IPL 2023 : ಧೋನಿಯ ತಂತ್ರಗಾರಿಕೆಯನ್ನು ಸಿಕ್ಕಾಪಟ್ಟೆ ಹೊಗಳಿದ ಮಹಿಳಾ ಕ್ರಿಕೆಟರ್​ - Vistara News

ಕ್ರಿಕೆಟ್

IPL 2023 : ಧೋನಿಯ ತಂತ್ರಗಾರಿಕೆಯನ್ನು ಸಿಕ್ಕಾಪಟ್ಟೆ ಹೊಗಳಿದ ಮಹಿಳಾ ಕ್ರಿಕೆಟರ್​

ಧೋನಿ ಆಟ ಮುಂದುವರಿಸಬೇಕು ಎಂದು ಮಾಜಿ ಸ್ಪಿನ್ನರ್​​ ಮಹೇಂದ್ರ ಸಿಂಗ್ ಧೋನಿ ಹೇಳಿದ್ದಾರೆ.

VISTARANEWS.COM


on

MS Dhoni IPL 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ಐಪಿಎಲ್ 2023ರಲ್ಲಿ ಇದುವರೆಗೆ 7 ಗೆಲುವುಗಳನ್ನು ಸಾಧಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಪ್ಲೇಆಫ್​​ಗೆ ಅರ್ಹತೆ ಪಡೆಯುವ ಅಂಚಿನಲ್ಲಿದೆ. ಅಹಮದಾಬಾದ್​​ನಲ್ಲಿ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೇ 28ರಂದು ನಡೆಯಲಿರುವ ಟೂರ್ನಿಯ ಫೈನಲ್​ಗೆ ಅವಕಾಶ ಪಡೆಯಲು ಅಂಕಪಟ್ಟಿಯಲ್ಲಿ ಮೊದಲ ನಾಲ್ಕು ಸ್ಥಾನ ಪಡೆಯುವ ತಂಡಗಳಿಗೆ ಅವವಕಾಶ ಸಿಗಲಿದೆ.

ಏತನ್ಮಧ್ಯೆ, ಇದು ಐಪಿಎಲ್​​ನಲ್ಲಿ ಎಂಎಸ್ ಧೋನಿ ಅವರ ಆಟ ಮುಗಿಯಲಿದೆ, ಅವರು ವಿದಾಯ ಹೇಳಲಿದ್ದಾರೆ ಎಂಬುದಾಗಿ ವದಂತಿಗಳು ಹಬ್ಬುತ್ತಿವೆ. ವಿಶೇಷವಾಗಿ ಅವರು ಮೊಣಕಾಲು ನೋವಿನಿಂದಲೂ ಬಳಲುತ್ತಿದ್ದಾರೆ. ಈ ಕುರಿತು ಮಾತನಾಡಿದ ಭಾರತದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್, ಅಭಿಮಾನಿಗಳ ಭಾವನೆಗಳಿಗೆ ಘಾಸಿ ಮಾಡಬಾರದು. ಧೋನಿ ಐಪಿಎಲ್​ನಲ್ಲಿ ಆಡುವುದನ್ನು ಮುಂದುವರಿಬೇಕು ಎಂದು ಹೇಳಿದ್ದಾರೆ.

ಎಂಎಸ್ ಧೋನಿ ತಮ್ಮ ವಯಸ್ಸಿನ ಬಗ್ಗೆ ಚಿಂತೆಯೇ ನಡೆಸುತ್ತಿಲ್ಲ. ಅವರು ಇನ್ನೂ ಅದೇ ಹಳೆಯ ಧೋನಿಯಂತೆ ಕಾಣುತ್ತಾರೆ. ಅವರು ಆ ದೊಡ್ಡ ಶಾಟ್ ಗಳನ್ನು ಸುಲಭವಾಗಿ ಹೊಡೆಯುತ್ತಿದ್ದಾರೆ. ಸಿಂಗಲ್ಸ್ ಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಅವನು ತನ್ನ ಪೂರ್ಣ ವೇಗದಲ್ಲಿ ಓಡದಿದ್ದರೂ, ಅವರು ಸಿಕ್ಸರ್​​ಗಳನ್ನು ಸುಲಭವಾಗಿ ಹೊಡೆಯುತ್ತಿದ್ದಾರೆ. ಬ್ಯಾಟಿಂಗ್​ನೊಂದಿಗೆ ಅಪಾಯಕಾರಿಯಾಗಿ ಕಾಣುತ್ತಿದ್ದಾರೆ. ನಮ್ಮೆಲ್ಲರ ಭಾವನೆಗಳನ್ನು ನೋಯಿಸಬೇಡಿ, ಎಂಎಸ್​ ಧೋನಿ. ನೀವು ಆಡುವುದನ್ನು ಮುಂದುವರಿಸಬೇಕು ಎಂದು ಹರ್ಭಜನ್ ಸಿಂಗ್ ಸ್ಟಾರ್ ಸ್ಪೋರ್ಟ್ಸ್ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಧೋನಿ ಚಾಣಾಕ್ಷ ಆಟಗಾರ : ಮಿಥಾಲಿ ರಾಜ್

ಈ ಋತುವಿನಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಪ್ರದರ್ಶನವನ್ನು ವಿಶ್ಲೇಷಿಸಿದ ಭಾರತದ ಮಾಜಿ ನಾಯಕಿ ಮಿಥಾಲಿ ರಾಜ್, ನಾಯಕ ಎಂಎಸ್ ಧೋನಿಯನ್ನು ಶ್ಲಾಘಿಸಿದ್ದಾರೆ. 41 ವರ್ಷದ ಧೋನಿ ಈ ಋತುವಿನಲ್ಲಿ ಚೆನ್ನೈಗೆ ಅನೇಕ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ಅದಕ್ಕಾಗಿ ಚಾಣಾಕ್ಷ ನಡೆಗಳನ್ನು ಇಟ್ಟಿದ್ದಾರೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಪ್ರಸಕ್ತ ಋತುವಿನಲ್ಲಿ ಸಿಎಸ್​​ಕೆ ಪರ ಭಾರಿ ಪ್ರಭಾವ ಬೀರಿದ ಅಜಿಂಕ್ಯ ರಹಾನೆ ಅವರ ಉದಾಹರಣೆಯನ್ನು ಮಾಜಿ ಕ್ರಿಕೆಟ್​ ಆಟಗಾರ್ತಿ ಉಲ್ಲೇಖಿಸಿದ್ದಾರೆ. 34 ವರ್ಷದ ರಹಾನೆ 10 ಪಂದ್ಯಗಳಲ್ಲಿ 171.61 ಸ್ಟ್ರೈಕ್ ರೇಟ್ನಲ್ಲಿ 266 ರನ್ ಗಳಿಸಿರುವುದೇ ಅದಕ್ಕೆ ಉದಾಹರಣೆ ಎಂದು ಹೇಳಿದ್ದಾರೆ.

