Site icon Vistara News

ತಾಯಿ, ಮಗಳ ಜೀವ ತೆಗೆಯಿತು ಐಪಿಎಲ್ ಲಕ್ನೊ ತಂಡದ ಹೋರ್ಡಿಂಗ್

Ekana Stadium

#image_title

ಲಖನೌ: ಲಕ್ನೋದ ಅಟಲ್ ಬಿಹಾರಿ ವಾಜಪೇಯಿ (ಎಕಾನಾ) ಕ್ರಿಕೆಟ್ ಸ್ಟೇಡಿಯಂ ಬಳಿ ಸೋಮವಾರ ಭಾರಿ ಬಿರುಗಾಳಿಯ ಸಮಯದಲ್ಲಿ ದೊಡ್ಡ ಹೋರ್ಡಿಂಗ್ ಬಿದ್ದು ಕಾರು ನಜ್ಜುಗುಜ್ಜಾದ ಪರಿಣಾಮ ತಾಯಿ, ಮಗಳು ಮೃತಪಟ್ಟಿದ್ದಾಳೆ. ಘಟನೆಯಲ್ಲಿ ಚಾಲಕ ಗಾಯಗೊಂಡಿದ್ದಾರೆ. ತಾಯಿ-ಮಗಳು ಇಬ್ಬರನ್ನೂ ಲೋಹಿಯಾ ಆಸ್ಪತ್ರೆಗೆ ದಾಖಲಿಸಿದ್ದರೂ ಆಗಲೇ ಅವರಿಬ್ಬರು ಮೃತಪಟ್ಟಿದ್ದಾರೆ ಎಂದು ಅಲ್ಲಿನ ವೈದ್ಯರು ಘೋಷಿಸಿದ್ದಾರೆ.

ಗಾಜಿಪುರ ಪೊಲೀಸ್ ಠಾಣೆ ಪ್ರದೇಶದ ಇಂದಿರಾ ನಗರ ಕಾಲೋನಿ ನಿವಾಸಿಗಳಾದ ಪ್ರೀತಿ ಜಗ್ಗಿ (38) ಮತ್ತು ಅವರ ಮಗಳು ಏಂಜೆಲ್ (15) ಪ್ರಯಾಣಿಸುತ್ತಿದ್ದ ಸ್ಕಾರ್ಪಿಯೋ ವಾಹನದ ಮೇಲೆ ಜಾಹೀರಾತು ಫಲಕ ಬಿದ್ದಿದೆ ಎಂದು ಗೋಸಾಯ್​​ಗಂಜ್ ಸಹಾಯಕ ಪೊಲೀಸ್ ಆಯುಕ್ತ (ಎಎಸ್ಪಿ) ಅಮಿತ್ ಕುಮಾವತ್ ಮಾಹಿತಿ ನೀಡಿದ್ದಾರೆ.

ಅವರು ತಮ್ಮ ಚಾಲಕ ಸರ್ತಾಜ್ (28) ಅವರೊಂದಿಗೆ ಮಾಲ್ಗೆ ಪ್ರದೇಶಕ್ಕೆ ಹೋಗುತ್ತಿದ್ದಾಗ ದುರಂತ ಸಂಭವಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಕ್ರೀಡಾಂಗಣದ ಗೇಟ್ ಸಂಖ್ಯೆ 2 ರ ಮುಂಭಾಗದ ಜಾಹೀರಾತು ಫಲಕವು ಅವರ ವಾಹನದ ಮೇಲೆ ಬಿದ್ದಿದೆ ಎಂದು ಅವರು ಹೇಳಿದರು. ಸರ್ತಾಜ್ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ತನಿಖೆ ಆರಂಭಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : Odisha Train Accident: ರೈಲು ಅಪಘಾತ ಸಂಭವಿಸಿದ ಸ್ಥಳದಲ್ಲಿ ‘ಪ್ರೇಮ ಕವನಗಳು’ ಅನಾಥ!

ಸೋಷಿಯಲ್ ಮೀಡಿಯಾದಲ್ಲಿ ಓಡಾಡುತ್ತಿರುವವೀಡಿಯೊದಲ್ಲಿ, ಜಾಹೀರಾತು ಫಲಕದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಚಾಲಕ ಸಹಾಯಕ್ಕಾಗಿ ತೀವ್ರವಾಗಿ ಬೇಡಿಕೊಳ್ಳುತ್ತಿರುವುದನ್ನು ಕಾಣಬಹುದು. ಚಂಡಮಾರುತದ ಪರಿಣಾಮವಾಗಿ ಬೃಹತ್ ಬೋರ್ಡ್ ಕುಸಿದಿದೆ ಎಂದು ಹೇಳಲಾಗಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ಪೊಲೀಸರು ಘಟನಾ ಸ್ಥಳದಲ್ಲಿ ಹಾಜರಿದ್ದರು. ತಕ್ಷಣವೇ ಎಲ್ಲಾ ಪ್ರಯಾಣಿಕರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಸ್ಕಾರ್ಪಿಯೋ ಎಸ್ ಯುವಿ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿತ್ತು. ಹೀಗಾಗಿ ತಕ್ಷಣದಲ್ಲೇ ಒಳಗೆ ಸಿಲುಕಿದ್ದವರನ್ನು ಹೊರಗೆ ಎಳೆಯಲು ಸಾಧ್ಯವಾಗಿರಲಿಲ್ಲ. ಕ್ರೇನ್ ಸಹಾಯದಿಂದ ಬಿದ್ದ ಜಾಹೀರಾತು ಫಲಕವನ್ನು ತೆಗೆದು ಹಾಕಿ ಅವರನ್ನು ಹೊರಗೆಳೆಯಲಾಗಿದೆ.

ಎಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಇತ್ತೀಚೆಗೆ ನಡೆದ ಐಪಿಎಲ್ ಪಂದ್ಯಗಳಿಗೆ ಸಂಬಂಧಿಸಿದ ಹೋರ್ಡಿಂಗ್​ ಇದಾಗಿದೆ. ಈ ಕ್ರೀಡಾಂಗಣವು 2018ರಲ್ಲಿ ತನ್ನ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನು ಆಯೋಜಿಸಿದ್ದು ಅಲ್ಲಿಂದ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಐಪಿಎಲ್​ನ ಲಕ್ನೊ ಸೂಪರ್​ ಜೈಂಟ್ಸ್​ ತಂಡದ ತವರ ಸ್ಟೇಡಿಯಮ್​ ಇದಾಗಿದೆ.

Exit mobile version