ಟಿ 20 ವಿಶ್ವ ಕಪ್ ಇತಿಹಾಸದಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್ ಗಳಿಸಿದವರ ಅಗ್ರ 5 ಆಟಗಾರರನ್ನು ಪಟ್ಟಿ ಮಾಡಲಾಗಿದ್ದು ಅವರ ವಿವರವನ್ನು ಇಲ್ಲಿ ತಿಳಿಸಲಾಗಿದೆ.
ಬ್ರೆಂಡನ್ ಮೆಕಲಮ್ (ನ್ಯೂಜಿಲೆಂಡ್)
ಟಿ20 ವಿಶ್ವ ಕಪ್ ಕೂಟದಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್ ಮಾಡಿದ ದಾಖಲೆ ನ್ಯೂಜಿಲೆಂಡ್ ತಂಡದ ಮಾಜಿ ನಾಯಕ ಬ್ರೆಂಡನ್ ಮೆಕಲಮ್ ಅವರ ಹೆಸರಿನಲ್ಲಿದೆ. ಬಾಂಗ್ಲಾದೇಶದ ವಿರುದ್ಧ 2012ರ ಆವೃತ್ತಿಯ ಆರಂಭಿಕ ಪಂದ್ಯದ ವೇಳೆ ಮೆಕಲಮ್ 58 ಎಸೆತಗಳಲ್ಲಿ 123 ರನ್ ಗಳಿಸಿದ್ದರು. ಈ ಇನಿಂಗ್ಸ್ ವೇಳೆ ಅವರ ಬ್ಯಾಟ್‌ನಿಂದ 11 ಬೌಂಡರಿ ಮತ್ತು ಏಳು ಸಿಕ್ಸರ್ ಸಿಡಿಯಲ್ಪಟ್ಟಿತು.
ಕ್ರಿಸ್ ಗೇಲ್ (ವೆಸ್ಟ್ ಇಂಡೀಸ್)
2007ರ ಟಿ20 ವಿಶ್ವ ಕಪ್‌ನ ಉದ್ಘಾಟನಾ ಆವೃತ್ತಿಯ ಮೊದಲ ಪಂದ್ಯದಲ್ಲಿ “ಯೂನಿವರ್ಸ್ ಬಾಸ್” ಖ್ಯಾತಿಯ ವಿಂಡೀಸ್ ದೈತ್ಯ ಕ್ರಿಸ್ ಗೇಲ್, ದಕ್ಷಿಣ ಆಫ್ರಿಕಾ ವಿರುದ್ಧ ಕೇವಲ 57 ಎಸೆತಗಳಲ್ಲಿ 7 ಬೌಂಡರಿಗಳು ಮತ್ತು 10 ಸಿಕ್ಸರ್‌ಗಳನ್ನು ಒಳಗೊಂಡ ಇನಿಂಗ್ಸ್ನಲ್ಲಿ 117 ರನ್ ಗಳಿಸಿದರು. ಗೇಲ್ ಅವರ ಈ ಸ್ಫೋಟಕ ಇನಿಂಗ್ಸ್ ವೇಳೆ 88 ರನ್ ಕೇವಲ ಸಿಕ್ಸರ್ ಮತ್ತು ಬೌಂಡರಿಯಿಂದ ಒಟ್ಟುಗೂಡಿದ್ದವು.
ಅಲೆಕ್ಸ್ ಹೇಲ್ಸ್ (ಇಂಗ್ಲೆಂಡ್)
ಇಂಗ್ಲೆಂಡ್ ಕ್ರಿಕೆಟ್ ತಂಡದ ಬಲಗೈ ದಾಂಡಿಗ ಅಲೆಕ್ಸ್ ಹೇಲ್ಸ್ ಈ ಯಾದಿಯಲ್ಲಿ ಮೂರನೇ ಸ್ಥಾನದಲ್ಲಿ ಗುರುತಿಸಿಕೊಂಡಿದ್ದಾರೆ. 2014ರ ಟಿ20 ವಿಶ್ವ ಕಪ್ನಲ್ಲಿ ಶ್ರೀಲಂಕಾ ವಿರುದ್ಧ 64 ಎಸೆತಗಳಲ್ಲಿ ಅಜೇಯ 116 ರನ್ ಗಳಿಸಿದ್ದರು. ಈ ವೇಳೆ 11 ಬೌಂಡರಿ ಮತ್ತು 6 ಸಿಕ್ಸರ್ ಸಿಡಿಯಲ್ಪಟ್ಟಿತು.
ಅಹ್ಮದ್ ಶೆಹಜಾದ್ (ಪಾಕಿಸ್ತಾನ)
ಪಾಕಿಸ್ತಾನ ತಂಡದ ಅಹ್ಮದ್ ಶೆಹಜಾದ್ 2014ರ ಟಿ20 ವಿಶ್ವ ಕಪ್ನಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 62 ಎಸೆತ ಎದುರಿಸಿ 10 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ ಅಜೇಯ 111 ರನ್ ಗಳಿಸಿದ್ದರು.
ತಮೀಮ್ ಇಕ್ಬಾಲ್ (ಬಾಂಗ್ಲಾದೇಶ)
ಬಾಂಗ್ಲಾದೇಶದ ತಮೀಮ್ ಇಕ್ಬಾಲ್ ಈ ಯಾದಿಯಲ್ಲಿ ಐದನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ತಮೀಮ್ 63 ಎಸೆತ ಎದುರಿಸಿ ಅಜೇಯ 103 ರನ್ ಸಿಡಿಸಿದ್ದರು (10 ಬೌಂಡರಿ, 5 ಸಿಕ್ಸರ್). 33 ವರ್ಷದ ತಮೀಮ್ ಈ ಬಾರಿಯ ವಿಶ್ವ ಕಪ್ಗೆ ತಂಡ ಪ್ರಕಟಿಸುವ ಮುನ್ನವೇ ಯುವ ಆಟಗಾರರಿಗೆ ಅವಕಾಶ ಕಲ್ಪಿಸುವ ಹಿನ್ನೆಲೆ ಈ ಕೂಟದಿಂದ ಹೊರ ಬಂದಿದ್ದರು.
ಸದ್ಯ ಈ ಆಟಗಾರರ ಹಸರಿನಲ್ಲಿರುವ ದಾಖಲೆಯನ್ನು ಈ ಬಾರಿ ಯಾರು ಮುರಿಯಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.
ಇದನ್ನೂ ಓದಿ | T20 World Cup | ವಿಶ್ವ ಕಪ್ನಲ್ಲಿ ಅತ್ಯಧಿಕ ಸಿಕ್ಸರ್ ಬಾರಿಸಿದ ಟೀಮ್ ಇಂಡಿಯಾ ಆಟಗಾರು ಯಾರು?