“ಒಬ್ಬ ಆಟಗಾರನು ತನ್ನ ವೃತ್ತಿಜೀವನದ ಕೊನೇ ಹಂತವನ್ನು ಸಮೀಪಿಸಿದಾಗ ಹಲವಾರು ದಾಖಲೆಗಳನ್ನು ಸೃಷ್ಟಿಸುತ್ತಾರೆ. ಎಂಎಸ್ ಧೋನಿ ಈ ಋತುವಿನಲ್ಲಿ ಅಬ್ಬರಿಸುತ್ತಾರೆ. ಅವರು ತಂಡವನ್ನು ಅತ್ಯುತ್ತಮವಾಗಿ ಮುನ್ನಡೆಸುತ್ತಿದ್ದಾರೆ. ಅವರು ಸಿಎಸ್​ಕೆ ತಂಡ ಅಗ್ರ ನಾಲ್ಕರ ಸ್ಥಾನಕ್ಕೆ ಪೈಪೋಟಿ ಕೊಡುವಂತೆ ಮಾಡಿದ್ದಾರೆ. ಇದು ಅವರ ನಾಯಕತ್ವದ ಗುಣಮಟ್ಟಕ್ಕಿರುವ ಅತ್ಯದ್ಭುತ ಉದಾಹರಣೆ. ಹಾಳಿ ಟೂರ್ನಿಯಲ್ಲಿ ಹಲವಾರು ಉತ್ತಮ ನಡೆಗಳನ್ನು ತೆಗೆದುಕೊಂಡಿದ್ದಾರೆ. ಎಂದು ಮಿಥಾಲಿ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

IND vs PAK: ಇಂಡೋ-ಪಾಕ್​ ಹೈವೋಲ್ಟೇಜ್​ ಟಿ20 ಪಂದ್ಯ ವೀಕ್ಷಿಸಲು ಅಭಿಮಾನಿಗಳ ಹಿಂದೇಟು; ಇನ್ನೂ ಮಾರಾಟವಾಗಿಲ್ಲ ಟಿಕೆಟ್​

IND vs PAK:ಭಾರತ ಮತ್ತು ಪಾಕ್​ ಪಂದ್ಯದ ಟಿಕೆಟ್​ ಸಿಗುವುದೇ ಒಂದು ಅದೃಷ್ಟ. ಮ್ಯಾಚ್​ನ ಟಿಕೆಟ್​ಗಳು ಘೋಷಣೆಯಾದ ಕ್ಷಣಾರ್ಧದಲ್ಲೇ ಮಾರಾಟವಾಗುತ್ತಿದ್ದವು. ಆದರೆ ಈ ಬಾರಿ ಯಾರಿಗೂ ಕೂಡ ಟಿಕೆಟ್​ ಕೊಳ್ಳಲು ಆಸಕ್ತಿಯೇ ಇಲ್ಲದಂತಾಗಿದೆ. ಇದಕ್ಕೆ ಕಾರಣ ಟಿಕೆಟ್​ ಬೆಲೆ ದುಬಾರಿಯಾಗಿರುವುದು

VISTARANEWS.COM


on

IND vs PAK
Koo

ನ್ಯೂಯಾರ್ಕ್​: ಕ್ರಿಕೆಟ್​ ಅಭಿಮಾನಿಗಳು ಕಾದು ಕುಳಿತಿರುವ ಜೂನ್​ 9ರಂದು ನಡೆಯುವ ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಣ ಟಿ20 ವಿಶ್ವಕಪ್​ನ(T20 World Cup 2024) ಹೈವೋಲ್ಟೇಜ್ ಪಂದ್ಯಕ್ಕೆ ಈ ಬಾರಿ ಪ್ರೇಕ್ಷಕರು ನಿರಾಸಕ್ತಿ ತೋರುತ್ತಿದ್ದಾರೆ ಎಂಬ ವಿಚಾರ ಹೊರಬಿದ್ದಿದೆ. ಈ ಪಂದ್ಯದ ಎಲ್ಲಾ ಟಿಕೆಟ್‌ಗಳು ಇನ್ನೂ ಮಾರಾಟವಾಗಿಲ್ಲ. ಈ ಪಂದ್ಯದ ಟಿಕೆಟ್‌ಗಳು ಇನ್ನೂ ಐಸಿಸಿ ವೆಬ್​ಸೈಟ್​ನಲ್ಲಿ ಲಭ್ಯವಿದ್ದು, ಇನ್ನೂ ಕೂಡ ಮಾರಾಟವಾಗದಿರುವುದು ಹಲವರಲ್ಲಿ ಅಚ್ಚರಿ ಮೂಡಿಸಿದೆ.

ಭಾರತ ಮತ್ತು ಪಾಕ್​ ಪಂದ್ಯದ ಟಿಕೆಟ್​ ಸಿಗುವುದೇ ಒಂದು ಅದೃಷ್ಟ. ಮ್ಯಾಚ್​ನ ಟಿಕೆಟ್​ಗಳು ಘೋಷಣೆಯಾದ ಕ್ಷಣಾರ್ಧದಲ್ಲೇ ಮಾರಾಟವಾಗುತ್ತಿದ್ದವು. ಆದರೆ ಈ ಬಾರಿ ಯಾರಿಗೂ ಕೂಡ ಟಿಕೆಟ್​ ಕೊಳ್ಳಲು ಆಸಕ್ತಿಯೇ ಇಲ್ಲದಂತಾಗಿದೆ. ಇದಕ್ಕೆ ಕಾರಣ ಟಿಕೆಟ್​ ಬೆಲೆ ದುಬಾರಿಯಾಗಿರುವುದು. ಈ ಪಂದ್ಯಕ್ಕಾಗಿ ಐಸಿಸಿ ಮೂರು ಪ್ಯಾಕೇಜ್‌ಗಳಲ್ಲಿ ಟಿಕೆಟ್‌ಗಳನ್ನು ಇರಿಸಿದೆ. ಇದರಲ್ಲಿ ಡೈಮಂಡ್ ಕ್ಲಬ್, ಪ್ರೀಮಿಯಂ ಕ್ಲಬ್ ಲಾಂಜ್​​ ಮತ್ತು ಕಾರ್ನರ್ ಕ್ಲಬ್​​ಗಳನ್ನು ಒಳಗೊಂಡಿವೆ.

