Virat kohli : ನಾಲ್ಕು ಪದಗಳಲ್ಲಿ ಅಣ್ಣನ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಕೊಹ್ಲಿಯ ತಂಗಿ - Vistara News

ಕ್ರಿಕೆಟ್

Virat kohli : ನಾಲ್ಕು ಪದಗಳಲ್ಲಿ ಅಣ್ಣನ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಕೊಹ್ಲಿಯ ತಂಗಿ

ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ವಿರಾಟ್​ ಕೊಹ್ಲಿ (Virat kohli) ಗೆಲುವಿನ 85 ರನ್​ ಬಾರಿಸಿದ್ದರಲ್ಲದೆ, ರಾಹುಲ್ ಜತೆಗೆ 165 ರನ್​ಗಳ ಜತೆಯಾಟವಾಡಿದ್ದರು

VISTARANEWS.COM


on

Bhawana Kohli
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚೆನ್ನೈನಲ್ಲಿ ನಡೆದ ಏಕದಿನ ವಿಶ್ವಕಪ್​ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧದ ತಂಡದ ಮೊದಲ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಮಿಂಚಿದ್ದರು. ಅವರು 111 ಎಸೆತಗಳಲ್ಲಿ ವಿಜಯ 85 ರನ್ ಬಾರಿಸುವ ಜತೆಗೆ ಕೆ. ಎಲ್ ರಾಹುಲ್ ಜತೆಗೂಡಿ 165 ರನ್​ಗಳ ಜತೆಯಾಟವಾಡಿದ್ದರು. ಈ ಇನಿಂಗ್ಸ್​ಗಾಗಿ ವಿರಾಟ್ ಕೊಹ್ಲಿ ಸಹೋದರಿ ಭಾವನಾ ತಮ್ಮ ಸಹೋದರನನ್ನು ಶ್ಲಾಘಿಸಿದ್ದಾರೆ. 34 ವರ್ಷದ ಬ್ಯಾಟರ್​ ಕಾಂಗರೂಗಳ ವಿರುದ್ಧ ತಮ್ಮ ಅಂತಾ ರರಾಷ್ಟ್ರೀಯ ವೃತ್ತಿಜೀವನದ ಅತ್ಯಂತ ಸ್ಮರಣೀಯ ಇನಿಂಗ್ಸ್​ಗಳಲ್ಲಿ ಒಂದನ್ನು ಆಡಿದ್ದಾರೆ.

ಭಾರತ 3 ವಿಕೆಟ್ ನಷ್ಟಕ್ಕೆ 2 ರನ್ ಗಳಿಸಿದ್ದಾಗ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಜತೆ ಸೇರಿದ್ದರು. ಭಾರತದ ಮಾಜಿ ನಾಯಕ 116 ಎಸೆತಗಳಲ್ಲಿ ಆರು ಬೌಂಡರಿಗಳು ಸೇರಿದಂತೆ 85 ರನ್ ಗಳಿಸಿದರು. ನಾಲ್ಕನೇ ವಿಕೆಟ್​ಗೆ ರಾಹುಲ್ ಜೊತೆಗೂಡಿ 165 ರನ್​ಗಳ ಅಮೋಘ ಜೊತೆಯಾಟವಾಡಿದರು. ವಿಶೇಷವೆಂದರೆ, ರಾಹುಲ್ 115 ಎಸೆತಗಳಲ್ಲಿ 97 ರನ್ ಗಳಿಸಿ ಔಟಾಗದೆ ಉಳಿದರು ಮತ್ತು ಭಾರತಕ್ಕೆ ಗೆಲುವು ಸಾಧಿಸಲು ಸಹಾಯ ಮಾಡಿದರು.

ಆಸ್ಟ್ರೇಲಿಯಾ ವಿರುದ್ಧ ತಮ್ಮ ಅಣ್ಣ ಕೊಹ್ಲಿಯ ಪ್ರದರ್ಶನದ ಬಗ್ಗೆ ಭಾವನಾ ಹೆಮ್ಮೆಪಟ್ಟಿದ್ದಾರೆ. ಅವರು ಇನ್ಸ್ಟಾಗ್ರಾಮ್​​ನಲ್ಲಿ ನಾಲ್ಕು ಪದಗಳ ಮೆಚ್ಚುಗೆಯನ್ನು ಪೋಸ್ಟ್ ಮಾಡಿದ್ದಾರೆ. “ನೀವು ಎಂದೆಂದಿಗೂ ಚಾಂಪಿಯನ್” (You are a champ) ಎಂದು ಭಾವನಾ ತನ್ನ ಪೋಸ್ಟ್​ನಲ್ಲಿ ಎಮೋಜಿಗಳನ್ನು ಹಾಕಿದ್ದಾರೆ.

ತವರು ನೆಲದಲ್ಲಿ ಎರಡನೇ ವಿಶ್ವ ಕಪ್​

ವಿರಾಟ್ ಕೊಹ್ಲಿ ಬಗ್ಗೆ ಮಾತನಾಡುವುದಾದರೆ 2011 ಮತ್ತು 2015ರಲ್ಲಿ ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ವಿರುದ್ಧ ಏಕದಿನ ವಿಶ್ವಕಪ್ ಪಂದ್ಯಗಳಲ್ಲಿ ಶತಕ ಬಾರಿಸಿದ್ದರು. ಬಲಗೈ ಬ್ಯಾಟರ್​ ಆಸ್ಟ್ರೇಲಿಯಾ ವಿರುದ್ಧ ಅರ್ಹ ಶತಕವನ್ನು ಕಳೆದುಕೊಂಡಿದ್ದಾರೆ. ಒಂದು ವೇಳೆ ಬಾರಿಸಿದ್ದರೆ ಏಕದಿನ ಪಂದ್ಯಗಳಲ್ಲಿ ಅವರ 48 ನೇ ಶತಕವಾಗುತ್ತಿತ್ತು. ಅವರು ತಮ್ಮ ವಿನಾಶಕಾರಿ ಆಟದಿಂದ ಇಡೀ ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡಿದರು.

