WFI Suspension: ನೂತನ ಆಡಳಿತ ಮಂಡಳಿ ಅಮಾನತು ಪ್ರಶ್ನಿಸಿ ಮುಂದಿನ ವಾರ ಕೋರ್ಟ್ ಮೆಟ್ಟಿಲೇರಲಿದೆ ಕುಸ್ತಿ ಒಕ್ಕೂಟ - Vistara News

ಕ್ರೀಡೆ

WFI Suspension: ನೂತನ ಆಡಳಿತ ಮಂಡಳಿ ಅಮಾನತು ಪ್ರಶ್ನಿಸಿ ಮುಂದಿನ ವಾರ ಕೋರ್ಟ್ ಮೆಟ್ಟಿಲೇರಲಿದೆ ಕುಸ್ತಿ ಒಕ್ಕೂಟ

ಕೇಂದ್ರ ಕ್ರೀಡಾ ಸಚಿವಾಲಯದ ಕ್ರಮವನ್ನು ಪ್ರಶ್ನಿಸಿ ಮುಂದಿನ ವಾರ ನ್ಯಾಯಾಲಯದ ಮೊರೆ ಹೋಗಲು ಡಬ್ಲ್ಯುಎಫ್‌ಐ ನಿರ್ಧರಿಸಿದೆ.

VISTARANEWS.COM


on

Sanjay Singh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತೀಯ ಕುಸ್ತಿ ಒಕ್ಕೂಟದ ಆಡಳಿತ ಮಂಡಳಿಯನ್ನು ಅಮಾನತು(WFI Suspension) ಮಾಡಿರುವ ಕೇಂದ್ರ ಕ್ರೀಡಾ ಸಚಿವಾಲಯದ ಕ್ರಮವನ್ನು ಪ್ರಶ್ನಿಸಿ ಮುಂದಿನ ವಾರ ನ್ಯಾಯಾಲಯದ ಮೊರೆ ಹೋಗಲು ಡಬ್ಲ್ಯುಎಫ್‌ಐ ನಿರ್ಧರಿಸಿದೆ. ಜತೆಗೆ ಮುಂದಿನ ನಡೆಯ ಬಗ್ಗೆ ಚರ್ಚಿಸಲು ಜನವರಿ 16 ರಂದು ದೆಹಲಿಯಲ್ಲಿ ಕಾರ್ಯಕಾರಿ ಸಮಿತಿ ಸಭೆ ಕರೆದಿದೆ.

ರಾಷ್ಟ್ರೀಯ ಕ್ರೀಡಾ ಸಂಹಿತೆ ಉಲ್ಲಂಘನೆ ಮತ್ತು ಕುಸ್ತಿ ಒಕ್ಕೂಟದ ಆಡಳಿತ ಸಂವಿಧಾನ ಉಲ್ಲಂಘನೆ ಮಾಡಿದ ಕಾರಣದಿಂದ ಕೇಂದ್ರ ಸರ್ಕಾರ ಡಿಸೆಂಬರ್ 24 ರಂದು ಕುಸ್ತಿ ಫೆಡರೇಶನ್​ನ ನೂತನ ಆಡಳಿತ ಮಂಡಳಿಯನ್ನು ಅಮಾನತುಗೊಳಿಸಿದೆ. ಇದೇ ವಿಚಾರವಾಗಿ ನೂತನ ಅಧ್ಯಕ್ಷ ಸಂಜಯ್​ ಸಿಂಗ್​ ಸಚಿವಾಲಯದ ಕ್ರಮವನ್ನು ಪ್ರಶ್ನಿಸಿ ಕೋರ್ಟ್​ ಮೆಟ್ಟಿಲೇರಲಿದ್ದಾರೆ.

“ಇದೇ ವಿಚಾರವಾಗಿ ಮಾತನಾಡಿದ ಸಂಜಯ್ ಸಿಂಗ್, ನಮಗೆ ಸರಿಯಾಗಿ ಕಾರ್ಯನಿರ್ವಹಿಸುವ ಫೆಡರೇಶನ್ ಅಗತ್ಯವಿದೆ. ನಾವು ಮುಂದಿನ ವಾರ ಈ ವಿಷಯವನ್ನು ನ್ಯಾಯಾಲಯಕ್ಕೆ ಕೊಂಡೊಯ್ಯುತ್ತೇವೆ. ನಾವು ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿರುವುದರಿಂದ ಈ ಅಮಾನತು ಸ್ವೀಕಾರಾರ್ಹವಲ್ಲ” ಎಂದು ಮಾಧ್ಯಮದ ಮುಂದೆ ಹೇಳಿದರು.

ಇದನ್ನೂ ಓದಿ WFI Office: ಬ್ರಿಜ್​ ಭೂಷಣ್​ ಮನೆಯಿಂದ ಭಾರತೀಯ ಕುಸ್ತಿ ಒಕ್ಕೂಟದ ಕಚೇರಿ ಸ್ಥಳಾಂತರ

‘ಕೇಂದ್ರ ಕ್ರೀಡಾ ಸಚಿವಾಲಯ ಸರಿಯಾದ ಕಾರ್ಯವಿಧಾನವನ್ನು ಅನುಸರಿಸಿಲ್ಲ. ಸ್ವಾಯತ್ತ ಮತ್ತು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸಂಸ್ಥೆಯನ್ನು ಸರ್ಕಾರವು ಈ ರೀತಿ ಏಕಾಏಕಿ ಅಮಾನತುಗೊಳಿಸಲು ಸಾಧ್ಯವಿಲ್ಲ. ಈ ನಿರ್ಧಾರವನ್ನು ಹಿಂಪಡೆಯದಿದ್ದರೆ ಕೋರ್ಟ್​ ಮೆಟ್ಟಿಲೇರಲಾಗುದು’ ಎಂದು ಕಳೆದ ವಾರ ಸಂಜಯ್​ ಸಿಂಗ್​ ಎಎನ್​ಐ ಜತೆ ಹೇಳಿದ್ದರು. ಇದೀಗ ಕೋರ್ಟ್​ಗೆ ಹೋಗಲು ಸಿದ್ದರಾಗಿದ್ದಾರೆ.