ಡೈಮಂಡ್ ಕ್ಲಬ್ ಟಿಕೆಟ್ ಬೆಲೆ 8.34 ಲಕ್ಷ ರೂ. ಈ ಟಿಕೆಟ್​ ಖರೀದಿಸುವ ಅಭಿಮಾನಿಗಳಿಗೆ ಅತ್ಯುತ್ತಮ ಸೌಲಭ್ಯಗಳು ಸಿಗುತ್ತವೆ. ಪ್ರೀಮಿಯಂ ಕ್ಲಬ್ ಲಾಂಜ್​ ಟಿಕೆಟ್ ಬೆಲೆ 2 ಲಕ್ಷ ರೂ, ಮತ್ತು ಕಾರ್ನರ್ ಕ್ಲಬ್ ಟಿಕೆಟ್ ಬೆಲೆ 2.29 ಲಕ್ಷ ರೂ. ಆಗಿದೆ. ಭಾರತ-ಪಾಕಿಸ್ತಾನ ಪಂದ್ಯದ ದೃಷ್ಟಿಯಿಂದ ಐಸಿಸಿ ಟಿಕೆಟ್ ಬೆಲೆಯನ್ನು ಇಷ್ಟು ದುಬಾರಿ ಇರಿಸಿದೆ. ಇದಲ್ಲದೆ ಪಂದ್ಯಕ್ಕೆ ಉಗ್ರರು ಬಾಂಬ್​ ಬೆದರಿಕೆ ಹಾಕಿದ್ದು ಕೂಡ ಅಭಿಮಾನಿಗಳ ಹಿಂದೇಟಿಗೆ ಕಾರಣವಾಗಿರಬಹುದು ಎಂದು ಹೇಳಲಾಗಿದೆ. ಹೆಚ್ಚಿನ ಟಿಕೆಟ್​ಗಳು ಖರೀದಿಯಾಗದಿದ್ದಲ್ಲಿ ಐಸಿಸಿ ಮತ್ತೆ ಪರಿಷ್ಕೃತ ಟಿಕೆಟ್​ ದರ ಹೊರಡಿಡುವ ಸಾಧ್ಯತೆ ಇದೆ.

ಇದನ್ನೂ ಓದಿ T20 World Cup 2024 : ಟಿ20 ವಿಶ್ವಕಪ್ ವಿಜೇತ ಭಾರತ ತಂಡದ ಕ್ರಿಕೆಟಿಗರು ಈಗ ಎಲ್ಲಿದ್ದಾರೆ?

ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಣ ಪಂದ್ಯಕ್ಕೆ ಉಗ್ರರಿಂದ ದಾಳಿಯ ಬೆದರಿಕೆ ಬಂದಿರುವ ಕಾರಣ ಕ್ರೀಡಾಂಗಣದಲ್ಲಿ ಭಾರೀ ಭದ್ರತಾ ವ್ಯವಸ್ಥೆ ಕೈಗೊಳಲಾಗಿದೆ. ಐಸಿಸ್-ಕೆ ಹೆಸರಿನ ಭಯೋತ್ಪಾದಕ ಸಂಘಟನೆಯು “ಲೋನ್ ವುಲ್ಫ್” ದಾಳಿ ನಡೆಸುವುದಾಗಿ ಘೋಷಿಸಿತ್ತು. ಹೀಗಾಗಿ ಪಂದ್ಯಕ್ಕೆ ಸುಧಾರಿತ ಕಣ್ಗಾವಲು ಏರ್ಪಡಿಸಲಾಗಿದೆ.

ಹೈವೋಲ್ಟೇಜ್ ಕದನಕ್ಕೆ ನ್ಯೂಯಾರ್ಕ್(NEW YORK) ಹೊರವಲಯದಲ್ಲಿ 34,000 ಆಸನ ಸಾಮರ್ಥ್ಯವುಳ್ಳ ತಾತ್ಕಾಲಿಕ ಕ್ರೀಡಾಂಗಣವನ್ನು ನಿರ್ಮಿಸಲಾಗಿದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಪಂದ್ಯ ಇಲ್ಲಿ ಏರ್ಪಡಿಸಲಾಗಿದೆ ಎನ್ನಲಾಗಿದೆ.

ಟಿ20 ಮುಖಾಮುಖಿ

ಉಭಯ ತಂಡಗಳು ಇದುವರೆಗೆ ಟಿ20 ಮಾದರಿಯಲ್ಲಿ 12 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಗರಿಷ್ಠ 9 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಪಾಕಿಸ್ತಾನ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಭಾರತಕ್ಕೆ ಇದರಲ್ಲೊಂದು ಸೋಲು 2021ರಲ್ಲಿ ನಡೆದಿದ್ದ ವಿಶ್ವಕಪ್​ನಲ್ಲಿ ಎದುರಾಗಿತ್ತು. ಅದು ಕೂಡ 10 ವಿಕೆಟ್​ ಅಂತರದ ಹೀನಾಯ ಸೋಲಾಗಿತ್ತು.

Continue Reading

ಕ್ರೀಡೆ

USA vs CAN: ಆರನ್ ಜೋನ್ಸ್ ಪ್ರಚಂಡ ಬ್ಯಾಟಿಂಗ್​; ಗೆಲುವಿನ ಶುಭಾರಂಭ ಕಂಡ ಅಮೆರಿಕ

USA vs CAN: ಭಾನುವಾರ ನಡೆದ ಟಿ20 ವಿಶ್ವಕಪ್​ ಟೂರ್ನಿಯ(T20 World Cup 2024) ಉದ್ಘಾಟನ ಪಂದ್ಯದಲ್ಲಿಕೆನಡಾ ವಿರುದ್ಧ ಅಮೆರಿಕ(USA vs CAN) 7 ವಿಕೆಟ್​ಗಳ ಗೆಲುವು ಸಾಧಿಸಿತು.

