Who will win the match between Rajasthan Royals and Chennai Super Kings? IPL 2023 : ರಾಜಸ್ಥಾನ್​ ರಾಯಲ್ಸ್​, ಚೆನ್ನೈ ಸೂಪರ್​ ಕಿಂಗ್ಸ್​ ನಡುವಿನ ಹಣಾಹಣಿಯಲ್ಲಿ ಗೆಲುವಿನ ಚಾನ್ಸ್​ ಯಾರಿಗೆ? - Vistara News

ಕ್ರಿಕೆಟ್

IPL 2023 : ರಾಜಸ್ಥಾನ್​ ರಾಯಲ್ಸ್​, ಚೆನ್ನೈ ಸೂಪರ್​ ಕಿಂಗ್ಸ್​ ನಡುವಿನ ಹಣಾಹಣಿಯಲ್ಲಿ ಗೆಲುವಿನ ಚಾನ್ಸ್​ ಯಾರಿಗೆ?

ಐಪಿಎಲ್ ಅಂಕಪಟ್ಟಿಯಲ್ಲೀಗ (IPL 2023) ಚೆನ್ನೈ ಸೂಪರ್​ ಕಿಂಗ್ಸ್​ ತಂಡ ಅಗ್ರಸ್ಥಾನದಲ್ಲಿದ್ದರೆ ರಾಜಸ್ಥಾನ್ ರಾಯಲ್ಸ್​ ಬಳಗ ಮೂರನೇ ಸ್ಥಾನ ಪಡೆದುಕೊಂಡಿದೆ.

VISTARANEWS.COM


on

Who will win the match between Rajasthan Royals and Chennai Super Kings?
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜೈಪುರ: ರಾಜಸ್ಥಾನ್​ ರಾಯಲ್ಸ್​ ಹಾಗೂ ಚೆನ್ನೈ ಸೂಪರ್​ ಕಿಂಗ್ಸ್​ ತಂಡಗಳ ನಡುವೆ ಐಪಿಎಲ್​ 16ನೇ (IPL 2023) ಆವೃತ್ತಿಯ 37ನೇ ಪಂದ್ಯ ಗುರುವಾರ ನಡೆಯಲಿದೆ. ಈ ಪಂದ್ಯದಲ್ಲಿ ಗೆಲವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಉಳಿಸಿಕೊಳ್ಳುವುದಕ್ಕೆ ಚೆನ್ನೈ ಸೂಪರ್​ ಕಿಂಗ್ಸ್​ ಸೆಣಸಾಡಲಿದೆ. ಇದೇ ವೇಳೆ ಕಳೆದೆರಡು ಪಂದ್ಯಗಳಲ್ಲಿ ಕಳಾಹೀನ ಪ್ರದರ್ಶನ ನೀಡಿ ಹ್ಯಾಟ್ರಿಕ್ ಸೋಲಿನತ್ತ ಮುಖಮಾಡಿರುವ ಅತಿಥೇಯ ರಾಜಸ್ಥಾನ್ ರಾಯಲ್ಸ್ ತಂಡ ಗೆಲುವಿನ ಹಾದಿಗೆ ಮರಳಲು ಪ್ರಯತ್ನಿಸಲಿದೆ.

ಏಪ್ರಿಲ್ 12ರಂದು ನಡೆದ ಪಂದ್ಯದಲ್ಲಿ ಪ್ರಬಲ ಪೈಪೋಟಿ ನಡುವೆಯೂ ರಾಜಸ್ಥಾನ್​ ರಾಯಲ್ಸ್​ ವಿರುದ್ಧ ಚೆನ್ನೈ ಸೂಪರ್​ ಕಿಂಗ್ಸ್​ ತಂಡ 3 ರನ್ ಗಳ ಅಂತರದಿಂದ ಗೆಲುವು ಸಾಧಿಸಿತ್ತು. ಈ ಸೋಲಿಗೆ ಸೇಡು ತೀರಿಸಿಕೊಳ್ಳುವುದಕ್ಕೆ ಸಂಜು ಸ್ಯಾಮ್ಸನ್​ ಪಡೆಗೆ ಅನುಕೂಲಕರವಾಗಿದೆ. 4 ಗೆಲುವಿನೊಂದಿಗೆ 8 ಅಂಕ ಕಲೆ ಹಾಕಿ ಅಂಕಪಟ್ಟಿಯಲ್ಲಿ 3 ನೇ ಸ್ಥಾನದಲ್ಲಿರುವ ಸಂಜು ಸ್ಯಾಮ್ಸನ್ ಪಡೆ ಕಳೆದ 2 ಪಂದ್ಯಗಳಲ್ಲಿ ಲಖನೌ ಸೂಪರ್ ಜಯಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಂದೆ ಸೋತಿದೆ. ಇದೀಗ ತವರಿನ ಅಂಗಣದ ಲಾಭ ಪಡೆದು ಪ್ರವಾಸಿ ಸಿಎಸ್ ಕೆ ಯನ್ನು ಮಣಿಸಬೇಕಿದೆ.

ಈ ಪಂದ್ಯ ಚೆನ್ನೈ ಸೂಪರ್​ ಕಿಂಗ್ಸ್ ತಂಡದ ಅಗ್ರಕ್ರಮಾಂಕದ ಬ್ಯಾಟರ್​​ಗಳು ಹಾಗೂ ರಾಜಸ್ಥಾನ್​ ರಾಯಲ್ಸ್ ತಂಡಗಳ ಸ್ಪಿನ್​ ಬಳಗದ ನಡುವಿನ ಹಣಾಹಣಿಯಾಗಿದೆ. ಚೆನ್ನೈ ತಂಡದ ಪರ ಅಜಿಂಕ್ಯ ರಹಾನೆ ಅದ್ಭುತ ಬ್ಯಾಟಿಂಗ್​ ಪ್ರದರ್ಶನ ನೀಡುತ್ತಿದ್ದಾರೆ. ಮಹೇಂದ್ರ ಸಿಂಗ್ ಧೋನಿ, ಶಿವಂ ದುಬೆ ಹಾಗೂ ಜಡೇಜಾ ಕೂಡ ಬ್ಯಾಟಿಂಗ್​ ಬಲ ಎನಿಸಿಕೊಂಡಿದ್ದಾರೆ. ಆರಂಭಿಕರಾದ ಡೆವೋನ್​ ಕಾನ್ವೆ ಹಾಗೂ ಋತುರಾಜ್​ ಗಾಯಕ್ವಾಡ್​ ಕೂಡ ಆಡಲಿದ್ದಾರೆ.