ಸಂಜಯ್​ ಸಿಂಗ್ ಅವರು ಮಾಜಿ ಅಧ್ಯಕ್ಷ ಮತ್ತು ಲೈಗಿಂಕ ಕಿರುಕುಳದ ಆರೋಪ ಹೊತ್ತಿರುವ ಬ್ರಿಜ್​ ಭೂಷನ್​ ಶರಣ್​ ಸಿಂಗ್​ ಆಪ್ತರಾಗಿರುವ ಕಾರಣ ಇದನ್ನು ವಿರೋಧಿಸಿ ಸಾಕ್ಷಿ ಸಿಂಗ್​ ಕುಸ್ತಿಗೆ ನಿವೃತ್ತಿ ಘೋಷಿಸಿದ್ದರು. ಭಜರಂಗ್​ ಪೂನಿಯಾ ಪದ್ಮಶ್ರೀ ಪ್ರಶ್ತಿಯನ್ನು, ವಿನೇಶ್​ ಫೋಗಟ್​ ಖೇಲ್ ರತ್ನ ಹಾಗೂ ಅರ್ಜುನ ಪ್ರಶಸ್ತಿಯನ್ನು ಕೇಂದ್ರ ಸರ್ಕಾರಕ್ಕೆ ಹಿಂದಿರುಗಿಸಿದ್ದರು.

ಅಮಾನತುಗೊಂಡಿರುವ ರಾಷ್ಟ್ರೀಯ ಕುಸ್ತಿ ಸಂಸ್ಥೆಯ(WFI) ದೈನಂದಿನ ವ್ಯವಹಾರಗಳನ್ನು ನಡೆಸಲು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​(IOA) ತ್ರಿಸದಸ್ಯರ ತಾತ್ಕಾಲಿಕ ಸಮಿತಿ ರಚಿಸಿದೆ. ವುಶು ಅಸೋಸಿಯೇಷನ್ ​​ಆಫ್ ಇಂಡಿಯಾ ಅಧ್ಯಕ್ಷ ಭೂಪಿಂದರ್ ಸಿಂಗ್ ಬಾಜ್ವಾ ಅವರು ಸಮಿತಿಯ ಅಧ್ಯಕ್ಷರಾಗಿದ್ದು, ಹಾಕಿ ಒಲಿಂಪಿಯನ್ ಎಂಎಂ ಸೋಮಯ್ಯ ಮತ್ತು ಮಾಜಿ ಅಂತಾರಾಷ್ಟ್ರೀಯ ಶಟ್ಲರ್ ಮಂಜುಷಾ ಕನ್ವರ್ ಈ ಸಮಿತಿಯ ಸದಸ್ಯರಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

PARIS 2024 OLYMPICS: ಶೂಟಿಂಗ್​ನಲ್ಲಿ ಭಾರತಕ್ಕೆ ಮತ್ತೊಂದು ಸೋಲು

Paris Olympics 2024: ಸರಬ್ಜೋತ್​ ಸಿಂಗ್(Sarabjot Singh) ನಾಲ್ಕನೇ ಸುತ್ತಿನಲ್ಲಿ 100ಕ್ಕೆ 100 ಅಂಕ ಗಳಿಸಿ ಮೂರನೇ ಸ್ಥಾನಕ್ಕೇರಿದ್ದರೂ ಕೂಡ ಆ ಬಳಿಕದ ಪ್ರಧಾನ 2 ಸುತ್ತುಗಳಲ್ಲಿ ಹಿನ್ನಡೆ ಅನುಭವಿಸಿ 9ನೇ ಸ್ಥಾನ ಪಡೆದು ಕೂದಲೆಳೆ ಅಂತರದಲ್ಲಿ ಫೈನಲ್​ಗೆರುವ ಅರ್ಹತೆಯಿಂದ ವಂಚಿತರಾದರು.

VISTARANEWS.COM


on

PARIS 2024 OLYMPICS
Koo

ಪ್ಯಾರಿಸ್​: ಶೂಟಿಂಗ್​ ವಿಭಾಗದಲ್ಲಿ((PARIS 2024 OLYMPICS)) ಭಾರತಕ್ಕೆ ಮತ್ತೆ ಹಿನ್ನಡೆಯಾಗಿದೆ. ಬೆಳಗ್ಗೆ ನಡೆದಿದ್ದ 10 ಮೀ. ಏರ್​ ರೈಫಲ್​ ಮಿಶ್ರ ತಂಡ ಸೋಲು ಕಂಡ ಬೆನ್ನಲ್ಲೇ ಇದೀಗ ಪುರುಷರ 10 ಮೀಟರ್‌ ಏರ್‌ ಪಿಸ್ತೂಲ್‌(Men’s 10m air pistol qualification) ವಿಭಾಗದಲ್ಲಿ ಭಾರತೀಯ ಶೂಟರ್​ಗಳಾದ ಸರಬ್ಜೋತ್​ ಸಿಂಗ್​(9ನೇ) ಮತ್ತು ಅರ್ಜುನ್​ ಸಿಂಗ್ ಚಿಮಾ(​18) ಅಗ್ರ 8ರೊಳಗೆ ಸ್ಥಾನ ಪಡೆಯುವಲ್ಲಿ ವಿಫಲರಾಗಿ ಕೂಟದಿಂದ ಹೊರಬಿದ್ದರು.