VISTARANEWS.COM


on

USA vs CAN
Koo

ನ್ಯೂಯಾರ್ಕ್​: ಟಿ20 ವಿಶ್ವಕಪ್​ ಟೂರ್ನಿಯ(T20 World Cup 2024) ಉದ್ಘಾಟನ ಪಂದ್ಯದಲ್ಲಿ ಆತಿಥೇಯ ಅಮೆರಿಕ(USA vs CAN) ಗೆಲುವಿನ ಖಾತೆ ತೆರೆದಿದೆ. ಭಾನುವಾರ ನಡೆದ ಬೃಹತ್​ ಮೊತ್ತದ ಮೇಲಾಟದಲ್ಲಿ ಕೆನಡಾ ವಿರುದ್ಧ 7 ವಿಕೆಟ್​ಗಳ ಗೆಲುವು ಸಾಧಿಸಿ ಮೆರೆದಾಡಿದೆ. ಜತೆಗೆ ‘ಎ’ ಗುಂಪಿನಲ್ಲಿ ಅಂಕದ ಖಾತೆ ತೆರೆದಿದೆ.

ಇಲ್ಲಿನ ಗ್ರ್ಯಾಂಡ್ ಪ್ರೈರೀ ಸ್ಟೇಡಿಯಂ, ಡಲ್ಲಾಸ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಕೆನಡಾ ತಂಡ ನವನೀತ್ ಧಲಿವಾಲ್(61) ಮತ್ತು ನಿಕೋಲಸ್ ಕಿರ್ಟನ್(51) ಅರ್ಧಶತಕದ ಬ್ಯಾಟಿಂಗ್​ ನೆರವಿನಿಂದ 5 ವಿಕೆಟ್​ಗೆ 194 ರನ್​ ಬಾರಿಸಿತು. ಜವಾಬಿತ್ತ ಅಮೆರಿಕ ಈ ಬೃಹತ್​ ಮೊತ್ತವನ್ನು 17.4 ಓವರ್​ಗಳಲ್ಲಿ ಕೇವಲ 3 ವಿಕೆಟ್​ ಕಳೆದುಕೊಂಡು 197 ರನ್​ ಬಾರಿಸಿ ಅಮೋಘ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ ಯುಎಸ್​ಎ ಗರಿಷ್ಠ ಮೊತ್ತ ಚೇಸ್​ ಮಾಡಿದ ದಾಖಲೆ ಬರೆಯಿತು. ಇದಕ್ಕೂ ಮುನ್ನ 168 ರನ್​ಗಳನ್ನು ಚೇಸ್ ಮಾಡಿದ್ದು ತಂಡದ ಅತ್ಯುತ್ತಮ ಸಾಧನೆಯಾಗಿತ್ತು. ಇದೀಗ ಟಿ20 ವಿಶ್ವಕಪ್​ನ ಚೊಚ್ಚಲ ಪಂದ್ಯದಲ್ಲೇ ಐತಿಹಾಸಿಕ ಗೆಲುವು ದಾಖಲಿಸಿದೆ.

ಚೇಸಿಂಗ್​ ವೇಳೆ ಅಮೆರಿಕ ಆರಂಭಿಕ ಆಘಾತ ಎದುರಿಸಿತು. ತಂಡ ಖಾತೆ ತೆರೆಯುವ ಮುನ್ನವೇ ಸ್ಟೀವನ್ ಟೇಲರ್(0) ಶೂನ್ಯಕ್ಕೆ ವಿಕೆಟ್​ ಕೈಚೆಲ್ಲಿದರು. 42 ರನ್​ ಒಟ್ಟುಗೂಡುವಷ್ಟರಲ್ಲಿ ಮೊನಾಂಕ್ ಪಟೇಲ್(16) ವಿಕೆಟ್​ ಕೂಡ ಬಿತ್ತು. ಈ ವೇಳೆ ಜತೆಗೂಡಿದ ಆಂಡ್ರೀಸ್ ಗೌಸ್ ಮತ್ತು ಆರನ್ ಜೋನ್ಸ್ ಬಿರುಸಿನ ಬ್ಯಾಟಿಂಗ್​ ಮೂಲಕ ಅರ್ಧಶತಕ ಬಾರಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಉತ್ತಮ ಹಿಡಿತ ಸಾಧಿಸಿದ್ದ ಕೆನಡಾ ಬೌಲರ್​ಗಳು ಗೌಸ್ ಮತ್ತು ಜೋನ್ಸ್ ಬ್ಯಾಟಿಂಗ್​ ಆರ್ಭಟದ ಮುಂದೆ ಸಂಪೂರ್ಣ ಲಯ ಕಳೆದುಕೊಂಡರು.