ರಾಜಸ್ಥಾನ್​ ತಂಡದ ಪರವಾಗಿ ಯಶಸ್ವಿ ಜೈಸ್ವಾಲ್ ಹಾಗೂ ಜೋಸ್​ ಬಟ್ಲರ್​ ಉತ್ತಮ ಆರಂಭ ತಂದುಕೊಡುತ್ತಿದ್ದಾರೆ. ಕನ್ನಡಿಗ ದೇವದತ್​​ ಪಡಿಕ್ಕಲ್​, ನಾಯಕ ಸಂಜು ಸ್ಯಾಮ್ಸನ್ ಹಾಗೂ ಶಿಮ್ರೋನ್​ ಹೆಟ್ಮಾಯರ್​ ಹಾಗೂ ದ್ರುವ್​ ಜುರೇಲ್​ ಕೂಡ ಉತ್ತಮ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಚೆನ್ನೈ ತಂಡದ ಯುವ ವೇಗಿಗಳು ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿಲ್ಲ. ಆದರೆ, ಸ್ಪಿನ್ನರ್​ಗಳಾದ ಮೊಯೀನ್​ ಅಲಿ ಹಾಗೂ ರವೀಂದ್ರ ಜಡೇಜಾ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಆರ್​ಆರ್​ ತಂಡ ಪರವಾಗಿ ಸ್ಪಿನ್ನರ್​​ಗಳಾದ ಆರ್​. ಅಶ್ವಿನ್​ ಹಾಗೂ ಯಜ್ವೇಂದ್ರ ಚಹಲ್ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ವೇಗಿಗಳಾದ ಸಂದೀಪ್​ ಶರ್ಮಾ ಹಾಗೂ ಟ್ರೆಂಟ್​ ಬೌಲ್ಟ್​ ಉತ್ತ ಪ್ರದರ್ಶನ ನೀಡುತ್ತಿದ್ದಾರೆ.

ಪಿಚ್​ ಹೇಗಿದೆ?

ಸವಾಯ್ ಮಾನ್ ಸಿಂಗ್ ಅಂಗಣದ ಪಿಚ್ ಕೂಡ ಬ್ಯಾಟಿಂಗ್ ಸ್ನೇಹಿ. ಸ್ಪಿನ್ನರ್‌ಗಳಿಗೆ ಸ್ವಲ್ಪ ನೆರವು ಸಿಗಲಿದೆ. ಟಾಸ್ ಗೆದ್ದ ನಾಯಕ ರನ್‌ ಚೇಸ್ ಮಾಡಬಹುದು. ಮತ್ತೊಂದು ದೊಡ್ಡ ಮೊತ್ತದ ಪಂದ್ಯ ನಡೆಯಲಿದೆ.

ಇದನ್ನೂ ಓದಿ : IPL 2023: ಕೋಲ್ಕೊತಾ ನೈಟ್​ ರೈಡರ್ಸ್​ ವಿರುದ್ಧ ಆರ್​ಸಿಬಿ ತಂಡ ಸೋತ ಬಳಿಕ ಐಪಿಎಲ್​ ಅಂಕಪಟ್ಟಿ ಹೇಗಿದೆ?

ಸಂಭಾವ್ಯ ತಂಡಗಳು

ರಾಜಸ್ಥಾನ್ ರಾಯಲ್ಸ್​: ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ), ದೇವದತ್ ಪಡಿಕ್ಕಲ್, ಶಿಮ್ರೊನ್ ಹೆಟ್ಮಾಯೆರ್‌, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಜೇಸನ್ ಹೋಲ್ಡರ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್.

ಚೆನ್ನೈ ಸೂಪರ್ ಕಿಂಗ್ಸ್: ಡೆವೋನ್ ಕಾನ್ವೆ, ಋತುರಾಜ್ ಗಾಯಕ್ವಾಡ್, ಅಜಿಂಕ್ಯ ರಹಾನೆ, ಮೊಯೀನ್ ಅಲಿ, ಶಿವಂ ದುಬೇ, ರವೀಂದ್ರ ಜಡೇಜಾ, ಎಂ.ಎಸ್ ಧೋನಿ (ನಾಯಕ), ಡ್ವೇನ್ ಪ್ರಿಟೋರಿಯಸ್, ಮತೀಶ ಪತಿರಾಣ, ತುಷಾರ್ ದೇಶಪಾಂಡೆ, ಆಕಾಶ್ ಸಿಂಗ್.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

ICC Women’s T20 World Cup: ಮಹಿಳಾ ಟಿ20 ವಿಶ್ವಕಪ್‌ ಆತಿಥ್ಯಕ್ಕೆ ಮುಂದಾದ ಜಿಂಬಾಬ್ವೆ

ICC Women’s T20 World Cup: ಕ್ರಿಕ್ ​ಇನ್ಫೋ ವರದಿಯ ಪ್ರಕಾರ ಜಿಂಬಾಬ್ವೆ ಮಹಿಳಾ ಟಿ20 ವಿಶ್ವಕಪ್‌ ಪಂದ್ಯಾವಳಿಯ ಆತಿಥ್ಯವಹಿಸಿಕೊಳ್ಳಲು ಆಸಕ್ತಿ ಹೊಂದಿದೆ ಎಂದು ತಿಳಿಸಿದೆ.

VISTARANEWS.COM


on

ICC Women's T20 World Cup
Koo

ಮುಂಬಯಿ: ಬಾಂಗ್ಲಾದೇಶದಲ್ಲಿ(bangladesh violence)  ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಅಲ್ಲಿನ ನಾಗರೀಕರು ನಡೆಸುತ್ತಿರುವ ಪ್ರತಿಭಟನೆ, ಗಲಭೆಗಳಿಂದ ಸಂಭವಿಸಿರುವ ಬಿಕ್ಕಟ್ಟಿನಿಂದಾಗಿ ಮುಂಬರುವ ಮಹಿಳಾ ಟಿ20 ವಿಶ್ವಕಪ್‌(ICC Women’s T20 World Cup) ಪಂದ್ಯಾವಳಿಯನ್ನು ಆಯೋಜಿಸಲು ಐಸಿಸಿ ಪರ್ಯಾಯ ಸ್ಥಳವನ್ನು ಹುಡುಕುತ್ತಿದ್ದ ವೇಳೆ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ, ಈ ಪಂದ್ಯಾವಳಿಗೆ ಭಾರತ ಆತಿಥ್ಯ ವಹಿಸುವುದಿಲ್ಲ ಎಂದು ಹೇಳಿದ್ದರು. ಇದೀಗ ಜಿಂಬಾಬ್ವೆ ಟೂರ್ನಿಯ ಆತಿಥ್ಯ ವಹಿಸಿಕೊಳ್ಳಲು ಸಿದ್ಧವಾಗಿದೆ ಎಂದು ವರದಿಯಾಗಿದೆ.

