Womens Asia Cup: ಶಫಾಲಿ ಬ್ಯಾಟಿಂಗ್​ ಆರ್ಭಟ; ಭಾರತಕ್ಕೆ ಹ್ಯಾಟ್ರಿಕ್​ ಜಯ - Vistara News

ಕ್ರೀಡೆ

Womens Asia Cup: ಶಫಾಲಿ ಬ್ಯಾಟಿಂಗ್​ ಆರ್ಭಟ; ಭಾರತಕ್ಕೆ ಹ್ಯಾಟ್ರಿಕ್​ ಜಯ

Womens Asia Cup: ಶಫಾಲಿ ವಿಕೆಟ್​ ಪತನದ ಬಳಿಕ ಮಧ್ಯಮ ಕ್ರಮಾಂಕದಲ್ಲಿ ಆಡಲಿಳಿದ ಅನುಭವಿ ಆಟಗಾರ್ತಿ ಜೆಮಿಮಾ ರಾಡ್ರಿಗಸ್ ಆಕ್ರಮಣಕಾರಿ ಬ್ಯಾಟಿಂಗ್​ ನಡೆಸಿ 15 ಎಸೆತಗಳಿಂದ ಅಜೇಯ 28 ರನ್​ ಬಾರಿಸಿದರು.

VISTARANEWS.COM


on

Womens Asia Cup
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಂಬುಲ್ಲಾ(ಶ್ರೀಲಂಕಾ): ಲೇಡಿ ಸೆಹವಾಗ್​ ಖ್ಯಾತಿಯ ಡ್ಯಾಶಿಂಗ್​ ಓಪನರ್​ ಶಫಾಲಿ ವರ್ಮಾ(81) ಅವರ ಪ್ರಚಂಡ ಬ್ಯಾಟಿಂಗ್ ಹಾಗೂ ಬೌಲರ್​ಗಳ ಸಂಘಟಿತ ಪ್ರದರ್ಶನದ ನೆರವು ಪಡೆದ ಭಾರತ ತಂಡ ಮಹಿಳಾ ಏಷ್ಯಾಕಪ್​ ಟಿ20 ಟೂರ್ನಿಯಲ್ಲಿ(Womens Asia Cup) ನೇಪಾಳ(India Women vs Nepal Women) ವಿರುದ್ಧ 82 ರನ್​ಗಳ ಗೆಲುವು ಸಾಧಿಸಿದೆ. ಈ ಮೂಲಕ ಆಡಿದ ಎಲ್ಲ ಪಂದ್ಯಗಳನ್ನು ಗೆದ್ದು ಅಜೇಯವಾಗಿ ಸೆಮಿಫೈನಲ್​ ಹಂತಕ್ಕೇರಿದೆ.

ಇಲ್ಲಿನ ರಂಗಿರಿ ದಂಬುಲ್ಲಾ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ(Rangiri Dambulla International Stadium) ನಡೆದ ಅಂತಿಮ ಲೀಗ್​ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಭಾರತ ತಂಡ ಆರಂಭಿಕ ಆಟಗಾರ್ತಿಯಾದ ದಯಾಳನ್‌ ಹೇಮಲತಾ(47) ಮತ್ತು ಶಫಾಲಿ ವರ್ಮಾ ಅವರ ಬಿರುಸಿನ ಬ್ಯಾಟಿಂಗ್​ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 178 ರನ್​ ಪೇರಿಸಿತು. ಗುರಿ ಬೆನ್ನಟ್ಟಿದ ನೇಪಾಳ ಆರಂಭದಲ್ಲೇ ಸತತವಾಗಿ ವಿಕೆಟ್​ ಕಳೆದುಕೊಂಡು ಅಂತಿಮವಾಗಿ  9 ವಿಕೆಟ್​ಗೆ 96 ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು.

ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಯುಎಇ ವಿರುದ್ಧ ಆರು ವಿಕೆಟ್​ ಗೆಲುವಿನೊಂದಿಗೆ ಐತಿಹಾಸಿಕ ಸಾಧನೆ ಮಾಡಿದ್ದ ನೇಪಾಳ ತಂಡ ಇಂದಿನ ಪಂದ್ಯದಲ್ಲಿ ಭಾರತ ವಿರುದ್ಧ ದೊಡ್ಡ ಅಂತರದ ಗೆಲುವು ಸಾಧಿಸುತ್ತಿದ್ದರೆ ಪಾಕಿಸ್ತಾನವನ್ನು ಹಿಂದಿಕ್ಕಿ ಸೆಮಿಫೈನಲ್​ ಹಂತಕ್ಕೇರುವ ಅವಕಾಶವಿತ್ತು. ಆದರೆ ಸೋಲು ಕಂಡು ಈ ಅವಕಾಶದಿಂದ ವಂಚಿತವಾಯಿತು. ಭಾರತ ಪರ ಬೌಲಿಂಗ್​ನಲ್ಲಿ ಅರುಂಧತಿ ರೆಡ್ಡಿ(2), ದೀಪ್ತಿ ಶರ್ಮಾ(3), ರಾಧಾ ಯಾದವ್​(2) ವಿಕೆಟ್​ ಕಿತ್ತು ಮಿಂಚಿದರು.

ಉತ್ತಮ ಆರಂಭ ಪಡೆದ ಭಾರತ


ಮೊದಲು ಬ್ಯಾಟಿಂಗ್​ ನಡೆಸಿದ ಭಾರತ ಪರ ಆರಂಭಿಕ ಆಟಗಾರ್ತಿಯಾದ ದಯಾಳನ್‌ ಹೇಮಲತಾ ಮತ್ತು ಶಫಾಲಿ ವರ್ಮಾ ಜಿದ್ದಿಗೆ ಬಿದ್ದವರಂತೆ ಬ್ಯಾಟಿಂಗ್​ ನಡೆಸಿದರು. ಉಭಯ ಆಟಗಾರ್ತಿಯರ ಈ ಬ್ಯಾಟಿಂಗ್​ ಪೈಪೋಟಿಯಿಂದಾಗಿ ತಂಡ ಉತ್ತಮ ಆರಂಭ ಪಡೆಯಿತು. ಮೊದಲ ವಿಕೆಟ್​ಗೆ ಈ ಜೋಡಿ ಬರೋಬ್ಬರಿ 122 ರನ್​ ಒಟ್ಟುಗೂಡಿಸಿತು. ಬಿರುಸಿನ ಬ್ಯಾಟಿಂಗ್​ ನಡೆಸುತ್ತಿದ್ದ ಹೇಮಲತಾ 47 ರನ್​ ಗಳಿಸಿದ್ದ ವೇಳೆ ವಿಕೆಟ್​ ಕೈಚೆಲ್ಲಿದರು. ಕೇವಲ 3 ರನ್​ ಅಂತೆದಿಂದ ಅರ್ಧಶತಕ ತಪ್ಪಿಸಿಕೊಂಡರು. ಅವರ ಈ ಸೊಗಸಾದ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 5 ಬೌಂಡರಿ ಮತ್ತು 1 ಸಿಕ್ಸರ್​ ದಾಖಲಾಯಿತು.