ಉಭಯ ಆಟಗಾರರು ಸೇರಿಕೊಂಡು ಸಿಕ್ಸರ್​ ಮತ್ತು ಬೌಂಡರಿಗಳ ಸುರಿಮಳೆಗೈದರು. ಕಿಕ್ಕಿರಿದು ನೆರೆದ ತವರಿನ ವೀಕ್ಷಕರಿಗೆ ಭರಪೂರ ರಂಜನೆ ಲಭಿಸಿತು. ಈ ಜೋಡಿ ಮೂರನೇ ವಿಕೆಟ್​ಗೆ ಬರೋಬ್ಬರಿ 131 ರನ್​ಗಳ ಅಮೂಲ್ಯ ಜತೆಯಾಟ ನಡೆಸಿತು. ಆಂಡ್ರೀಸ್ ಗೌಸ್ 46 ಎಸೆತಗಳಿಂದ 7 ಬೌಂಡರಿ ಮತ್ತು 3 ಸಿಕ್ಸರ್​ ನೆರವಿನಿಂದ 65 ರನ್​ ಬಾರಿಸಿದರು. ವಿಸ್ಫೋಟಕ ಬ್ಯಾಟಿಂಗ್​ ನಡೆಸಿದ ಆರನ್ ಜೋನ್ಸ್ 40 ಎಸೆತಗಳಿಂದ ಬರೋಬ್ಬರಿ 10 ಸಿಕ್ಸರ್​ ಮತ್ತು 4 ಬೌಂಡರಿ ಸಿಡಿಸಿ ಅಜೇಯ 94 ರನ್​ ಬಾರಿಸಿದರು. ಗೆಲುವಿಗೆ ನಾಲ್ಕು ರನ್​ ಬೇಕಿದ್ದಾಗ ಸಿಕ್ಸರ್​ ಬಡಿದಟ್ಟಿ ತಂಡಕ್ಕೆ ಗೆಲುವು ತಂದುಕೊಟ್ಟುರು. ನ್ಯೂಜಿಲ್ಯಾಂಡ್​ ತಂಡ ತೊರೆದು ಅಮೆರಿಕ ಪರ ಆಡುತ್ತಿರುವ ಕೋರಿ ಆ್ಯಂಡರ್ಸನ್​ ಅಜೇಯ 3 ರನ್​ ಬಾರಿಸಿದರು. ಬೌಲಿಂಗ್​ನಲ್ಲಿ ಒಂದು ವಿಕೆಟ್​ ಪಡೆದರು.

ಇದಕ್ಕೂ ಮುನ್ನ ಬ್ಯಾಟಿಂಗ್​ ನಡೆಸಿದ ಕೆನಡಾ ಪರ ನವನೀತ್ ಧಲಿವಾಲ್(61) ಮತ್ತು ನಿಕೋಲಸ್ ಕಿರ್ಟನ್(51) ಅರ್ಧಶತಕ ಬಾರಿಸಿ ಮಿಂಚಿದರು. ಉಳಿದಂತೆ ಶ್ರೇಯಸ್ ಮೊವ್ವ(32) ಆರಂಭಿಕ ಆಟಗಾರ ಆರನ್ ಜಾನ್ಸನ್(23) ರನ್​ ಬಾರಿಸಿದರು. ಬೃಹತ್​ ಮೊತ್ತ ಪೇರಿಸಿದರು ಕೂಡ ಬೌಲರ್​ಗಳಿಂದ ಸಂಘಟಿತ ಪ್ರದರ್ಶನ ಕಂಡು ಬಾರದ ಕಾರಣ ಪಂದ್ಯವನ್ನು ಕಳೆದುಕೊಂಡರು.

Continue Reading

ಕ್ರೀಡೆ

Rohit Sharma: ರೋಹಿತ್​ ಅಪ್ಪಿಕೊಳ್ಳಲು ಯತ್ನಿಸಿದ ಅಭಿಮಾನಿಯನ್ನು ಹೆಡೆಮುರಿ ಕಟ್ಟಿದ ನ್ಯೂಯಾರ್ಕ್ ಪೊಲೀಸ್; ವಿಡಿಯೊ ವೈರಲ್​

Rohit Sharma: ಬೇರೆ ದೇಶದಲ್ಲಿ ಈ ರೀತಿ ಮೈದಾನಕ್ಕೆ ನುಗ್ಗಿದರೆ ಎಚ್ಚರಿಕೆ ನೀಡಿ ಕಳಿಸಲಾಗುತ್ತದೆ. ಆದರೆ ಅಮೆರಿಕದಲ್ಲಿ ಮಾತ್ರ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಯಾರು ಏನೇ ಹೇಳಿದರು ಕೂಡ ಇಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆ ಖಚಿತ. ಅಮೆರಿಕದಲ್ಲಿ ನೆಲೆಸಿರುವ ಭಾರತೀಯರೊಬ್ಬರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೊ ಹಂಚಿಕೊಂಡು ಜಾಗ್ರತೆ ವಹಿಸಿ. ಇಲ್ಲಿ ಹುಚ್ಚಾಟ ನಡೆಸಿದರೆ ಜೈಲು ಕಂಬಿ ಎಣಿಸುವುದು ನಿಶ್ಚಿತ ಎಂದು ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

VISTARANEWS.COM


on

Rohit Sharma
Koo

ನ್ಯೂಯಾರ್ಕ್: ಬಾಂಗ್ಲಾದೇಶ(IND vs BAN) ವಿರುದ್ಧ ನಿನ್ನೆ(ಶನಿವಾರ) ನಡೆದ ಟಿ20 ವಿಶ್ವಕಪ್(T20 World Cup 2024)​ ಟೂರ್ನಿಯ ಅಭ್ಯಾಸ ಪಂದ್ಯದ ವೇಳೆ ರೋಹಿತ್​ ಶರ್ಮ(Rohit Sharma) ಅವರ ಅಭಿಮಾನಿಯೊಬ್ಬ ಮೈದಾನಕ್ಕೆ ನುಗ್ಗಿ ರೋಹಿತ್​ ಅವರನ್ನು ಅಪ್ಪಿಕೊಂಡಿದ್ದಾನೆ. ಈ ವೇಳೆ ನ್ಯೂಯಾರ್ಕ್​ನ ಪೊಲೀಸ್‌ ಪಡೆ ಶರವೇಗದಲ್ಲಿ ಓಡಿ ಒಂದು ಈ ಅಭಿಮಾನಿಯನ್ನು ಹೆಡೆಮುರಿ ಕಟ್ಟಿದ್ದಾರೆ. ಈ ವಿಡಿಯೊ ವೈರಲ್(viral video)​ ಆಗಿದೆ.