ಕ್ರಿಕ್ ​ಇನ್ಫೋ ವರದಿಯ ಪ್ರಕಾರ ಜಿಂಬಾಬ್ವೆ ಟೂರ್ನಿಯ ಆತಿಥ್ಯವಹಿಸಿಕೊಳ್ಳಲು ತಮ್ಮ ಆಸಕ್ತಿಯನ್ನು ಐಸಿಸಿಗೆ ವ್ಯಕ್ತಪಡಿಸಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ. ಗುರುವಾರವಷ್ಟೇ ಮಾಧ್ಯಮವೊಂದರ ಜತೆ ಮಾತನಾಡಿದ್ದ ಜಯ್‌ ಶಾ, “ಮಹಿಳಾ ಟಿ20 ವಿಶ್ವಕಪ್‌ ಆಯೋಜನೆಗೆ ಐಸಿಸಿ ನಮ್ಮನ್ನು ಸಂಪರ್ಕಿಸಬಹುದು. ಆದರೆ ನಾನು ಇದನ್ನು ನಿರಾಕರಿಸುತ್ತೇನೆ ಎಂದಿದ್ದರು. 

ಕೆಲ ದಿನಗಳ ಹಿಂದೆ ಬಾಂಗ್ಲಾದೇಶ ಕ್ರಿಕೆಟ್​ ಮಂಡಳಿ ಸೇನಾ ಮುಖ್ಯಸ್ಥ ಜನರಲ್‌ ವಕಾರ್‌ ಜಮಾನ್‌ ಅವರಿಗೆ ಪತ್ರ ಬರೆದು, ಬಾಂಗ್ಲಾದೇಶದಲ್ಲಿ ಟಿ20 ವಿಶ್ವಕಪ್‌ ಪಂದ್ಯಾವಳಿಯನ್ನು ನಡೆಸಿಕೊಡಲು ಸಹಾಯ ಮಾಡಬೇಕು ಎಂದು ಕೋರಿತ್ತು. ಸದ್ಯಕ್ಕೆ ಬಾಂಗ್ಲಾದೇಶದಲ್ಲಿ ಶಾಂತಿ ನೆಲೆಸುವಂತೆ ಕಾಣುತ್ತಿಲ್ಲ ಹೀಗಾಗಿ ಐಸಿಸಿ ಪರ್ಯಾಯ ಸ್ಥಳದ ಹುಡುಕಾಟ ನಡೆಸುತ್ತಿದೆ. ಮೂಲ ವೇಳಾಪಟ್ಟಿಯ ಪ್ರಕಾರ ಈ ಟೂರ್ನಿ ಅಕ್ಟೋಬರ್‌ನಲ್ಲಿ ಆರಂಭಗೊಳ್ಳಬೇಕು.

ಶೇಕ್‌ ಹಸೀನಾ ಅವರು ರಾಜೀನಾಮೆ ನೀಡಿ ಪಲಾಯನ ಮಾಡಿದ ಬಳಿಕ ನಡೆದ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿ ನಡೆದಿದೆ. ಹಿಂದೂಗಳ ಮನೆಗಳು, ವ್ಯವಹಾರಗಳು ಮತ್ತು ದೇವಾಲಯಗಳನ್ನು ಗುರಿಯಾಗಿಸಿಕೊಂಡು ನಡೆದ ಹಿಂಸಾಚಾರದಲ್ಲಿ ಶಾಲಾ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 45 ಜನರು ಗಾಯಗೊಂಡಿದ್ದಾರೆ. ಬಾಂಗ್ಲಾದೇಶದ 17 ಕೋಟಿ ಜನಸಂಖ್ಯೆಯ ಸುಮಾರು 8 ಪ್ರತಿಶತ ಹಿಂದೂಗಳಿದ್ದಾರೆ. ಇವರು ಸಾಂಪ್ರದಾಯಿಕವಾಗಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷದ ಬೆಂಬಲಿಗರು. ಹೀಗಾಗಿ ಇವರನ್ನು ಗುರಿಯಾಗಿಸಿ ದಾಳಿ ನಡೆಸಲಾಗುತ್ತದೆ ಎನ್ನಲಾಗಿದೆ.

ನೊಬೆಲ್ ಪ್ರಶಸ್ತಿ ವಿಜೇತ ಅರ್ಥ ಶಾಸ್ತ್ರಜ್ಞ ಮುಹಮ್ಮದ್ ಯೂನಸ್ ನೇತೃತ್ವದಲ್ಲಿ ಗುರುವಾರ ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರವನ್ನು ನೇಮಿಸಲಾಯಿತು. ಸಂವಿಧಾನದ ಅಡಿಯಲ್ಲಿ, 90 ದಿನಗಳಲ್ಲಿ ಚುನಾವಣೆಯನ್ನು ನಡೆಸಬೇಕಾಗಿದೆ. ಆದರೆ ಯೂನಸ್ ಹಾಗೂ ಮಿಲಿಟರಿ ಮತ್ತು ಅಧ್ಯಕ್ಷರು, ಚುನಾವಣೆಗಳು ಯಾವಾಗ ನಡೆಯುತ್ತವೆ ಎಂಬುದರ ಕುರಿತು ಪ್ರತಿಕ್ರಿಯಿಸಿಲ್ಲ.