ಸರಬ್ಜೋತ್​ ಸಿಂಗ್ ಒಟ್ಟು ಆರು ಸುತ್ತಿನ ಪಂದ್ಯದಲ್ಲಿ 577 ಅಂಕ ಗಳಿಸಿ 9ನೇ ಸ್ಥಾನ ಪಡೆದರೆ, ಅರ್ಜುನ್​ ಸಿಂಗ್(ARJUN CHEEMA) 574 ಅಂಕ ಗಳಿಸಿದರು. ಸರಬ್ಜೋತ್​ ಸಿಂಗ್(Sarabjot Singh) ನಾಲ್ಕನೇ ಸುತ್ತಿನಲ್ಲಿ 100ಕ್ಕೆ 100 ಅಂಕ ಗಳಿಸಿ ಮೂರನೇ ಸ್ಥಾನಕ್ಕೇರಿದ್ದರು. ಈ ವೇಳೆ ಅವರು ಫೈನಲ್​ ಪ್ರವೇಶ ಪಡೆಯುವುದು ಖಚಿತ ಎಂದು ನಿರೀಕ್ಷಿಸಲಾಗಿತ್ತು. ಆದರೆ ಆ ಬಳಿಕದ ಪ್ರಧಾನ 2 ಸುತ್ತುಗಳಲ್ಲಿ ಹಿನ್ನಡೆ ಅನುಭವಿಸಿ 9ನೇ ಸ್ಥಾನ ಪಡೆದು ಕೂದಲೆಳೆ ಅಂತರದಲ್ಲಿ ಫೈನಲ್​ಗೆರುವ ಅರ್ಹತೆಯಿಂದ ವಂಚಿತರಾದರು. ಅಗ್ರ 8 ಸ್ಥಾನ ಪಡೆದ ಶೂಟರ್​ಗಳು ನೇರವಾಗಿ ಫೈನಲ್​ಗೆ ಲಗ್ಗೆಯಿಟ್ಟರು.

ಇದಕ್ಕೂ ಮುನ್ನ ನಡೆದಿದ್ದ 10 ಮೀ. ಏರ್​ ರೈಫಲ್​ ಮಿಶ್ರ ತಂಡ ವಿಭಾಗದಲ್ಲಿ ಭಾರತ ಸೋಲು ಕಂಡು ಪದಕ ಸುತ್ತಿಗೇರುವಲ್ಲಿ ವಿಫಲವಾಗಿತ್ತು. ಸಂದೀಪ್​ ಸಿಂಗ್​-ಇಲವೆನಿಲ್​ ವಲರಿವನ್​ ಜೋಡಿ 12ನೇ ಸ್ಥಾನ ಪಡೆದರೆ, ಅರ್ಜುನ್​ ಬಬುಟ-ರಮಿತಾ ಜಿಂದಾಲ್ ಜೋಡಿ 6ನೇ ಸ್ಥಾನ ಪಡೆಯಿತು. ಈ ಜೋಡಿ ಒಟ್ಟು 628.7 ಅಂಕಗಳಿಸಿದರೆ, ಸಂದೀಪ್​ ಸಿಂಗ್​-ಇಲವೆನಿಲ್ ಜೋಡಿ 626.3 ಅಂಕ ಗಳಿಸಿತು. ಇದರೊಂದಿಗೆ 10 ಮೀ. ಏರ್​ ರೈಫಲ್​ ಮಿಶ್ರ ಸ್ಪರ್ಧೆಯಲ್ಲಿ ಭಾರತದ ಎರಡೂ ತಂಡಗಳು ಕೂಡ ಪದಕ ಸುತ್ತಿಗೇರುವಲ್ಲಿ ವಿಫಲವಾಯಿತು. ಚೀನಾ, ಕೊರಿಯಾ, ಜರ್ಮನಿ ಮತ್ತು ಕಝಾಕಿಸ್ತಾನ್ ಪದಕ ಸುತ್ತಿಗೆ ಪ್ರವೇಶಿಸಿತು.

ಇದನ್ನೂ ಓದಿ Paris Olympics: ಶುಭಾರಂಭದ ನಿರೀಕ್ಷೆಯಲ್ಲಿ ಪುರುಷರ ಹಾಕಿ ತಂಡ; ಕಿವೀಸ್​ ಎದುರಾಳಿ

ರೋಯಿಂಗ್​ನಲ್ಲಿ ಮುನ್ನಡೆ ಸಾಧಿಸಿದ ಬಾಲರಾಜ್


ಸದ್ಯ ಭಾರತಕ್ಕೆ ಶನಿವಾರ ಶುಭ ಸುದ್ದಿ ಲಭಿಸಿದ್ದು ರೋಯಿಂಗ್​ ವಿಭಾಗದಲ್ಲಿ ಮಾತ್ರ. ಪುರುಷರ ಸಿಂಗಲ್ ಸ್ಕಲ್ಸ್ ಹೀಟ್ಸ್​ನಲ್ಲಿ ಕಣಕ್ಕಿಳಿದ್ದ ಬಾಲರಾಜ್ ಪನ್ವಾರ್ ನಾಲ್ಕನೇ ಸ್ಥಾನಿಯಾಗಿ ರೆಪೆಚೇಜ್ ರೌಂಡ್​ಗೆ ಅರ್ಹತೆ ಪಡೆದಿದ್ದಾರೆ. ಈ ಪಂದ್ಯ ನಾಳೆ(ಭಾನುವಾ) ನಡೆಯಲಿದೆ.

Continue Reading

ಕ್ರಿಕೆಟ್

Ashwini Puneeth Rajkumar: ಅಪ್ಪು ಕಪ್‌ ಸೀಸನ್‌ 2ಗೆ ಚಾಲನೆ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!