ಭಾರತ ತಂಡ ಫೀಲ್ಡಿಂಗ್​ ನಡೆಸುತ್ತಿದ್ದ ವೇಳೆ ಅಭಿಮಾನಿಯೊಬ್ಬ ಟೀಮ್​ ಇಂಡಿಯಾದ ಜೆರ್ಸಿ ತೊಟ್ಟು ನೇರವಾಗಿ ಮೈದಾನಕ್ಕೆ ಓಡಿ ಬಂದು ರೋಹಿತ್​ ಅವರನ್ನು ಅಪ್ಪಿಕೊಂಡು ಕಾಲಿಗೆ ಬಿದ್ದಿದ್ದಾನೆ. ಇದೇ ವೇಳೆ ಇಲ್ಲಿನ ಪೊಲೀಸ್‌ ಪಡೆ ಆತನನ್ನು ಮೈದಾನದಲ್ಲೇ ಕೈಗೆ ಕೋಳ ಹಾಕಿ ಎಳೆದುಕೊಂಡು ಹೋಗಿದ್ದಾರೆ. ಈ ವೇಳೆ ರೋಹಿತ್​ ಮತ್ತು ಟೂರ್ನಿಯ ಸಂಘಟಕರು ಆತನಿಗೆ ಏನು ಮಾಡಬೇಡಿ ಎಂದು ಹೇಳಿದರೂ ಕೂಡ ಕೆಳದೆ 2 ಪೊಲೀಸರು ಆತನ್ನು ಉಗ್ರಮಾಮಿಯನ್ನು ಬಂಧಿಸಿದಂತೆ ಎಳೆದುಕೊಂಡು ಹೋಗಿದ್ದಾರೆ. ಈತನಿಗೆ ಜೈಲು ಶಿಕ್ಷೆ ಖಚಿತ ಎನ್ನಲಾಗಿದೆ.

ಬೇರೆ ದೇಶದಲ್ಲಿ ಈ ರೀತಿ ಮೈದಾನಕ್ಕೆ ನುಗ್ಗಿದರೆ ಎಚ್ಚರಿಕೆ ನೀಡಿ ಕಳಿಸಲಾಗುತ್ತದೆ. ಆದರೆ ಅಮೆರಿಕದಲ್ಲಿ ಮಾತ್ರ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಯಾರು ಏನೇ ಹೇಳಿದರು ಕೂಡ ಇಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆ ಖಚಿತ. ಅಮೆರಿಕದಲ್ಲಿ ನೆಲೆಸಿರುವ ಭಾರತೀಯರೊಬ್ಬರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೊ ಹಂಚಿಕೊಂಡು ಜಾಗ್ರತೆ ವಹಿಸಿ. ಇಲ್ಲಿ ಹುಚ್ಚಾಟ ನಡೆಸಿದರೆ ಜೈಲು ಕಂಬಿ ಎಣಿಸುವುದು ನಿಶ್ಚಿತ ಎಂದು ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ ರಿಷಭ್​ ಪಂತ್​ ಅವರ ಅರ್ಧಶತಕ ಮತ್ತು ಪಾಂಡ್ಯ ಅವರ ಅಜೇಯ 40 ರನ್​ಗಳ ನೆರವಿನಿಂದ 5 ವಿಕೆಟಿಗೆ 182 ರನ್‌ ಗಳಿಸಿತು. ಗುರಿ ಬೆನ್ನಟ್ಟಿದ ಬಾಂಗ್ಲಾ 8 ವಿಕೆಟ್ ಕಳೆದುಕೊಂಡು 121 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲು ಕಂಡಿತು. ಬಾಂಗ್ಲಾ ತಂಡ ಇದಕ್ಕೂ ಮುನ್ನ ಆಡಿದ ಅಭ್ಯಾಸ ಪಂದ್ಯದಲ್ಲಿ ಅಮೆರಿಕ ವಿರುದ್ಧವೂ ಸೋಲು ಕಂಡಿತ್ತು.

ಇದನ್ನೂ ಓದಿ IND vs BAN: ಪಾಂಡ್ಯ ಬಲಿಷ್ಠ ಹೊಡೆತಕ್ಕೆ ನೆತ್ತರು ಚೆಲ್ಲಿದ ಬಾಂಗ್ಲಾ ಬೌಲರ್; ವಿಡಿಯೊ ವೈರಲ್​

ಐಪಿಎಲ್​ನಲ್ಲಿ ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡರಲ್ಲೂ ವಿಫಲವಾಗಿದ್ದ ಹಾರ್ದಿಕ್​ ಪಾಂಡ್ಯ ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ ನಡೆದಿದ ಪಾಂಡ್ಯ ಬಿರುಸಿನ ಬ್ಯಾಟಿಂಗ್​ ಮೂಲಕ ಕೇವಲ 23 ಎಸೆತಗಳಿಂದ 2 ಬೌಂಡರಿ ಮತ್ತು 4 ಸಿಕ್ಸರ್‌ ಸಹಿತ ಅಜೇಯ 40 ರನ್ ಚಚ್ಚಿದರು. ಒಂದು ವಿಕೆಟ್​ ಕೂಡ ಕಿತ್ತರು.ಕಾರು ಅಪಘಾತದ ಬಳಿಕ ಮೊದಲ ಬಾರಿ ಟೀಮ್​ ಇಂಡಿಯಾ ಪರ ಆಡಿದ ರಿಷಭ್​ ಪಂತ್​ ಪ್ರಚಂಡ ಬ್ಯಾಟಿಂಗ್​ ನಡೆಸುವ ಮೂಲಕ ಗಮನಸೆಳೆದರು. ತಮ್ಮ ನೆಚ್ಚಿನ ಒನ್​ ಹ್ಯಾಂಡ್​ ಸಿಕ್ಸರ್​ ಕೂಡ ಬಾರಿಸಿದರು. ಮೂರನೇ ಕ್ರಮಾಂಕದಲ್ಲಿ ಆಡಿದ ಪಂತ್​ ಬರೋಬ್ಬರಿ 4 ಬೌಂಡರಿ ಮತ್ತು 4 ಸಿಕ್ಸರ್​ ಬಾರಿಸಿ 53 ರನ್​ ಗಳಿಸಿದರು.

Continue Reading

ಕ್ರೀಡೆ

IND vs BAN: ಪಾಂಡ್ಯ ಬಲಿಷ್ಠ ಹೊಡೆತಕ್ಕೆ ನೆತ್ತರು ಚೆಲ್ಲಿದ ಬಾಂಗ್ಲಾ ಬೌಲರ್; ವಿಡಿಯೊ ವೈರಲ್​

IND vs BAN:ಕಾರು ಅಪಘಾತದ ಬಳಿಕ ಮೊದಲ ಬಾರಿ ಟೀಮ್​ ಇಂಡಿಯಾ ಪರ ಆಡಿದ ರಿಷಭ್​ ಪಂತ್​ ಪ್ರಚಂಡ ಬ್ಯಾಟಿಂಗ್​ ನಡೆಸುವ ಮೂಲಕ ಗಮನಸೆಳೆದರು. ಮೂರನೇ ಕ್ರಮಾಂಕದಲ್ಲಿ ಆಡಿದ ಪಂತ್​ ಬರೋಬ್ಬರಿ 4 ಬೌಂಡರಿ ಮತ್ತು 4 ಸಿಕ್ಸರ್​ ಬಾರಿಸಿ 53 ರನ್​ ಗಳಿಸಿದರು.

