಲ್ಲಿ ಸಚಿನ್​ ಬಾರಿಸಿದ್ದ 49 ಶತಕದ ವಿಶ್ವ ದಾಖಲೆಯನ್ನು ಹಿಂದಿಕ್ಕಿ 50 ಶತಕ ಪೂರ್ತಿಗೊಳಿಸಿದ್ದರು. ವಿಶ್ವಕಪ್​ ಟೂರ್ನಿಯಲ್ಲೂ 765 ರನ್​ ಬಾರಿಸಿ ಟೂರ್ನಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಆಟಗಾರ ಎನಿಸಿಕೊಂಡಿದ್ದರು.

ಇದನ್ನೂ ಓದಿ Virat kohli : ಕಡೆಗಣಿಸುವ ಹೇಳಿಕೆ ನೀಡಿ ಕೊಹ್ಲಿಗೆ ಮತ್ತೆ ಅವಮಾನ ಮಾಡಿದ ಅಂಬಾಟಿ ರಾಯುಡು

35 ವರ್ಷದ ಕೊಹ್ಲಿ 2023 ರಲ್ಲಿ 27 ಏಕದಿನ ಪಂದ್ಯಗಳಿಂದ 24 ಇನ್ನಿಂಗ್ಸ್‌ಗಳಲ್ಲಿ ಆರು ಶತಕಗಳು ಮತ್ತು ಎಂಟು ಅರ್ಧಶತಕಗಳೊಂದಿಗೆ 72.47 ರ ಸರಾಸರಿ ಮತ್ತು 99.13 ರ ಸ್ಟ್ರೈಕ್ ರೇಟ್‌ನಲ್ಲಿ 1,377 ರನ್ ಗಳಿಸಿದ್ದಾರೆ. ಈ ಪೈಕಿ ಗರಿಷ್ಠ ಸ್ಕೋರ್ 166* ಆಗಿತ್ತು. ಏಷ್ಯಾ ಕಪ್ 2023 ರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ನಿರ್ಣಾಯಕ ಸೂಪರ್ ಫೋರ್ ಹಂತದ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ 94 ಎಸೆತಗಳಲ್ಲಿ ಅಜೇಯ 122* ರನ್ ಗಳಿಸಿದ್ದರು.

ಕಳೆದ ವರ್ಷ ತವರಿನಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ, ವಿರಾಟ್ 11 ಪಂದ್ಯಗಳಲ್ಲಿ 95.62 ಸರಾಸರಿಯಲ್ಲಿ 765 ರನ್‌ಗಳನ್ನು ಗಳಿಸಿದ್ದರು. ಇದರಲ್ಲಿ ಮೂರು ಶತಕಗಳು, ಆರು ಅರ್ಧ ಶತಕಗಳು ದಾಖಲಾಗಿತ್ತು. ಈ ಬಾರಿಯ ಐಪಿಎಲ್​ ಟೂರ್ನಿಯಲ್ಲಿ ಅತಿ ಹೆಚ್ಚು ರನ್‌ಗಳಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದರು. ಇದೀಗ ಟಿ20 ವಿಶ್ವಕಪ್​ ಆಡಲು ಸಜ್ಜಾಗಿದ್ದಾರೆ. ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್ 5ರಂದು ಐರ್ಲೆಂಡ್​ ವಿರುದ್ಧ ಆಡಲಿದೆ.

Exit mobile version