ಫೀಲ್ಡಿಂಗ್ ಮೇಲೆ ಹೆಚ್ಚಿನ ಗಮನ ಹರಿಸುವ ಸಲುವಾಗಿ ಟೀಮ್ ಮ್ಯಾನೇಜ್ಮೆಂಟ್ ತಮ್ಮ ಪ್ರತಿಯೊಂದು ಪಂದ್ಯದಲ್ಲೂ ಅಗ್ರ ಫೀಲ್ಡರ್​ಗೆ ಪದಕವನ್ನು ನೀಡುತ್ತಿದೆ. ಆಸ್ಟ್ರೇಲಿಯಾ ವಿರುದ್ಧದ ಭಾರತದ ಆರಂಭಿಕ ಪಂದ್ಯದೊಂದಿಗೆ ಈ ಉಪಕ್ರಮವು ಪ್ರಾರಂಭವಾಯಿತು. ಈ ಮೂಲಕ ‘ಬೆಸ್ಟ್ ಫೀಲ್ಡರ್ ಆಫ್ ದಿ ಮ್ಯಾಚ್’ ಪ್ರಶಸ್ತಿ ಪಡೆದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ.

ಐಸಿಸಿ (ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್) ಸ್ಪರ್ಧೆಗಳಲ್ಲಿ ಭಾರತಕ್ಕಾಗಿ ಅತಿ ಹೆಚ್ಚು ರನ್ ಗಳಿಸಿದ ಸಚಿನ್ ತೆಂಡೂಲ್ಕರ್ ಅವರ ಹಿಂದಿನ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿದಿದ್ದಾರೆ. ಅಕ್ಟೋಬರ್ 11 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಅಫ್ಘಾನಿಸ್ತಾನ ವಿರುದ್ಧ ನಡೆಯುತ್ತಿರುವ ಪಂದ್ಯಾವಳಿಯ ಭಾರತದ ಎರಡನೇ ಪಂದ್ಯದಲ್ಲಿ ಕೊಹ್ಲಿ ಆಡಲಿದ್ದಾರೆ. ಅಕ್ಟೋಬರ್ 14ರಂದು ಅಹಮದಾಬಾದ್​​ನಲ್ಲಿ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ ವೋಲ್ಟೇಜ್ ಪಂದ್ಯ ನಡೆಯಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

GR vishwanath : ಬೆಂಗಳೂರು ನಗರ ವಿವಿಯಿಂದ ಕ್ರಿಕೆಟ್ ದಿಗ್ಗಜ ಗುಂಡಪ್ಪ ವಿಶ್ವನಾಥ್​ಗೆ ಗೌರವ ಡಾಕ್ಟರೇಟ್

GR vishwanath : ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಮೂರನೇ ವಾರ್ಷಿಕ ಘಟಿಕೋತ್ಸವ ಜೂನ್ 29 ಶನಿವಾರ ಬೆಳಿಗ್ಗೆ 11.30 ಕ್ಕೆ ನಗರದ ಅರಮನೆ ರಸ್ತೆಯ ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಜರುಗಲಿದೆ. ರಾಜ್ಯಪಾಲ ಹಾಗೂ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸಲಿದ್ದಾರೆ.

VISTARANEWS.COM


on

GR Vishwnath
Koo

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಮೂರನೇ ಘಟಿಕೋತ್ಸವದಲ್ಲಿ ಕ್ರಿಕೆಟ್ ದಿಗ್ಗಜ ಗುಂಡಪ್ಪ ವಿಶ್ವನಾಥ್ ರಿಗೆ (GR vishwanath) ಗೌರವ ಡಾಕ್ಟರೇಟ್ ಪದವಿ ನೀಡಲಾಗುತ್ತಿದೆ ಎಂದು ಕುಲಪತಿ ಲಿಂಗರಾಜ ಗಾಂಧಿ ತಿಳಿಸಿದರು. ಸೆಂಟ್ರಲ್ ಕಾಲೇಜು ಆವರಣದ ಜ್ಞಾನ ಜ್ಯೋತಿ ಸಂಭಾಂಗಣದ ಬೋರ್ಡ್ ರೂಮ್ ನಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಮೂರನೇ ಘಟಿಕೋತ್ಸವ ಜೂನ್ 29 ರಂದು ನಡೆಯಲಿದೆ. ಈ ಸಂದರ್ಭದಲ್ಲಿ ಗೌರವ ಡಾಕ್ಟರೇಟ್ ಪದವಿಯನ್ನು ಇಬ್ಬರಿಗೆ ನೀಡಲಾಗುತ್ತಿದೆ. ಶಿಕ್ಷಣ ಮತ್ತು ಸಮಾಜ ಸೇವೆಯಲ್ಲಿ ಸಾಧನೆ ಮಾಡಿರುವ ಗೋಕುಲ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ.ಆರ್. ಜಯರಾಮ್ ಒಬ್ಬರಾದರೆ ಮತ್ತೊಬ್ಬರು ಖ್ಯಾತ ಮಾಜಿ ಕ್ರಿಕೆಟ್ ಆಟಗಾರ ಜಿ.ಆರ್. ವಿಶ್ವನಾಥ್ ಆಗಿದ್ದಾರೆ ಎಂದು ತಿಳಿಸಿದರು.

ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಮೂರನೇ ವಾರ್ಷಿಕ ಘಟಿಕೋತ್ಸವ ಜೂನ್ 29 ಶನಿವಾರ ಬೆಳಿಗ್ಗೆ 11.30 ಕ್ಕೆ ನಗರದ ಅರಮನೆ ರಸ್ತೆಯ ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಜರುಗಲಿದೆ. ರಾಜ್ಯಪಾಲ ಹಾಗೂ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಹಾಗೂ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸಮ ಕುಲಾಧಿಪತಿ ಡಾ. ಎಂ. ಸಿ. ಸುಧಾಕರ್ ಮತ್ತು ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್​ ಎಜುಕೇಶನ್ ಅಧ್ಯಕ್ಷ ಪ್ರೊ. ಟಿ. ಜಿ. ಸೀತಾರಾಮ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಯುನಿಫೈಡ್ ಯೂನಿವರ್ಸಿಟಿ ಕಾಲೇಜು ಮ್ಯಾನೇಜ್ಮೆಂಟ್ ಸಿಸ್ಟಮ್ ತಂತ್ರಾಂಶದ ಪ್ರಕಾರ ಸ್ನಾತಕ ಹಾಗೂ ಸ್ಟಾಂಡ್ ಅಲೋನ್ ಕೋರ್ಸುಗಳ ಪ್ರವೇಶ ಪ್ರಕ್ರಿಯೆ ಹಾಗೂ ಪರೀಕ್ಷಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ವಹಿಸಲಾಗುತ್ತಿದೆ. ಅಂತಹ ವಿದ್ಯಾರ್ಥಿಗಳಿಗೆ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡುತ್ತಿರುವ ರಾಜ್ಯ ಪ್ರಥಮ ವಿಶ್ವವಿದ್ಯಾನಿಲಯ ನಮ್ಮದಾಗಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

63 ವಿದ್ಯಾರ್ಥಿಗಳಿಗೆ ಚಿನ್ನದ ಪದಕ

ಈ ಘಟಿಕೋತ್ಸವದಲ್ಲಿ ಒಟ್ಟು 63 ವಿದ್ಯಾರ್ಥಿಗಳು ಪ್ರಥಮ ರಾಂಕ್ ಪ್ರಮಾಣ ಪತ್ರಗಳನ್ನು, ಚಿನ್ನದ ಪದಕ ಮತ್ತು ನಗದು ಬಹುಮಾನವನ್ನು ಸ್ವೀಕರಿಸಲಿದ್ದಾರೆ. ಈ ರ್ಯಾಂಕ್​ ವಿಜೇತರಲ್ಲಿ 40 ವಿದ್ಯಾರ್ಥಿಗಳು ಬೆಂಗಳೂರು ನಗರ ವಿಶ್ವವಿದ್ಯಾನಿಲಯದಿಂದ ಸ್ಥಾಪಿತ ಚಿನ್ನದ ಪದಕ ಮತ್ತು ನಗದು ಬಹುಮಾನಗಳನ್ನು ಸ್ವೀಕರಿಸಲಿದ್ದಾರೆ. ವಿವಿಧ ದಾನಿಗಳು ಸ್ಥಾಪಿಸಿರುವ ಒಟ್ಟು 15 ಚಿನ್ನದ ಪದಕಗಳನ್ನು ಸಹ ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಸ್ವೀಕರಿಸಲಿದ್ದಾರೆ. ಬಿ.ಎ. ಮ್ಯೂಸಿಕ್, ಟೂರಿಸಂ ಮ್ಯಾನೇಜ್ಮೆಂಟ್ ವಿಭಾಗಗಳಲ್ಲಿ ಅರ್ಹ ವಿದ್ಯಾರ್ಥಿಗಳು ಇಲ್ಲದ ಕಾರಣ ಈ ವರ್ಷ ಎರಡು ಚಿನ್ನದ ಪದಕ ವಿತರಿಸಲಾಗುತ್ತಿಲ್ಲ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Paris Olympics 2024 : ಒಲಿಂಪಿಕ್ಸ್​​ ಸ್ಮರಣೆಗಾಗಿ ಜೆಎಸ್​ಡಬ್ಲ್ಯುನಿಂದ ಪ್ಯಾರಿಸ್​ನಲ್ಲಿ ವಿಶೇಷ ಪ್ರದರ್ಶನ

ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಸ್ಥಾಪಿಸಿದ 35 ಚಿನ್ನದ ಪದಕ ಮತ್ತು ನಗದು ಬಹುಮಾನಗಳನ್ನು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಾಗೂ ಬಿ.ಎ., ಬಿ.ಎಸ್ಸಿ, ಬಿ.ಕಾಂ., ಬಿ.ಬಿ.ಎ. ಬಿ.ಇಡಿ., ಕೋರ್ಸುಗಳಲ್ಲಿ ಅತಿ ಹೆಚ್ಚು ಅಂಕ ಪಡೆದವರಿಗೆ ನೀಡಲಾಗುವುದು ಎಂದು ಲಿಂಗರಾಜ ಗಾಂಧಿ ಹೇಳಿದರು.

Continue Reading

ಕ್ರೀಡೆ

IND vs SA: ಗೆದ್ದು ಬಾ ಭಾರತ; ನಾಳೆ ಟಿ20 ವಿಶ್ವಕಪ್​ ಫೈನಲ್​

IND vs SA: ಪಂತ್​ ಪ್ರಯೋಗಾತ್ಮಕ ಶೈಲಿಯ ಬ್ಯಾಟಿಂಗ್​ ನಡೆಸುವ ಬದಲು ತಮ್ಮ ಮೂಲ ಸ್ವರೂಪದ ಶೈಲಿಯಲ್ಲೇ ಆಡಿದರೆ ಉತ್ತಮ. ಸೂರ್ಯಕುಮಾರ್​ ಮತ್ತು ಹಾರ್ದಿಕ್​ ಪಾಂಡ್ಯ ಮಧ್ಯಮ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್​ ಮೂಲಕ ತಂಡಕ್ಕೆ ನೆರವಾಗುತ್ತಿದ್ದರೆ.