Ashwini Puneeth Rajkumar: ಸೀಸನ್‌ 1 ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಅದ್ದೂರಿಯಾಗಿ ಸೀಸನ್‌ 2 ಅನ್ನು ಆಯೋಜಿಸಲಾಗಿದೆ. ಇತ್ತೀಚೆಗೆ ಅಪ್ಪು ಕಪ್‌ ಸೀಸನ್‌ 2 ಆಕರ್ಷಕ ಟ್ರೋಫಿ ಜೊತೆಗೆ ತಂಡಗಳ ಜೆರ್ಸಿಗಳನ್ನು ಅನಾವರಣಗೊಳಿಸಲಾಗಿತ್ತು. ಇದೀಗ ಅದ್ದೂರಿಯಾಗಿ ಪಂದ್ಯಾವಳಿಗಳನ್ನು ಆರಂಭಿಸಲಾಗಿದ್ದು, ಅಂತಿಮ ವಿಜೇತರಿಗೆ ಭಾರೀ ಬಹುಮಾನ ಘೋಷಣೆ ಮಾಡಲಾಗಿದೆ.

VISTARANEWS.COM


on

Ashwini Puneeth Rajkumar launched Appu Cup season 2
Koo

ಬೆಂಗಳೂರು: ಅಪ್ಪು ನೆನಪನ್ನು ಚಿರಸ್ಥಾಯಿಯಾಗಿಸುವ ನಿಟ್ಟಿನಲ್ಲಿ ಅಪ್ಪು ಕಪ್‌ ಸೀಸನ್‌ 2 ಬ್ಯಾಡ್ಮಿಂಟನ್‌ ಟೂರ್ನಿಗೆ ಇಂದು ನಾಗರಬಾವಿಯ ಕಿಂಗ್ಸ್‌ ಕ್ಲಬ್‌ನಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಸ್ಪರ್ಧಾಳುಗಳಿಗೆ ಶುಭ ಕೋರಿ, ಮೊದಲ ಪಂದ್ಯದ ಆರಂಭಕ್ಕೆ ಟಾಸ್‌ ಹಾಕಿದರು.

PRK ಸಂಸ್ಥೆಯ ಸಹಯೋಗದೊಂದಿಗೆ ಚೇತನ್‌ ಸೂರ್ಯ ಅವರು ಈ ಟೂರ್ನಮೆಂಟ್‌ ಅನ್ನು ಆಯೋಜಿಸಿದ್ದು, ಈ ಪಂದ್ಯಾವಳಿಯು ಮೂರು ದಿನಗಳ ಕಾಲ ನಡೆಯಲಿದೆ. ಅಪ್‌ ಕಪ್‌ ಸೀಸನ್‌ 2ನಲ್ಲಿ ಹತ್ತು ತಂಡಗಳು ಭಾಗವಹಿಸಲಿದ್ದು, ಸಿನಿಮಾ, ಧಾರಾವಾಹಿ ಮತ್ತು ಮಾಧ್ಯಮದವರು ಆಡಲಿದ್ದಾರೆ.

ಸೀಸನ್‌ 1 ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಅದ್ದೂರಿಯಾಗಿ ಸೀಸನ್‌ 2 ಅನ್ನು ಆಯೋಜಿಸಲಾಗಿದೆ. ಇತ್ತೀಚೆಗೆ ಅಪ್ಪು ಕಪ್‌ ಸೀಸನ್‌ 2 ಆಕರ್ಷಕ ಟ್ರೋಫಿ ಜೊತೆಗೆ ತಂಡಗಳ ಜೆರ್ಸಿಗಳನ್ನು ಅನಾವರಣಗೊಳಿಸಲಾಗಿತ್ತು. ಇದೀಗ ಅದ್ದೂರಿಯಾಗಿ ಪಂದ್ಯಾವಳಿಗಳನ್ನು ಆರಂಭಿಸಲಾಗಿದ್ದು, ಅಂತಿಮ ವಿಜೇತರಿಗೆ ಭಾರೀ ಬಹುಮಾನ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಕಾರ್ಯಕ್ರಮದಲ್ಲಿ ಮೀಡಿಯಾ ಕನೆಕ್ಟ್‌ ಸಂಸ್ಥಾಪಕಿ ಹಾಗೂ ಸಿಇಒ ದಿವ್ಯಾ ರಂಗೇನಹಳ್ಳಿ, ಡಿಪಿಐಎಸ್ ಫೌಂಡರ್‌, ಚೇರ್‌ಪರ್ಸನ್ ಸುನಿತಾ ಗೌಡ, ‌ಹಿರಿಯ ನಿರ್ಮಾಕರಾದ ಸಾರಾ ಗೋವಿಂದು ಉಪಸ್ಥಿತರಿದ್ದರು.

Continue Reading

ಕ್ರೀಡೆ

Womens Asia Cup Final: 8ನೇ ಪ್ರಶಸ್ತಿ ನಿರೀಕ್ಷೆಯಲ್ಲಿ ಭಾರತ; ನಾಳೆ ಫೈನಲ್​

Womens Asia Cup Final:ಮಹಿಳಾ ಏಷ್ಯಾ ಕಪ್​ ಈವರೆಗಿನ 8 ಕೂಟಗಳಲ್ಲಿ ಭಾರತ 7 ಸಲ ಚಾಂಪಿಯನ್‌ ಆಗುವ ಮೂಲಕ ಪ್ರಭುತ್ವ ಸಾಧಿಸಿದೆ. ಸೋಲು ಕಂಡಿದ್ದು ಒಮ್ಮೆ ಮಾತ್ರ. ಅದು 2018ರಲ್ಲಿ ಬಾಂಗ್ಲಾದೇಶ ವಿರುದ್ಧ. ಅಂದಿನ ಫೈನಲ್​ ಪಂದ್ಯದಲ್ಲಿ ಭಾರತ 3 ವಿಕೆಟ್‌ ಅಂತರದಿಂದ ಸೋಲನುಭವಿಸಿ ಪ್ರಶಸ್ತಿಯಿಂದ ವಂಚಿತವಾಗಿತ್ತು.