VISTARANEWS.COM


on

IND vs BAN
Koo

ನ್ಯೂಯಾರ್ಕ್: ಶನಿವಾರ ರಾತ್ರಿ ನಡೆದ ಬಾಂಗ್ಲಾದೇಶ(IND vs BAN) ವಿರುದ್ಧದ ಟಿ20 ವಿಶ್ವಕಪ್​ ಟೂರ್ನಿಯ(ICC Mens T20 World Cup) ಅಭ್ಯಾಸ ಪಂದ್ಯದಲ್ಲಿ ಭಾರತ ತಂಡ 60 ರನ್​ಗಳ ಭರ್ಜರಿ ಗೆಲುವು ಸಾಧಿಸಿತು. ಐಪಿಎಲ್​ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ತೋರಿದ್ದ ಹಾರ್ದಿಕ್​ ಪಾಂಡ್ಯ(Hardik Pandya) ಈ ಪಂದ್ಯದಲ್ಲಿ ಬ್ಯಾಟಿಂಗ್​ ಮತ್ತು ಬೌಲಿಂಗ್​ನಲ್ಲಿ ಉತ್ತಮ ಪ್ರದರ್ಶನ ತೋರಿದರು. ಇದೇ ವೇಳೆ ಪಾಂಡ್ಯ ಬಾರಿಸಿದ ಪವರ್​ ಫುಲ್​ ಹೊಡೆತವೊಂದು​ ಶೋರಿಫುಲ್ ಇಸ್ಲಾಂ(Shoriful Islam) ಅವರ ಕೈಗೆ ತಾಗಿ ಗಾಯಗೊಂಡ ಘಟನೆಯೂ ಸಂಭವಿಸಿತು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ ರಿಷಭ್​ ಪಂತ್​ ಅವರ ಅರ್ಧಶತಕ ಮತ್ತು ಪಾಂಡ್ಯ ಅವರ ಅಜೇಯ 40 ರನ್​ಗಳ ನೆರವಿನಿಂದ 5 ವಿಕೆಟಿಗೆ 182 ರನ್‌ ಗಳಿಸಿತು. ಗುರಿ ಬೆನ್ನಟ್ಟಿದ ಬಾಂಗ್ಲಾ 8 ವಿಕೆಟ್ ಕಳೆದುಕೊಂಡು 121 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲು ಕಂಡಿತು. ಬಾಂಗ್ಲಾ ತಂಡ ಇದಕ್ಕೂ ಮುನ್ನ ಆಡಿದ ಅಭ್ಯಾಸ ಪಂದ್ಯದಲ್ಲಿ ಅಮೆರಿಕ ವಿರುದ್ಧವೂ ಸೋಲು ಕಂಡಿತ್ತು.

ಇದನ್ನೂ ಓದಿ T20 World Cup 2024 : ಟಿ20 ವಿಶ್ವಕಪ್ ವಿಜೇತ ಭಾರತ ತಂಡದ ಕ್ರಿಕೆಟಿಗರು ಈಗ ಎಲ್ಲಿದ್ದಾರೆ?

ಭಾರತದ ಬ್ಯಾಟಿಂಗ್​ ಇನಿಂಗ್ಸ್‌ನ ಕೊನೆಯ ಓವರ್‌ನಲ್ಲಿ ಹಾರ್ದಿಕ್ ಪಾಂಡ್ಯ ಸ್ಟ್ರೈಕ್​ನಲ್ಲಿದ್ದರು. ಬೌಲಿಂಗ್ ನಡೆಸುತ್ತಿದ್ದ ಶೋರಿಫುಲ್ ಇಸ್ಲಾಂ ಐದನೇ ಎಸೆತವನ್ನು ಯಾರ್ಕರ್ ಎಸೆದರು. ಈ ಎಸೆತವನ್ನು ಪಾಂಡ್ಯ ಬಲವಾಗಿ ಬೀಸಿದರು. ನೇರವಾಗಿ ಬಂದ ಚೆಂಡನ್ನು ತಡೆಯುವ ಯತ್ನದಲ್ಲಿ ಶೋರಿಫುಲ್ ಇಸ್ಲಾಂ ಅಂಗೈಗೆ ಗಾಯ ಮಾಡಿಕೊಂಡರು. ಚೆಂಡು ರಬಸವಾಗಿ ಬಂದಿದ್ದರಿಂದ ಶೋರಿಫುಲ್ ಎಡಗೈಗೆ ಗಾಯವಾಯಿತು. ಬಳಿಕ ರಕ್ತ ಸುರಿಯಲಾರಂಭಿಸಿತು. ಬೌಲರ್ ಮೈದಾನದಲ್ಲಿ ನರಳುತ್ತಿರುವುದನ್ನು ನೋಡಿದ ಫಿಸಿಯೋ ತಕ್ಷಣವೇ ಮೈದಾನಕ್ಕೆ ಬಂದು ಶೋರಿಫುಲ್ ಅವರನ್ನು ಅಲ್ಲಿಂದ ಕರೆದೊಯ್ದರು. ಮೈದಾನ ತೊರೆದ ಕಾರಣ ಕೊನೆಯ ಎಸೆತವನ್ನು ತಂಜಿಮ್ ಹಸನ್ ಬೌಲ್ ಮಾಡಿ ಓವರ್​ ಪೂರ್ತಿಗೊಳಿಸಿದರು. ಗಾಯವನ್ನು ನೋಡುವಾಗ ಶೋರಿಫುಲ್ ಲೀಗ್​ ಹಂತದ ಪಂದ್ಯವನ್ನಾಡುವುದು ಕೂಡ ಅನುಮಾನ ಎನ್ನುವಂತಿದೆ.