Continue Reading

ಕ್ರಿಕೆಟ್

MS Dhoni Fans: ಧೋನಿ ಅಭಿಮಾನಿಗಳಿಗೆ ಗುಡ್ ನ್ಯೂಸ್; ಹಳೆಯ ಐಪಿಎಲ್​ ನಿಯಮ ಜಾರಿಗೆ ಮುಂದಾದ ಬಿಸಿಸಿಐ

MS Dhoni Fans: ಅನ್‌ಕ್ಯಾಪ್ಡ್ ಆಟಗಾರನಿಗೆ ಫ್ರಾಂಚೈಸಿ ಕೇವಲ 4 ಕೋಟಿ ರೂ. ನೀಡಲಿದೆ. ಈ ನಿಯಮ ಜಾರಿಗೆ ಬಂದರೆ ಧೋನಿ ಇದೇ ಮೊತ್ತದಲ್ಲಿ ಚೆನ್ನೈಗಾಗಿ ಆಡುವುದನ್ನು ಮುಂದುವರಿಸಲು ಅನುವು ಮಾಡಿಕೊಡುತ್ತದೆ. ಇದೇ ಮೊತ್ತಕ್ಕೆ ಚೆನ್ನೈ ತಂಡ ಧೋನಿಯನ್ನು ಮತ್ತೆ ರೀಟೈನ್​ ಮಾಡಿಕೊಳ್ಳಬಹುದು

VISTARANEWS.COM


on

MS Dhoni Fans
Koo

ಮುಂಬಯಿ: 18ನೇ ಆವೃತ್ತಿಯ ಐಪಿಎಲ್(Indian Premier League)​ ವಿಚಾರದಲ್ಲಿ ದಿನಕ್ಕೊಂದು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿವೆ. ಇದೀಗ ಈ ಪಟ್ಟಿಗೆ ಹೊಸದೊಂದು ವಿಚಾರ ಸೇರ್ಪಡೆಗೊಂಡಿದೆ. ವರದಿಯೊಂದರ ಪ್ರಕಾರ ಬಿಸಿಸಿಐ(BCCI) ಕನಿಷ್ಠ ಐದು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದ ಆಟಗಾರರನ್ನು ಅನ್‌ಕ್ಯಾಪ್ಡ್ ವಿಭಾಗದಲ್ಲಿ ಇರಿಸುವ ನಿಯಮವನ್ನು ಮರಳಿ ತರಲು ಮುಂದಾಗಿದೆ ಎನ್ನಲಾಗಿದೆ.

ಮೊದಲ ಸೀಸನ್‌ನಿಂದ ಜಾರಿಯಲ್ಲಿದ್ದ ಈ ನಿಯಮವನ್ನು 2021ರಲ್ಲಿ ರದ್ದುಗೊಳಿಸಲಾಗಿತ್ತು. ಕಳೆದ ತಿಂಗಳು ಮುಂಬೈಯಲ್ಲಿ ನಡೆದಿದ್ದ ಐಪಿಎಲ್ ಫ್ರಾಂಚೈಸಿಗಳ ಮಾಲೀಕರು ಮತ್ತು ಬಿಸಿಸಿಐ ನಡುವಿನ ಸಭೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಆಡಳಿತವು ಈ ನಿಯಮವನ್ನು ಹಿಂದಿರುಗಿಸುವಂತೆ ಒತ್ತಾಯಿಸಿತ್ತು. ಇದೀಗ ಬಿಸಿಸಿಐ ಮತ್ತೆ ಈ ನಿಯಮವನ್ನು ಜಾರಿಗೊಳಿಸಲು ಮುಂದಾಗಿದೆ ಎನ್ನಲಾಗಿದೆ. ಹೀಗಾದರೆ ಧೋನಿ(MS Dhoni) ಮುಂದಿನ ಬಾರಿಯೂ ಐಪಿಎಲ್​ ಆಡುವುದು ಖಚಿತ ಎನ್ನಲಾಗಿದೆ. ಅಲ್ಲದೆ ಈ ನಿಯಮ ಜಾರಿಗೊಳ್ಳಲಿದೆ ಎನ್ನುವಾಗಲೇ ಧೋನಿ ಅಭಿಮಾನಿಗಳು(MS Dhoni Fans) ಸಂತಸಗೊಂಡಿದ್ದಾರೆ.

ಧೋನಿ(MS Dhoni) ಅವರು ಕಳೆದ ವರ್ಷವೇ ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಒಂದು ವರ್ಷದ ಮಟ್ಟಿಗೆ ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿ ಎಂದೇ ಹೇಳಲಾಗಿತ್ತು. ಆದ್ಯಾಗೂ ಧೋನಿ ತಮ್ಮ ನಿವೃತ್ತಿ ಬಗ್ಗೆ ಯಾವುದೇ ಅಂತಿಮ ನಿರ್ಧಾರ ಪ್ರಕಟಿಸಿಲ್ಲ.

ಅನ್‌ಕ್ಯಾಪ್ಡ್ ಆಟಗಾರನಿಗೆ ಫ್ರಾಂಚೈಸಿ ಕೇವಲ 4 ಕೋಟಿ ರೂ. ನೀಡಲಿದೆ. ಈ ನಿಯಮ ಜಾರಿಗೆ ಬಂದರೆ ಧೋನಿ ಇದೇ ಮೊತ್ತದಲ್ಲಿ ಚೆನ್ನೈಗಾಗಿ ಆಡುವುದನ್ನು ಮುಂದುವರಿಸಲು ಅನುವು ಮಾಡಿಕೊಡುತ್ತದೆ. ಇದೇ ಮೊತ್ತಕ್ಕೆ ಚೆನ್ನೈ ತಂಡ ಧೋನಿಯನ್ನು ಮತ್ತೆ ರೀಟೈನ್​ ಮಾಡಿಕೊಳ್ಳಬಹುದು. 2022ರ ಮೆಗಾ ಹರಾಜಿನ ಮೊದಲು, ಚೆನ್ನೈ 12 ಕೋಟಿಗೆ ಧೋನಿಯನ್ನು ತಂಡದಲ್ಲಿ ಉಳಿಸಿಕೊಂಡಿತ್ತು. “ಧೋನಿ ಅನ್‌ಕ್ಯಾಪ್ಡ್ ಆಟಗಾರನಾಗಿ ಆಡುತ್ತಾರಾ? ಇದೊಂದು ದೊಡ್ಡ ಪ್ರಶ್ನಾರ್ಥಕ ಚಿಹ್ನೆ” ಎಂದು ಆರ್​.ಅಶ್ವಿನ್​ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ Rohit Sharma : ಧೋನಿಯ ನಾಯಕತ್ವದ ದಾಖಲೆಯೊಂದನ್ನು ಮುರಿದ ರೋಹಿತ್ ಶರ್ಮಾ