VISTARANEWS.COM


on

Womens Asia Cup Final
Koo

ದಾಂಬುಲಾ (ಶ್ರೀಲಂಕಾ): ಮಹಿಳಾ ಏಷ್ಯಾಕಪ್​ ಫೈನಲ್​(Womens Asia Cup Final) ಪಂದ್ಯಕ್ಕೆ ವೇದಿಕೆ ಸಿದ್ಧಗೊಂಡಿದೆ. ನಾಳೆ ನಡೆಯುವ ಫೈನಲ್​ ಹಣಾಹಣಿಯಲ್ಲಿ ಹಾಲಿ ಚಾಂಪಿಯನ್​ ಭಾರತ ಮತ್ತು ಶ್ರೀಲಂಕಾ(India Women vs Sri Lanka Women Final) ಪ್ರಶಸ್ತಿಗಾಗಿ ಕಾದಾಟ ನಡೆಸಲಿವೆ. 7 ಬಾರಿಯ ಚಾಂಪಿಯನ್​ ಭಾರತವೇ ಈ ಬಾರಿಯೂ ಪ್ರಶಸ್ತಿ ಗೆಲ್ಲುವ ಹಾಟ್‌ ಫೇವರಿಟ್‌ ಆಗಿದೆ. ಅತ್ತ ಆತಿಥೇಯ ಲಂಕಾ ಚೊಚ್ಚಲ ಪ್ರಶಸ್ತಿ ಗೆಲ್ಲುವ ಇದಾರೆಯಲ್ಲಿದೆ. ಇತ್ತಂಡಗಳು ಕೂಡ ಈ ಬಾರಿ ಅಜೇಯ ತಂಡಗಳಾಗಿ ಫೈನಲ್​ಗೆ ಲಗ್ಗೆಯಿಟ್ಟಿದೆ. ಹೀಗಾಗಿ ಈ ಪಂದ್ಯದವನ್ನು ಹೈವೋಲ್ಟೇಜ್​ ಎಂದು ನಿರೀಕ್ಷೆ ಮಾಡಬಹುದು.

ಮಹಿಳಾ ಏಷ್ಯಾ ಕಪ್​ ಈವರೆಗಿನ 8 ಕೂಟಗಳಲ್ಲಿ ಭಾರತ 7 ಸಲ ಚಾಂಪಿಯನ್‌ ಆಗುವ ಮೂಲಕ ಪ್ರಭುತ್ವ ಸಾಧಿಸಿದೆ. ಸೋಲು ಕಂಡಿದ್ದು ಒಮ್ಮೆ ಮಾತ್ರ. ಅದು 2018ರಲ್ಲಿ ಬಾಂಗ್ಲಾದೇಶ ವಿರುದ್ಧ. ಅಂದಿನ ಫೈನಲ್​ ಪಂದ್ಯದಲ್ಲಿ ಭಾರತ 3 ವಿಕೆಟ್‌ ಅಂತರದಿಂದ ಸೋಲನುಭವಿಸಿ ಪ್ರಶಸ್ತಿಯಿಂದ ವಂಚಿತವಾಗಿತ್ತು.

6ನೇ ಬಾರಿ ಭಾರತ-ಲಂಕಾ ಫೈನಲ್​ ಮುಖಾಮುಖಿ


ಇದುವರೆಗಿನ ಮಹಿಳಾ ಏಷ್ಯಾಕಪ್​ ಟೂರ್ನಿಯಲ್ಲಿ ಭಾರತ ಮತ್ತು ಶ್ರೀಲಂಕಾ 5 ಬಾರಿ ಫೈನಲ್​ ಮುಖಾಮುಖಿಯಾಗಿವೆ. ಎಲ್ಲ ಪಂದ್ಯಗಳನ್ನು ಭಾರತವೇ ಗೆದ್ದು ಬೀಗಿದೆ. ಈ ಬಾರಿಯದ್ದು 6ನೇ ಮುಖಾಮುಖಿ. 6ನೇ ಪ್ರಯತ್ನದಲ್ಲಾದರೂ ಲಂಕಾ ಪ್ರೋಫಿ ಗೆಲ್ಲಬಹುದೇ ಎಂಬ ಪ್ರಶ್ನೆಗೆ ನಾಳೆ ಉತ್ತರ ಸಿಗಲಿದೆ.

ಭಾರತ ಪರ ಬ್ಯಾಟಿಂಗ್​ನಲ್ಲಿ ಆರಂಭಿಕ ಆಟಗಾರ್ತಿಯರಾದ ಶಫಾಲಿ ವರ್ಮ ಮತ್ತು ಸ್ಮೃತಿ ಮಂಧಾನ ಎಲ್ಲ ಪಂದ್ಯಗಲ್ಲಿಯೂ ಶ್ರೇಷ್ಠ ಪ್ರದರ್ಶನ ತೋರಿದ್ದಾರೆ. ಶಫಾಲಿ 184 ರನ್​ ಗಳಿಸಿ ಕೂಟದ ಅತ್ಯಧಿಕ ರನ್​ ಗಳಿಸಿದ ಆಟಗಾರ್ತಿಯಲ್ಲಿ 2ನೇ ಸ್ಥಾನ ಪಡೆದಿದ್ದಾರೆ. ಬೌಲಿಂಗ್ ವಿಭಾಗ ತುಂಬಾನೆ ಘಾತಕವಾಗಿದೆ. ಸ್ಪಿನ್ನ್​ ಮತ್ತು ವೇಗದ ವಿಭಾಗದಲ್ಲಿ ಸಮತೋಲಿತವಾಗಿದೆ. ರಾಧಾ ಯಾದವ್​, ಆಲ್​ರೌಂಡರ್​ ದೀಪ್ತಿ ಶರ್ಮಾ ತಂಡದ ಸ್ಪಿನ್ನರ್​ಗಳಾದರೆ, ವೇಗಿ ರೇಣುಕಾ ಸಿಂಗ್​ ಮತ್ತು ಪೂಜಾ ವಸ್ತ್ರಾಕರ್​ ವೇಗಿಗಳಾಗಿದ್ದಾರೆ.