ಇದನ್ನೂ ಓದಿ

ದಾಖಲೆ ಬರೆದ ಶಫಾಲಿ


ಜತೆಗಾರ್ತಿ ಹೇಮಲತಾ ವಿಕೆಟ್​ ಬಿದ್ದರೂ ಕೂಡ ಶಫಾಲಿ ಬ್ಯಾಟಿಂಗ್​ ಆರ್ಭಟಕ್ಕೇನು ಅಡ್ಡಿಯಾಗಲಿಲ್ಲ. ಅವರು ಮುನ್ನುಗ್ಗಿ ಬಾರಿಸುತ್ತಲೇ ಇದ್ದರು. ಕೇವಲ 26 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿದರು. ಇದು ಅವರ 10ನೇ ಟಿ20 ಅರ್ಧಶತಕ. ಇನ್ನೇನು ಶತಕ ಬಾರಿಸುತ್ತಾರೆ ಎನ್ನುವಷ್ಟರಲ್ಲಿ ಅವಸರ ಮಾಡಿಕೊಂಡು ಸ್ಟಂಪ್ಡ್​ ಆಗಿ ವಿಕೆಟ್​ ಕಳೆದುಕೊಂಡರು. 48 ಎಸೆತ ಎದುರಿಸಿದ ಶಫಾಲಿ 12 ಬೌಂಡರಿ ಮತ್ತು 1 ಸಿಕ್ಸರ್​ ನೆರವಿನಿಂದ 81 ರನ್​ ಬಾರಿಸಿದರು. ಇದೇ ವೇಳೆ ಏಷ್ಯಾಕಪ್​ ಟೂರ್ನಿಯಲ್ಲಿ ಭಾರತ ಪರ ಅತ್ಯಧಿಕ ವೈಯಕ್ತಿಕ ರನ್​ ಬಾರಿಸಿದ 2ನೇ ಆಟಗಾರ್ತಿ ಎನಿಸಿಕೊಂಡರು. ದಾಖಲೆ ಮಾಜಿ ಆಟಗಾರ್ತಿ ಮಿಥಾಲಿ ರಾಜ್​ ಹೆಸರಿನಲ್ಲಿದೆ. ಮಿಥಾಲಿ 2018 ರಲ್ಲಿ ಮಲೇಷ್ಯಾ ವಿರುದ್ಧ ಅಜೇಯ 97 ರನ್​ ಬಾರಿಸಿದ್ದರು. 2022 ರಲ್ಲಿ ಶ್ರೀಲಂಕಾ ವಿರುದ್ಧ 76 ರನ್​ ಬಾರಿಸಿದ್ದ ಜೆಮಿಮಾ ರಾಡ್ರಿಗಸ್ ದಾಖಲೆ ಪತನಗೊಂಡಿತು. ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 3 ಸಾವಿರ ರನ್​ ಪೂರೈಸಿದ ದಾಖಲೆಯನ್ನೂ ಕೂಡ ಶಫಾಲಿ ಈ ಪಂದ್ಯದಲ್ಲಿ ನಿರ್ಮಿಸಿದರು.

ಶಫಾಲಿ ವಿಕೆಟ್​ ಪತನದ ಬಳಿಕ ಮಧ್ಯಮ ಕ್ರಮಾಂಕದಲ್ಲಿ ಆಡಲಿಳಿದ ಅನುಭವಿ ಆಟಗಾರ್ತಿ ಜೆಮಿಮಾ ರಾಡ್ರಿಗಸ್ ಆಕ್ರಮಣಕಾರಿ ಬ್ಯಾಟಿಂಗ್​ ನಡೆಸಿ 15 ಎಸೆತಗಳಿಂದ ಅಜೇಯ 28 ರನ್​ ಬಾರಿಸಿದರು. ರಿಚಾ ಘೋಷ್​ 6 ರನ್​ ಗಳಿಸಿ ಅಜೇಯರಾಗಿ ಉಳಿದರು. ಎಸ್​ ಸಜನಾ 10 ರನ್​ ಬಾರಿಸಿದರು. ನೇಪಾಳ ಪರ ಸೀತಾ ರಾಣಾ ಮಗರ್ 25 ರನ್​ ವೆಚ್ಚದಲ್ಲಿ 2 ವಿಕೆಟ್​ ಕಿತ್ತರು.

ಹರ್ಮನ್​ಪ್ರೀತ್​ಗೆ ವಿಶ್ರಾಂತಿ

ಖಾಯಂ ನಾಯಕಿ ಹರ್ಮನ್​ಪ್ರೀತ್​ ಕೌರ್​ ಅನುಪಸ್ಥಿತಿಯಲ್ಲಿ ಸ್ಮೃತಿ ಮಂಧಾನ ಹಂಗಾಮಿಯಾಗಿ ತಂಡವನ್ನು ಮುನ್ನಡೆಸಿದರು. ಆದರೆ ಅವರು ಬ್ಯಾಟಿಂಗ್​ ನಡೆಸಲಿಲ್ಲ. ಯುವ ಆಟಗಾರ್ತಿಯರಿಗೆ ಅವಕಾಶ ನೀಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Paris Olympics: ಒಲಿಂಪಿಕ್ಸ್​ ನೋಡಲು ಬಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಸಿಸಿಟಿವಿಯಲ್ಲಿ ಭಯಾನಕ ವಿಡಿಯೊ ಸೆರೆ

Paris Olympics: ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟ ನೋಡಲು ಬಂದಿದ್ದ ಆಸ್ಟ್ರೇಲಿಯಾ ಮೂಲದ ಮಹಿಳೆಯ ಮೇಲೆ ಐವರು ಬರ್ಬರವಾಗಿ ಗ್ಯಾಂಗ್‌ ರೇಪ್ ಮಾಡಿರುವ ಆತಂಕಕಾರಿ ಘಟನೆ ತಡವಾಗಿ ನಡೆದಿದೆ. ಈ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

VISTARANEWS.COM


on

Paris Olympics
Koo

ಪ್ಯಾರಿಸ್​: ಜಗತ್ತಿನ ಅತ್ಯಂತ ದೊಡ್ಡ ಕ್ರೀಡಾಕೂಟವಾದ ಒಲಿಂಪಿಕ್ಸ್‌(Paris Olympics) ಟೂರ್ನಿಯ ಆತಿಥ್ಯ ವಹಿಸಿಕೊಂಡ ‘ಬೆಳಕಿನ ನಗರಿ’ ಪ್ಯಾರಿಸ್‌ ಈ ಕ್ರೀಡಾ ಮಹಾಮೇಳಕ್ಕೆ ಸಿದ್ಧವಾಗಿ ನಿಂತಿದೆ. ಇನ್ನೆರಡು ದಿನಗಳು ಕಳೆದರೆ ಇಲ್ಲಿ ಒಲಿಂಪಿಕ್ಸ್ ಜ್ಯೋತಿಯು ಪ್ರಜ್ವಲಿಸಲಿದೆ. ಆದರೆ, ಈ ಮಹಾ ಕ್ರೀಡಾಕೂಟ ಆರಂಭಕ್ಕೂ ಮುನ್ನವೇ ಪ್ಯಾರಿಸ್​ನಲ್ಲಿ ಅಹಿತಕರ ಘಟನೆಗಳು ನಡೆಯುತ್ತಿರುವುದು ಕ್ರೀಡಾಭಿಮಾನಿಗಳನ್ನು ಬೆಚ್ಚಿ ಬೀಳಿಸಿದೆ.

ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟ ನೋಡಲು ಬಂದಿದ್ದ ಆಸ್ಟ್ರೇಲಿಯಾ ಮೂಲದ ಮಹಿಳೆಯ ಮೇಲೆ ಐವರು ಬರ್ಬರವಾಗಿ ಗ್ಯಾಂಗ್‌ ರೇಪ್ ಮಾಡಿರುವ ಆತಂಕಕಾರಿ ಘಟನೆ ತಡವಾಗಿ ನಡೆದಿದೆ. ಈ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. 25 ವರ್ಷದ ಆಸ್ಟ್ರೇಲಿಯಾ ಮಹಿಳೆಯ ಮೇಲೆ ಗ್ಯಾಂಗ್‌ ರೇಪ್ ಮಾಡಲಾಗಿದೆ.

