ವಿಸ್ತಾರ ಸಂಪಾದಕೀಯ: ಒಲಿಂಪಿಕ್‌ ಸಮಿತಿಯ ಅಧಿವೇಶನ ಭಾರತದ ಹೆಮ್ಮೆ - Vistara News

ಕ್ರೀಡೆ

ವಿಸ್ತಾರ ಸಂಪಾದಕೀಯ: ಒಲಿಂಪಿಕ್‌ ಸಮಿತಿಯ ಅಧಿವೇಶನ ಭಾರತದ ಹೆಮ್ಮೆ

Vistara Editorial: ಐಒಸಿ ಅಧಿವೇಶನ ಭಾರತಕ್ಕೆ ಲಗ್ಗೆಯಿಟ್ಟರೂ ಒಲಿಂಪಿಕ್ ಕ್ರೀಡಾಕೂಟವೂ ಭಾರತಕ್ಕೆ ಬರುತ್ತದೆಯೇ ಎಂಬುದು ಪ್ರಶ್ನೆ ಇನ್ನೂ ಇದೆ. ನೀತಾ ಅಂಬಾನಿ ಕ್ರೀಡಾಕೂಟವನ್ನೂ ಭಾರತಕ್ಕೆ ತರುವ ಕನಸು ಕಾಣುತ್ತಿದ್ದಾರೆ. ಹೀಗಾಗಿ ಭಾರತದಲ್ಲಿ ಐಒಸಿ ಅಧಿವೇಶನಗಳು ನಡೆಯುವುದು ಈ ನಿಟ್ಟಿನಲ್ಲಿ ಮುಖ್ಯವಾಗಿದೆ.

VISTARANEWS.COM


on

Vistara Editorial and IOC Session is proud moment for India
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ (IOC Session) 141ನೇ ಅಧಿವೇಶನ ಮುಂಬಯಿಯಲ್ಲಿರುವ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ಇದೇ ಅಕ್ಟೋಬರ್ 15ರಿಂದ 17ರ ತನಕ ನಡೆಯಲಿದೆ. ಅಕ್ಟೋಬರ್ 14ರ ಸಂಜೆ ಪ್ರಧಾನಿ ನರೇಂದ್ರ ಮೋದಿ ಅಧಿವೇಶನ ಉದ್ಘಾಟಿಸಲಿದ್ದಾರೆ. ಕ್ರೀಡಾ ಕ್ಷೇತ್ರಕ್ಕೆ ಸಂಬಂಧಿಸಿದ ಭಾರತ ಮತ್ತು ವಿದೇಶದ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಕತಾರ್, ಜೋರ್ಡಾನ್, ಮೊನಾಕೊ, ಲಕ್ಸಂಬರ್ಗ್ ಮತ್ತು ಭೂತಾನ್ ದೇಶಗಳ ಮುಖ್ಯಸ್ಥರು, ಗ್ರೇಟ್ ಬ್ರಿಟನ್ ಮತ್ತು ಲಿಕ್ಟನ್ ಸ್ಟೈನ್‌ನ ರಾಜಮನೆತನದ ಸದಸ್ಯರೊಂದಿಗೆ ಈ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದು ಅದಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಇವರ ಜತೆಗೆ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ಅಧ್ಯಕ್ಷ ಥಾಮಸ್ ಬಾಕ್​, ಭಾರತೀಯ ಒಲಿಂಪಿಕ್ ಸಂಸ್ಥೆ ಸೇರಿದಂತೆ ವಿವಿಧ ಕ್ರೀಡಾ ಒಕ್ಕೂಟಗಳ ಪ್ರತಿನಿಧಿಗಳು, ಅನೇಕ ಹಿರಿಯ ಕ್ರೀಡಾಳುಗಳು ಭಾಗವಹಿಸಲಿದ್ದಾರೆ. ಈ ಅಧಿವೇಶನ ಭಾರತಕ್ಕೆ ಸಂದ ಹೆಮ್ಮೆ(Vistara Editorial).

ಭಾರತದ ನೇತೃತ್ವದಲ್ಲಿ ನಡೆದಿದ್ದ ಜಿ-20 ಸಮಾವೇಶ ಅತ್ಯಂತ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಜಾಗತಿಕವಾಗಿ ಮೆಚ್ಚುಗೆ ಕೇಳಿಬಂದಿದೆ. ಆ ಯಶಸ್ವಿ ಸಮಾವೇಶದ ನಂತರ ಭಾರತದಲ್ಲಿ ನಡೆಯುತ್ತಿರುವ ಮತ್ತೊಂದು ಅಂತಾರಾಷ್ಟ್ರೀಯ ಮಟ್ಟದ ಕಾರ್ಯಕ್ರಮ ಇದಾಗಿದೆ. 40 ವರ್ಷಗಳ ನಂತರ ಭಾರತದಲ್ಲಿ ಐಒಸಿ ಅಧಿವೇಶನ ನಡೆಯುತ್ತಿದೆ. ಐಒಸಿ ಅಧಿವೇಶನವು ಒಲಿಂಪಿಕ್ ಕ್ರೀಡಾಕೂಟದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಸರ್ವೋಚ್ಚ ಸಂಸ್ಥೆಯಾಗಿದೆ. ಇದು ಒಲಿಂಪಿಕ್ ಚಾರ್ಟರ್ ಅನ್ನು ಅಳವಡಿಸಿಕೊಳ್ಳುವುದು ಅಥವಾ ಪರಿಷ್ಕರಿಸುವುದು, ಐಒಸಿ ಸದಸ್ಯರು ಮತ್ತು ಪದಾಧಿಕಾರಿಗಳನ್ನು ಆಯ್ಕೆ ಮಾಡುವುದು ಹಾಗೂ ಒಲಿಂಪಿಕ್ಸ್‌ನ ಆತಿಥೇಯ ನಗರವನ್ನು ಆಯ್ಕೆ ಮಾಡುವುದು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹೊಂದಿರುತ್ತದೆ. 2022ರ ಫೆಬ್ರವರಿಯಲ್ಲಿ ಚೀನಾದ ರಾಜಧಾನಿ ಬೀಜಿಂಗ್‌ನಲ್ಲಿ ನಡೆದ ಬಿಡ್ಡಿಂಗ್ ಐಒಸಿ ಸದಸ್ಯರಾದ ನೀತಾ ಅಂಬಾನಿ ಬಿಡ್ಡಿಂಗ್‌ನಲ್ಲಿ ಭಾಗವಹಿಸಿದ್ದರು. ಈ ಐತಿಹಾಸಿಕ ಸಭೆಯಲ್ಲಿ ಭಾರತದ ಪರವಾಗಿ ಒಟ್ಟು 76 ಮತಗಳಲ್ಲಿ 75 ಮತಗಳು ಲಭಿಸಿವೆ. ಒಲಿಂಪಿಕ್ ಕ್ರೀಡಾಕೂಟವನ್ನು ಭಾರತಕ್ಕೆ ತರುವ ಪ್ರಯತ್ನದಲ್ಲಿ ಇದು ಪ್ರಮುಖವಾದ ಹೆಜ್ಜೆಯಾಗಿದೆ.

ಈ ಸಂಪಾದಕೀಯವನ್ನೂ ಓದಿ: ವಿಸ್ತಾರ ಸಂಪಾದಕೀಯ: ಪುಕ್ಕಟೆ ವಿದ್ಯುತ್ ಗಿಮಿಕ್‌ನಿಂದಾಗಿ ರಾಜ್ಯವೇ ಕಗ್ಗತ್ತಲೆಯಲ್ಲಿ ಮುಳುಗದಿರಲಿ!

ಐಒಸಿ ಅಧಿವೇಶನ ಭಾರತಕ್ಕೆ ಲಗ್ಗೆಯಿಟ್ಟರೂ ಒಲಿಂಪಿಕ್ ಕ್ರೀಡಾಕೂಟವೂ ಭಾರತಕ್ಕೆ ಬರುತ್ತದೆಯೇ ಎಂಬುದು ಪ್ರಶ್ನೆ ಇನ್ನೂ ಇದೆ. ನೀತಾ ಅಂಬಾನಿ ಕ್ರೀಡಾಕೂಟವನ್ನೂ ಭಾರತಕ್ಕೆ ತರುವ ಕನಸು ಕಾಣುತ್ತಿದ್ದಾರೆ. ಹೀಗಾಗಿ ಭಾರತದಲ್ಲಿ ಐಒಸಿ ಅಧಿವೇಶನಗಳು ನಡೆಯುವುದು ಈ ನಿಟ್ಟಿನಲ್ಲಿ ಪ್ರಾಮುಖ್ಯವಾಗಿದೆ. ಒಲಿಂಪಿಕ್ಸ್​​ಗೆ ಆತಿಥ್ಯ ವಹಿಸುವ ನಗರವನ್ನು ಆಯ್ಕೆ ಮಾಡುವುದೂ ಈ ಸಭೆಯಲ್ಲಿ ಚರ್ಚೆಯಾಗುತ್ತದೆ. ಹಾಗೆಯೇ ನೂತನ ಕ್ರೀಡೆಗಳನ್ನು ಇದರಲ್ಲಿ ಸೇರಿಸಲಾಗುತ್ತದೆ ಕೂಡ. ಅಮೆರಿಕದ ಲಾಸ್ ಏಂಜಲೀಸ್​​​ನಲ್ಲಿ ನಡೆಯಲಿರುವ 2028ರ ಒಲಿಂಪಿಕ್ ಕ್ರೀಡಾಕೂಟದಲ್ಲಿ ಕ್ರಿಕೆಟ್ ಮತ್ತು ಸ್ಕ್ವಾಷ್ ಅನ್ನು ಸೇರಿಸಲು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ಅಧಿಕೃತವಾಗಿ ಒಪ್ಪಿಕೊಂಡಿದೆ. ಐಒಸಿ ಅಧ್ಯಕ್ಷ ಥಾಮಸ್ ಬಾಕ್​​ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಭೆಯಲ್ಲಿ ಎರಡೂ ಕ್ರೀಡೆಗಳನ್ನು ಲಾಸ್​ ಏಂಜಲಿಸ್​ ಸಂಘಟನಾ ಸಮಿತಿಯು ಶಿಫಾರಸು ಮಾಡಿತ್ತು. ಅಂತಿಮವಾಗಿ ಇದನ್ನು ಉನ್ನತ ಒಲಿಂಪಿಕ್ ಸಂಸ್ಥೆ ಅಂಗೀಕರಿಸಿತು. 2022ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳಾ ಕ್ರಿಕೆಟ್​​ನ ಅದ್ಭುತ ಯಶಸ್ಸಿನ ನಂತರ ಕ್ರಿಕೆಟ್​ ಸೇರ್ಪಡೆ ಒತ್ತಾಯ ಹೆಚ್ಚಾಗಿತ್ತು. ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್​ ಕಾಣಿಸಿಕೊಂಡಿದ್ದು 1900ರಲ್ಲಿ ಕೊನೇ ಬಾರಿ. ಹೀಗಾಗಿ ಇದು ಮಹತ್ವದ ಹೆಜ್ಜೆ ಎನಿಸಿದೆ. ಕ್ರಿಕೆಟ್‌ನಲ್ಲಿ ಅತ್ಯಂತ ಯಶಸ್ವಿ ದೇಶಗಳಲ್ಲಿ ಒಂದಾದ ಭಾರತಕ್ಕೆ ಸಹಜವಾಗಿಯೇ ಇದು ಹೆಗ್ಗಳಿಕೆ ಎನಿಸಲಿದೆ.

ಕ್ರೀಡೆ ಯಾವಾಗಲೂ ವಿಶ್ವದಾದ್ಯಂತ ಲಕ್ಷಾಂತರ ಜನರಿಗೆ ಭರವಸೆ ಮತ್ತು ಸ್ಫೂರ್ತಿಯ ಸಂಕೇತ. ಕ್ರೀಡೆಯ ವಿಚಾರದಲ್ಲಿ ಭಾರತ ಇತ್ತೀಚೆಗೆ ಸಾಕಷ್ಟು ಯಶಸ್ವಿ ಎನಿಸಿಕೊಂಡಿದೆ. ಚೀನಾದಲ್ಲಿ ನಡೆದ ಏಷ್ಯನ್‌ ಗೇಮ್ಸ್‌ನಲ್ಲಿ ನೂರಕ್ಕೂ ಅಧಿಕ ಪದಕಗಳನ್ನು ನಮ್ಮ ಬುಟ್ಟಿಗೆ ಹಾಕಿಕೊಂಡಿರುವುದು ನಮ್ಮ ಸಾಧನೆಯ ಮುಕುಟ. ವಿಶ್ವದ ಜನತೆಯನ್ನು ಒಂದಾಗಿಸುವುದು ಕ್ರೀಡೆಯಿಂದ ಸಾಧ್ಯ. ಕ್ರಿಕೆಟ್‌ ಮಾತ್ರವಲ್ಲದೆ ಅಥ್ಲೆಟಿಕ್ಸ್‌ ಮುಂತಾದ ಕ್ರೀಡೆಗಳಲ್ಲಿ ಭಾರತ ಸಾಧನೆಯ ಹೆಜ್ಜೆಗಳನ್ನಿಡುತ್ತಿದೆ. ನಲವತ್ತು ವರ್ಷಗಳ ಹಿಂದೆ, 1983ರಲ್ಲಿ ನವದೆಹಲಿ ಐಒಸಿ ಅಧಿವೇಶನದ 86ನೇ ಆವೃತ್ತಿಗೆ ಆತಿಥ್ಯ ವಹಿಸಿತ್ತು. ಅಂದಿನಿಂದ ಒಲಿಂಪಿಕ್ಸ್ ಭಾರತಕ್ಕೆ ಬರುತ್ತದೆ ಎಂಬ ಭರವಸೆಯಲ್ಲಿ ಅನೇಕ ತಲೆಮಾರುಗಳ ಆಟಗಾರರು ಕಾಯುತ್ತಿದ್ದರು. ಆದರೆ ಒಲಿಂಪಿಕ್ಸ್ ಭಾರತದಲ್ಲಿ ನಡೆಸಲು ಸಾಧ್ಯವಾಗಲಿಲ್ಲ. ಒಲಿಂಪಿಕ್ ಸಮಿತಿಯಲ್ಲಿ ಭಾರತದ ಪರವಾಗಿ ಧ್ವನಿ ಎತ್ತಲು ಯಾವುದೇ ಖಾಸಗಿ ಸದಸ್ಯರು ಇರಲಿಲ್ಲ. ಆರು ವರ್ಷಗಳ ಹಿಂದೆ, ನೀತಾ ಅಂಬಾನಿ ಐಒಸಿಯ ಮೊದಲ ಭಾರತೀಯ ಖಾಸಗಿ ಮಹಿಳಾ ಸದಸ್ಯತ್ವ ಪಡೆದರು. ಅವರ ಕಠಿಣ ಪರಿಶ್ರಮಕ್ಕೆ ಈಗ ಫಲ ಸಿಕ್ಕಿದೆ. ಐಒಸಿ ಆತಿಥ್ಯ ಭಾರತಕ್ಕೆ ಬಂದಂತೆ ಒಲಿಂಪಿಕ್ಸ್‌ ಕೂಡ ಬರುವ ದಿನಗಳು ದೂರವಿಲ್ಲ ಎಂಬ ಭರವಸೆ ತಾಳೋಣ.

ಇನ್ನಷ್ಟು ಸಂಪಾದಕೀಯಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024 Eliminator: ಎಲಿಮಿನೇಟರ್​ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ಆಘಾತ; ಇಬ್ಬರು ಸ್ಟಾರ್​ ಆಟಗಾರರು ಅಲಭ್ಯ!

IPL 2024 Eliminator: ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ತಂಡ ರಾಜಸ್ಥಾನ್​ ರಾಯಲ್ಸ್(Rajasthan Royals)​ ವಿರುದ್ಧ ಆಡಲಿದೆ. ಈ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

VISTARANEWS.COM


on

IPL 2024 Eliminato
Koo

ಬೆಂಗಳೂರು: ರಾಯಲ್​ ಚಾಲೆಂಜರ್ಸ್​ ಬೆಂಗಳೂರು(Royal Challengers Bengaluru) ತಂಡದ ಎಲಿಮಿನೇಟರ್(IPL 2024 Eliminator)​ ಎದುರಾಳಿ ಯಾರೆಂದು ಫಿಕ್ಸ್​ ಆಗಿದೆ. ಇದರ ಬೆನ್ನಲ್ಲೇ ತಂಡಕ್ಕೆ ದೊಡ್ಡ ಆಘಾತವೊಂದು ಎದುರಾಗಿದೆ. ಟಿ20 ವಿಶ್ವಕಪ್​ ಟೂರ್ನಿಯ ಅಭ್ಯಾಸ ನಡೆಸುವ ಸಲುವಾಗಿ ಆಸ್ಟ್ರೇಲಿಯಾದ ಸ್ಟಾರ್​ ಆಲ್​ರೌಂಡರ್​ಗಳಾದ ಕ್ಯಾಮರೂನ್​ ಗ್ರೀನ್​ ಮತ್ತು ಗ್ಲೆನ್​ ಮ್ಯಾಕ್ಸ್​ವೆಲ್​ ತಂಡ ತೊರೆಯಲಿದ್ದಾರೆ ಎನ್ನಲಾಗಿದೆ.

ಈಗಾಗಲೇ ಇಂಗ್ಲೆಂಡ್​ನ ಆಟಗಾರರು ಐಪಿಎಲ್​ ಪಂದ್ಯವಾವಳಿಯನ್ನು ಅರ್ಧಕ್ಕೆ ಮೊಟಕುಗೊಳಿಸಿ ತವರಿಗೆ ಮರಳಿದ್ದಾರೆ. ಇದೀಗ ಆಸ್ಟ್ರೇಲಿಯಾ ಸರದಿ ಎನ್ನಲಾಗಿದೆ. ಕೇವಲ ಆರ್​ಸಿಬಿ ಮಾತ್ರವಲ್ಲದೆ ಇತರ ತಂಡದ ಪರ ಆಡುತ್ತಿರುವ ಆಸ್ಟ್ರೇಲಿಯಾ ಆಟಗಾರರು ಕೂಡ ಐಪಿಎಲ್​ ತೊರೆಯಲಿದ್ದಾರೆ ಎಂದು ವರದಿಯಾಗಿದೆ. ಒಂದೊಮ್ಮೆ ಆಸೀಸ್​ ಆಟಗಾರರು ಐಪಿಎಲ್​ನಿಂದ ಹೊರಹೋದರೆ ಸನ್​ರೈಸರ್ಸ್​ ಮತ್ತು ಆರ್​ಸಿಬಿ ತಂಡಗಳಿಗೆ ದೊಡ್ಡ ಹೊಡೆತ ಬೀಳಲಿದೆ. ಏಕೆಂದರೆ ಈ 2 ತಂಡಗಳಲ್ಲಿಯೇ ತಲಾ 2 ಆಸೀಸ್​ ಆಟಗಾರರಿದ್ದಾರೆ.

ಟಿ20 ವಿಶ್ವಕಪ್​ ಟೂರ್ನಿಯ ಅಭ್ಯಾಸ ಪಂದ್ಯಗಳು ಮೇ 27ರಿಂದ ಆರಂಭಗೊಳ್ಳಲಿದೆ. ಆಸ್ಟ್ರೇಲಿಯಾ ತನ್ನ ಮೊದಲ ಅಭ್ಯಾಸ ಪಂದ್ಯವನ್ನು ನಮೀಬಿಯಾ ವಿರುದ್ಧ ಮೇ 29ಕ್ಕೆ ಆಡಲಿದೆ. ಮೂಲಗಳ ಪ್ರಕಾರ ಆಸ್ಟ್ರೇಲಿಯಾ ತಂಡ ಮೇ 21ರಂದು ಕೆರಿಬಿಯನ್​ ದ್ವೀಪಕ್ಕೆ ಪ್ರಯಾಣ ಬೆಳೆಸಲಿದೆ ಎಂದು ಹೇಳಲಾಗಿದೆ.

ಆರ್​ಸಿಬಿಗೆ ರಾಜಸ್ಥಾನ್​ ಎದುರಾಳಿ


ಇಂದು ರಾತ್ರಿ ನಡೆಯಬೇಕಿದ್ದ ಐಪಿಎಲ್​ನ ಅಂತಿಮ ಲೀಗ್​ ಪಂದ್ಯವಾದ ರಾಜಸ್ಥಾನ್​ ರಾಯಲ್ಸ್​(RR vs KKR) ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders)​ ನಡುವಣ ಪಂದ್ಯ ಮಳೆಯಿಂದ ರದ್ದುಗೊಂಡ ಕಾರಣ ರಾಜಸ್ಥಾನ್​ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿತು. ಹೀಗಾಗಿ ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ತಂಡ ರಾಜಸ್ಥಾನ್​ ರಾಯಲ್ಸ್(Rajasthan Royals)​ ವಿರುದ್ಧ ಆಡಲಿದೆ. ಈ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಸತತವಾಗಿ 6 ಪಂದ್ಯಗಳನ್ನು ಗೆದ್ದು ಪ್ಲೇ ಆಫ್​ ಆಫ್​ಗೆ ಲಗ್ಗೆಯಿಟ್ಟ ಆರ್​ಸಿಬಿಗೆ ಎಲಿಮಿನೇಟರ್​ ಪಂದ್ಯದಲ್ಲೂ ಲಕ್​ ಹೈ ಹಿಡಿಯುವುದೇ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ IPL 2024 : ಐಪಿಎಲ್‌ ಬೆಟ್ಟಿಂಗ್‌ಗಾಗಿ ಮೈ ತುಂಬಾ ಸಾಲ; ನೇಣಿಗೆ ಶರಣಾದ ಯುವಕ

ಕೆಕೆಆರ್​ ಮಣಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಿಯಾಗಿ ಕ್ವಾಲಿಫೈಯರ್​ ಪಂದ್ಯವನ್ನಾಡುವ ನಿರೀಕ್ಷೆಯಲ್ಲಿದ್ದ ರಾಜಸ್ಥಾನ್​ಗೆ(Rajasthan Royals)​ ಮಳೆ ತಣ್ಣೀರೆರಚಿತು. ಸನ್​ರೈಸರ್ಸ್​ ಹೈದರಾಬಾದ್​ 2ನೇ ತಂಡವಾಗಿ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು. ರಾಜಸ್ಥಾನ್​ ಮತ್ತು ಹೈದರಾಬಾದ್ ಸಮಾನ 17 ಅಂಕ ಹೊಂದಿದರೂ ರನ್​ ರೇಟ್​ನಲ್ಲಿ ಮುಂದಿದ್ದ ಕಾರಣ ಈ ಲಾಭ ಕಮಿನ್ಸ್​ ಪಡೆಗೆ ಲಭಿಸಿತು. ಮಂಗಳವಾರ(ಮೇ 21) ನಡೆಯುವ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಹೈದರಾಬಾದ್​ ಕಣಕ್ಕಿಳಿಯಲಿದೆ. ಈ ಪಂದ್ಯ ಅಹಮದಾಬಾದ್​ನಲ್ಲಿ ನಡೆಯಲಿದೆ.

Continue Reading

ಕ್ರೀಡೆ

RR vs KKR: ಮಳೆಯಿಂದ​ ಪಂದ್ಯ ರದ್ದು; ಎಲಿಮಿನೇಟರ್‌ ಪಂದ್ಯದಲ್ಲಿ​ ಆರ್​ಸಿಬಿಗೆ ರಾಜಸ್ಥಾನ್​ ಎದುರಾಳಿ

RR vs KKR: ಕೆಕೆಆರ್​ ಮಣಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಿಯಾಗಿ ಕ್ವಾಲಿಫೈಯರ್​ ಪಂದ್ಯವನ್ನಾಡುವ ನಿರೀಕ್ಷೆಯಲ್ಲಿದ್ದ ರಾಜಸ್ಥಾನ್​ಗೆ(Rajasthan Royals)​ ಮಳೆ ತಣ್ಣೀರೆರಚಿತು. ಸನ್​ರೈಸರ್ಸ್​ ಹೈದರಾಬಾದ್​ 2ನೇ ತಂಡವಾಗಿ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು.

VISTARANEWS.COM


on

RR vs KKR
Koo

ಗುವಾಹಟಿ: 17ನೇ ಆವೃತ್ತಿಯ ಐಪಿಎಲ್​ನ(IPL 2024) ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​(RR vs KKR) ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders)​ ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗಬೇಕಿತ್ತು. ಆದರೆ ಮಳೆಯಿಂದ ಒಂದೂ ಎಸೆತ ಕಾಣದೆ ಈ ಪಂದ್ಯ ರದ್ದಾದ ಕಾರಣ ಉಭಯ ತಂಡಗಳಿಗೂ ತಲಾ ಒಂದು ಅಂಕ ನೀಡಲಾಯಿತು.

10 ಗಂಟೆ ಸುಮಾರಿಗೆ ಮಳೆ ನಿಂತಿತು. ಮಳೆ ನಿಂತ ಕಾರಣ ಪಂದ್ಯವನ್ನು ಡಕ್​ವರ್ತ್​ ನಿಯಮದ ಪ್ರಕಾರ 7 ಓವರ್​ಗೆ ಸೀಮಿತಗೊಳಿಸಿ ಟಾಸ್​ ಕೂಡ ಹಾರಿಸಲಾಯಿತು. ಟಾಸ್​ ಗೆದ್ದು ಕೆಕೆಆರ್​ ಫೀಲ್ಡಿಂಗ್​ ಆಯ್ದುಕೊಂಡಿತು. ಇನ್ನೇನು ಆಟಗಾರರು ಮೈದಾನಕ್ಕೆ ಇಳಿಯಬೇಕು ಎನ್ನುವಷ್ಟರಲ್ಲಿ ಮಳೆ ಮತ್ತೆ ಆರಂಭಗೊಂಡಿತು. ಹೀಗಾಗಿ ಅಂಪೈರ್​ಗಳು ಕೊನೆಗೆ ಪಂದ್ಯವನ್ನು ರದ್ದು ಎಂದು ಘೋಷಣೆ ಮಾಡಿದರು.

ಕೆಕೆಆರ್​ ಮಣಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಿಯಾಗಿ ಕ್ವಾಲಿಫೈಯರ್​ ಪಂದ್ಯವನ್ನಾಡುವ ನಿರೀಕ್ಷೆಯಲ್ಲಿದ್ದ ರಾಜಸ್ಥಾನ್​ಗೆ(Rajasthan Royals)​ ಮಳೆ ತಣ್ಣೀರೆರಚಿತು. ಸನ್​ರೈಸರ್ಸ್​ ಹೈದರಾಬಾದ್​ 2ನೇ ತಂಡವಾಗಿ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು. ರಾಜಸ್ಥಾನ್​ ಮತ್ತು ಹೈದರಾಬಾದ್ ಸಮಾನ 17 ಅಂಕ ಹೊಂದಿದರೂ ರನ್​ ರೇಟ್​ನಲ್ಲಿ ಮುಂದಿದ್ದ ಕಾರಣ ಈ ಲಾಭ ಕಮಿನ್ಸ್​ ಪಡೆಗೆ ಲಭಿಸಿತು. ಮಂಗಳವಾರ(ಮೇ 21) ನಡೆಯುವ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಹೈದರಾಬಾದ್​ ಕಣಕ್ಕಿಳಿಯಲಿದೆ. ಈ ಪಂದ್ಯ ಅಹಮದಾಬಾದ್​ನಲ್ಲಿ ನಡೆಯಲಿದೆ.

ಆರ್​ಸಿಬಿ-ರಾಜಸ್ಥಾನ್​ ಮಧ್ಯೆ ಎಲಿಮಿನೇಟರ್​ ಪಂದ್ಯ


ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ತಂಡ ರಾಜಸ್ಥಾನ್​ ರಾಯಲ್ಸ್​ ವಿರುದ್ಧ ಆಡಲಿದೆ. ಈ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಸತತವಾಗಿ 6 ಪಂದ್ಯಗಳನ್ನು ಗೆದ್ದು ಪ್ಲೇ ಆಫ್​ ಆಫ್​ಗೆ ಲಗ್ಗೆಯಿಟ್ಟ ಆರ್​ಸಿಬಿಗೆ ಎಲಿಮಿನೇಟರ್​ ಪಂದ್ಯದಲ್ಲೂ ಲಕ್​ ಹೈ ಹಿಡಿಯುವುದೇ ಎಂದು ಕಾದು ನೋಡಬೇಕಿದೆ.

ಪಂಜಾಬ್​ ವಿರುದ್ಧ ಗೆದ್ದ ಹೈದರಾಬಾದ್​


ದಿನದ ಮೊದಲ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್​ ತಂಡ ಪಂಜಾಬ್​ ಕಿಂಗ್ಸ್​ ವಿರುದ್ಧ 4 ವಿಕೆಟ್​ಗಳ ಗೆಲುವು ಸಾಧಿಸಿತು. ಈ ಗೆಲುವಿನೊಂದಿಗೆ 17 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿತು. ಬ್ಯಾಟಿಂಗ್​ ಸ್ನೇಹಿಯಾದ ಉಪ್ಪಳದ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಪಂಜಾಬ್​ ಕಿಂಗ್ಸ್​ 5 ವಿಕೆಟ್​ಗೆ 214 ರನ್​ ಬಾರಿಸಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು. ಆದರೆ ಈ ಮೊತ್ತ ಹೈದರಾಬಾದ್​ ತಂಡವನ್ನು ಕಟ್ಟಿ ಹಾಕಲು ಸಾಕಾಗಲಿಲ್ಲ. ಗುರಿ ಬೆನ್ನಟ್ಟಿದ ಸನ್​ರೈಸರ್ಸ್​ ಹೈದರಾಬಾದ್ 19.1​ ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 215 ಬಾರಿಸಿ ತವರಿನಲ್ಲಿ ವಿಜಯ ಪತಾಕೆ ಹಾರಿಸಿತು. ಉಭಯ ತಂಡಗಳ ಜಿದ್ದಾಜಿದ್ದಿನ ಬ್ಯಾಟಿಂಗ್​ ಪರಾಕ್ರಮದಿಂದಾಗಿ ಈ ಪಂದ್ಯದಲ್ಲಿ ಒಟ್ಟು 429 ರನ್​ ದಾಖಲಾಯಿತು.

Continue Reading

ಕ್ರೀಡೆ

SRH vs PBKS: ಆರ್​ಸಿಬಿಯ ಸಿಕ್ಸರ್​ ದಾಖಲೆ ಮುರಿದ ಹೈದರಾಬಾದ್​

SRH vs PBKS: ಆರ್​ಸಿಬಿ ಮತ್ತು ಹೈದರಾಬಾದ್(SRH vs PBKS)​ ತಂಡಗಳು ಪ್ಲೇ ಆಫ್​ ಪ್ರವೇಶಿಸಿದ ಕಾರಣ ತಮ್ಮ ತಂಡಗಳ ಸಿಕ್ಸರ್​ಗಳ ಸಂಖ್ಯೆ ಇನ್ನೂ ಹೆಚ್ಚಿಸುವ ಅವಕಾಶವಿದೆ. ಅಂತಿಮವಾಗಿ ಯಾರು ಹೆಚ್ಚು ಸಿಕ್ಸರ್​ ಬಾರಿಸುತ್ತಾರೋ ಅವರಿಗೆ ಅಗ್ರಸ್ಥಾನ ಸಿಗಲಿದೆ. ಈ ತಂಡ ಯಾವುದು ಎಂಬುದು ಸದ್ಯದ ಕುತೂಹಲ.

VISTARANEWS.COM


on

SRH vs PBKS
Koo

ಹೈದರಾಬಾದ್​: ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ ತಂಡ ಐಪಿಎಲ್​(IPL 2024) ಆವೃತ್ತಿಯಲ್ಲಿ ಮತ್ತು ಟಿ20 ಸರಣಿಯಲ್ಲಿ ಅತಿ ಹೆಚ್ಚು ಸಿಕ್ಸರ್​ ಬಾರಿಸಿದ ಮೊದಲ ತಂಡ ಎಂಬ ದಾಖಲೆ ಬರೆದಿದೆ. ಈ ಮೂಲಕ ಆರ್​ಸಿಬಿ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದೆ. ಆರ್​ಸಿಬಿ ಈ ಆವೃತ್ತಿಯಲ್ಲಿ ಒಟ್ಟು 157 ಸಿಕ್ಸರ್​ ಬಾರಿಸಿ ಅಗ್ರಸ್ಥಾನ ಪಡೆದಿತ್ತು. ಆದರೆ, ಇದೀಗ ಹೈದರಾಬಾದ್​ 160 ಸಿಕ್ಸರ್​ ಬಾರಿಸುವ ಮೂಲಕ ದಾಖಲೆಯನ್ನು ತನ್ನ ಹೆಸರಿಗೆ ಬರೆದಿದೆ.

ಅತಿ ಹೆಚ್ಚು ಸಿಕ್ಸರ್​ ಬಾರಿಸಿದ 5 ತಂಡಗಳು


ಸನ್​ರೈಸರ್ಸ್​ ಹೈದರಾಬಾದ್​-160
ಸಿಕ್ಸರ್​, 2024

ಆರ್​ಸಿಬಿ-157 ಸಿಕ್ಸರ್​, 2024

ಚೆನ್ನೈ ಸೂಪರ್​ ಕಿಂಗ್ಸ್​-145 ಸಿಕ್ಸರ್​, 2018

ಸರ್ರೆ-144 (ಟಿ20 ಬ್ಲಾಸ್ಟ್​ 2013)

ಕೆಕೆಆರ್​-143 ಸಿಕ್ಸರ್​, 2019

ಆರ್​ಸಿಬಿ ಮತ್ತು ಹೈದರಾಬಾದ್(SRH vs PBKS)​ ತಂಡಗಳು ಪ್ಲೇ ಆಫ್​ ಪ್ರವೇಶಿಸಿದ ಕಾರಣ ತಮ್ಮ ತಂಡಗಳ ಸಿಕ್ಸರ್​ಗಳ ಸಂಖ್ಯೆ ಇನ್ನೂ ಹೆಚ್ಚಿಸುವ ಅವಕಾಶವಿದೆ. ಅಂತಿಮವಾಗಿ ಯಾರು ಹೆಚ್ಚು ಸಿಕ್ಸರ್​ ಬಾರಿಸುತ್ತಾರೋ ಅವರಿಗೆ ಅಗ್ರಸ್ಥಾನ ಸಿಗಲಿದೆ. ಈ ತಂಡ ಯಾವುದು ಎಂಬುದು ಸದ್ಯದ ಕುತೂಹಲ.

ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್​


ಪಂಜಾಬ್​ ಕಿಂಗ್ಸ್​ ವಿರುದ್ಧ ಪ್ರಚಂಡ ಬ್ಯಾಟಿಂಗ್​ ಮೂಲಕ ಸಿಕ್ಸರ್​ಗಳ ಸುರಿಮಳೆಯನ್ನೇ ಸುರಿಸಿದ ಅಭಿಷೇಕ್​ ಬರೋಬ್ಬರಿ 6 ಸಿಕ್ಸರ್​ ಬಾರಿಸಿ ಮಿಂಚಿದರು. ಇದೇ ವೇಳೆ ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ವಿರಾಟ್​ ಕೊಹ್ಲಿ(37) ಅವರ ದಾಖಲೆಯನ್ನು ಹಿಂದಿಕ್ಕಿದರು. ಸದ್ಯ ಅಭಿಷೇಕ್​ 41* ಸಿಕ್ಸರ್​ ಬಾರಿಸಿದ ಸಾಧನೆ ಮಾಡಿದ್ದಾರೆ. ಆರ್​ಸಿಬಿ ಕೂಡ ಪ್ಲೇ ಆಫ್​ ಪ್ರವೇಶಿಸಿದ ಕಾರಣ ಕೊಹ್ಲಿಗೆ ಈ ದಾಖಲೆಯನ್ನು ಮುರಿಯುವ ಅವಕಾಶ ಇನ್ನೂ ಜೀವಂತವಿದೆ. ಒಟ್ಟಾರೆಯಾಗಿ ಉಭಯ ಆಟಗಾರರ ಮಧ್ಯೆ ಸಿಕ್ಸರ್​ ಪೈಪೋಟಿ ಏರ್ಪಟ್ಟಿದೆ.

ಇದನ್ನೂ ಓದಿ SRH vs PBKS: ಒಂದು ದಿನ ಕಳೆಯುವ ಮುನ್ನವೇ ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್

ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಟಾಪ್​ 5 ಆಟಗಾರರು


ಅಭಿಷೇಕ್ ಶರ್ಮ-41 ಸಿಕ್ಸರ್​​

ವಿರಾಟ್​ ಕೊಹ್ಲಿ-37 ಸಿಕ್ಸರ್​

ನಿಕೋಲಸ್​ ಪೂರನ್​-36 ಸಿಕ್ಸರ್​

ಹೆನ್ರಿಚ್​ ಕ್ಲಾಸೆನ್​-33 ಸಿಕ್ಸರ್​

ಸುನೀಲ್​ ನರೈನ್​-32 ಸಿಕ್ಸರ್

ಹೈದರಾಬಾದ್​ಗೆ 4 ವಿಕೆಟ್​ ಜಯ

ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಪಂಜಾಬ್​ ಕಿಂಗ್ಸ್​ 5 ವಿಕೆಟ್​ಗೆ 214 ರನ್​ ಬಾರಿಸಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು. ಆದರೆ ಈ ಮೊತ್ತ ಹೈದರಾಬಾದ್​ ತಂಡವನ್ನು ಕಟ್ಟಿ ಹಾಕಲು ಸಾಕಾಗಲಿಲ್ಲ. ಗುರಿ ಬೆನ್ನಟ್ಟಿದ ಸನ್​ರೈಸರ್ಸ್​ ಹೈದರಾಬಾದ್ 19.1​ ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 215 ಬಾರಿಸಿ ತವರಿನಲ್ಲಿ ವಿಜಯ ಪತಾಕೆ ಹಾರಿಸಿತು. ಉಭಯ ತಂಡಗಳ ಜಿದ್ದಾಜಿದ್ದಿನ ಬ್ಯಾಟಿಂಗ್​ ಪರಾಕ್ರಮದಿಂದಾಗಿ ಈ ಪಂದ್ಯದಲ್ಲಿ ಒಟ್ಟು 429 ರನ್​ ದಾಖಲಾಯಿತು.

ಈಗಾಗಲೇ ಪ್ಲೇ ಆಫ್​ ಪ್ರವೇಶಿಸಿರುವ ಹೈದರಾಬಾದ್​ ಈ ಗೆಲುವಿನೊಂದಿಗೆ 17 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ರಾತ್ರಿ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್​ ತಂಡ ಕೆಕೆಆರ್​ ವಿರುದ್ಧ ಗೆದ್ದರೆ ಹೈದರಾಬಾದ್​ ಮೂರನೇ ಸ್ಥಾನಕ್ಕೆ ಕುಸಿದು ಎಲಿಮಿನೇಟರ್​​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಆಡಲಿದೆ. ​ಎಲಿಮಿನೇಟರ್ ಪಂದ್ಯ ಬುಧವಾರ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

Continue Reading

ಕ್ರೀಡೆ

SRH vs PBKS: ಒಂದು ದಿನ ಕಳೆಯುವ ಮುನ್ನವೇ ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್

SRH vs PBKS: ಪಂಜಾಬ್​ ವಿರುದ್ಧದ ಪಂದ್ಯದಲ್ಲಿ 21 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿದ ಅಭಿಷೇಕ್​ ಒಟ್ಟು 28 ಎಸೆತಗಳಿಂದ 66 ರನ್​ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಅವರ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 6 ಸಿಕ್ಸರ್​ ಮತ್ತು 5 ಬೌಂಡರಿ ಸಿಡಿಯಿತು.

VISTARANEWS.COM


on

SRH vs PBKS
Koo

ಹೈದರಾಬಾದ್: ವಿರಾಟ್​ ಕೊಹ್ಲಿ(Virat Kohli) ಅವರು ಶನಿವಾರ ಚೆನ್ನೈ ವಿರುದ್ಧದ ಪಂದ್ಯದಲ್ಲಿ 4 ಸಿಕ್ಸರ್​ ಬಾರಿಸುವ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ(IPL 2024) ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರ ಎಂಬ ದಾಖಲೆ ಬರೆದಿದ್ದರು. ಆದರೆ ಈ ದಾಖಲೆ ಒಂದು ದಿನ ಕಳೆಯುವ ಮುನ್ನವೇ ಪತನಗೊಂಡಿದೆ. ಸನ್​ರೈಸರ್ಸ್ ಹೈದರಾಬಾದ್(SRH vs PBKS)​ ತಂಡದ ಯುವ ಆಟಗಾರ ಅಭಿಷೇಕ್​ ಶರ್ಮ(Abhishek Sharma) ಈ ದಾಖಲೆಯನ್ನು ಮರಿದಿದ್ದಾರೆ.

ಇಂದು(ಭಾನುವಾರ) ನಡೆದ ಐಪಿಎಲ್​ನ 69ನೇ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್​ ವಿರುದ್ಧ ಪ್ರಚಂಡ ಬ್ಯಾಟಿಂಗ್​ ಮೂಲಕ ಸಿಕ್ಸರ್​ಗಳ ಸುರಿಮಳೆಯನ್ನೇ ಸುರಿಸಿದ ಅಭಿಷೇಕ್​ ಬರೋಬ್ಬರಿ 6 ಸಿಕ್ಸರ್​ ಬಾರಿಸಿ ಮಿಂಚಿದರು. ಇದೇ ವೇಳೆ ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ವಿರಾಟ್​ ಕೊಹ್ಲಿ(37) ಅವರ ದಾಖಲೆಯನ್ನು ಹಿಂದಿಕ್ಕಿದರು. ಸದ್ಯ ಅಭಿಷೇಕ್​ 41* ಸಿಕ್ಸರ್​ ಬಾರಿಸಿದ ಸಾಧನೆ ಮಾಡಿದ್ದಾರೆ. ಆರ್​ಸಿಬಿ ಕೂಡ ಪ್ಲೇ ಆಫ್​ ಪ್ರವೇಶಿಸಿದ ಕಾರಣ ಕೊಹ್ಲಿಗೆ ಈ ದಾಖಲೆಯನ್ನು ಮುರಿಯುವ ಅವಕಾಶ ಇನ್ನೂ ಜೀವಂತವಿದೆ. ಒಟ್ಟಾರೆಯಾಗಿ ಉಭಯ ಆಟಗಾರರ ಮಧ್ಯೆ ಸಿಕ್ಸರ್​ ಪೈಪೋಟಿ ಏರ್ಪಟ್ಟಿದೆ.

ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಟಾಪ್​ 5 ಆಟಗಾರರು


ಅಭಿಷೇಕ್ ಶರ್ಮ-41 ಸಿಕ್ಸರ್​​

ವಿರಾಟ್​ ಕೊಹ್ಲಿ-37 ಸಿಕ್ಸರ್​

ನಿಕೋಲಸ್​ ಪೂರನ್​-36 ಸಿಕ್ಸರ್​

ಹೆನ್ರಿಚ್​ ಕ್ಲಾಸೆನ್​-33 ಸಿಕ್ಸರ್​

ಸುನೀಲ್​ ನರೈನ್​-32 ಸಿಕ್ಸರ್

ಇದನ್ನೂ ಓದಿ PBKS vs SRH: ಸೋಲಿನ ಮೂಲಕ ಅಭಿಯಾನ ಮುಗಿಸಿದ ಪಂಜಾಬ್​; ಹೈದರಾಬಾದ್​​ಗೆ 4 ವಿಕೆಟ್​ ಜಯ

ಪಂಜಾಬ್​ ವಿರುದ್ಧದ ಪಂದ್ಯದಲ್ಲಿ 21 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿದ ಅಭಿಷೇಕ್​ ಒಟ್ಟು 28 ಎಸೆತಗಳಿಂದ 66 ರನ್​ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಅವರ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 6 ಸಿಕ್ಸರ್​ ಮತ್ತು 5 ಬೌಂಡರಿ ಸಿಡಿಯಿತು.

ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಪಂಜಾಬ್​ ಕಿಂಗ್ಸ್​ 5 ವಿಕೆಟ್​ಗೆ 214 ರನ್​ ಬಾರಿಸಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು. ಆದರೆ ಈ ಮೊತ್ತ ಹೈದರಾಬಾದ್​ ತಂಡವನ್ನು ಕಟ್ಟಿ ಹಾಕಲು ಸಾಕಾಗಲಿಲ್ಲ. ಗುರಿ ಬೆನ್ನಟ್ಟಿದ ಸನ್​ರೈಸರ್ಸ್​ ಹೈದರಾಬಾದ್ 19.1​ ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 215 ಬಾರಿಸಿ ತವರಿನಲ್ಲಿ ವಿಜಯ ಪತಾಕೆ ಹಾರಿಸಿತು. ಉಭಯ ತಂಡಗಳ ಜಿದ್ದಾಜಿದ್ದಿನ ಬ್ಯಾಟಿಂಗ್​ ಪರಾಕ್ರಮದಿಂದಾಗಿ ಈ ಪಂದ್ಯದಲ್ಲಿ ಒಟ್ಟು 429 ರನ್​ ದಾಖಲಾಯಿತು.

ಈಗಾಗಲೇ ಪ್ಲೇ ಆಫ್​ ಪ್ರವೇಶಿಸಿರುವ ಹೈದರಾಬಾದ್​ ಈ ಗೆಲುವಿನೊಂದಿಗೆ 17 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ರಾತ್ರಿ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್​ ತಂಡ ಕೆಕೆಆರ್​ ವಿರುದ್ಧ ಗೆದ್ದರೆ ಹೈದರಾಬಾದ್​ ಮೂರನೇ ಸ್ಥಾನಕ್ಕೆ ಕುಸಿದು ಎಲಿಮಿನೇಟರ್​​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಆಡಲಿದೆ. ​ಎಲಿಮಿನೇಟರ್ ಪಂದ್ಯ ಬುಧವಾರ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

Continue Reading
Advertisement
gold rate today sai pallavi
ಚಿನ್ನದ ದರ23 mins ago

Gold Rate Today: 22 ಕ್ಯಾರಟ್‌ ಚಿನ್ನದ ಬೆಲೆ 500 ರೂ. ಏರಿಕೆ; ಇಂದಿನ ಬಂಗಾರದ ಧಾರಣೆ ಹೀಗಿದೆ

Murder case
ದೇಶ25 mins ago

Murder Case: ತಾಜ್‌ ಮಹಲ್‌ ಸಮೀಪದಲ್ಲೇ ಘೋರ ಕೃತ್ಯ; ಮಸೀದಿಯೊಳಗೆ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಡೆಡ್‌ಬಾಡಿ ಪತ್ತೆ

Mohan Lal watching dr rajkumars super hit song
ಮಾಲಿವುಡ್37 mins ago

Mohan Lal: ಅಣ್ಣಾವ್ರ ಹಾಡನ್ನು ಎಂಜಾಯ್‌ ಮಾಡಿದ ಮೋಹನ್ ಲಾಲ್; ವಿಡಿಯೊ ವೈರಲ್‌!

Lok Sabha Election 2024
Lok Sabha Election 202444 mins ago

Lok Sabha Election 2024: ಇಂಡಿಗನತ್ತ ಮತಗಟ್ಟೆ ಧ್ವಂಸ ಪ್ರಕರಣ; ಬಂಧಿತರಾಗಿದ್ದ 46 ಮಂದಿಗೆ ಜಾಮೀನು

actor Chetan Kumar Ahimsa
ಸಿನಿಮಾ1 hour ago

Actor Chetan Kumar Ahimsa: ಸಿಎಂ ಸಿದ್ದರಾಮಯ್ಯಗೆ “ಸೋಮಾರಿ” ಎಂದ ನಟ ಚೇತನ್!‌

Ebrahim Raisi
ವಿದೇಶ2 hours ago

Ebrahim Raisi: ಹೆಲಿಕಾಫ್ಟರ್‌ ಪತನದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ವಿಧ್ವಂಸಕ ಕೃತ್ಯವೇ?

Viral News
ವೈರಲ್ ನ್ಯೂಸ್2 hours ago

Viral News: ಮೇಲಿಂದ ಬಿದ್ದು ಬದುಕುಳಿದಿದ್ದ ಮಗುವಿನ ತಾಯಿ ಸೂಸೈಡ್‌; ಸೋಶಿಯಲ್‌ ಮೀಡಿಯಾ ಕಮೆಂಟ್‌ನಿಂದಲೇ ಖಿನ್ನತೆಗೊಳಗಾಗಿದ್ಳಾ?

Actor Rajinikanth attends grandson Ved cricket themed birthday party
ಕಾಲಿವುಡ್2 hours ago

Actor Rajinikanth: ಮೊಮ್ಮಗನ ಕ್ರಿಕೆಟ್‌ ಥೀಮ್‌ ಬರ್ತ್‌ಡೇ ಪಾರ್ಟಿಯಲ್ಲಿ ಭಾಗಿಯಾದ ತಲೈವಾ!

Kamal Haasan Indian 2 to release on July 12
ಕಾಲಿವುಡ್2 hours ago

Kamal Haasan: ಕಮಲ್‌ ಹಾಸನ್‌ ಅಭಿನಯದ ‘ಇಂಡಿಯನ್ 2′  ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

rain news charamadi ghat traffic jam
ಮಳೆ2 hours ago

Rain news: ಚಾರ್ಮಾಡಿ ಘಾಟಿಯಲ್ಲಿ ಮಳೆಗೆ ಸಿಲುಕಿಕೊಂಡ ನೂರಾರು ಪ್ರಯಾಣಿಕರು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ20 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ21 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ22 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