ಇದನ್ನೂ ಓದಿ Womens Asia Cup T20: ಬಾಂಗ್ಲಾ ಮಣಿಸಿ ಫೈನಲ್​ ಪ್ರವೇಶಿಸಿದ ಭಾರತ

ಲಂಕಾ ಕೂಡ ಬಲಿಷ್ಠ


ಎದುರಾಳಿ ಶ್ರೀಲಂಕಾ ಕೂಡ ಭಾರತದ ಹಾಗೆ ಬಲಿಷ್ಠವಾಗಿದೆ. ಅದರಲ್ಲೂ ಕೂಟದ ಗರಿಷ್ಠ ಸ್ಕೋರರ್​ ಎನಿಸಿಕೊಂಡಿರುವ ನಾಯಕಿ ಚಾಮರಿ ಅತಪಟ್ಟು ಪ್ರಚಂಡ ಬ್ಯಾಟಿಂಗ್​ ಫಾರ್ಮ್​ನಲ್ಲಿದ್ದಾರೆ. ಒಂದು ಶತಕ ಕೂಡ ಬಾರಿಸಿದ್ದಾರೆ. ಆಡಿದ 4 ಪಂದ್ಯಗಳಿಂದ 243 ರನ್​ ಕಲೆ ಹಾಕಿದ್ದಾರೆ. ಇವರನ್ನು ಹೆಚ್ಚು ಹೊತ್ತು ಕ್ರೀಸ್​ ಆಕ್ರಮಿಸದಂತೆ ಭಾರತೀಯ ಬೌಲರ್​ಗಳು ನೋಡಿಕೊಂಡರೆ ಅರ್ಧ ಪಂದ್ಯ ಗೆದ್ದಂತೆ. ನಿನ್ನೆ ನಡೆದಿದ್ದ ಸೆಮಿಫೈನಲ್​ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾವನ್ನು ಮಣಿಸಿದರೆ, ಶ್ರೀಲಂಕಾ ಪಾಕಿಸ್ತಾನವನ್ನು ಸೋಲಿಸಿ ಫೈನಲ್​ ಪ್ರವೇಶಿಸಿತ್ತು.

ಸಂಭಾವ್ಯ ತಂಡಗಳು


ಶ್ರೀಲಂಕಾ: ವಿಶ್ಮಿ ಗುಣರತ್ನೆ, ಚಾಮರಿ ಅಟಪಟ್ಟು (ನಾಯಕಿ), ಹರ್ಷಿತಾ ಸಮರವಿಕ್ರಮ, ಹಾಸಿನಿ ಪೆರೇರಾ, ಅನುಷ್ಕಾ ಸಂಜೀವನಿ (ವಾಕ್), ಕವಿಶಾ ದಿಲ್ಹಾರಿ, ನೀಲಾಕ್ಷಿ ಡಿ ಸಿಲ್ವಾ, ಇನೋಶಿ ಪ್ರಿಯದರ್ಶನಿ, ಉದೇಶಿಕಾ ಪ್ರಬೋಧನಿ, ಸುಗಂದಿಕಾ ಕುಮಾರಿ, ಅಚಿನಿ ಕುಲಸೂರ್ಯ.

ಭಾರತ: ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಉಮಾ ಚೆಟ್ರಿ, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೀ), ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ರಾಧಾ ಯಾದವ್, ತನುಜಾ ಕನ್ವರ್, ರೇಣುಕಾ ಠಾಕೂರ್ ಸಿಂಗ್.

Continue Reading

ಕ್ರೀಡೆ

Paris Olympic: ರೋಯಿಂಗ್​ನಲ್ಲಿ ಶುಭ ಸುದ್ದಿ; ಶೂಟಿಂಗ್​ನಲ್ಲಿ ನಿರಾಸೆ ಮೂಡಿಸಿದ ಮಿಶ್ರ ತಂಡ

Paris Olympic: 10 ಮೀ. ಏರ್​ ರೈಫಲ್​ ಮಿಶ್ರ ಸ್ಪರ್ಧೆಯಲ್ಲಿ ಭಾರತದ ಎರಡೂ ತಂಡಗಳು ಕೂಡ ಪದಕ ಸುತ್ತಿಗೇರುವಲ್ಲಿ ವಿಫಲವಾಯಿತು. ಚೀನಾ, ಕೊರಿಯಾ, ಜರ್ಮನಿ ಮತ್ತು ಕಝಾಕಿಸ್ತಾನ್ ಪದಕ ಸುತ್ತಿಗೆ ಪ್ರವೇಶಿಸಿತು.