VISTARANEWS.COM


on

Koo

ಬಾರ್ಬಡೋಸ್​: ಚುಟುಕು ಮಾದರಿಯ ಫೈನಲ್(South Africa vs India Final)​ ಕಾದಾಟಕ್ಕೆ ವೇದಿಕೆ ಸಿದ್ದಗೊಂಡಿದೆ. ನಾಳೆ ನಡೆಯುವ ಫೈನಲ್(T20 World Cup 2024)​ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ(IND vs SA) ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ. ಕೂಟದ ಅಜೇಯ ತಂಡಗಳ ನಡುವಣ ಈ ಪ್ರಶಸ್ತಿ ಸಮರ ತೀವ್ರ ಕುತೂಹಲ, ರೋಮಾಂಚನ ಸೃಷ್ಟಿಸುವುದರಲ್ಲಿ ಅನುಮಾನವಿಲ್ಲ.

ಭಯಮುಕ್ತರಾಗಿ ಆಡಬೇಕು


ಭಾರತ ತಂಡದ ದೊಡ್ಡ ಸಮಸ್ಯೆ ಎಂದರೆ ಲೀಗ್, ಸೆಮಿಫೈನಲ್​ನಲ್ಲಿ ಎಷ್ಟೇ ಉತ್ತಮ ಪ್ರದರ್ಶನ ತೋರಿದರೂ ಕೂಡ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಸಂಪೂರ್ಣ ನರ್ವಸ್​ ಆಗಿ ಆಡುವುದು. ಒಂದು ವಿಕೆಟ್​ ಬಿದ್ದರೆ ಸಾಕು ಬಳಿಕ ಕ್ರೀಸ್​ಗಿಳಿವ ಬ್ಯಾಟರ್​ಗಳು ಭಯದಿಂದಲೇ ಆಡಲು ಮುಂದಾಗಿ ಸತತವಾಗಿ ವಿಕೆಟ್​ ಕಳೆದುಕೊಂಡು ಅಲ್ಪ ಮೊತ್ತಕ್ಕೆ ಕುಸಿಯುತ್ತಾರೆ. ಕಳೆದ ಏಕದಿನ ವಿಶ್ವಕಪ್​ ಫೈನಲ್​, ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಇದಕ್ಕೆ ಉತ್ತಮ ನಿದರ್ಶನ. ಹೀಗಾಗಿ ನಾಳೆ ನಡೆಯುವ ಫೈನಲ್​ ಪಂದ್ಯದಲ್ಲಿ ಬ್ಯಾಟರ್​ಗಳು ಮತ್ತು ಬೌಲರ್​ಗಳು ವಿಚಲಿತರಾಗದೆ ಆಡಬೇಕು.

ವಿರಾಟ್​ ಕೊಹ್ಲಿ ಅವರು ಸತತವಾಗಿ ಬ್ಯಾಟಿಂಗ್​ ವೈಫಲ್ಯ ಕಂಡರೂ ಕೂಡ ಫೈನಲ್​ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್​ ನಡೆಸುತ್ತಾರೆ ಎಂದು ನಾಯಕ ರೋಹಿತ್​ ಶರ್ಮ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜತೆಗೆ ಕೋಚ್​ ದ್ರಾವಿಡ್​ ಕೂಡ ಕೊಹ್ಲಿಗೆ ವಿಶೇಷ ಸ್ಫೂರ್ತಿ ತುಂಬುವ ಮೂಲಕ ಫೈನಲ್ ಪಂದ್ಯಕ್ಕೆ ಸಿದ್ದಪಡಿಸಿದ್ದಾರೆ. ಶಿವಂ ದುಬೆ ಮಾತ್ರ ಬ್ಯಾಟಿಂಗ್​ ಸುಧಾರಣೆ ಕಾಣುವಂತೆ ತೋರುತ್ತಿಲ್ಲ. ಹೀಗಾಗಿ ಅವರನ್ನು ಕೈ ಬಿಟ್ಟು ಯಶಸ್ವಿ ಜೈಸ್ವಾಲ್​ ಅವರನ್ನು ಆಡಿಸಿದರೆ ಉತ್ತಮ.

ಒಂದು ಬದಲಾವಣೆ ಸಾಧ್ಯತೆ

ಆರಂಭಿಕ ಆಟಗಾರನಾಗಿರುವ ಜೈಸ್ವಾಲ್​ ಅವರು ರೋಹಿತ್ ಜತೆ ಇನಿಂಗ್ಸ್​ ಆರಂಭಿಸಿದರೆ ಕೊಹ್ಲಿ ತಮ್ಮ ಎಂದಿನ ವನ್​ಡೌನ್​ ಕ್ರಮಾಂಕದಲ್ಲಿ ಆಡಬಹುದು. ಬೌಲಿಂಗ್​ ವಿಭಾಗದಲ್ಲಿ ಯಾವುದೇ ಬದಲಾವಣೆ ಸಂಭವಿಸುವ ಸಾಧ್ಯತೆ ಇಲ್ಲ. ಮೂರು ಸ್ಪಿನ್ನರ್​ ಮತ್ತು 2 ವೇಗಿಗಳ ಕಾಂಬಿನೇಷನ್​ನಲ್ಲಿಯೇ ಆಡಬಹುದು. ಪಂತ್​ ಪ್ರಯೋಗಾತ್ಮಕ ಶೈಲಿಯ ಬ್ಯಾಟಿಂಗ್​ ನಡೆಸುವ ಬದಲು ತಮ್ಮ ಮೂಲ ಸ್ವರೂಪದ ಶೈಲಿಯಲ್ಲೇ ಆಡಿದರೆ ಉತ್ತಮ. ಸೂರ್ಯಕುಮಾರ್​ ಮತ್ತು ಹಾರ್ದಿಕ್​ ಪಾಂಡ್ಯ ಮಧ್ಯಮ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್​ ಮೂಲಕ ತಂಡಕ್ಕೆ ನೆರವಾಗುತ್ತಿದ್ದರೆ. ಫೈನಲ್​ನಲ್ಲಿಯೂ ಈ ಪ್ರದರ್ಶನ ಕಂಡುಬಂದರೆ ಉತ್ತಮ. ಅಕ್ಷರ್​ ಪಟೇಲ್ ತಮ್ಮ ಆಲ್​ರೌಂಡರ್​ ಸ್ಥಾನಕ್ಕೆ ತಕ್ಕ ಪ್ರದರ್ಶನ ತೋರುತ್ತಿದ್ದಾರೆ. ಫೀಲ್ಡಿಂಗ್​, ಬ್ಯಾಟಿಂಗ್​ ಮತ್ತು ಬೌಲಿಂಗ್​ ಎಲ್ಲ ವಿಭಾಗದಲ್ಲಿಯೂ ನಿರೀಕ್ಷಿತ ಪ್ರದರ್ಶನ ತೋರುತ್ತಿದ್ದಾರೆ.​