ಜುಲೈ 19ರ ರಾತ್ರಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೌಲಿನ್ ರೋಗ್ ಕ್ಯಾಬರ್ಟ್‌ನ ಪಬ್​ ಒಂದರಲ್ಲಿ ಮದ್ಯ ಸೇವಿಸಿ, ಹೊರ ಬರುವ ಸಂದರ್ಭದಲ್ಲಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಗ್ಯಾಂಗ್ ರೇಪ್ ನಡೆಸಿದ್ದಾಗಿ ಮಹಿಳೆ ತನ್ನ ದೂರಿನಲ್ಲಿ ಆರೋಪಿಸಿದ್ದಾಳೆ.

ವೈರಲ್​ ಆಗುತ್ತಿರುವ ವಿಡಿಯೊದಲ್ಲಿ ಆಕೆ ಹರಿದ ಬಟ್ಟೆಯಲ್ಲೇ ಸಹಾಯಕ್ಕಾಗಿ ಹತ್ತಿರದಲ್ಲೇ ಇದ್ದ ಕಬಾಬ್ ಶಾಪ್‌ಗೆ ಓಡಿ ಬಂದು ಬಂದು ರಕ್ಷಣೆ ಪಡೆದಿದ್ದಾಳೆ. ಈ ಎಲ್ಲ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿಸಿಟಿವಿ ವಿಡಿಯೊ ಕಂಡ ಅನೇಕರು ಈ ಘಟನೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಫ್ರಾನ್ಸ್​ನಲ್ಲಿ ಮಹಿಳೆಯರಿಗೆ ಸರಿಯಾದ ಸುರಕ್ಷತೆ ಮತ್ತು ರಕ್ಷಣ ಇಲ್ಲ ಎಂದು ಆರೋಪಿಸಿದ್ದಾರೆ. ಸಿಸಿಟಿವಿ ವಿಡಿಯೋದಲ್ಲಿ ಆ ಮಹಿಳೆಯು ಓಡೋಡಿ ಬರುವುದು, ಭಯಭೀತರಾಗಿರುವುದು, ಸಹಾಯಕ್ಕಾಗಿ ಅಲ್ಲಿರುವ ಸಿಬ್ಬಂದಿಗಳಲ್ಲಿ ಮನವಿ ಮಾಡಿಕೊಳ್ಳುವ ದೃಶ್ಯಾವಳಿಗಳು ಸೆರೆಯಾಗಿವೆ. ಈಗಾಗಲೇ ಪ್ಯಾರಿಸ್ ನಗರದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದರೂ ಕೂಡ ಈ ಘಟನೆ ನಡೆದಿರುವು ನಿಜಕ್ಕೂ ಆಘಾತಕಾರಿ ಸಂಗತಿ.

ಇದನ್ನೂ ಓದಿ Paris Olympics: ಒಲಿಂಪಿಕ್ಸ್​ ಶೂಟಿಂಗ್; ಪದಕ ಗೆಲ್ಲುವ ವಿಶ್ವಾಸದಲ್ಲಿ ಬಿಜೆಪಿ ಶಾಸಕಿ

ಬೆದರಿಕೆ ಹಾಕಿದ ಹಮಾಸ್ ಉಗ್ರರು


ಈಗಾಗಲೇ ಈ ಕ್ರೀಡಾಕೂಟಕ್ಕೆ ಉಗ್ರರ ದಾಳಿಯ ಭೀತಿ ಎದುರಾಗಿದ್ದ ಕಾರಣ ಪ್ಯಾರಿಸ್​ನಲ್ಲಿ ಹಿಂದೆಂದೂ ಕಾಣದ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ಹೆಚ್ಚುವರಿ ಭದ್ರತೆಗಾಗಿ ಫ್ರಾನ್ಸ್​ನೊಂದಿಗೆ ಭಾರತದ ಯೋಧರು ಕೂಡ ಕೈಜೋಡಿಸಿದ್ದಾರೆ. ಇದೀಗ ಹಮಾಸ್(Hamas) ಭಯೋತ್ಪಾದಕರಿಂದ(hamas terrorist) ಭೀಕರ ದಾಳಿಯ ಬೆದರಿಕೆ ಬಂದಿದೆ.

ಮುಸುಕುಧಾರಿ ವ್ಯಕ್ತಿಯೊಬ್ಬ ಅರೇಬಿಕ್ ಭಾಷೆಯಲ್ಲಿ ಬೆದರಿಕೆ ಹಾಕಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಡಿಯೊದಲ್ಲಿ ಮುಸುಕುಧಾರಿ ಒಲಿಂಪಿಕ್ಸ್​ ವೇಳೆ ಫ್ರಾನ್ಸ್​ ಅಧ್ಯಕ್ಷರನ್ನು ಹತ್ಯೆ ಮಾಡುವುದಾಗಿ ಮತ್ತು ಫ್ರಾನ್ಸ್​ನಲ್ಲಿ ರಕ್ತದೋಕುಳಿ ಹರಿಸುವುದಾಗಿ ಎಚ್ಚರಿಕೆ ನೀಡಿದ್ದಾನೆ.

ಈ ವಿಡಿಯೊ ವೈರಲ್​ ಆಗುತ್ತಿದ್ದಂತೆ ಫ್ರಾನ್ಸ್​ನಲ್ಲಿ ಮತ್ತಷ್ಟು ಭದ್ರತೆ ಕೈಗೊಳ್ಳಲಾಗಿದೆ. ಪ್ಯಾರಿಸ್​ನ ಕ್ರೀಡಾ ಗ್ರಾಮದ ವಿವಿಧ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲು ಸಂಘಟಕರು ನಿರ್ಧರಿಸಿದ್ದಾರೆ. ಪ್ಯಾರಿಸ್ ಪೊಲೀಸ್ ಮುಖ್ಯಸ್ಥ ಲಾರೆಂಟ್ ನುನೆಜ್ ಅವರು ಸುದ್ದಿಗೋಷ್ಠಿಯಲ್ಲಿ ಕ್ರೀಡಾಕೂಟಕ್ಕೆ ಸಂಬಂಧಿಸಿ ಮಾತನಾಡಿದ್ದು, ನಾವು ಉಗ್ರರ ಬೆದರಿಕೆಯ ಬಗ್ಗೆ ಕಳವಳ ಹೊಂದಿದ್ದೇವೆ. ವಿಶೇಷವಾಗಿ ಇಸ್ಲಾಮಿಕ್ ಉಗ್ರವಾದಿಗಳು, ಪ್ಯಾಲೆಸ್ಟೀನಿಯನ್ ಪರ ಚಳವಳಿಯಿಂದ ಕಡಿಮೆ-ತೀವ್ರತೆಯ ಬೆದರಿಕೆಯ ಬಗ್ಗೆಯೂ ನಾವು ವಿಶೇಷ ಕಾಳಜಿ ವಹಿಸುತ್ತೇವೆ. ಕ್ರೀಡಾಪಟುಗಳು ಆತಂಕಪಡಬೇಕಿಲ್ಲ ಎಂದು ಹೇಳಿದ್ದಾರೆ.