VISTARANEWS.COM


on

Paris Olympic
Koo

ಪ್ಯಾರಿಸ್​: ಒಲಿಂಪಿಕ್ಸ್​(Paris Olympic) ಶೂಟಿಂಗ್​ನಲ್ಲಿ ಪದಕ ನಿರೀಕ್ಷೆ ಮಾಡಿದ್ದ ಭಾರತೀಯ ಕ್ರಿಡಾಭಿಮಾನಿಗಳಿಗೆ ಮೊದಲ ದಿನವೇ ನಿರಾಸೆಯಾಗಿದೆ. ಇಂದು(ಶನಿವಾರ) ನಡೆದ 10 ಮೀ. ಏರ್​ ರೈಫಲ್​ ಮಿಶ್ರ ತಂಡ ವಿಭಾಗದಲ್ಲಿ ಭಾರತ ಸೋಲು ಕಂಡು ಪದಕ ಸುತ್ತಿಗೇರುವಲ್ಲಿ ವಿಫಲವಾಯಿತು. ಆದರೆ ರೋಯಿಂಗ್​ನಲ್ಲಿ ಬಾಲರಾಜ್ ಪನ್ವಾರ್(Balraj Panwar) ಹೀಟ್ಸ್​ನಲ್ಲಿ 4ನೇ ಸ್ಥಾನ ಪಡೆಯುವ ಮೂಲಕ ರೆಪೆಚೇಜ್ ರೌಂಡ್​ಗೆ ಅರ್ಹತೆ ಪಡೆದಿದ್ದಾರೆ. ಈ ಪಂದ್ಯ ನಾಳೆ(ಭಾನುವಾ) ನಡೆಯಲಿದೆ.

ಸಂದೀಪ್​ ಸಿಂಗ್​-ಇಲವೆನಿಲ್​ ವಲರಿವನ್​ ಜೋಡಿ 12ನೇ ಸ್ಥಾನ ಪಡೆದರೆ, ಅರ್ಜುನ್​ ಬಬುಟ-ರಮಿತಾ ಜಿಂದಾಲ್ ಜೋಡಿ 6ನೇ ಸ್ಥಾನ ಪಡೆಯಿತು. ಈ ಜೋಡಿ ಒಟ್ಟು 628.7 ಅಂಕಗಳಿಸಿದರೆ, ಸಂದೀಪ್​ ಸಿಂಗ್​-ಇಲವೆನಿಲ್ ಜೋಡಿ 626.3 ಅಂಕ ಗಳಿಸಿತು. ಇದರೊಂದಿಗೆ 10 ಮೀ. ಏರ್​ ರೈಫಲ್​ ಮಿಶ್ರ ಸ್ಪರ್ಧೆಯಲ್ಲಿ ಭಾರತದ ಎರಡೂ ತಂಡಗಳು ಕೂಡ ಪದಕ ಸುತ್ತಿಗೇರುವಲ್ಲಿ ವಿಫಲವಾಯಿತು. ಚೀನಾ, ಕೊರಿಯಾ, ಜರ್ಮನಿ ಮತ್ತು ಕಝಾಕಿಸ್ತಾನ್ ಪದಕ ಸುತ್ತಿಗೆ ಪ್ರವೇಶಿಸಿತು.

ಪುರುಷರ ಸಿಂಗಲ್ ಸ್ಕಲ್ಸ್ ಹೀಟ್ಸ್​ನಲ್ಲಿ ಕಣಕ್ಕಿಳಿದ್ದ ಬಾಲರಾಜ್ ಪನ್ವಾರ್ ಕೊನೆಯ ಹಂತದ ಸುತ್ತಿನವರೆಗೂ ಮೂರನೇ ಸ್ಥಾನ ಕಾಯ್ದುಕೊಂಡಿದ್ದರು. ಆದರೆ ಫಿನಿಶಿಂಗ್​ ಹಂತದ ವೇಳೆ ಹಿನ್ನಡೆ ಅನುಭವಿಸಿ ಅಂತಿಮವಾಗಿ 07:07.11 ನಿಮಿಷದಲ್ಲಿ ಹೀಟ್ಸ್ ಪೂರ್ಣಗೊಳಿಸಿ ನಾಲ್ಕನೇ ಸ್ಥಾನ ಪಡೆದರು.

 

ಇಂದು ನಡೆಯುವ ಪುರುಷರ ಸಿಂಗಲ್ಸ್‌ ಟೆಬಲ್​ ಟೆನಿಸ್​ನಲ್ಲಿ ಅನುಭವಿ ಆಟಗಾರ, 41 ವರ್ಷದ ಶರತ್ ಕಮಲ್ ಅವರು ತಮ್ಮ ಮೊದಲ ಪಂದ್ಯದಲ್ಲಿ ಸ್ಲೊವೆನಿಯಾದ ಡೆನಿ ಕೊಜುಲ್ ವಿರುದ್ಧ ಆಡಲಿದ್ದಾರೆ. ಮತ್ತೋರ್ವ ಭಾರತೀಯ ಆಟಗಾರ, ಗುಜರಾತ್‌ನ 31 ವರ್ಷದ ಹರ್ಮಿತ್ ದೇಸಾಯಿ ಜೋರ್ಡಾನ್‌ನ ಝೈದ್ ಅಬೊ ಯಮನ್ ವಿರುದ್ಧ ಸೆಣಸಲಿದ್ದಾರೆ.

ಮಹಿಳೆಯರ ಸಿಂಗಲ್ಸ್‌ನಲ್ಲಿ ಕಾಮನ್‌ವೆಲ್ತ್‌ ಗೇಮ್ಸ್‌ ಚಿನ್ನದ ಪದಕ ವಿಜೇತೆ, ಈ ಬಾರಿಯ ಪದಕ ಭರಸೆಯ ಆಟಗಾರ್ತಿಯಾಗಿ ಗುರುತಿಸಿಕೊಂಡಿರುವ ಮಣಿಕಾ ಬಾತ್ರಾ ಅವರು ಗ್ರೇಟ್‌ ಬ್ರಿಟನ್‌ನ ಅನಾ ಹರ್ಸೆ ವಿರುದ್ಧ ಸೆಣಸಾಟ ನಡೆಸಲಿದ್ದಾರೆ. ಪಂದ್ಯಾವಳಿ ಆರಂಭಕ್ಕೂ ಮುನ್ನವೇ ಬಾತ್ರ ಕಳೆದ ಬಾರಿಯ ಟೋಕಿಯೊ ಒಲಿಂಪಿಕ್ಸ್​ ತಪ್ಪನ್ನು ಇಲ್ಲಿ ಮರುಕಳಿಸಲ್ಲ ಎಂದು ಹೇಳುವ ಮೂಲಕ ಪದಕ ಗೆಲ್ಲುವು ವಿಶ್ವಾಸ ವ್ಯಕ್ತಪಡಿಸಿದ್ದರು. ಟೋಕಿಯೊ ಒಲಿಂಪಿಕ್ಸ್‌ನಲ್ಲಿ 32ರ ಘಟ್ಟದದ ಪಂದ್ಯದಲ್ಲಿ ಸೋಲು ಕಂಡಿದ್ದರು.

