ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ 2023ರ (IPL 2023) 55ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪರಸ್ಪರ ಎದುರಾಗಲಿವೆ. ಇತ್ತಂಡಗಳು ಹಾಲಿ ಆವೃತ್ತಿಯಲ್ಲಿ ಇದೇ ಮೊದಲ ಬಾರಿಗೆ ಎದುರಾಗುತ್ತಿವೆ. ಮೇ 20ರಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಎರಡನೇ ಬಾರಿಗೆ ಆಡಲಿವೆ.
ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಸ್ಥಿರವಾದ ತಂಡಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್ ಅನುಭವಿ ಎಂಎಸ್ ಧೋನಿ ನಾಯಕತ್ವದಲ್ಲಿ ಮತ್ತೊಂದು ಬಾರಿ ಭರ್ಜರಿ ಅಭಿಯಾನ ನಡೆಸುತ್ತಿದೆ. ಈ ತಂಡ ಇಲ್ಲಿಯವರೆಗೆ 11 ಪಂದ್ಯಗಳನ್ನು ಆಡಿದ್ದು ಆರು ಗೆಲುವುಗಳು ಮತ್ತು ನಾಲ್ಕು ಸೋಲುಗಳನ್ನು ಕಂಡಿವೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಒಂದು ಮುಖಾಮುಖಿ ಮಳೆಯಿಂದಾಗಿ ರದ್ದಾಗಿರುವ ಕಾರಣ ಒಂದು ಅಂಕ ಪಡೆದುಕೊಂಡಿತ್ತು. 13 ಅಂಕಗಳು ಮತ್ತು +0.409 ನೆಟ್ ರನ್ ರೇಟ್ ಹೊಂದಿರುವ ಚೆನ್ನೈ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
ಡೇವಿಡ್ ವಾರ್ನರ್ ನೇತೃತ್ವದ ಡೆಲ್ಲಿ ತಂಡವು ಈವರೆಗೆ ಹತ್ತು ಪಂದ್ಯಗಳನ್ನು ಆಡಿದ್ದು, ಕೇವಲ ನಾಲ್ಕು ಗೆಲುವು ಮತ್ತು ಆರು ಸೋಲುಗಳೊಂದಿಗೆ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. 8 ಅಂಕಗಳು ಮತ್ತು -0.529 ನೆಟ್ರನ್ರೇಟ್ನೊಂದಿಗೆ ಅವರು ಹತ್ತನೇ ಸ್ಥಾನದಲ್ಲಿದ್ದಾರೆ. ಹೀಗಾಗಿ ಮುಂದಿನ ಎಲ್ಲ ಪಂಧ್ಯಗಳನ್ನು ಗೆದ್ದರೆ ಮಾತ್ರ ಪ್ಲೇಆಫ್ ಅವಕಾಶವನ್ನು ಪಡೆಯಬಹುದು. ಈ ಭರವಸೆಯೊಂದಿಗೆ ತಂಡ ಗೆಲ್ಲಲು ಪ್ರಯತ್ನಿಸಲಿದೆ.
ಎಂ.ಎಸ್.ಧೋನಿ ನೇತೃತ್ವದ ಚೆನ್ನೈ ತಂಡವು ಕಳೆದ ಪಂದ್ಯದಲ್ಲಿ ತನ್ನ ಸಾಂಪ್ರದಾಯಿಕ ಎದುರಾಳಿ ಮುಂಬೈ ಇಂಡಿಯನ್ಸ್ ತಂಡವನ್ನು ಆರು ವಿಕೆಟ್ ಗಳಿಂದ ಸೋಲಿಸಿತ್ತು. ಐದು ಬಾರಿಯ ಚಾಂಪಿಯನ್ಸ್ ಕೇವಲ 139 ರನ್ಗಳು ಬಾರಿಸಿದ್ದರಿಂದ ಚೆನ್ನೈ ಸುಲಭ ಜಯ ದಾಖಲಿಸಿತ್ತು, ಈ ಪಂದ್ಯದಲ್ಲಿ ಚೆನ್ನೈ ಬೌಲರ್ಗಳು ಮಿಂಚಿದ್ದರು. ಹೀಗಾಗಿ, ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟರ್ಗಳು ಸಿಎಸ್ಕೆ ಬೌಲರ್ಗಳ ಬಗ್ಗೆ ಎಚ್ಚರಿಕೆ ವಹಿಸಲಿದ್ದಾರೆ. ಶ್ರೀಲಂಕಾದ ಮಥೀಷಾ ಪತಿರಾನಾ ಎದುರಾಳಿ ತಂಡಕ್ಕೆ ಅಪಾಯಕಾರಿ ಎನಿಸಿಕೊಂಡಿದ್ದಾರೆ.
ಚೆನ್ನೈ ಬ್ಯಾಟ್ಸ್ಮನ್ಗಳ ವಿಷಯಕ್ಕೆ ಬಂದರೆ, ಡೆವೊನ್ ಕಾನ್ವೇ ಮತ್ತು ಋತುರಾಜ್ ಗಾಯಕ್ವಾಡ್ ಉತ್ತಮ ಲಯದಲ್ಲಿದ್ದಾರೆ. ಅಜಿಂಕ್ಯ ರಹಾನೆ ಕೂಡ ಗೆಲುವು ತಂದುಕೊಡುವ ಸಾಮರ್ಥ್ಯ ಹೊಂದಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಶಿವಂ ದುಬೆ ಕೂಡ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದಾರೆ.