ಐಪಿಎಲ್​ನಲ್ಲಿ ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡರಲ್ಲೂ ವಿಫಲವಾಗಿದ್ದ ಹಾರ್ದಿಕ್​ ಪಾಂಡ್ಯ ಅವರನ್ನು ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಿದಾಗ ಹಲವರು ಆಯ್ಕೆ ಸಮಿತಿಯ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಆದರೆ ಪಾಂಡ್ಯ ಅಭ್ಯಾಸ ಪಂದ್ಯದಲ್ಲಿ ಆಲ್​ರೌಂಡರ್​ ಪ್ರದರ್ಶನ ತೋರುವ ಮೂಲಕ ಆಯ್ಕೆ ಸಮಿತಿ ಮತ್ತು ತಂಡದ ವಿಶ್ವಾಸ ಹೆಚ್ಚಿಸುವಂತೆ ಮಾಡಿದ್ದಾರೆ. ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ ನಡೆದಿದ ಪಾಂಡ್ಯ ಬಿರುಸಿನ ಬ್ಯಾಟಿಂಗ್​ ಮೂಲಕ ಕೇವಲ 23 ಎಸೆತಗಳಿಂದ 2 ಬೌಂಡರಿ ಮತ್ತು 4 ಸಿಕ್ಸರ್‌ ಸಹಿತ ಅಜೇಯ 40 ರನ್ ಚಚ್ಚಿದರು. ಒಂದು ವಿಕೆಟ್​ ಕೂಡ ಕಿತ್ತರು.

ಕಾರು ಅಪಘಾತದ ಬಳಿಕ ಮೊದಲ ಬಾರಿ ಟೀಮ್​ ಇಂಡಿಯಾ ಪರ ಆಡಿದ ರಿಷಭ್​ ಪಂತ್​ ಪ್ರಚಂಡ ಬ್ಯಾಟಿಂಗ್​ ನಡೆಸುವ ಮೂಲಕ ಗಮನಸೆಳೆದರು. ತಮ್ಮ ನೆಚ್ಚಿನ ಒನ್​ ಹ್ಯಾಂಡ್​ ಸಿಕ್ಸರ್​ ಕೂಡ ಬಾರಿಸಿದರು. ಮೂರನೇ ಕ್ರಮಾಂಕದಲ್ಲಿ ಆಡಿದ ಪಂತ್​ ಬರೋಬ್ಬರಿ 4 ಬೌಂಡರಿ ಮತ್ತು 4 ಸಿಕ್ಸರ್​ ಬಾರಿಸಿ 53 ರನ್​ ಗಳಿಸಿದರು.

Continue Reading
Advertisement
Karnataka Rain
ಮಳೆ51 seconds ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Bhavani Revanna hide Not Present For SIT Questioning At Home
ಕರ್ನಾಟಕ4 mins ago

Bhavani Revanna: ಭವಾನಿ ರೇವಣ್ಣ ಕಣ್ಣಾಮುಚ್ಚಾಲೆ ಆಟ; ಎಸ್ ಐ ಟಿಗೆ ಅರೆಸ್ಟ್ ಮಾಡಿ ಜೈಲಿಗಟ್ಟುವ ಹಟ!

IND vs PAK
ಕ್ರಿಕೆಟ್11 mins ago

IND vs PAK: ಇಂಡೋ-ಪಾಕ್​ ಹೈವೋಲ್ಟೇಜ್​ ಟಿ20 ಪಂದ್ಯ ವೀಕ್ಷಿಸಲು ಅಭಿಮಾನಿಗಳ ಹಿಂದೇಟು; ಇನ್ನೂ ಮಾರಾಟವಾಗಿಲ್ಲ ಟಿಕೆಟ್​

Foeticide Case Foeticide another Case in Bagalkot
ಬಾಗಲಕೋಟೆ43 mins ago

Foeticide Case: ಬಾಗಲಕೋಟೆಯಲ್ಲಿ ಮತ್ತೊಂದು ಭ್ರೂಣ ಹತ್ಯೆ: ಗಾಢ ನಿದ್ರೆಯಲ್ಲಿದ್ದಾರಾ ಅಧಿಕಾರಿಗಳು?

Healthy Sandwich Spread
ಆರೋಗ್ಯ47 mins ago

Healthy Sandwich Spread: ಮನೆಯಲ್ಲೇ ಮಾಡಿ ಕಡಿಮೆ ಕ್ಯಾಲರಿಯ ಆರೋಗ್ಯಕರ ಸ್ಯಾಂಡ್‌ವಿಚ್‌ ಸ್ಪ್ರೆಡ್‌!

Taiwan Athletics Open
ಕ್ರೀಡೆ59 mins ago

Taiwan Athletics Open: ತೈವಾನ್‌ ಓಪನ್​ನಲ್ಲಿ ಚಿನ್ನ ಗೆದ್ದ ಕನ್ನಡಿಗ ಡಿ.ಪಿ. ಮನು

Assembly Election Results 2024:
ದೇಶ1 hour ago

Assembly Election Results 2024: ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಮುನ್ನಡೆ, ಸಿಕ್ಕಿಂನಲ್ಲಿ ಕ್ಲೀನ್‌ ಸ್ವೀಪ್‌ನತ್ತ SKM

Man
ಆರೋಗ್ಯ1 hour ago

Health Tips For Rainy Season: ಮಳೆಗಾಲ ಶುರುವಾಗಿದೆ, ಅನಾರೋಗ್ಯಕ್ಕೆ ತುತ್ತಾಗದಿರಲು ಈ ಸಲಹೆ ಪಾಲಿಸಿ

WhatsApp Features
ಗ್ಯಾಜೆಟ್ಸ್1 hour ago

WhatsApp Features: ವಾಟ್ಸ್ ಆ್ಯಪ್ ನಲ್ಲಿರುವ ಈ 7 ವಿಶೇಷ ಫೀಚರ್ ಗಳ ಬಗ್ಗೆ ಗೊತ್ತೇ? ನೀವೂ ಬಳಸಿ

USA vs CAN
ಕ್ರೀಡೆ1 hour ago

USA vs CAN: ಆರನ್ ಜೋನ್ಸ್ ಪ್ರಚಂಡ ಬ್ಯಾಟಿಂಗ್​; ಗೆಲುವಿನ ಶುಭಾರಂಭ ಕಂಡ ಅಮೆರಿಕ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು18 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ7 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು7 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 weeks ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