ಇದನ್ನೂ ಓದಿ IND Vs SA T20 WC Final: ಫೈನಲ್​ ಪಂದ್ಯಕ್ಕೂ ಮಳೆ ಭೀತಿ; ಪಂದ್ಯ ರದ್ದಾದರೆ ವಿಜೇತರ ನಿರ್ಧಾರ ಹೇಗೆ?

ದಕ್ಷಿಣ ಆಫ್ರಿಕಾ ಕೂಡ ಬಲಿಷ್ಠ


ದಕ್ಷಿಣ ಆಫ್ರಿಕಾ ಕೂಡ ಬ್ಯಾಟಿಂಗ್​, ಬೌಲಿಂಗ್​ ಮತ್ತು ಫೀಲ್ಡಿಂಗ್​ ವಿಭಾಗದಲ್ಲಿ ವೈವಿಧ್ಯಮಯವಾಗಿದೆ. ಆದರೆ, ಲಕ್​ ಕೈ ಹಿಡಿಯುತ್ತಾ ಎನ್ನುವುದು ಇಲ್ಲಿ ಮುಖ್ಯ. ಡಿ ಕಾಕ್​, ಮಾರ್ಕ್ರಮ್​, ಕ್ಲಾಸೆನ್​, ಮಿಲ್ಲರ್​ ಸಿಡಿದು ನಿಂತರೆ ಕಷ್ಟ. ಬೌಲಿಂಗ್​ನಲ್ಲಿ ಮಾರ್ಕೊ ಜಾನ್ಸೆನ್​, ಕಗಿಸೊ ರಬಾಡ, ಶಮ್ಸಿ ಉತ್ತಮ ಬೌಲಿಂಗ್​ ಲಯದಲ್ಲಿದ್ದಾರೆ.

ಸಂಭಾವ್ಯ ತಂಡ


ದಕ್ಷಿಣ ಆಫ್ರಿಕಾ:
ಕ್ವಿಂಟನ್ ಡಿ ಕಾಕ್ (ವಿಕೀ), ರೀಜಾ ಹೆಂಡ್ರಿಕ್ಸ್, ಏಡೆನ್ ಮಾರ್ಕ್ರಮ್​ (ನಾಯಕ), ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಚ್ ನಾರ್ಜೆ, ತಬ್ರೈಜ್ ಶಮ್ಸಿ

ಭಾರತ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೀ), ಸೂರ್ಯಕುಮಾರ್ ಯಾದವ್, ಶಿವಂ ದುಬೆ/ ಯಶಸ್ವಿ ಜೈಸ್ವಾಲ್​, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಜಸ್​ಪ್ರೀತ್​ ಬುಮ್ರಾ.

Continue Reading

ಕ್ರಿಕೆಟ್

SHAFALI VERMA: 40 ವರ್ಷದ ಟೆಸ್ಟ್​ ದಾಖಲೆ ಮುರಿದ ಭಾರತದ ಶಫಾಲಿ ವರ್ಮ

SHAFALI VERMA: 197 ಎಸೆತ ಎದುರಿಸಿದ ಶಫಾಲಿ 23 ಆಕರ್ಷಕ ಬೌಂಡರಿ ಮತ್ತು 8 ಬಿಗ್​ ಹಿಟ್​ ಸಿಕ್ಸರ್​ ನೆರವಿನಿಂದ 205 ರನ್​ ಬಾರಿಸಿ ರನೌಟ್​ ಸಂಕಟಕ್ಕೆ ಸಿಲುಕಿದರು.

VISTARANEWS.COM


on

SHAFALI VERMA
Koo

ಚೆನ್ನೈ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಚೆನ್ನೈಯಲ್ಲಿ ಸಾಗುತ್ತಿರುವ ಏಕೈಕ ಟೆಸ್ಟ್​ ಪಂದ್ಯದ ಮೊದಲ ದಿನವೇ ಭಾರತ ಮೇಲುಗೈ ಸಾಧಿಸಿದೆ. ಆರಂಭಿಕ ಆಟಗಾರ್ತಿಯರಾದ ಶಫಾಲಿ ವರ್ಮ(SHAFALI VERMA) ಮತ್ತು ಸ್ಮೃತಿ ಮಂಧಾನ(Smriti Mandhana) ವಿಸ್ಫೋಟಕ ಬ್ಯಾಟಿಂಗ್​ ನಡೆಸಿ ಗಮನಸೆಳೆದರು. ಈ ಪಂದ್ಯದಲ್ಲಿ ಶಫಾಲಿ ಬಿರುಸಿನ ಶತಕ ಬಾರಿಸುವ ಮೂಲಕ 40 ವರ್ಷಗಳ ಹಿಂದಿನ ಟೆಸ್ಟ್​ ದಾಖಲೆಯೊಂದನ್ನು ಮುರಿದಿದ್ದಾರೆ.

ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಭಾರತಕ್ಕೆ ಶಫಾಲಿ ವರ್ಮ ಮತ್ತು ಮಂಧಾನ ಶತಕದ ಆಟವಾಡುವ ಮೂಲಕ ಉತ್ತಮ ಆರಂಭ ಒದಗಿಸಿದರು. ಶಫಾಲಿ 113 ಎಸೆತಗಳಲ್ಲಿ ಶತಕ ಪೂರೈಸುವ ಮೂಲಕ ಮಹಿಳಾ ಟೆಸ್ಟ್​ ಕ್ರಿಕೆಟ್​ನಲ್ಲಿ ಅತಿ ವೇಗದ ಶತಕ ಬಾರಿಸಿದ ಮೊದಲ ಆಟಗಾರ್ತಿ ಎಂಬ ವಿಶ್ವ ದಾಖಲೆಯನ್ನು ತಮ್ಮ ಹೆಸರಿಗೆ ಬರೆದರು. ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್ ಆಟಗಾರ್ತಿ ಜಾನೆಟ್ ಬ್ರಿಟಿನ್ ಹೆಸರಿನಲ್ಲಿತ್ತು. 1984 ರಲ್ಲಿ ಆಸ್ಟ್ರೇಲಿಯಾ ವಿರುದ್ಧ 137 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಇದೀಗ ಈ 40 ವರ್ಷಗಳ ಹಳೆಯ ದಾಖಲೆಯನ್ನು ಶಫಾಲಿ ವರ್ಮಾ ಮುರಿದಿದ್ದಾರೆ.

ಇದನ್ನೂ ಓದಿ T20 World Cup Final: ಚೋಕರ್ಸ್ ಹಣೆಪಟ್ಟಿ ಕಳಚಿಕೊಳ್ಳುವುದೇ ದಕ್ಷಿಣ ಆಫ್ರಿಕಾ?; ನಾಳೆ ಫೈನಲ್​

ಸ್ಮೃತಿ ಮಂಧಾನ 122 ಎಸೆತಗಳಲ್ಲಿ ಶತಕ ಪೂರೈಸುವ ಮೂಲಕ ಏಕದಿನ ಬಳಿಕ ಟೆಸ್ಟ್​ನಲ್ಲಿಯೂ ಶತಕ ಬಾರಿಸಿದ ಸಾಧನೆ ಮಾಡಿದರು. ಒಟ್ಟು 161 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 27 ಫೋರ್​ಗಳೊಂದಿಗೆ 149 ರನ್ ಬಾರಿಸಿ ವಿಕೆಟ್​ ಕಳೆದುಕೊಂಡರು.

ದ್ವಿಶತಕ ಬಾರಿಸಿದ ಶಫಾಲಿ


ಶಫಾಲಿ ಶತಕವನ್ನು ದ್ವಿಶತಕವನ್ನಾಗಿ ಪರಿವರ್ತಿಸುವ ಮೂಲಕ ಭಾರತ ಪರ ದ್ವಿಶತಕ ಬಾರಿಸಿದ 2ನೇ ಆಟಗಾರ್ತಿ ಎನಿಸಿಕೊಂಡರು. ಮಿಥಾಲಿ ರಾಜ್​ ಅವರು ಭಾರತ ಪರ ಟೆಸ್ಟ್​ನಲ್ಲಿ ದ್ವಿಶತಕ ಬಾರಿಸಿದ ಮೊದಲ ಆಟಗಾರ್ತಿ. 2002ರಲ್ಲಿ ಇಂಗ್ಲೆಂಡ್​ ವಿರುದ್ಧ 214 ರನ್​ ಬಾರಿಸಿದ್ದರು.

ಸದ್ಯ ಭಾರತ 3 ವಿಕೆಟ್​ ಕಳೆದುಕೊಂಡು 400 ರನ್​ಗಳ ಗಡಿ ದಾಟಿದೆ. ಮೊದಲ ದಿನವೇ ಈ ಬೃಹತ್​ ಮೊತ್ತ ಪೇರಿಸಿದ್ದನ್ನು ನೋಡುವಾಗ ದಾಖಲೆಯ ಮೊತ್ತವನ್ನು ಗಳಿಸುವ ಸಾಧ್ಯತೆ ಇದೆ. ನಾಯಕಿ ಹರ್ಮನ್​ಪ್ರೀತ್​ ಮತ್ತು ಜೇಮಿಮಾ ರೋಡ್ರಿಗಸ್​ ಬ್ಯಾಟಿಂಗ್​ ಕಾಯ್ದುಕೊಂಡಿದ್ದಾರೆ. 197 ಎಸೆತ ಎದುರಿಸಿದ ಶಫಾಲಿ 23 ಆಕರ್ಷಕ ಬೌಂಡರಿ ಮತ್ತು 8 ಬಿಗ್​ ಹಿಟ್​ ಸಿಕ್ಸರ್​ ನೆರವಿನಿಂದ 205 ರನ್​ ಬಾರಿಸಿ ರನೌಟ್​ ಸಂಕಟಕ್ಕೆ ಸಿಲುಕಿದರು.

Continue Reading

ಕ್ರೀಡೆ

T20 World Cup Final: ಚೋಕರ್ಸ್ ಹಣೆಪಟ್ಟಿ ಕಳಚಿಕೊಳ್ಳುವುದೇ ದಕ್ಷಿಣ ಆಫ್ರಿಕಾ?; ನಾಳೆ ಫೈನಲ್​

T20 World Cup Final: ಈ ಬಾರಿಯ ವಿಶ್ವಕಪ್​ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾದ ಪ್ರದರ್ಶನ ಮತ್ತು ಅದೃಷ್ಟ ನೋಡುವಾಗ ಪ್ರಶಸ್ತಿ ಗೆದ್ದು ಚೋಕರ್ಸ್ ಹಣೆಪಟ್ಟಿಯನ್ನು ಕಳಚುವ ಸಾಧ್ಯತೆಯೊಂದು ಕಂಡುಬಂದಿದೆ. ಸೋಲುವ ಪಂದ್ಯವನ್ನು ಕೂಡ ಅಚ್ಚರಿ ಎಂಬಂತೆ 1 ರನ್​ನಿಂದ ಗೆದ್ದ ನಿದರ್ಶನ ಕೂಡ ಇದೆ.

VISTARANEWS.COM


on

T20 World Cup Final
Koo

ಬಾರ್ಬಡೋಸ್​: ದಕ್ಷಿಣ ಆಫ್ರಿಕಾ ತಂಡ ತನ್ನ ಚೋಕರ್ಸ್ ಹಣೆಪಟ್ಟಿಯನ್ನು ಕಳಚಿಕೊಳ್ಳಲು ಇನ್ನೊಂದೆ ಹೆಜ್ಜೆ ಮಾತ್ರ ಬಾಕಿ ಉಳಿದಿದೆ. ನಾಳೆ ನಡೆಯುವ ಟಿ20 ವಿಶ್ವಕಪ್​ ಟೂರ್ನಿಯ ಫೈನಲ್(T20 World Cup Final)​ ಪಂದ್ಯದಲ್ಲಿ ಭಾರತದ(South Africa vs India Final) ಸವಾಲು ಎದುರಿಸಲಿದೆ. 32 ವರ್ಷಗಳ ಬಳಿಕ ಐಸಿಸಿ ಟೂರ್ನಿಯಲ್ಲಿ ಮೊದಲ ಬಾರಿಗೆ ಅಜೇಯವಾಗಿ ಫೈನಲ್ ಪ್ರವೇಶಿಸಿರುವವ ಹರಿಣ ಪಡೆಗೆ ಈ ಬಾರಿಯಾದರೂ ಕಪ್​ ಗೆಲ್ಲುವ ಭಾಗ್ಯ ಇದೆಯಾ ಎಂದು ಕಾದು ನೋಡಬೇಕಿದೆ. ಈ ಹಿಂದೆ ಆಡಿದ ಎಲ್ಲ 7(ಏಕದಿನ, ಟಿ20) ಸೆಮಿಫೈನಲ್​ ಪಂದ್ಯದಲ್ಲಿಯೂ ಸೋಲು ಕಂಡಿತ್ತು.

ದಕ್ಷಿಣ ಆಫ್ರಿಕಾ ತಂಡ(South Africa) 1992ರಲ್ಲಿ ಸಿಡ್ನಿಯಲ್ಲಿ ನಡೆದ ಏಕದಿನ ವಿಶ್ವಕಪ್​ನಲ್ಲಿ ಮೊದಲ ಬಾರಿಗೆ​ ಸೆಮಿಫೈನಲ್​ ಪ್ರವೇಶಿಸಿತ್ತು. ಇನ್ನೇನು ಪಂದ್ಯ ಗೆಲ್ಲುತ್ತದೆ ಎನ್ನುವಷ್ಟರಲ್ಲಿ ಮಳೆ ಸುರಿದು ಪಂದ್ಯ ಸ್ಥಗಿತಗೊಂಡಿತು. 13 ಎಸೆತಗಳಲ್ಲಿ ಗೆಲುವಿಗೆ 22 ರನ್ ಬೇಕಿತ್ತು.​ ಮತ್ತೆ ಆಟ ಮುಂದುವರಿದಾಗ ಮೊಟ್ಟ ಮೊದಲ ಬಾರಿಗೆ ಪರಿಚವಾಗಿದ್ದ ಡಕ್​ವರ್ತ್​ ಲೂಯಿಸ್​ ನಿಯದ ಪ್ರಕಾರ ಹರಿಣ ಪಡೆಗೆ 1 ಎಸೆತದಲ್ಲಿ 22 ರನ್​ ಗಳಿಸುವ ಗುರಿ ನೀಡಲಾಯಿತು. ಈ ಪಂದ್ಯ ಸೋತ ಬಳಿಕ 1999ರಲ್ಲಿ ಬರ್ಮಿಂಗ್‌ಹ್ಯಾಮ್​ನಲ್ಲಿ ಆಸ್ಟ್ರೇಲಿಯ ವಿರುದ್ದದ ಪಂದ್ಯ ಟೈ ಆಗಿತ್ತು. ಆ ಪಂದ್ಯದಲ್ಲಿ ಆಸ್ಟ್ರೇಲಿಯ ಲೆಕ್ಕಾಚಾರದ ಮೂಲಕ ಫೈನಲ್ ಪ್ರವೇಶಿಸಿ ಕಪ್ ಗೆದ್ದಿತ್ತು. 2007 ರಲ್ಲಿ ಆಸ್ಟ್ರೇಲಿಯ ವಿರುದ್ಧ ಗ್ರಾಸ್‌ ಐಲೆಟ್‌ ನಲ್ಲಿ 7 ವಿಕೆಟ್‌ ಸೋಲು ಅನುಭವಿಸಿ ಆಘಾತಕ್ಕೆ ಗುರಿಯಾಗಿತ್ತು. 2015 ರಲ್ಲಿ ನ್ಯೂಜಿಲ್ಯಾಂಡ್‌ ವಿರುದ್ಧ ಆಕ್ಲೆಂಡ್‌ ನಲ್ಲಿ 4 ವಿಕೆಟ್‌ ಸೋಲು ಅನುಭವಿಸಿ ಚೋಕರ್ಸ್ ಎಂದು ಮತ್ತೆ ಕರೆಸಿಕೊಳ್ಳುವ ಸ್ಥಿತಿ ಹರಿಣಗಳ ಪಾಲಿಗೆ ಬಂದೊದಗಿತ್ತು.