ಈ ಬಾರಿ ರೈಟ್​ ಟು ಮ್ಯಾಚ್​(ಆರ್​ಟಿಎಂ) ಕಾರ್ಡ್​ ಪದ್ಧತಿಯನ್ನೂ ಮತ್ತೆ ತರಲಾಗುವುದು ಎಂದು ವರದಿಯಾಗಿದೆ. ಆರ್​ಟಿಎಂ ಅನ್ವಯ ಫ್ರಾಂಚೈಸಿಯೊಂದು ತನ್ನ ತಂಡದ ಆಟಗಾರನೊಬ್ಬ ಬೇರೆ ತಂಡಕ್ಕೆ ಹೆಚ್ಚಿನ ಮೊತ್ತಕ್ಕೆ ಮಾರಾಟವಾದಾಗ ಅದೇ ಮೊತ್ತಕ್ಕೆ ಆತನನ್ನು ತನ್ನ ತಂಡದಲ್ಲಿ ಉಳಿಸಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಇದನ್ನು ಆರ್​ಟಿಎಂ ಎನ್ನಲಾಗುತ್ತದೆ. ಈ ಬಾರಿ ಒಂದೇ ಕಾರ್ಡ್​ ಬಳಕೆಗೆ ಅವಕಾಶ ನೀಡುವುದಾಗಿ ಹೇಳಲಾಗಿದೆ. ಹೆಚ್ಚಿನ ಆರ್​ಟಿಎಂ ಬಳಸಲು ಅವಕಾಶ ನೀಡಿದರೆ ಹರಾಜು ಪ್ರಕ್ರಿಯೆ ಮಹತ್ವ ಕಳೆದುಕೊಳ್ಳುತ್ತದೆ ಎಂದು ಬಿಸಿಸಿಐ ಅಧಿಕಾರಿಗಳ ಅಭಿಪ್ರಾಯ. ಐಪಿಎಲ್​ನಲ್ಲಿ ಇದುವರೆಗೆ ವಿರಾಟ್​ ಕೊಹ್ಲಿ (ಆರ್​ಸಿಬಿ), ಜಸ್​ಪ್ರೀತ್​ ಬುಮ್ರಾ(ಮುಂಬೈ) ಮಾತ್ರ ಒಂದೇ ತಂಡದ ಪರ ಆಡಿದ್ದಾರೆ. ಉಳಿದ ಆಟಗಾರರು ಬೇರೆ ಬೇರೆ ಫ್ರಾಂಚೈಸಿ ಪರ ಕನಿಷ್ಠ ಒಂದೆರಡು ವರ್ಷಗಳ ಕಾಲ ಆಡಿದ್ದಾರೆ.

ಐಪಿಎಲ್ ಮೆಗಾ ಹರಾಜನ್ನು ಇನ್ನು ಮುಂದೆ ಐದು ವರ್ಷಗಳಿಗೊಮ್ಮೆ ನಡೆಸುವಂತೆಯೂ ಕೆಲವು ಫ್ರಾಂಚೈಸಿಗಳು ಮನವಿ ಮಾಡಿದೆ ಎನ್ನಲಾಗಿದೆ. ಈ ಹಿಂದೆ ಪ್ರತಿ ಮೂರು ವರ್ಷಗಳಿಗೊಮ್ಮೆ ಮೆಗಾ ಹರಾಜು ಆಯೋಜಿಸಲಾಗುತ್ತಿತ್ತು. ಒಂದೊಮ್ಮೆ ಈ ಬೇಡಿಕೆಗೆ ಬಿಸಿಸಿಐ ಸಮ್ಮತಿಸಿದರೆ. ಮುಂದಿನ ಮೆಗಾ ಹರಾಜು 2029ರಲ್ಲಿ ನಡೆಯಲಿದೆ. ಇದರ ನಡುವೆ ಮಿನಿ ಹರಾಜು ಮಾತ್ರ ನಡೆಯಲಿದೆ. ಈ ತಿಂಗಳಾಂತ್ಯದಲ್ಲಿ ಐಪಿಎಲ್ ಮಾಲೀಕರೊಂದಿಗೆ ಬಿಸಿಸಿಐ ಸಭೆ ನಡೆಸಿ ಮೆಗಾ ಹರಾಜಿನ ಅಂತಿಮ ರೂಪುರೇಷೆಗಳ ಬಗ್ಗೆ ಚರ್ಚಿಸಲಿದೆ ಎಂದು ವರದಿಯಾಗಿದೆ

Continue Reading

ಕ್ರೀಡೆ

Ishan Kishan: ಬುಚ್ಚಿಬಾಬು ಟ್ರೋಫಿಯಲ್ಲಿ ಸಿಕ್ಸರ್​ಗಳ ಸುರಿಮಳೆಗೈದು ಶತಕ ಬಾರಿಸಿದ ಇಶಾನ್​ ಕಿಶನ್

Ishan Kishan: ಇಶಾನ್ ಕಿಶನ್​ ಮಧ್ಯಪ್ರದೇಶ ವಿರುದ್ಧ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದು ತಮ್ಮ ಬಿರುಸಿನ ಬ್ಯಾಟಿಂಗ್​ ಮೂಲಕ 86 ಎಸೆತಗಳಲ್ಲಿ ಶತಕ ಪೂರೈಸಿದರು

VISTARANEWS.COM


on

Ishan Kishan
Koo

ಮುಂಬಯಿ: ‘ಬುಚ್ಚಿಬಾಬು ಟ್ರೋಫಿ’ ಆಹ್ವಾನಿತ(Buchi Babu Tournament) ಕ್ರಿಕೆಟ್​ ಪಂದ್ಯಾವಳಿಯಲ್ಲಿ ಇಶಾನ್​ ಕಿಶನ್​(Ishan Kishan) ವಿಸ್ಫೋಟಕ ಬ್ಯಾಟಿಂಗ್​ ಮೂಲಕ ಶತಕ ಬಾರಿಸಿ ಮಿಂಚಿದ್ದಾರೆ. ಈ ಮೂಲಕ ಮತ್ತೆ ಭಾರತ ತಂಡಕ್ಕೆ ಕಮ್​ಬ್ಯಾಕ್​ ಮಾಡುವ ವಿಶ್ವಾಸದಲ್ಲಿದ್ದಾರೆ. ರಣಜಿ ಆಡಲು ನಿರಾಕರಿಸಿದ್ದ ಕಾರಣದಿಂದಾಗಿ ಇಶಾನ್​ ಕಿಶನ್​ ಅವರನ್ನು ಬಿಸಿಸಿಐ ಟೀಮ್​ ಇಂಡಿಯಾದಿಂದ ದೂರ ಇರಿಸಿತ್ತು. ಇದೀಗ ದೇಶೀಯ ರೆಡ್​ ಬಾಲ್​ ಟೂರ್ನಿಯಲ್ಲಿ ಇಶಾನ್​ ತಮ್ಮ ಬ್ಯಾಟಿಂಗ್​ ಸಾಮರ್ಥ್ಯ ಪ್ರದರ್ಶಿಸಿದ್ದಾರೆ.