Continue Reading

ಕ್ರೀಡೆ

Paris Olympics: ಒಲಿಂಪಿಕ್ಸ್​ ಶೂಟಿಂಗ್; ಪದಕ ಗೆಲ್ಲುವ ವಿಶ್ವಾಸದಲ್ಲಿ ಬಿಜೆಪಿ ಶಾಸಕಿ

Paris Olympics: ಶ್ರೇಯಸಿ 2014ರ ಕಾಮನ್ವೆಲ್ತ್‌ ಗೇಮ್ಸ್‌ ಹಾಗೂ ಏಷ್ಯಾಡ್‌ನ‌ ಡಬಲ್‌ ಟ್ರ್ಯಾಪ್‌ ಸ್ಪರ್ಧೆಯಲ್ಲಿ ಕ್ರಮವಾಗಿ ಬೆಳ್ಳಿ ಹಾಗೂ ಕಂಚಿನ ಪದಕ ಜಯಿಸಿದ್ದರು. 2018 ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಅವರು ದೇಶಕ್ಕೆ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ದೇಶಕ್ಕೆ ಮತ್ತು ಬಿಹಾರಕ್ಕೆ ಕೀರ್ತಿ ತಂದಿದ್ದರು.

VISTARANEWS.COM


on

Paris Olympics
Koo

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ಸ್(Paris Olympics)​ ಕ್ರೀಡಾಕೂಟದಲ್ಲಿ ಸ್ಪರ್ಧಿಸುವ 117 ಭಾರತೀಯ ಕ್ರೀಡಾಪಟುಗಳಲ್ಲಿ ಒಬ್ಬರು ಶಾಸಕಿ ಕೂಡ ಇರುವುದು ವಿಶೇಷ. ಇವರ ಹೆಸರು ಶ್ರೇಯಸಿ ಸಿಂಗ್(Shreyasi Singh). ಬಿಹಾರದ ಜಮುಯಿ ವಿಧಾನಸಭಾ ಕ್ಷೇತ್ರದ(Member of Bihar Vidhan Sabha) ಹಾಲಿ ಬಿಜೆಪಿ ಶಾಸಕಿಯಾಗಿದ್ದಾರೆ. ಕಾಮನ್ವೆಲ್ತ್‌ ಗೇಮ್ಸ್‌ ಮತ್ತು ಏಷ್ಯಾಡ್‌ನ‌ಲ್ಲಿ ಪದಕ ಜಯಿಸಿದ್ದರು. 32 ವರ್ಷದ ಶ್ರೇಯಸಿ ಸಿಂಗ್‌, ಮಾಜಿ ಸಚಿವ ದಿವಂಗತ ದಿಗ್ವಿಜಯ್‌ ಸಿಂಗ್‌ ಅವರ ಪುತ್ರಿ.

ಆರಂಭದಲ್ಲಿ ಒಲಿಂಪಿಕ್ಸ್‌ ಆಯ್ಕೆಯ ಪಟ್ಟಿಯಲ್ಲಿ ಶ್ರೇಯಸಿ ಅವರ ಹೆಸರಿರಲಿಲ್ಲ. ಟೋಕಿಯೊ ಒಲಿಂಪಿಯನ್‌ ಮನು ಭಾಕರ್‌ ಮಹಿಳೆಯರ 10 ಮೀ. ಪಿಸ್ತೂಲ್‌ ಮತ್ತು 25 ಮೀ. ಪಿಸ್ತೂಲ್‌ ಸ್ಪರ್ಧೆಗಳಲ್ಲಿ ಅರ್ಹತೆ ಪಡೆದಿದ್ದರು. ಹೀಗಾಗಿ ಒಂದು ಕೋಟಾವನ್ನು ಮರುಹಂಚಿಕೆ ಮಾಡಬಹುದಾಗಿತ್ತು. ಇದನ್ನು ಟ್ರ್ಯಾಪ್‌ ಶೂಟರ್‌ಗಾಗಿ ಬದಲಾಯಿಸಲಾಯಿತು. ಹೀಗಾಗಿ ಈ ಕೋಟಾದಲ್ಲಿ ಶ್ರೇಯಸಿ ಅವರನ್ನು ಆಯ್ಕೆ ಮಾಡಲಾಯಿತು.

ಶ್ರೇಯಸಿ 2014ರ ಕಾಮನ್ವೆಲ್ತ್‌ ಗೇಮ್ಸ್‌ ಹಾಗೂ ಏಷ್ಯಾಡ್‌ನ‌ ಡಬಲ್‌ ಟ್ರ್ಯಾಪ್‌ ಸ್ಪರ್ಧೆಯಲ್ಲಿ ಕ್ರಮವಾಗಿ ಬೆಳ್ಳಿ ಹಾಗೂ ಕಂಚಿನ ಪದಕ ಜಯಿಸಿದ್ದರು. 2018 ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಅವರು ದೇಶಕ್ಕೆ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ದೇಶಕ್ಕೆ ಮತ್ತು ಬಿಹಾರಕ್ಕೆ ಕೀರ್ತಿ ತಂದಿದ್ದರು.

ಒಲಿಂಪಿಕ್ಸ್​ನಲ್ಲಿ​ ಸ್ಪರ್ಧಿಸುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶ್ರೇಯಸಿ, “ನಾನು ಒಲಿಂಪಿಕ್ಸ್‌ ಕ್ರೀಡಾಕೂಡದಲ್ಲಿ ದೇಶವನ್ನು ಪ್ರತಿನಿಧಿಸಬೇಕೆಂಬುದು ನನ್ನ ತಂದೆಯ ದೊಡ್ಡ ಕನಸಾಗಿತ್ತು. ತಂದೆಯ ಕನಸಿನಂತೆ ಒಲಿಂಪಿಕ್ಸ್​ ಆಡುವ ಸೌಭಾಗ್ಯ ಒದಗಿ ಬಂದಿದೆ. ಕೂಟದಲ್ಲಿ ಶ್ರೇಷ್ಠ ಪ್ರದರ್ಶನ ತೋರುವ ಮೂಲಕ ಪದಕವೊಂದನ್ನು ಗೆಲ್ಲುವುದು ನನ್ನ ಗುರಿ. ಇದಕ್ಕಾಗಿ ಜಮುಯಿ ಜನತೆ ಪ್ರಾರ್ಥಿಸಲಿ” ಎಂದು ಹೇಳಿದ್ದಾರೆ. 2020ರ ಚುನಾವಣೆಯಲ್ಲಿ ಜುಮಯಿ ಕ್ಷೇತ್ರದಿಂದ ಬಿಜೆಪಿ ಪರ ಸ್ಪರ್ಧಿಸಿದ್ದ ಶ್ರೇಯಸಿ 41 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಇದನ್ನು ಓದಿ India’s July 25 Schedule At Paris Olympics: ನಾಳೆಯಿಂದ ಭಾರತದ ಒಲಿಂಪಿಕ್ಸ್​ ಸ್ಪರ್ಧೆ ಆರಂಭ; ವೇಳಾಪಟ್ಟಿ ಹೀಗಿದೆ

ನಾಳೆಯಿಂದ ಭಾರತದ ಸ್ಪರ್ಧೆ ಆರಂಭ

ಭಾರತ (India’s Schedule At Paris Olympics) ನಾಳೆಯಿಂದ ಒಲಿಂಪಿಕ್ಸ್​ ಸ್ಪರ್ಧೆ ಆರಂಭಿಸಲಿದೆ(India’s July 25 Schedule At Paris Olympics). ನಾಳೆ(ಗುರುವಾರ) ನಡೆಯುವ ಆರ್ಚರಿ(Archery) ಸ್ಪರ್ಧೆಯ ಮಹಿಳೆಯರ ವೈಯಕ್ತಿಕ ಶ್ರೇಯಾಂಕ ಸುತ್ತು ವಿಭಾಗದಲ್ಲಿ ಭಾರತ ದೀಪಿಕಾ ಕುಮಾರಿ(Deepika Kumari), ಅಂಕಿತಾ ಭಕತ್(Ankita Bhakat), ಭಜನ್ ಕೌರ್(Bhajan Kaur)​ ಕಣಕ್ಕಿಳಿಯಲಿದ್ದಾರೆ. ಪುರುಷರ ವೈಯಕ್ತಿಕ ಶ್ರೇಯಾಂಕ ಸುತ್ತಿನಲ್ಲಿ ಬಿ. ಧೀರಾಜ್(B. Dhiraj), ತರುಣದೀಪ್ ರೈ(Tarundeep Rai), ಪ್ರವೀಣ್ ಜಾಧವ್(Pravin Jadhav) ಸ್ಪರ್ಧಿಸಲಿದ್ದಾರೆ. ಈ ಪಂದ್ಯ ಸಂಜೆ 5: 45ಕ್ಕೆ ನಡೆಯಲಿದೆ. ಮಹಿಳೆಯ ಪಂದ್ಯ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ.