ಪುರುಷರ ತಂಡ ವಿಭಾಗದಲ್ಲಿ ಶರತ್ ಕಮಲ್, ದೇಸಾಯಿ ಮತ್ತು ಮಾನವ್ ಠಕ್ಕರ್ ಕಣಕ್ಕಿಳಿದರೆ, ಮಹಿಳೆಯರ ತಂಡದಲ್ಲಿ ಮಣಿಕಾ, ಶ್ರೀಜಾ ಅಕುಲಾ ಹಾಗೂ ಕರ್ನಾಟಕದ ಅರ್ಚನಾ ಕಾಮತ್ ಸ್ಪರ್ಧಿಸಲಿದ್ದಾರೆ. ಜಿ. ಸತ್ಯನ್, ಐಹಿಕಾ ಮುಖರ್ಜಿ ಮೀಸಲು ಆಟಗಾರರಾಗಿದ್ದಾರೆ. ಶರತ್ ಕಮಲ್ ಅವರಿಗೆ ಇದು ಬಹುತೇಕ ಕೊನಯ ಒಲಿಂಪಿಕ್ಸ್​ ಟೂರ್ನಿಯಾಗಿದೆ. ಹೀಗಾಗಿ ಅವರು ಐತಿಹಾಸಿಕ ಪದಕ ಗೆದ್ದು ತಮ್ಮ ಕ್ರೀಡಾ ವೃತ್ತಿ ಜೀವನನ್ನು ಸ್ಮರಣೀಯಗೊಳಿಸಲಿ ಎನ್ನುವುದು ಭಾರತೀಯರ ಹಾರೈಕೆ.

Continue Reading
Advertisement
PARIS 2024 OLYMPICS
ಕ್ರೀಡೆ54 seconds ago

PARIS 2024 OLYMPICS: ಶೂಟಿಂಗ್​ನಲ್ಲಿ ಭಾರತಕ್ಕೆ ಮತ್ತೊಂದು ಸೋಲು

Road Accident
ದೇಶ7 mins ago

Road Accident: ಕಣಿವೆಗೆ ಉರುಳಿದ ಕಾರು; ಐವರು ಮಕ್ಕಳು ಸೇರಿ 8 ಮಂದಿ ಸಾವು

Ashwini Puneeth Rajkumar launched Appu Cup season 2
ಕ್ರಿಕೆಟ್12 mins ago

Ashwini Puneeth Rajkumar: ಅಪ್ಪು ಕಪ್‌ ಸೀಸನ್‌ 2ಗೆ ಚಾಲನೆ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!

Money Guide
ಮನಿ-ಗೈಡ್31 mins ago

Money Guide: ಐಟಿಆರ್ ಇನ್ನೂ ಸಲ್ಲಿಸಿಲ್ಲವೇ? ಕೊನೆಯ ಕ್ಷಣದ ಗೊಂದಲ ತಪ್ಪಿಸಲು ಈ ಟಿಪ್ಸ್‌ ಫಾಲೋ ಮಾಡಿ

Womens Asia Cup Final
ಕ್ರೀಡೆ54 mins ago

Womens Asia Cup Final: 8ನೇ ಪ್ರಶಸ್ತಿ ನಿರೀಕ್ಷೆಯಲ್ಲಿ ಭಾರತ; ನಾಳೆ ಫೈನಲ್​

dk shivakumar hd kumarswamy
ಪ್ರಮುಖ ಸುದ್ದಿ58 mins ago

DK Shivakumar: ನಮ್ಮ ಸರ್ವನಾಶವೇ ಕುಮಾರಸ್ವಾಮಿ ಅವರ ಆಲೋಚನೆ: ಡಿಸಿಎಂ ಡಿಕೆ ಶಿವಕುಮಾರ್

karnataka high court
ಪ್ರಮುಖ ಸುದ್ದಿ1 hour ago

Karnataka High Court: ʼಚಿಲ್ಲರೆ ಅಂಗಡಿಯವರಲ್ಲೂ ಯುಪಿಐ ಇದೆ, ನಿಮ್ಮಲ್ಲೇಕಿಲ್ಲ?ʼ ಬೆಸ್ಕಾಂಗೆ ಹೈಕೋರ್ಟ್‌ ತರಾಟೆ

Ghuspaithia Hindi movie release on August 9
ಕರ್ನಾಟಕ2 hours ago

Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

2nd International Airport in Bengaluru Another round of discussion was held by Minister MB Patil
ಕರ್ನಾಟಕ2 hours ago

MB Patil: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ; ಪರಿಣತರ ಜತೆ ಎಂ.ಬಿ.ಪಾಟೀಲ್‌ ಸಮಾಲೋಚನೆ

Kanwar Yatra
ದೇಶ2 hours ago

Kanwar Yatra: ಕನ್ವರ್ ಯಾತ್ರೆ ಮಾರ್ಗದಲ್ಲಿನ ಮಸೀದಿ ಕಾಣದಂತೆ ಪರದೆ; ವ್ಯಾಪಕ ವಿರೋಧದ ಬಳಿಕ ತೆರವು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ2 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ3 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ21 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ22 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ23 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