ಮುಂಬಯಿ: ಮಹಿಳೆಯರ ಪ್ರೀಮಿಯರ್ ಲೀಗ್ನ 14ನೇ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಡೆಲ್ಲಿ ತಂಡದ ಇದುವರೆಗಿನ ಐದು ಪಂದ್ಯಗಳಲ್ಲಿ ನಾಲ್ಕು ಪಂದ್ಯಗಳನ್ನು ಗೆದ್ದಿದ್ದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಅತ್ತ ಇದುವರೆಗೆ ಆಡಿರುವ ಆರು ಹಣಾಹಣಿಗಳಲ್ಲಿ ಒಂದು ಪಂದ್ಯವನ್ನು ಗೆದ್ದಿರುವ ಗುಜರಾತ್ ಜಯಂಟ್ಸ್ ತಂಡ ಅಂಕಪಟ್ಟಿಯ ಕೊನೇ ಸ್ಥಾನದಲ್ಲಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಂಕಪಟ್ಟಿಯ ಅಗ್ರ ಸ್ಥಾನಕ್ಕೆ ಹೊಂಚು ಹಾಕಿದರೆ, ಗುಜರಾತ್ ಬಳಗ ಹೇಗಾದರೂ ಮಾಡಿ ಗೆಲುವು ಸಾಧಿಸುವ ಗುರಿಯನ್ನು ಹೊಂದಿದೆ.
ಬ್ರಬೊರ್ನ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಈ ಪಂದ್ಯ ನಡೆಯುತ್ತಿದೆ. ಇದೊಂದು ಹೊಸ ವಿಕೆಟ್. ಇಲ್ಲಿ ಬೌಲಿಂಗ್ ಮಾಡಿ ಎದುರಾಳಿಯನ್ನು ಕಟ್ಟಿ ಹಾಕಿ ಚೇಸ್ ಮಾಡುವುದೇ ಸುಲಭ ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಹೇಳಿದ್ದಾರೆ
ಗುಜರಾತ್ ತಂಡದ ನಾಯಕಿ ಸ್ನೇಹಾ ರಾಣಾ ಅವರು ಮಾತನಾಡಿ, ಕಳೆದ ಕೆಲವು ಪಂದ್ಯಗಳಲ್ಲಿ ನಾವು ಪ್ರದರ್ಶನದಲ್ಲಿ ಸುಧಾರಣೆ ಕಾಣುತ್ತಿದ್ದೇವೆ. ಇಂದಿನ ಪಂದ್ಯದಲ್ಲೂ ಉತ್ತಮ ಪ್ರದರ್ಶನ ನೀಡಲಿದ್ದೇವೆ ಎಂದು ಹೇಳಿದ್ದಾರೆ.
ತಂಡಗಳು
ಡೆಲ್ಲಿ ಕ್ಯಾಪಿಟಲ್ಸ್: ಮೆಗ್ ಲ್ಯಾನಿಂಗ್(ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸೆ, ಜೆಮಿಮಾ ರೋಡ್ರಿಗಸ್, ಮರಿಜ್ ಕಪ್, ಜೆಸ್ ಜೊನಾಸೆನ್, ತಾನಿಯಾ ಭಾಟಿಯಾ(ವಿಕೆಟ್ಕೀಪರ್), ಅರುಂಧತಿ ರೆಡ್ಡಿ, ರಾಧಾ ಯಾದವ್, ಶಿಖಾ ಪಾಂಡೆ, ಪೂನಂ ಯಾದವ್.
ಗುಜರಾತ್ ಜಯಂಟ್ಸ್: ಸೋಫಿಯಾ ಡಂಕ್ಲಿ, ಲಾರಾ ವೊಲ್ವೊರ್ಟ್ ಹರ್ಲೀನ್ ಡಿಯೋಲ್, ಆ್ಯಶ್ಲೇ ಗಾರ್ಡ್ನರ್, ದಯಾಲನ್ ಹೇಮಲತಾ, ಸ್ನೇಹ ರಾಣಾ(ನಾಯಕಿ), ಸುಷ್ಮಾ ವರ್ಮಾ(ವಿಕೆಟ್ಕೀಪರ್), ಕಿಮ್ ಗಾರ್ತ್, ತನುಜಾ ಕನ್ವರ್, ಮಾನ್ಸಿ ಜೋಶಿ, ಅಶ್ವನಿ ಕುಮಾರಿ.