Women's T20 World Cup: ಬಾಂಗ್ಲಾದಲ್ಲಿ ಭುಗಿಲೆದ್ದ ಹಿಂಸಾಚಾರ; ಮಹಿಳಾ ಟಿ20 ವಿಶ್ವಕಪ್ ​ಸ್ಥಳಾಂತರ ಸಾಧ್ಯತೆ! - Vistara News

ಕ್ರೀಡೆ

Women’s T20 World Cup: ಬಾಂಗ್ಲಾದಲ್ಲಿ ಭುಗಿಲೆದ್ದ ಹಿಂಸಾಚಾರ; ಮಹಿಳಾ ಟಿ20 ವಿಶ್ವಕಪ್ ​ಸ್ಥಳಾಂತರ ಸಾಧ್ಯತೆ!

Women’s T20 World Cup: ಒಂದೊಮ್ಮೆ ಬಾಂಗ್ಲಾದೇಶದಲ್ಲಿ ಶಾಂತಿ ನೆಲೆಸದೇ ಹೋದರೆ, ಭದ್ರತಾ ಕಾರಣದಿಂದ ಟೂರ್ನಿಯನ್ನು ಬಾಂಗ್ಲಾದೇಶದಿಂದ ