Site icon Vistara News

WFI Elections: ಕೊನೆಗೂ ಭಾರತ ಕುಸ್ತಿ ಒಕ್ಕೂಟದ ಚುನಾವಣೆಗೆ ದಿನಾಂಕ ನಿಗದಿ

WFI elections

ನವದೆಹಲಿ: ಹಲವು ಬಾರಿ ಮುಂದೂಡಲ್ಪಟ್ಟಿದ್ದ ಭಾರತ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್ಐ) ಚುನಾವಣೆಗೆ(WFI Elections) ಕೊನೆಗೂ ಮುಹೂರ್ತ ನಿಗದಿಯಾಗಿದೆ. ಡಿ 21ಕ್ಕೆ ಚುನಾವಣೆ ಮತ್ತು ಅದೇ ದಿನ ಫಲಿತಾಂಶವೂ ಪ್ರಕಟಗೊಳ್ಳಲಿದೆ ಎಂದು ಸಂಸ್ಥೆಯ ಚುನಾವಣಾಧಿಕಾರಿ ಹೇಳಿದ್ದಾರೆ.

ಸರ್ವೋಚ್ಚ ನ್ಯಾಯಾಲಯ ಕೆಲವು ದಿನಗಳ ಹಿಂದೆ ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌(Punjab and Haryana High Court) ಚುನಾವಣೆಗೆ ತಡೆಯಾಜ್ಞೆ ನೀಡಿದನ್ನು ತೆರವುಗೊಳಿಸಿತ್ತು. ಹೀಗಾಗಿ ಎಲ್ಲ ವಿಘ್ನಗಳೂ ತೆರವಾಗಿವೆ.

ಮೂರು ಬಾರಿ ಮುಂದೂಡಿಕೆಯಾಗಿತ್ತು

ಈ ಹಿಂದೆ ಕುಸ್ತಿ ಒಕ್ಕೂಟದ ಅಧ್ಯಕ್ಷರಾಗಿದ್ದ ಬಿಜೆಪಿ ಸಂದಸರೂ ಆಗಿರುವ ಬ್ರಿಜ್​ ಭೂಷಣ್​ ಶರಣ್​ ಸಿಂಗ್(Brij Bhushan Sharan Singh)​ ಅವರ ವಿರುದ್ಧ ಒಲಿಂಪಿಕ್ ಪದಕ ವಿಜೇತರಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್, ಮತ್ತು ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಟ್ ಸೇರಿದಂತೆ ಆರು ಅಗ್ರ ಕುಸ್ತಿಪಟುಗಳು ಲೈಂಗಿಕ ಕಿರುಕುಳ ಆರೋಪ ಹೊರಿಸಿ ದೆಹಲಿಯ ಜಂತರ್​ ಮಂತರ್​ನಲ್ಲಿ ಸರಿ ಸುಮಾರು 2 ತಿಂಗಳುಕಾಲ ಪ್ರತಿಭಟನೆ ನಡೆಸಿದ್ದರು. ಈ ಕಾರಣದಿಂದ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಇದಾದ ಬಳಿಕ ನೂತನ ಸಮಿತಿಗೆ ಚುನಾವಣೆ ನಡೆಸಲು ನಿರ್ಧರಿಸಲಾಗಿತ್ತು.

ಮೊದಲ ಬಾರಿಗೆ ಜುಲೈ 6ಕ್ಕೆ ಈ ಚುನಾವಣೆಗೆ ದಿನ ನಿಗದಿ ಪಡಿಸಲಾಗಿತ್ತು. ಆದರೆ ಡಬ್ಲ್ಯುಎಫ್ಐಯಿಂದ ಮಾನ್ಯತೆ ಕಳೆದುಕೊಂಡ 5 ರಾಜ್ಯಗಳ ಘಟಕಗಳು ಮತದಾನದ ಹಕ್ಕು ಕೋರಿ ಅಹವಾಲು ಸಲ್ಲಿಸಿದ್ದವು ಇದರಿಂದ ಒಲಿಂಪಿಕ್​ ಸಂಸ್ಥೆಯ ಅಡ್​ ಹಾಕ್​ ಸಮಿತಿ(Indian Olympic Association) ಈ ಚುನಾವಣೆಯನ್ನು ಜುಲೈ 11ಕ್ಕೆ ಮುಂದೂಡಿತ್ತು.

ಸರ್ವೋಚ್ಚ ನ್ಯಾಯಾಲಯ ಮಧ್ಯಪ್ರವೇಶ

ಪ್ರತಿ ಬಾರಿ ಒಂದಲ್ಲ ಒಂದು ಸಮಸ್ಯೆಯಿಂದ ಮುಂದೂಡಿಕೆಯಾಗುತ್ತಿದ್ದ ಈ ಚುನಾವಣೆಯ ವಿಚಾರದಲ್ಲಿ ಅಂತಿಮವಾಗಿ ಸ್ವತಃ ಸರ್ವೋಚ್ಚ ನ್ಯಾಯಾಲಯ ಮಧ್ಯಪ್ರವೇಶ ಮಾಡಿ ಜುಲೈ 12ರಂದು ಚುನಾವಣೆ ನಡೆಸಬೇಕೆಂದು ಆದೇಶಿಸಿತ್ತು. ಅದರಂತೆ ಚುನಾವಣೆಯಲ್ಲಿ 24 ರಾಜ್ಯ ಸಂಸ್ಥೆಗಳ 48 ಪ್ರತಿನಿಧಿಗಳು ಭಾಗವಹಿಸಲು ಸಿದ್ಧತೆ ನಡೆಸಿದ್ದರು. ಡಬ್ಲ್ಯುಎಫ್ಐ ಅಧ್ಯಕ್ಷ, ಉಪಾಧ್ಯಕ್ಷ, ನಾಲ್ಕು ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಖಜಾಂಚಿ, ಇಬ್ಬರು ಜಂಟಿ ಕಾರ್ಯದರ್ಶಿಗಳು ಮತ್ತು ಐದು ಕಾರ್ಯಕಾರಿ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಬೇಕಿತ್ತು. ಆದರೆ ಹರಿಯಾಣ ಕುಸ್ತಿ ಅಸೋಸಿಯೇಶನ್‌ (ಎಚ್‌ಡಬ್ಲ್ಯುಎ) ಸಲ್ಲಿಸಿದ ದೂರಿನ ಆಧಾರದಲ್ಲಿ ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌(Punjab and Haryana High Court) ಚುನಾವಣೆಗೆ ತಡೆಯಾಜ್ಞೆ ನೀಡಿತ್ತು. ಹೀಗಾಗಿ ಮೂರನೇ ಬಾರಿಯೂ ಚುನಾವಣೆ ಮುಂದೂಡಿಕೆಯಾಗಿತ್ತು.

ಇದನ್ನೂ ಓದಿ WFI Election : ಲೈಂಗಿಕ ಕಿರುಕುಳ ಪ್ರಕರಣದ ಸಾಕ್ಷಿಯೇ ಅಧ್ಯಕ್ಷ ಸ್ಥಾನದ ಆಕಾಂಕ್ಷಿ

ಇದೀಗ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿರುವ ಸರ್ವೋಚ್ಚ ನ್ಯಾಯಾಲಯ ಇನ್ನು ಯಾವುದೇ ಕಾರಣಕ್ಕು ಈ ಚುನಾವಣೆ ಮುಂದೂಡಿಕೆ ಕಾಣಬಾರದು ಎಂದು ಖಡಕ್​ ಆಗಿ ಎಲ್ಲ ಕುಸ್ತಿ ಅಸೋಸಿಯೇಶನ್​ಗೆ ಎಚ್ಚರಿಕೆ ನೀಡಿದೆ. 4ನೇ ಪ್ರಯತ್ನದಲ್ಲಿ ಬುನಾವಣೆ ನಡೆಯುವ ಖಚಿತವಾಗಿದೆ.

ಎಚ್ಚರಿಕೆ ನೀಡಿದ್ದ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಫೆಡರೇಶನ್

ನಿಗದಿತ ಸಮಯಕ್ಕೆ ಚುನಾವಣೆಗಳನ್ನು ನಡೆಸಲುವಲ್ಲಿ ವಿಫಲವಾದ ಕಾರಣ ಭಾರತದ ಕುಸ್ತಿ ಫೆಡರೇಶನ್(WFI) ವಿರುದ್ಧ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್(UWW) ಕಠಿಣ ಕ್ರಮವನ್ನು ಕೈಗೊಂಡಿದ್ದು, ಸದಸ್ಯತ್ವವನ್ನು ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸುವ(Wrestling Federation of India membership suspended) ನಿರ್ಧಾರವನ್ನು ತೆಗೆದುಕೊಂಡಿತ್ತು.

Exit mobile version