ಜಾರ್ಖಂಡ್​ ತಂಡದ ನಾಯಕನಾಗಿರುವ ಇಶಾನ್ ಕಿಶನ್​ ಮಧ್ಯಪ್ರದೇಶ ವಿರುದ್ಧ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದು ತಮ್ಮ ಬಿರುಸಿನ ಬ್ಯಾಟಿಂಗ್​ ಮೂಲಕ 86 ಎಸೆತಗಳಲ್ಲಿ ಶತಕ ಪೂರೈಸಿದರು. ಅಚ್ಚರಿ ಎಂದರೆ ಸತತ 2 ಸಿಕ್ಸರ್​ ಬಾರಿಸುವ ಮೂಲಕ ಅವರು ಈ ಶತಕ ಪೂರ್ತಿಗೊಳಿಸಿದರು. ಅಂತಿಮವಾಗಿ ಬರೋಬ್ಬರಿ 10 ಸಿಕ್ಸರ್​ ಮತ್ತು 5 ಬೌಂಡರಿ ಸಿಡಿಸಿ 114 ರನ್​ ಬಾರಿಸಿದರು. ಇವರ ಶತಕದ ನೆರವಿನಿಂದ ತಂಡ ಉತ್ತಮ ರನ್​ ಕಲೆಹಾಕಿದೆ.

ಕಳೆದ ವರ್ಷ ನವೆಂಬರ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಸರಣಿಯ ಮೂರನೇ ಟಿ20 ಸಂದರ್ಭದಲ್ಲಿ ಕಿಶನ್ ಕೊನೆಯದಾಗಿ ಭಾರತಕ್ಕಾಗಿ ಆಡಿದ್ದರು. ನಂತರದ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಆಯ್ಕೆಯಾಗಿದ್ದರೂ ಕೂಡ ಅಂತಿಮ ಹಂತದಲ್ಲಿ ವೈಯಕ್ತಿಕ ಕಾರಣಗಳಿಂದಾಗಿ ಟೆಸ್ಟ್ ಸರಣಿಯಿಂದ ಹೊರಗುಳಿದರು. ಸ್ವಲ್ಪ ವಿರಾಮವನ್ನು ತೆಗೆದುಕೊಂಡ ಇಶಾನ್​ಗೆ ಅಂದಿನ ಕೋಚ್​ ದ್ರಾವಿಡ್​ ಮತ್ತು ಆಯ್ಕೆ ಸಮಿತಿ ರಣಜಿ ಟ್ರೋಫಿ ಪಂದ್ಯಗಳಲ್ಲಿ ಆಡುವಂತೆ ಸೂಚನೆ ನೀಡಿತ್ತು. ಆದರೆ ಇದನ್ನು ಇಶಾನ್​ ಕಡೆಗಣಿಸಿದ್ದರು. ಈ ಕಾರಣದಿಂದ ಬಿಸಿಸಿಐ ಅವರನ್ನು ಕೇಂದ್ರೀಯ ಗುತ್ತಿಗೆಯಿಂದಲೂ ಕೈಬಿಟ್ಟಿತ್ತು.

ಸೆಪ್ಟೆಂಬರ್​ 5ರಿಂದ ಆರಂಭಗೊಳ್ಳಲಿರುವ ದುಲೀಪ್​ ಟ್ರೋಫಿಯಲ್ಲಿಯೂ ಅವಕಾಶ ಪಡೆದಿರುವ ಇಶಾನ್​ ಕಿಶನ್​, ನಿರೀಕ್ಷಿತ ಬ್ಯಾಟಿಂಗ್​ ಪ್ರದರ್ಶನ ತೋರಿದರೆ, ಬಾಂಗ್ಲಾದೇಶ ವಿರುದ್ಧದ 2 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಅವಕಾಶ ಪಡೆಯುವುದು ಖಚಿತವಾಗಿದೆ.

ಇದನ್ನೂ ಓದಿ Buchi Babu Tournament: ಬುಚ್ಚಿಬಾಬು ಕ್ರಿಕೆಟ್‌ ಟೂರ್ನಿ ಆಡಲಿದ್ದಾರೆ ಸೂರ್ಯಕುಮಾರ್​, ಅಯ್ಯರ್​

ಮಾನಸಿಕ ಒತ್ತಡದದಿಂದ ಬಳಲುತ್ತಿರುವುದಾಗಿ ಸುಳ್ಳು ಕಾರಣ ನೀಡಿ  ಮುಕೇಶ್‌ ಅಂಬಾನಿ(Mukesh Ambani) ಪುತ್ರ ಅನಂತ್‌ ಅಂಬಾನಿ(Anant Ambani) ಹಾಗೂ ರಾಧಿಕಾ ಮರ್ಚೆಂಟ್‌ (Radhika Merchant) ಅವರ ವಿವಾಹಪೂರ್ವ(Anant Ambani wedding) ಸಮಾರಂಭದಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೆ ದುಬೈನಲ್ಲಿಯೂ ಪಾರ್ಟಿ ಮಾಡಿ ಸಿಕ್ಕಿಬಿದ್ದಿದ್ದರು. ಇದು ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿತ್ತು.

ತಂಡಕ್ಕೆ ಆಯ್ಕೆ ಮಾಡದಿರುವುದರ ಕುರಿತು ಕೆಲ ದಿನಗಳ ಹಿಂದೆ ಪ್ರತಿಕ್ರಿಯೆ ನೀಡಿದ್ದ ಇಶಾನ್​, “ನಾನು ಬ್ರೇಕ್ ಪಡೆದಿದ್ದೆ, ನನ್ನ ಪ್ರಕಾರ ಇದು ಸಾಮಾನ್ಯ. ತಂಡಕ್ಕೆ ಕಮ್ ಬ್ಯಾಕ್ ಮಾಡಬೇಕಾದರೆ ದೇಶೀಯ ಕ್ರಿಕೆಟ್​ನಲ್ಲಿ ಪ್ರದರ್ಶನ ನೀಡಬೇಕು ಎಂಬ ನಿಯಮವಿದೆ ಎನ್ನುವುದು ನನಗೆ ತಿಳಿದಿದೆ. ಆದರೆ, ಅಂದು ನಾನು ಆಡುವ ಮನಸ್ಥಿತಿಯಲ್ಲಿ ಇರಲಿಲ್ಲ. ಹಿಗಾಗಿಯೇ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ಬ್ರೇಕ್ ಪಡೆದಿದ್ದೆ. ಉತ್ತಮ ಫಾರ್ಮ್​ನಲ್ಲಿರುವಾಗ ಅಂತಾರಾಷ್ಟ್ರೀಯ ಕ್ರಿಕೆಟ್​ ಬಿಟ್ಟು ದೇಶೀಯ ಕ್ರಿಕೆಟ್​ನಲ್ಲಿ ಆಡಬೇಕು ಎನ್ನುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದು ಇಂಡಿಯನ್ ಎಕ್ಸ್ ಪ್ರೆಸ್​ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು.