ಅಥ್ಲೆಟಿಕ್ಸ್​ ದೊಡ್ಡ ತಂಡ

ಅಥ್ಲೆಟಿಕ್ಸ್​ನಲ್ಲಿ 29 ಸ್ಪರ್ಧಿಗಳು ಭಾರತವನ್ನು ಪ್ರತಿನಿಧಿಸಲಿದ್ದಾರೆ. 18 ಪುರುಷರು ಹಾಗೂ 11 ಮಹಿಳೆಯರು ಸೇರಿದ್ದಾರೆ. ಆರಂಭದಲ್ಲಿ ಅಥ್ಲೀಟ್​ಗಳ ಸಂಖ್ಯೆ​ 30 ಇತ್ತು. ಆದರೆ ವನಿತಾ ಶಾಟ್‌ಪುಟರ್‌ ಅಭಾ ಖತುವಾ ಗೈರಿನಿಂದ 29ಕ್ಕೆ ಇಳಿಯಿತು. ಆದರೆ ಅವರನ್ನು ಕೈಬಿಟ್ಟ ಬಗ್ಗೆ ಯಾವುದೇ ಕಾರಣ ಅಥವಾ ವಿವರಣೆ ನೀಡಲಾಗಿಲ್ಲ.  29 ಸದಸ್ಯರನ್ನು ಒಳಗೊಂಡ ಟ್ರ್ಯಾಕ್ ಆ್ಯಂಡ್ ಫೀಲ್ಡ್ ತಂಡಕ್ಕೆ ಟೋಕಿಯೊ ಒಲಿಂಪಿಕ್​ ಚಿನ್ನದ ಪದಕ ವಿಜೇತ, ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ನಾಯಕನಾಗಿದ್ದಾರೆ.

ಶೂಟಿಂಗ್​ನಲ್ಲಿ ಒಟ್ಟು 21 ಮಂದಿ ಸ್ಥಾನ ಪಡೆದಿದ್ದಾರೆ. 10 ಮಂದಿ ಪುರುಷರು ಹಾಗೂ 11 ಮಂದಿ ಮಹಿಳಾ ಸ್ಪರ್ಧಿಗಳು ಕಾಣಿಸಿಕೊಂಡಿದ್ದಾರೆ. ಹಾಕಿ ತಂಡದಲ್ಲಿ 19 ಆಟಗಾರರಿದ್ದಾರೆ. ಟೇಬಲ್‌ ಟೆನಿಸ್​ನಲ್ಲಿ 8 ಮಂದಿ ಆಟಗಾರರು, ಬ್ಯಾಡ್ಮಿಂಟನ್​ನಲ್ಲಿ 7 ಮಂದಿ ಕಣಕ್ಕಿಳಿಯಲಿದ್ದಾರೆ. ಅವಳಿ ಒಲಿಂಪಿಕ್‌ ಪದಕ ಗೆದ್ದ ಪಿ.ವಿ. ಸಿಂಧು ಮೇಲೆ ಹ್ಯಾಟ್ರಿಕ್​ ಪದಕವೊಂದನ್ನು ನಿರೀಕ್ಷೆ ಮಾಡಲಾಗಿದೆ. ಉಳಿದಂತೆ ಕುಸ್ತಿ, ಆರ್ಚರಿ ಮತ್ತು ಬಾಕ್ಸಿಂಗ್‌ನಲ್ಲಿ ತಲಾ 6 ಮಂದಿ ಸ್ಪರ್ಧಿಸಲಿದ್ದಾರೆ.

ಗಾಲ್ಫ್​ನಲ್ಲಿ 4, ಟೆನಿಸ್‌ನಲ್ಲಿ 3, ಈಜು ಮತ್ತು ಹಾಯಿದೋಣಿಯಲ್ಲಿ ತಲಾ ಇಬ್ಬರು ಕಣಕ್ಕಿಳಿಯಲಿದ್ದಾರೆ. ಈಕ್ವೇಸ್ಟ್ರಿಯನ್‌(ಕುದುರೆ ಸವಾರಿ), ಜೂಡೋ, ರೋಯಿಂಗ್‌ ಮತ್ತು ವೇಟ್‌ಲಿಫ್ಟಿಂಗ್‌ನಲ್ಲಿ ಒಬ್ಬರಷ್ಟೇ ಸ್ಪರ್ಧಿಸಲಿದ್ದಾರೆ. ಪಿ.ವಿ.ಸಿಂಧು(PV Sindhu) ಮತ್ತು ಹಿರಿಯ ಟೇಬಲ್ ಟೆನಿಸ್ ಆಟಗಾರ ಶರತ್ ಕಮಲ್(Sharath Kamal) ಉದ್ಘಾಟನಾ ಸಮಾರಂಭದಲ್ಲಿ ಭಾರತದ ಧ್ವಜಧಾರಿಯಾಗಲಿದ್ದಾರೆ.

Continue Reading

ಕ್ರೀಡೆ

India’s July 25 Schedule At Paris Olympics: ನಾಳೆಯಿಂದ ಭಾರತದ ಒಲಿಂಪಿಕ್ಸ್​ ಸ್ಪರ್ಧೆ ಆರಂಭ; ವೇಳಾಪಟ್ಟಿ ಹೀಗಿದೆ

India’s July 25 Schedule At Paris Olympics:ನಾಳೆ(ಗುರುವಾರ) ನಡೆಯುವ ಆರ್ಚರಿ(Archery) ಸ್ಪರ್ಧೆಯ ಮಹಿಳೆಯರ ವೈಯಕ್ತಿಕ ಶ್ರೇಯಾಂಕ ಸುತ್ತು ವಿಭಾಗದಲ್ಲಿ ಭಾರತ ದೀಪಿಕಾ ಕುಮಾರಿ(Deepika Kumari), ಅಂಕಿತಾ ಭಕತ್(Ankita Bhakat), ಭಜನ್ ಕೌರ್(Bhajan Kaur)​ ಕಣಕ್ಕಿಳಿಯಲಿದ್ದಾರೆ.