ಸುಧಾರಣೆ ಕಾಣಬೇಕು ಡೆಲ್ಲಿ
ಏತನ್ಮಧ್ಯೆ, ಐಪಿಎಲ್ 2023 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತನ್ನ ಕೊನೆಯ ಐದು ಪಂದ್ಯಗಳಲ್ಲಿ ನಾಲ್ಕು ಪಂದ್ಯಗಳನ್ನು ಗೆದ್ದಿದೆ. ಆಸ್ಟ್ರೇಲಿಯಾದ ಆಲ್ರೌಂಡರ್ ಮಿಶೆಲ್ ಮಾರ್ಷ್ ಈ ಅದ್ಭುತ ಫಾರ್ಮ್ನಲ್ಲಿದ್ದಾರೆ. ಇತರ ಆಟಗಾರರರೂ ಬ್ಯಾಟ್ ಬೀಸಲು ಆರಂಭಿಸಿದ್ದಾರೆ. ಆರ್ಸಿಬಿವಿರುದ್ಧದ ಕೊನೆಯ ಪಂದ್ಯದಲ್ಲಿ ಆರಂಭಿಕ ಆಟಗಾರ ಫಿಲ್ ಸಾಲ್ಟ್ 45 ಎಸೆತಗಳಲ್ಲಿ 87 ರನ್ ಗಳಿಸಿದ್ದಾರೆ. ಈ ತಂಡದ ಬೌಲರ್ಗಳು ಹೆಚ್ಚು ಸುಧಾರಣೆ ಕಾಣಬೇಕಾಗಿದೆ. ಇಶಾಂತ್ ಶರ್ಮಾ ಉತ್ತಮ ಫಾರ್ಮ್ನಲ್ಲಿದ್ದಾರೆ. ಅಕ್ಷರ್ ಪಟೇಲ್ ಕೂಡ ಉತ್ತಮ ಫಾರ್ಮ್ನಲ್ಲಿ ಆಡುತ್ತಿದ್ದಾರೆ. ಕುಲ್ದೀಪ್ ರನ್ ಸೋರಿಕೆ ಮಾಡುತ್ತಿರುವುದು ಆತಂಕದ ವಿಷಯವಾಗಿದೆ.
ಪಿಚ್ ಮತ್ತು ಷರತ್ತುಗಳು
ಎಂಎ ಚಿದಂಬರಂ ಸ್ಟೇಡಿಯಂನ ಪಿಚ್ ಬ್ಯಾಟ್ಸ್ಮನ್ಗಳ ಸ್ವರ್ಗ ಎನಿಸಿದೆ. ಮೊದಲು ಬೌಲಿಂಗ್ ಮಾಡುವುದು ಸೂಕ್ತ. ಮದೊಲು ಬ್ಯಾಟ್ ಮಾಡಿದ ತಂಡ 200ಕ್ಕಿಂತ ಅಧಿಕ ರನ್ ಪೇರಿಸಲೇಬೇಕು.
ಸಂಭಾವ್ಯ ಆಡುವ ಬಳಗ
ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೆ, ಅಜಿಂಕ್ಯ ರಹಾನೆ, ಮೊಯೀನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ), ದೀಪಕ್ ಚಾಹರ್, ಮಥೀಶಾ ಪತಿರಾನಾ, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಾನಾ.
ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್ (ನಾಯಕ), ಫಿಲ್ ಸಾಲ್ಟ್ (ವಿಕೆಟ್ ಕೀಪರ್), ಮಿಚೆಲ್ ಮಾರ್ಷ್, ರಿಲೀ ರೊಸೌ, ಅಕ್ಷರ್ ಪಟೇಲ್, ಮನೀಶ್ ಪಾಂಡೆ, ಅಮನ್ ಹಕೀಮ್ ಖಾನ್, ಕುಲದೀಪ್ ಯಾದವ್, ಮುಖೇಶ್ ಕುಮಾರ್, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್.
ಇತ್ತಂಡಗಳ ಬಲಾಬಲ
ಒಟ್ಟು ಆಡಿದ ಪಂದ್ಯಗಳು – 27
ಚೆನ್ನೈ ಸೂಪರ್ ಕಿಂಗ್ಸ್ ಗೆಲವು – 17
ಡೆಲ್ಲಿ ಕ್ಯಾಪಿಟಲ್ಸ್ ಗೆಲುವು- 10
ಪಂದ್ಯದ ವಿವರ
ಪಂದ್ಯ ಸಮಯ: ಸಂಜೆ 07:30
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್
ಲೈವ್ ಸ್ಟ್ರೀಮಿಂಗ್: ಜಿಯೋ ಸಿನೆಮಾ ಅಪ್ಲಿಕೇಶನ್ ಮತ್ತು ವೆಬ್ಸೈಟ್