Continue Reading

ಕ್ರಿಕೆಟ್

Mady Villiers: ಎಬಿಡಿ ವಿಲಿಯರ್ಸ್ ಶೈಲಿಯಲ್ಲೇ ಕ್ಯಾಚ್​ ಹಿಡಿದ ಇಂಗ್ಲೆಂಡ್​ ಆಟಗಾರ್ತಿ ಮ್ಯಾಡಿ ವಿಲಿಯರ್ಸ್; ವಿಡಿಯೊ ವೈರಲ್​

Mady Villiers: ಮ್ಯಾಡಿ ವಿಲಿಯರ್ಸ್ ಫೀಲ್ಡಿಂಗ್​ ಮಾತ್ರವಲ್ಲದೆ ಬೌಲಿಂಗ್​ನಲ್ಲಿ 1 ವಿಕೆಟ್​ ಪಡೆದರು. ಆದರೆ, ಬ್ಯಾಟಿಂಗ್​ನಲ್ಲಿ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ವಿಫಲರಾದರು. ಕೇವಲ ಒಂದು ರನ್​ಗೆ ಸೀಮಿತರಾಗಿ ವಿಕೆಟ್​ ಕಳೆದುಕೊಂಡರು.

VISTARANEWS.COM


on

Mady Villiers
Koo

ಲಂಡನ್​: ವಿಶ್ವ ಕ್ರಿಕೆಟ್‌ನಲ್ಲಿ ಈಗಾಗಲೇ ಹಲವು ಅದ್ಭುತ ಕ್ಯಾಚ್‌ಗಳು(stunning catch) ದಾಖಲಾಗಿವೆ. ಆ ಸಾಲಿಗೆ ಇದೀಗ ಇಂಗ್ಲೆಂಡ್​ ತಂಡದ ಆಟಗಾರ್ತಿ ಮ್ಯಾಡಿ ವಿಲಿಯರ್ಸ್(Mady Villiers) ಸೇರ್ಪಡೆಗೊಂಡಿದ್ದಾರೆ. ‘ದಿ ಹಂಟ್ರೆಡ್​’ ಕ್ರಿಕೆಟ್(The Hundred)​ ಟೂರ್ನಿಯ ಪಂದ್ಯವೊಂದರಲ್ಲಿ ಮ್ಯಾಡಿ ವಿಲಿಯರ್ಸ್ ಯಾರೂ ಊಹಿಸದ ರೀತಿಯಲ್ಲಿ ಮೇಲಕ್ಕೆ ಜಂಪ್ ಮಾಡಿ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಒಂದನ್ನು ಹಿಡಿಯುವ ಮೂಲಕ ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಸದ್ಯ ಈ ಕ್ಯಾಚ್​ನ ವಿಡಿಯೊ ವೈರಲ್​ ಆಗುತ್ತಿದ್ದು, ಮಹಿಳಾ ಕ್ರಿಕೆಟ್​ನಲ್ಲಿ ಕಂಡು ಬಂದ ಅತ್ಯದ್ಭುತ ಕ್ಯಾಚ್​ ಎಂದು ಕ್ರಿಕೆಟ್​ ಪಂಡಿತರು ಹೇಳಿದ್ದಾರೆ.

ಓವಲ್‌ ಇನ್ವಿನ್ಸಿಬಲ್‌ ತಂಡದ ಪರವಾಗಿ ಆಡುತ್ತಿರುವ 25 ವರ್ಷದ ಮ್ಯಾಡಿ ವಿಲಿಯರ್ಸ್‌ 30ಯಾರ್ಡ್​ನಲ್ಲಿ ಫೀಲ್ಡಿಂಗ್​ ನಡೆಸುತ್ತಿದ್ದರು. ಈ ವೇಳೆ ಎದುರಾಳಿ ತಂಡದ ಆಟಗಾರ್ತಿ ಬೌಂಡರಿ ಕಡೆಗೆ ಬಾರಿಸಿದ ಚೆಂಡನ್ನು ಕಣ್ಣು ಮಿಟುಕಿಸುವಷ್ಟರಲ್ಲಿ ಮೇಲಕ್ಕೆ ಜಿಗಿದು ತನ್ನ ಎಡಗೈಯಿಂದ ಕ್ಯಾಚ್​ ಹಿಡಿದು ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಈ ಕ್ಯಾಚ್​ ಕಂಡ ಪ್ರೇಕ್ಷಕರು ಒಂದು ಕ್ಷಣ ದಂಗಾಗಿದ್ದಾರೆ. ಅತ್ತ ಕಾಮೆಂಟ್ರಿ ನಡೆಸುತ್ತಿದ್ದವರು, ಕ್ಯಾಚ್‌ ಆಫ್‌ ದಿ ಟೂರ್ನಮೆಂಟ್‌ ಎಂದು ಬಣ್ಣಿಸಿದ್ದಾರೆ. ಟ್ರೆಂಟ್‌ ರಾಕೆಟ್ಸ್‌ ತಂಡ ಆರಂಭಿ ಆಟಗಾರ್ತಿ ಬ್ರಯೋನಿ ಸ್ಮಿತ್ ಅವರ ಕ್ಯಾಚ್​ ಇದಾಗಿತ್ತು.

