Site icon Vistara News

IPL 2023: ಚೆನ್ನೈ-ಗುಜರಾತ್​ ಪಂದ್ಯಕ್ಕೆ ಮಳೆ ಬಂದರೆ ಏನು ಗತಿ; ಯಾರಿಗೆ ಒಲಿಯಲಿದೆ ಅದೃಷ್ಟ!

MA Chidambaram Stadium, Chennai

#image_title

ಚೆನ್ನೈ: ಹಾಲಿ ಚಾಂಪಿಯನ್​ ಗುಜರಾತ್​ ಟೈಟನ್ಸ್​ ಮತ್ತು ಚೆನ್ನೈ ಸೂಪರ್​ ಕಿಂಗ್ಸ್​ ನಡುವಣ ಕ್ವಾಲಿಫೈಯರ್‌ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ ಈ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಿದರೆ ಫಲಿತಾಂಶ ನಿರ್ಧಾರ ಹೇಗೆ, ಯಾವ ತಂಡಕ್ಕೆ ಲಾಭ ಎಂಬ ಅಭಿಮಾನಿಗಳ ಆತಂಕಕ್ಕೆ ಇಲ್ಲಿದೆ ಉತ್ತರ.

ಉಭಯ ತಂಡಗಳ ಈ ಕ್ವಾಲಿಫೈಯರ್ ಪಂದ್ಯ ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ. ಸದ್ಯ ಈ ಪಂದ್ಯಕ್ಕೆ ಮಳೆ ಸಾಧ್ಯತೆ ಕಡಿಮೆ. ಆದರೂ ಮಳೆ ಕಾಟ ಇದ್ದರೆ, ಆಗ ಏನಾದಿತು ಎಂಬ ಬಗ್ಗೆ ಹಲವರಿಗೆ ಕುತೂಹಲವೊಂದಿದೆ. ಈ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಿದರೆ ಯಾವುದೇ ಮೀಸಲು ದಿನ ಇಲ್ಲ. ಹೀಗಾಗಿ ಆರಂಭದಲ್ಲಿ ಮಳೆ ಬಿಡುವ ತನಕ ಕಾದು ಓವರ್​ ಕಡಿಮೆಗೊಳಿಸಿ ಪಂದ್ಯ ನಡೆಸಲಾಗುತ್ತದೆ. ಇದು ಕೂಡ ಸಾಧ್ಯವಾಗದಿದ್ದರೆ, ಸೂಪರ್​ ಓವರ್​ ನಡೆಸಲಾಗುತ್ತದೆ. ಒಂದೊಮ್ಮೆ ಪಂದ್ಯ ನಡೆಸಲು ಸಾಧ್ಯವಾಗದೇ ಇದ್ದರೆ, ಆಗ ಅಂಕಪಟ್ಟಿಯಲ್ಲಿ ಯಾರು ಮುಂದಿರುತ್ತಾರೋ ಅವರು ನೇರವಾಗಿ ಫೈನಲ್​ ಪ್ರವೇಶ ಪಡೆಯಲಿದ್ದಾರೆ. ಈ ಲಾಭ ಗುಜರಾತ್​ಗೆ ಸಿಗಲಿದೆ. ಏಕೆಂದರೆ ಗುಜರಾತ್​ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಚೆನ್ನೈ ತಂಡ ಲಕ್ನೋ ಮತ್ತು ಮುಂಬಯಿ ವಿರುದ್ಧದ ವಿಜೇತರನ್ನು ದ್ವಿತೀಯ ಕ್ವಾಲಿಫೈಯರ್​ನಲ್ಲಿ ಎದುರಿಸಲಿದೆ.

ಇದನ್ನೂ ಓದಿ IPL 2023: ಲಕ್ನೋ-ಮುಂಬೈ ಪಂದ್ಯದ ಪಿಚ್​ ರಿಪೋರ್ಟ್​, ಸಂಭಾವ್ಯ ತಂಡಗಳ ಮಾಹಿತಿ

ಬಲಾಬಲ ಹೇಗಿದೆ?

ಒಟ್ಟು ಪಂದ್ಯಗಳು- 03

ಚೆನ್ನೈ ಸೂಪರ್ ಕಿಂಗ್ಸ್​​- 00

ಗುಜರಾತ್​ ಟೈಟನ್ಸ್​- 01

ತಂಡಗಳು

ಚೆನ್ನೈ ಸೂಪರ್ ಕಿಂಗ್ಸ್: ಮಹೇಂದ್ರ ಸಿಂಗ್ ಧೋನಿ(ನಾಯಕ), ರವೀಂದ್ರ ಜಡೇಜಾ, ಡೆವೊನ್ ಕಾನ್ವೇ, ಋತುರಾಜ್ ಗಾಯಕ್ವಾಡ್, ಅಂಬಾಟಿ ರಾಯುಡು, ಸುಬ್ರಾಂಶು ಸೇನಾಪತಿ, ಮೊಯೀನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೇನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹರ್, ತುಷಾರ್ ದೇಶಪಾಂಡೆ, ಆಕಾಶ್ ಸಿಂಗ್, ಮಥೀಶಾ ಪತಿರಾನಾ, ಸಿಮರ್ಜೀತ್ ಸಿಂಗ್, ಪ್ರಶಾಂತ್ ಸೋಲಂಕಿ, ಮಹೀಶ್ ತೀಕ್ಷಾನಾ, ಅಜಿಂಕ್ಯ ರಹಾನೆ, ಬೆನ್ ಸ್ಟೋಕ್ಸ್, ಶೇಖ್ ರಶೀದ್, ನಿಶಾಂತ್ ಸಿಂಧು.

ಗುಜರಾತ್ ಟೈಟನ್ಸ್ (ಜಿಟಿ) : ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ರಶೀದ್ ಖಾನ್, ರಾಹುಲ್ ತೇವಾಟಿಯಾ, ವಿಜಯ್ ಶಂಕರ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಪ್ರದೀಪ್ ಸಾಂಗ್ವಾನ್, ದರ್ಶನ್ ನಲ್ಕಂಡೆ, ಜಯಂತ್ ಯಾದವ್, ಆರ್ ಸಾಯಿ ಕಿಶೋರ್, ನೂರ್ ಅಹ್ಮದ್, ದಸುನ್ ಶನಕಾ, ಒಡಿಯನ್ ಸ್ಮಿತ್, ಕೆಎಸ್ ಭರತ್, ಶಿವಂ ಮಾವಿ, ಉರ್ವಿಲ್ ಪಟೇಲ್, ಜೋಶುವಾ ಲಿಟಲ್, ಮೋಹಿತ್ ಶರ್ಮಾ.

Exit mobile version