ಮುಂಬಯಿ : ಆಸ್ಟ್ರೇಲಿಯಾ ವಿರುದ್ಧದ ಟಿ೨೦ ಸರಣಿಯ ಮೂರನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat kohli)ಲಿ ೬೩ ರನ್ ಬಾರಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸಿದ್ದರು. ಇದೇ ವೇಳೆ ಅವರು ಭಾರತ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದು, ಭಾರತ ತಂಡದ ಮಾಜಿ ಬ್ಯಾಟರ್ ಹಾಗೂ ಹಾಲಿ ಕೋಚ್ ರಾಹುಲ್ ದ್ರಾವಿಡ್ ಅವರನ್ನು ಒಟ್ಟಾರೆ ರನ್ ಗಳಿಕೆಯಲ್ಲಿ ಹಿಂದಿಕ್ಕಿದ್ದಾರೆ.
ವಿರಾಟ್ ಕೊಹ್ಲಿ ಪ್ರಸ್ತುತ ೧೦೨ ಟೆಸ್ಟ್, ೨೬೨ ಒಡಿಐ ಹಾಗೂ ೧೦೭ ಟಿ೨೦ ಪಂದ್ಯಗಳಲ್ಲಿ ಒಟ್ಟಾರೆ ೨೪, ೦೭೮ ರನ್ ಬಾರಿಸಿದ್ದಾರೆ. ಈ ಮೂಲಕ ಅವರು ರಾಹುಲ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬಾರಿಸಿರುವ 24064 ರನ್‌ಗಳನ್ನು ಮೀರಿಸಿದ್ದಾರೆ. ಈ ಮೂಲಕ ಗರಿಷ್ಠ ಅಂತಾರಾಷ್ಟ್ರೀಯ ರನ್‌ಗಳನ್ನು ಬಾರಿಸಿದ ಭಾರತೀಯರ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ. ಕೊಹ್ಲಿಯ ದಾಖಲೆಯಲ್ಲಿ ೭೧ ಶತಕಗಳು ಹಾಗೂ ೧೨೫ ಅರ್ಧ ಶತಕಗಳು ಸೇರಿಕೊಂಡಿವೆ. ಅದೇ ರೀತಿ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ೧೬ ಸಾವಿರ ರನ್ ಬಾರಿಸಿದ ದಾಖಲೆಯನ್ನೂ ಮಾಡಿದ್ದಾರೆ.
ಹೆಚ್ಚು ಅಂತಾರಾಷ್ಟ್ರೀಯ ರನ್‌ಗಳನ್ನು ಬಾರಿಸಿರುವವರ ಪಟ್ಟಿಯಲ್ಲಿ ರಾಹುಲ್ ದ್ರಾವಿಡ್ ಅವರೇ ಎರಡನೇ ಸ್ಥಾನ ಪಡೆದುಕೊಂಡಿದ್ದು, ವರ್ಲ್ಡ್ ಇಲೆವೆನ್, ಏಷ್ಯಾ ಇಲೆವೆನ್ ತಂಡಗಳ ರನ್ ಸೇರಿಸಿದರೆ ಅವರ ಒಟ್ಟು ರನ್‌ಗಳು 24,208. ಎಲ್ಲ ಮಾದರಿಯಲ್ಲಿ ಸೇರಿ 34,357 ರನ್ ಬಾರಿಸಿರುವ ಸಚಿನ್ ತೆಂಡೂಲ್ಕರ್ ಅವರು ಈ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ |IND vs ZIM ODI | ಜಿಂಬಾಬ್ವೆ ವಿರುದ್ಧ ಶತಕ ಬಾರಿಸಿ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ಶುಬ್ಮನ್ ಗಿಲ್