ಇದನ್ನೂ ಓದಿ Kieron Pollard: ರಶೀದ್ ಖಾನ್‌ ಓವರ್​ನಲ್ಲಿ ಸತತ 5 ಸಿಕ್ಸರ್ ಬಾರಿಸಿದ ಪೊಲಾರ್ಡ್‌; ವಿಡಿಯೊ ಇಲ್ಲಿದೆ

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಟ್ರೆಂಟ್‌ ರಾಕೆಟ್ಸ್‌ ತಂಡ ಆಶ್ಲೀ ಗಾರ್ಡ್ನರ್(43) ಅವರ ಏಕಾಂಗಿ ಬ್ಯಾಟಿಂಗ್​ ಹೋರಾಟದ ನೆರವಿನಿಂದ 8 ವಿಕೆಟ್​ಗೆ 91 ರನ್​ ಬಾರಿಸಿ ಸವಾಲೊಡ್ಡಿತು. ಗುರಿ ಬೆನ್ನಟ್ಟಿದ ಓವಲ್‌ ಇನ್ವಿನ್ಸಿಬಲ್‌ ತಂಡ 5 ವಿಕೆಟ್​ ನಷ್ಟಕ್ಕೆ 92 ರನ್​ ಬಾರಿಸಿ ಗೆಲುವು ಸಾಧಿಸಿತು. ಮ್ಯಾಡಿ ವಿಲಿಯರ್ಸ್ ಫೀಲ್ಡಿಂಗ್​ ಮಾತ್ರವಲ್ಲದೆ ಬೌಲಿಂಗ್​ನಲ್ಲಿ 1 ವಿಕೆಟ್​ ಪಡೆದರು. ಅದು ಕೂಡ ಆಶ್ಲೀ ಗಾರ್ಡ್ನರ್ ಅವರದ್ದು. ಬ್ಯಾಟಿಂಗ್​ನಲ್ಲಿ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ವಿಫಲರಾದರು. ಕೇವಲ ಒಂದು ರನ್​ಗೆ ಸೀಮಿತರಾಗಿ ವಿಕೆಟ್​ ಕಳೆದುಕೊಂಡರು.

ಓವಲ್‌ ಇನ್ವಿನ್ಸಿಬಲ್‌ ತಂಡ ಆಡಿದ 8 ಪಂದ್ಯಗಳಲ್ಲಿ 5 ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ 2ನೇ ಸ್ಥಾನಿಯಾಗಿ ಸೆಮಿಫೈನಲ್​ ಹಂತಕ್ಕೇರಿದೆ. ನಾಳೆ(ಆ.17) ನಡೆಯುವ ಸೆಮಿ ಪಂದ್ಯದಲ್ಲಿ ಲಂಡನ್ ಸ್ಪಿರಿಟ್ ತಂಡದ ಸವಾಲು ಎದುರಿಸಲಿದೆ. ಗೆದ್ದರೆ ಆಗಸ್ಟ್​ 18ರಂದು ನಡೆಯುವ ಫೈನಲ್​ ಪಂದ್ಯದಲ್ಲಿ ವೆಲ್ಷ್ ಫೈರ್​ ತಂಡದ ವಿರುದ್ಧ ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ.

Continue Reading
Advertisement
Bureaucratic Reshuffle
ದೇಶ24 mins ago

Bureaucratic Reshuffle: ಆಡಳಿತಾತ್ಮಕ ಸುಧಾರಣೆಗೆ ಮೋದಿ ಗೇಮ್‌ ಪ್ಲಾನ್‌; ಉನ್ನತ ಮಟ್ಟದ ಅಧಿಕಾರಿಗಳ ಬದಲಾವಣೆ

Indian Paralympic Team
ಕ್ರೀಡೆ34 mins ago

Indian Paralympic Team: ಪದಕ ಬೇಟೆಗೆ ಹೊರಟ ಭಾರತೀಯ ಪ್ಯಾರಾಲಿಂಪಿಕ್ಸ್‌ ತಂಡಕ್ಕೆ ಬೀಳ್ಕೊಡುಗೆ

ICC Women's T20 World Cup
ಕ್ರೀಡೆ1 hour ago

ICC Women’s T20 World Cup: ಮಹಿಳಾ ಟಿ20 ವಿಶ್ವಕಪ್‌ ಆತಿಥ್ಯಕ್ಕೆ ಮುಂದಾದ ಜಿಂಬಾಬ್ವೆ

Union Cabinet meeting
ದೇಶ1 hour ago

Union Cabinet Meeting: 2 ಏರ್‌ಪೋರ್ಟ್‌ ಅಭಿವೃದ್ಧಿ, 3 ಮೆಟ್ರೋ ರೈಲು ಯೋಜನೆಗಳಿಗೆ ಕೇಂದ್ರ ಅಸ್ತು

Money Guide
ಮನಿ-ಗೈಡ್2 hours ago

Money Guide: ಎಸ್‌ಐಪಿ-ಪಿಪಿಎಫ್; ಹಣ ಹೂಡಿಕೆಗೆ ಯಾವುದು ಬೆಸ್ಟ್?

CM Siddaramaiah
ಬೆಂಗಳೂರು2 hours ago

CM Siddaramaiah: ಆಪಲ್‌ ಫೋನ್‌ ಬಿಡಿಭಾಗ ತಯಾರಕ ಫಾಕ್ಸ್‌ಕಾನ್ ಸಂಸ್ಥೆ ಅಧ್ಯಕ್ಷರೊಂದಿಗೆ ಸಿದ್ದರಾಮಯ್ಯ ಚರ್ಚೆ

Shivamogga News
ಕರ್ನಾಟಕ2 hours ago

Shivamogga News: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಾಲಯದಲ್ಲಿ ವಿಶೇಷ ಪೂಜೆ

Viral News
ಕ್ರೀಡೆ2 hours ago

Viral News: ಮಾವ ಎಮ್ಮೆ ಬದಲು ಆ ಗಿಫ್ಟ್​ ಕೊಡುತ್ತಿದ್ದರೆ ಸಂತಸವಾಗುತ್ತಿತ್ತು ಎಂದ ಒಲಿಂಪಿಕ್ಸ್ ಚಿನ್ನ​ ವಿಜೇತ ಅರ್ಷದ್​ ನದೀಮ್

Kolkata Doctor Murder Case
ದೇಶ3 hours ago

Kolkata Doctor murder case: ವೈದ್ಯೆ ಕೊಲೆ ಕೇಸ್‌; ಪ್ರತಿಭಟನಾಕಾರರ ಮೇಲೆ ವಾಹನ ಹರಿಸಲು ಪೊಲೀಸ್‌ ಯತ್ನ?

Bangalore Rain
ಮಳೆ3 hours ago

Bangalore Rain: ರಾಜಧಾನಿಯ ಹಲವೆಡೆ ಅಬ್ಬರಿಸಿದ ವರುಣ; ಆಟೋ ಮೇಲೆ ಮರ ಬಿದ್ದು ಚಾಲಕ ಸೇರಿ ಮೂವರಿಗೆ ಗಾಯ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