Site icon Vistara News

Shreyas Iyer : ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್​ ಯಾಕೆ ಸ್ಥಾನ ಪಡೆಯಲಿಲ್ಲ?

shreyas iyer

ಕೊಲೊಂಬೊ: ಏಷ್ಯಾಕಪ್ 2023ರ ಸೂಪರ್ 4 ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶ ವಿರುದ್ಧ ಕಣಕ್ಕೆ ಇಳಿದಿದೆ. ವಿಶೇಷವೆಂದರೆ ಮೆನ್ ಇನ್ ಬ್ಲೂ ಈಗಾಗಲೇ ಫೈನಲ್​ಗೆ ಲಗ್ಗೆ ಇಟ್ಟಿದ್ದು, ಸಹ ಆತಿಥೇಯ ಶ್ರೀಲಂಕಾ ವಿರುದ್ಧದ ಪ್ರಶಸ್ತಿ ಫೈಟ್​ಗೆ ವೇದಿಕೆ ಸಿದ್ಧಪಡಿಸಿಕೊಂಡಿದೆ. ಏತನ್ಮಧ್ಯೆ, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬಾಂಗ್ಲಾ ವಿರುದ್ಧ ಕಣಕ್ಕೆ ಇಳಿದ ತಂಡದಲ್ಲಿ 4 ಬದಲಾವಣೆ ಮಾಡಿದ್ದಾರೆ. ಆದಾಗ್ಯೂ, ಮಧ್ಯಮ ಕ್ರಮಾಂಕದ ಬ್ಯಾಟರ್​ ಶ್ರೇಯಸ್ ಅಯ್ಯರ್ (Shreyas Iyer) ಅವರು ಆಡುವ 11ರ ಬಳಗದಲ್ಲಿ ಕಾಣಿಸಿಕೊಂಡಿಲ್ಲ.

ಶ್ರೇಯಸ್ ಅಯ್ಯರ್ ಪಾಕಿಸ್ತಾನ ಮತ್ತು ಶ್ರೀಲಂಕಾ ವಿರುದ್ಧದ ಪಂದ್ಯಗಳಿಂದ ಹೊರಗುಳಿದಿದ್ದರು. ಆದಾಗ್ಯೂ ಅಯ್ಯರ್ ಸುಧಾರಣೆಯನ್ನು ತೋರಿಸಿದ್ದಾರೆ ಎನ್ನಲಾಗಿದೆ. ಆದರೂ ಬೆನ್ನುನೋವಿನಿಂದ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ ಎಂದು ಬಿಸಿಸಿಐ ತಿಳಿಸಿದೆ. ಹೀಗಾಗಿ ಅವರು ಟೀಮ್​ ಇಂಡಿಯಾದ 11ರ ಬಳಗದಲ್ಲಿ ಅವಕಾಶ ಪಡೆದಿಲ್ಲ ಎನ್ನಲಾಗಿದೆ.

ಶ್ರೇಯಸ್ ಅಯ್ಯರ್ ಸುಧಾರಣೆಯನ್ನು ತೋರಿಸಿದ್ದಾರೆ. ಆದರೆ ಅವರು ಇನ್ನೂ ಸಂಪೂರ್ಣವಾಗಿ ಫಿಟ್ ಆಗಿಲ್ಲ ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.

ಶ್ರೇಯಸ್ ಅಯ್ಯರ್ ಏಪ್ರಿಲ್​ನಿಂದ ಗಾಯದಿಂದ ಬಳಲುತ್ತಿದ್ದಾರೆ. ದೀರ್ಘಕಾಲದ ವಿಶ್ರಾಂತಿ ಮತ್ತು ಬೆನ್ನು ಶಸ್ತ್ರಚಿಕಿತ್ಸೆಯ ನಂತರ 28 ವರ್ಷದ ಆಟಗಾರ ಕ್ರಿಕೆಟ್​ಗೆ ಮರಳಿದ್ದರು. ಗ್ರೂಪ್ ಲೀಗ್ ಹಂತದಲ್ಲಿ ಪಾಕಿಸ್ತಾನ ಮತ್ತು ನೇಪಾಳ ವಿರುದ್ಧ ಆಡಿದ್ದ ಅಯ್ಯರ್, ಬೆನ್ನುನೋವಿನಿಂದಾಗಿ ಟಾಸ್​ಗೆ ಸ್ವಲ್ಪ ಮೊದಲು ಭಾರತ ಮತ್ತು ಪಾಕಿಸ್ತಾನ ವಿರುದ್ಧ ಪಂದ್ಯದಿಂದ ಹೊರಗುಳಿದ ಮಾಹಿತಿ ಗೊತ್ತಾಗಿತ್ತು.

ಶ್ರೇಯಸ್ ಅಯ್ಯರ್ ಗಾಯದ ಅಪ್ಡೇಟ್

ವಿರಾಟ್, ಹಾರ್ದಿಕ್ ಬುಮ್ರಾಗೆ ವಿಶ್ರಾಂತಿ, ತಿಲಕ್ ಪಾದಾರ್ಪಣೆ

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾದಲ್ಲಿ ನಾಲ್ಕು ಬದಲಾವಣೆ ಮಾಡಲಾಗಿದೆ. ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ ಮತ್ತು ಕುಲದೀಪ್ ಯಾದವ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಏತನ್ಮಧ್ಯೆ, ಯುವ ಆಟಗಾರ ತಿಲಕ್ ವರ್ಮಾ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದಾರೆ. ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ ಮತ್ತು ಸೂರ್ಯಕುಮಾರ್ ಯಾದವ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ : Asia Cup 2023: ಬಾಂಗ್ಲಾ ಪಂದ್ಯಕ್ಕೆ ಭಾರತ ತಂಡದಲ್ಲಿ ಹಲವು ಬದಲಾವಣೆ

ಭಾರತ ತಂಡ: ರೋಹಿತ್ ಶರ್ಮಾ (ಸಿ), ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೆಎಲ್ ರಾಹುಲ್ (ವಿಕೆ), ಇಶಾನ್ ಕಿಶನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಪ್ರಯಾಣ ಮೀಸಲು).

Exit mobile version