VISTARANEWS.COM


on

India’s July 25 Schedule At Paris Olympics
Koo

ಪ್ಯಾರಿಸ್​: ಎಂದಿನಂತೆ ಈ ಸಲವೂ ಒಲಿಂಪಿಕ್ಸ್(Paris Olympics)​ ಉದ್ಘಾಟನೆಗೆ ಮುನ್ನವೇ ಕೆಲವು ಸ್ಫರ್ದೆಗಳು ಆರಂಭಗೊಂಡಿವೆ. ಫುಟ್ಬಾಲ್​ ಮತ್ತು ರಗ್ಬಿ ಬುಧವಾರ ಆರಂಭಗೊಂಡರೆ, ನಾಳೆ(ಗುರುವಾರ) ಹ್ಯಾಂಡ್​ಬಾಲ್​ ಮತ್ತು ಆರ್ಚರಿ ಸ್ಪರ್ಧೆಗಳು ನಡೆಯಲಿವೆ. ಭಾರತ ಕೂಡ(India’s Schedule At Paris Olympics) ನಾಳೆಯಿಂದ ಸ್ಪರ್ಧೆ ಆರಂಭಿಸಲಿದೆ(India’s July 25 Schedule At Paris Olympics). ಆರ್ಚರಿ ಪಟುಗಳು ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ. ಒಲಿಂಪಿಕ್ಸ್​ ಉದ್ಘಾಟನ ಸಮಾರಂಭ ಜುಲೈ 26ರಂದು ನಡೆಯಲಿದೆ.

ನಾಳೆ(ಗುರುವಾರ) ನಡೆಯುವ ಆರ್ಚರಿ(Archery) ಸ್ಪರ್ಧೆಯ ಮಹಿಳೆಯರ ವೈಯಕ್ತಿಕ ಶ್ರೇಯಾಂಕ ಸುತ್ತು ವಿಭಾಗದಲ್ಲಿ ಭಾರತ ದೀಪಿಕಾ ಕುಮಾರಿ(Deepika Kumari), ಅಂಕಿತಾ ಭಕತ್(Ankita Bhakat), ಭಜನ್ ಕೌರ್(Bhajan Kaur)​ ಕಣಕ್ಕಿಳಿಯಲಿದ್ದಾರೆ. ಪುರುಷರ ವೈಯಕ್ತಿಕ ಶ್ರೇಯಾಂಕ ಸುತ್ತಿನಲ್ಲಿ ಬಿ. ಧೀರಾಜ್(B. Dhiraj), ತರುಣದೀಪ್ ರೈ(Tarundeep Rai), ಪ್ರವೀಣ್ ಜಾಧವ್(Pravin Jadhav) ಸ್ಪರ್ಧಿಸಲಿದ್ದಾರೆ. ಈ ಪಂದ್ಯ ಸಂಜೆ 5: 45ಕ್ಕೆ ನಡೆಯಲಿದೆ. ಮಹಿಳೆಯ ಪಂದ್ಯ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ.

ಇದನ್ನೂ ಓದಿ Paris Olympics: ಪ್ಯಾರಿಸ್​ನಲ್ಲಿ ರಕ್ತದೋಕುಳಿ ಹರಿಸುವುದಾಗಿ ವಿಡಿಯೊ ಮೂಲಕ ಬೆದರಿಕೆ ಹಾಕಿದ ಹಮಾಸ್ ಉಗ್ರರು

27ರಂದು ಹಲವು ಸ್ಪರ್ಧೆ


ಶನಿವಾರದಂದು(ಜುಲೈ 27) ಭಾರತದ ಹಲವು ಕ್ರೀಡಾಪಟುಗಳು ವಿವಿಧ ಸ್ಪರ್ಧೆಗಳಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ. ಭಾರತೀಯ ಕ್ರೀಡಾಪಟುಗಳ ಸ್ಪರ್ಧೆಯ ವೇಳಾಪಟ್ಟಿ ಇಂತಿದೆ.

ಬ್ಯಾಡ್ಮಿಂಟನ್

ಪುರುಷರ ಸಿಂಗಲ್ಸ್ ಗುಂಪು ಹಂತ: ಎಚ್ ಎಸ್ ಪ್ರಣಯ್, ಲಕ್ಷ್ಯ ಸೇನ್.

ಮಹಿಳೆಯರ ಸಿಂಗಲ್ಸ್ ಗುಂಪು ಹಂತ: ಪಿ.ವಿ ಸಿಂಧು.

ಪುರುಷರ ಡಬಲ್ಸ್ ಗುಂಪು ಹಂತ: ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ.

ಮಹಿಳೆಯರ ಡಬಲ್ಸ್ ಗುಂಪು ಹಂತ: ತನೀಶಾ ಕ್ರಾಸ್ಟೊ ಮತ್ತು ಅಶ್ವಿನಿ ಪೊನ್ನಪ್ಪ. (ಮಧ್ಯಾಹ್ನ 12 ಗಂಟೆಯಿಂದ)

ರೋಯಿಂಗ್


ಪುರುಷರ ಸಿಂಗಲ್ ಸ್ಕಲ್ಸ್ ಹೀಟ್ಸ್: ಬಾಲರಾಜ್ ಪನ್ವಾರ್. ಆರಂಭ ಮಧ್ಯಾಹ್ನ 12:30 ರಿಂದ

ಶೂಟಿಂಗ್

10 ಮೀ ಏರ್ ರೈಫಲ್ ಮಿಶ್ರ ತಂಡ ಅರ್ಹತೆ: ಸಂದೀಪ್ ಸಿಂಗ್, ಅರ್ಜುನ್ ಬಾಬುತಾ, ಎಲವೆನಿಲ್ ವಲರಿವನ್, ರಮಿತಾ ಜಿಂದಾಲ್. ಮಧ್ಯಾಹ್ನ 12:30

10ಮೀ ಏರ್ ಪಿಸ್ತೂಲ್ ಪುರುಷರ ಅರ್ಹತೆ: ಸರಬ್ಜೋತ್ ಸಿಂಗ್, ಅರ್ಜುನ್ ಚೀಮಾ. (ಮಧ್ಯಾಹ್ನ 2 ಗಂಟೆ)

10ಮೀ ಏರ್ ರೈಫಲ್ ಮಿಶ್ರ ತಂಡ ಪದಕ ಸುತ್ತುಗಳು: (ಅರ್ಹತೆ ಪಡೆದರೆ) ಮಧ್ಯಾಹ್ನ 2 ಗಂಟೆ

10 ಮೀ ಏರ್ ಪಿಸ್ತೂಲ್ ಮಹಿಳೆಯರ ಅರ್ಹತೆ ಸುತ್ತು: ರಿದಮ್ ಸಾಂಗ್ವಾನ್, ಮನು ಭಾಕರ್. (ಸಂಜೆ 4 ಗಂಟೆಯಿಂದ)

ಟೆನಿಸ್; ಮೊದಲ ಸುತ್ತಿನ ಪಂದ್ಯಗಳು


ಪುರುಷರ ಸಿಂಗಲ್ಸ್: ಸುಮಿತ್ ನಗಾಲ್.