ಆದರೆ, ಈ ಬಾರಿಯ ವಿಶ್ವಕಪ್​ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾದ ಪ್ರದರ್ಶನ ಮತ್ತು ಅದೃಷ್ಟ ನೋಡುವಾಗ ಪ್ರಶಸ್ತಿ ಗೆದ್ದು ಚೋಕರ್ಸ್ ಹಣೆಪಟ್ಟಿಯನ್ನು ಕಳಚುವ ಸಾಧ್ಯತೆಯೊಂದು ಕಂಡುಬಂದಿದೆ. ಏಕೆಂದರೆ ಪ್ರತಿ ಬಾರಿ ಮಳೆಯಿಂದ ಹಿನ್ನಡೆ ಅನುಭವಿಸುವ ದಕ್ಷಿಣ ಆಫ್ರಿಕಾ ಈ ಬಾರಿ ವರದಾನವಾಗಿಯೇ ಪರಿಣಮಿಸಿದೆ. ಜತೆಗೆ ಸೋಲುವ ಪಂದ್ಯವನ್ನು ಕೂಡ ಅಚ್ಚರಿ ಎಂಬಂತೆ 1 ರನ್​ನಿಂದ ಗೆದ್ದ ನಿದರ್ಶನ ಕೂಡ ಇದೆ. ಇದನೆಲ್ಲ ನೋಡುವಾಗ ಐಡೆನ್​ ಮಾರ್ಕ್ರಮ್​ ಐತಿಹಾಸಿಕ ಕಪ್​ ಎತ್ತಿ ಹಿಡಿಯುವ ಸಾಧ್ಯತೆಯೊಂದು ಕಂಡುಬಂದಿದೆ.

ಇದನ್ನೂ ಓದಿ IND Vs SA T20 WC Final: ಫೈನಲ್​ ಪಂದ್ಯಕ್ಕೂ ಮಳೆ ಭೀತಿ; ಪಂದ್ಯ ರದ್ದಾದರೆ ವಿಜೇತರ ನಿರ್ಧಾರ ಹೇಗೆ?

ಡಿ ಕಾಕ್​ ಹೊರತುಪಡಿಸಿ ಉಳಿದ ಯಾವುದೇ ಬ್ಯಾಟರ್​ಗಳು​ ಇದುವರೆಗೂ ನಿರೀಕ್ಷತ ಬ್ಯಾಟಿಂಗ್​ ಪ್ರದರ್ಶನ ತೋರದಿದ್ದರು. ಕೂಡ ಬೌಲಿಂಗ್​ ಮತ್ತು ಫೀಲ್ಡಿಂಗ್​ನಲ್ಲಿ ಉತ್ಕೃಷ್ಟ ಮಟ್ಟದ ಪ್ರದರ್ಶನ ತೋರುವ ಮೂಲಕ ಪಂದ್ಯವನ್ನು ಗೆದ್ದಿದ್ದಾರೆ. ಆದರೆ ಫೈನಲ್​ ಪಂದ್ಯದಲ್ಲಿ ಎಲ್ಲರು ಬ್ಯಾಟಿಂಗ್​ ನಡೆಸುವ ಅಗತ್ಯವಿದೆ. ಏಕೆಂದರೆ ಇಲ್ಲಿ ಸೋತರೆ ಮತ್ತೊಂದು ಪಂದ್ಯವಿಲ್ಲ.

Continue Reading
Advertisement
Breast Cancer Awareness
ಆರೋಗ್ಯ15 mins ago

What Is Stage 3 Breast Cancer: ಮೂರನೇ ಹಂತದ ಸ್ತನ ಕ್ಯಾನ್ಸರ್‌ ಎಂದರೇನು? ಇದರ ಲಕ್ಷಣಗಳೇನು?

Nita Ambani
ವಾಣಿಜ್ಯ22 mins ago

Nita Ambani: 50-60 ಬನಾರಸಿ ಸೀರೆ ಖರೀದಿಸಿದ ನೀತಾ ಅಂಬಾನಿ: ಸೀರೆಯ ದರ ಎಷ್ಟು?

Monsoon Footwear Fashion
ಫ್ಯಾಷನ್36 mins ago

Monsoon Footwear Fashion: ಮಳೆಗಾಲಕ್ಕೆ ತಕ್ಕಂತೆ ಬದಲಾಗುವ ಫುಟ್‌ವೇರ್‌ ಸ್ಟೈಲಿಂಗ್‌

Narayana Health City Performs 300 Robotic Knee Replacements in Six Months
ಬೆಂಗಳೂರು39 mins ago

Narayana Health: ನಾರಾಯಣ ಹೆಲ್ತ್ ಸಿಟಿಯಲ್ಲಿ 6 ತಿಂಗಳಲ್ಲಿ 300 ರೊಬೊಟಿಕ್ ಮೊಣಕಾಲಿನ ಶಸ್ತ್ರಚಿಕಿತ್ಸೆಗಳು

Post Office
ಪ್ರಮುಖ ಸುದ್ದಿ42 mins ago

Post Office: ಪೋಸ್ಟ್‌ ಆಫೀಸ್‌ ಉಳಿತಾಯ ಯೋಜನೆಗಳ ಬಡ್ಡಿದರ ಬದಲಾವಣೆ ಇಲ್ಲ; ಬಡ್ಡಿಯ ಪಟ್ಟಿ ಇಲ್ಲಿದೆ

Congress government
ಕರ್ನಾಟಕ48 mins ago

Congress government: ಕೈ ಶಾಸಕರಿಂದಲೇ ರಾಜ್ಯ ಸರ್ಕಾರ ಪತನವಾಗಲಿದೆ ಎಂದ ಆರ್.ಅಶೋಕ್‌

BS Yediyurappa
ಪ್ರಮುಖ ಸುದ್ದಿ2 hours ago

BS Yediyurappa: ಪೋಕ್ಸೊ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್‌ವೈಗೆ ಮಧ್ಯಂತರ ಜಾಮೀನು ವಿಸ್ತರಣೆ

karnataka Weather Forecast
ಮಳೆ2 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

Viral Video
Latest2 hours ago

Viral Video: ರೀಲ್ಸ್ ಮಾಡಲು ಹೋದ ಹುಡುಗರು; ರೈಲಿನ ಪ್ರಯಾಣಿಕರು ಏನು ಮಾಡಿದರು ನೋಡಿ!

Viral Video
Latest2 hours ago

Viral Video: ಒಂದು ದಿನದ ಮಟ್ಟಿಗೆ ಈ ಬಾಲಕ ಐಪಿಎಸ್‌ ಅಧಿಕಾರಿ; ಇವನ ಕಥೆ ಕಣ್ಣೀರು ತರಿಸುವಂಥದ್ದು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ8 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು1 day ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