ಪುರುಷರ ಡಬಲ್ಸ್: ರೋಹನ್ ಬೋಪಣ್ಣ ಮತ್ತು ಎನ್. ಶ್ರೀರಾಮ್ ಬಾಲಾಜಿ. (ಮಧ್ಯಾಹ್ನ 3:30 ರಿಂದ)

ಟೇಬಲ್ ಟೆನ್ನಿಸ್


ಪುರುಷರ ಸಿಂಗಲ್ಸ್: ಶರತ್ ಕಮಲ್, ಹರ್ಮೀತ್ ದೇಸಾಯಿ

ಮಹಿಳೆಯರ ಸಿಂಗಲ್ಸ್: ಮಾಣಿಕಾ ಬಾತ್ರಾ, ಶ್ರೀಜಾ ಅಕುಲಾ. (ಸಂಜೆ 6:30 ರಿಂದ)

ಬಾಕ್ಸಿಂಗ್

ಮಹಿಳೆಯರ 54 ಕೆಜಿ ವಿಭಾಗ: ಪ್ರೀತಿ ಪವಾರ್, 32ರ ಸುತ್ತು. (ಸಂಜೆ 7 ರಿಂದ)

ಹಾಕಿ


ಪುರುಷರ ಗುಂಪು ‘ಬಿ’:
ಭಾರತ ಮತ್ತು ನ್ಯೂಜಿಲ್ಯಾಂಡ್​. (ರಾತ್ರಿ 9 ಗಂಟೆಗೆ)

Continue Reading

ಕ್ರೀಡೆ

Paris Olympics: ಪ್ಯಾರಿಸ್​ನಲ್ಲಿ ರಕ್ತದೋಕುಳಿ ಹರಿಸುವುದಾಗಿ ವಿಡಿಯೊ ಮೂಲಕ ಬೆದರಿಕೆ ಹಾಕಿದ ಹಮಾಸ್ ಉಗ್ರರು

Paris Olympics: ಮುಸುಕುಧಾರಿ ವ್ಯಕ್ತಿಯೊಬ್ಬ ಅರೇಬಿಕ್ ಭಾಷೆಯಲ್ಲಿ ಬೆದರಿಕೆ ಹಾಕಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಡಿಯೊದಲ್ಲಿ ಮುಸುಕುಧಾರಿ ಒಲಿಂಪಿಕ್ಸ್​ ವೇಳೆ ಫ್ರಾನ್ಸ್​ ಅಧ್ಯಕ್ಷರನ್ನು ಹತ್ಯೆ ಮಾಡುವುದಾಗಿ ಮತ್ತು ಫ್ರಾನ್ಸ್​ನಲ್ಲಿ ರಕ್ತದೋಕುಳಿ ಹರಿಸುವುದಾಗಿ ಎಚ್ಚರಿಕೆ ನೀಡಿದ್ದಾನೆ.

VISTARANEWS.COM


on

Paris Olympics
Koo

ಪ್ಯಾರಿಸ್​: ಅತಿ ದೊಡ್ಡ ಕ್ರೀಡಾಕೂಟವಾದ ಪ್ಯಾರಿಸ್​ ಒಲಿಂಪಿಕ್ಸ್(Paris Olympics) ಆರಂಭಕ್ಕೆ​ ಇನ್ನು 2 ದಿನಗಳು ಮಾತ್ರ ಬಾಕಿ ಉಳಿದಿವೆ. ಈಗಾಗಲೇ ಈ ಕ್ರೀಡಾಕೂಟಕ್ಕೆ ಉಗ್ರರ ದಾಳಿಯ ಭೀತಿ ಎದುರಾಗಿದ್ದ ಕಾರಣ ಪ್ಯಾರಿಸ್​ನಲ್ಲಿ ಹಿಂದೆಂದೂ ಕಾಣದ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ಹೆಚ್ಚುವರಿ ಭದ್ರತೆಗಾಗಿ ಫ್ರಾನ್ಸ್​ನೊಂದಿಗೆ ಭಾರತದ ಯೋಧರು ಕೂಡ ಕೈಜೋಡಿಸಿದ್ದಾರೆ. ಇದೀಗ ಹಮಾಸ್(Hamas) ಭಯೋತ್ಪಾದಕರಿಂದ(hamas terrorist) ಭೀಕರ ದಾಳಿಯ ಬೆದರಿಕೆ ಬಂದಿದೆ.

ಮುಸುಕುಧಾರಿ ವ್ಯಕ್ತಿಯೊಬ್ಬ ಅರೇಬಿಕ್ ಭಾಷೆಯಲ್ಲಿ ಬೆದರಿಕೆ ಹಾಕಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಡಿಯೊದಲ್ಲಿ ಮುಸುಕುಧಾರಿ ಒಲಿಂಪಿಕ್ಸ್​ ವೇಳೆ ಫ್ರಾನ್ಸ್​ ಅಧ್ಯಕ್ಷರನ್ನು ಹತ್ಯೆ ಮಾಡುವುದಾಗಿ ಮತ್ತು ಫ್ರಾನ್ಸ್​ನಲ್ಲಿ ರಕ್ತದೋಕುಳಿ ಹರಿಸುವುದಾಗಿ ಎಚ್ಚರಿಕೆ ನೀಡಿದ್ದಾನೆ.

ಈ ವಿಡಿಯೊ ವೈರಲ್​ ಆಗುತ್ತಿದ್ದಂತೆ ಫ್ರಾನ್ಸ್​ನಲ್ಲಿ ಮತ್ತಷ್ಟು ಭದ್ರತೆ ಕೈಗೊಳ್ಳಲಾಗಿದೆ. ಪ್ಯಾರಿಸ್​ನ ಕ್ರೀಡಾ ಗ್ರಾಮದ ವಿವಿಧ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲು ಸಂಘಟಕರು ನಿರ್ಧರಿಸಿದ್ದಾರೆ. ಪ್ಯಾರಿಸ್ ಪೊಲೀಸ್ ಮುಖ್ಯಸ್ಥ ಲಾರೆಂಟ್ ನುನೆಜ್ ಅವರು ಸುದ್ದಿಗೋಷ್ಠಿಯಲ್ಲಿ ಕ್ರೀಡಾಕೂಟಕ್ಕೆ ಸಂಬಂಧಿಸಿ ಮಾತನಾಡಿದ್ದು, ನಾವು ಉಗ್ರರ ಬೆದರಿಕೆಯ ಬಗ್ಗೆ ಕಳವಳ ಹೊಂದಿದ್ದೇವೆ. ವಿಶೇಷವಾಗಿ ಇಸ್ಲಾಮಿಕ್ ಉಗ್ರವಾದಿಗಳು, ಪ್ಯಾಲೆಸ್ಟೀನಿಯನ್ ಪರ ಚಳವಳಿಯಿಂದ ಕಡಿಮೆ-ತೀವ್ರತೆಯ ಬೆದರಿಕೆಯ ಬಗ್ಗೆಯೂ ನಾವು ವಿಶೇಷ ಕಾಳಜಿ ವಹಿಸುತ್ತೇವೆ. ಕ್ರೀಡಾಪಟುಗಳು ಆತಂಕಪಡಬೇಕಿಲ್ಲ ಎಂದು ಹೇಳಿದ್ದಾರೆ.

ಭಯೋತ್ಪಾದನಾ ದಾಳಿ ತಡೆ ಭದ್ರತಾ ಕಾರ್ಯಕ್ಕಾಗಿ ಭಾರತೀಯ ಸೇನೆಯಲ್ಲಿ ತರಬೇತುಗೊಂಡ ಶ್ವಾನದಳವನ್ನು ನಿಯೋಜಿಸಲಾಗಿದೆ. ಈ ಶ್ವಾನಪಡೆಯ ಸಾಮರ್ಥ್ಯ ಪರೀಕ್ಷೆ ನಡೆದದ್ದು ಬೆಂಗಳೂರಿನಲ್ಲಿ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್‌) ಮತ್ತು ವಿಶೇಷ ಕಮಾಂಡೊ ಪಡೆಯ ಭಾರತೀಯ ಕೆ9 (ಕೆನೈನ್) ಹತ್ತು ಶ್ವಾನಗಳ ಪಡೆಯನ್ನು ಪ್ಯಾರಿಸ್‌ಗೆ ಕಳುಹಿಸಲಾಗಿದೆ. ಬೆಂಗಳೂರು ಸಮೀಪದ ತರಳುವಿನಲ್ಲಿರುವ ಸಿಆರ್‌ಪಿಎಫ್ ಶ್ವಾನ ತಳಿ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಈ ಶ್ವಾನಪಡೆಯ ಸಾಮರ್ಥ್ಯ ಪರೀಕ್ಷೆ ನಡೆಸಿದ ಬಳಿಕ ಪ್ಯಾರಿಸ್‌ಗೆ ಕಳುಹಿಸಲಾಗಿದೆ. ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿರುವ ಭದ್ರತಾ ಪಡೆಗಳೊಂದಿಗೆ ಈ ಶ್ವಾನಪಡೆಯು ಕಾರ್ಯನಿರ್ವಹಿಸಲಿದೆ.

ಇದನ್ನೂ ಓದಿ Paris Olympics: ಪ್ಯಾರಿಸ್​ ಒಲಿಂಪಿಕ್ಸ್​ಗೂ ವಕ್ಕರಿಸಿದ ಕೊರೊನಾ ಸೋಂಕು; ಮೊದಲ ಪ್ರಕರಣ ಪತ್ತೆ

ಈ ಶ್ವಾನಗಳಿಗೆ ಹತ್ತು ವಾರಗಳ ಕಾಲ ವಿಶೇಷ ತರಬೇತಿ ನೀಡಲಾಗಿದೆ. ಸಿಎಪಿಎಫ್‌, ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌), ಸಶಸ್ತ್ರ ಸೀಮಾ ಬಲ (ಎಸ್‌ಎಸ್‌ಬಿ), ಇಂಡೋ ಟಿಬೆಟಿಯನ್ ಗಡಿ ಪೊಲೀಸ್ (ಐಟಿಬಿಪಿ) ಪಡೆಗಳಿಂದ ಈ ಶ್ವಾನ ಮತ್ತು ನಿರ್ವಹಾಕರನ್ನು ಆಯ್ಕೆ ಮಾಡಲಾಗಿದೆ. ಈ ಶ್ವಾನಪಡೆಯಲ್ಲಿರುವ ಬೆಲ್ಜಿಯನ್ ಮೆಲಿನೊಸ್ ತಳಿಯು ಪ್ರಮುಖವಾಗಿದೆ. ಬಾಂಬ್‌ ಪತ್ತೆ ಕಾರ್ಯಾಚರಣೆಯಲ್ಲಿ ಅತ್ಯಂತ ಚುರುಕಾದ ತಳಿ ಇದಾಗಿದೆ.

ಪ್ಯಾರಿಸ್‌ ಆತಿಥ್ಯದಲ್ಲಿ ನಡೆಯಲಿರುವ 3ನೇ ಒಲಿಂಪಿಕ್ಸ್‌ ಕೀಡಾಕೂಟ ಇದಾಗಿದೆ. ಮೊದಲ ಒಲಿಂಪಿಕ್ಸ್‌ ನಡೆದದ್ದು 1900ರಲ್ಲಿ. ಇದಾದ ಬಳಿಕ 1924ರಲ್ಲಿ ಆತಿಥ್ಯ ವಹಿಸಿತ್ತು. ಇದೀಗ ಬರೋಬ್ಬರಿ 100 ವರ್ಷಗಳ ಬಳಿಕ ಇಲ್ಲಿ ಪ್ಯಾರಿಸ್​ನಲ್ಲಿ ಒಲಿಂಪಿಕ್ಸ್​ ನಡೆಯುತ್ತಿದೆ. ಈ ಬಾರಿಯ ಒಲಿಂಪಿಕ್ಸ್​ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಒಲಿಂಪಿಕ್ಸ್​ ಇತಿಹಾಸದಲ್ಲೇ ವಿಶೇಷ ಮಹತ್ವ ಪಡೆದಿದೆ. ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

Continue Reading
Advertisement
Cat kidnaping Case
ಕರ್ನಾಟಕ10 mins ago

Cat Kidnaping Case: ಬೆಕ್ಕು ಅಪಹರಣ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ನಿಂದ ಮಹತ್ವದ ತೀರ್ಪು

Bitcoin Scam
ಕರ್ನಾಟಕ15 mins ago

Bitcoin Scam: ಬಿಟ್‌‌ ಕಾಯಿನ್ ಹಗರಣ; ಆರೋಪಿಗಳಾದ ಶ್ರೀಕಿ, ಖಂಡೇಲ್ ವಾಲಾ ಜೈಲಿನಿಂದ ಬಿಡುಗಡೆ

No Makeup For Kids
ಲೈಫ್‌ಸ್ಟೈಲ್21 mins ago

No Makeup For Kids: ನಿಮ್ಮ ಮಕ್ಕಳ ಮೇಕಪ್‌ ಕ್ರೇಜ್‌ಗೆ NO ಹೇಳಿ!

Union Budget 2024
ದೇಶ45 mins ago

Union Budget 2024: ಬಜೆಟ್‌ನಲ್ಲಿ ಕಸ್ಟಮ್ಸ್‌ ಸುಂಕ ಇಳಿಕೆ; ಚಿನ್ನದ ಮೇಲಿನ ಹೂಡಿಕೆಗೆ ಇದು ಸಕಾಲವೇ? ತಜ್ಞರು ಹೇಳೋದಿಷ್ಟು

Salman Khan
ಸಿನಿಮಾ1 hour ago

Salman Khan: “ನನ್ನನ್ನು ಕೊಲ್ಲಲು ಬಿಷ್ಣೋಯಿ ಗ್ಯಾಂಗ್‌ ಯತ್ನಿಸುತ್ತಿದೆ”-ಗುಂಡಿನ ದಾಳಿ ಬಗ್ಗೆ ಸಲ್ಮಾನ್‌ ಖಾನ್‌ ಹೇಳಿಕೆ ದಾಖಲು

Viral Video
Latest1 hour ago

Viral Video: ದೆಹಲಿ ಬೀದಿಯಲ್ಲಿ ಈ ಹುಡುಗಿಯ ಪರೋಟಾ ತಿನ್ನಲು ಕ್ಯೂ! ವಿಡಿಯೊ ನೋಡಿ

Sandalwood Star Fashion
ಫ್ಯಾಷನ್1 hour ago

Sandalwood Star Fashion: ಮಾನ್ಸೂನ್‌ನಲ್ಲಿ ಮಾಲಾಶ್ರೀ ಮಗಳ ಗ್ಲಾಮರಸ್‌ ಫ್ಯಾಷನ್‌!

DK Shivakumar
ಕರ್ನಾಟಕ2 hours ago

DK Shivakumar: ನಮ್ಮ ಶಾಲೆಯಲ್ಲಿ ಮಗನಿಗೆ ಸೀಟು ಕೇಳಲು ದರ್ಶನ್‌ ಪತ್ನಿ ಬಂದಿದ್ರು: ಡಿಸಿಎಂ ಡಿಕೆಶಿ

Assembly Session 2024 Irrigation Amendment Bill Approval to protect the farmers of the last part of the canals
ಕರ್ನಾಟಕ2 hours ago

Assembly Session 2024: ಕಾಲುವೆಗಳ ಕೊನೇ ಭಾಗದ ರೈತರಿಗೆ ನೀರು ಖಾತರಿ; ನೀರಾವರಿ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

Anganwadi workers honorarium to be increased soon says Minister Lakshmi Hebbalkar
ಕರ್ನಾಟಕ2 hours ago

Assembly Session 2024: ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್‌; ಶೀಘ್ರವೇ ಗೌರವಧನ ಹೆಚ್ಚಳ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ13 hours ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ1 day ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ1 day ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ1 day ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ4 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ5 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ5 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ6 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ6 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

ಟ್ರೆಂಡಿಂಗ್‌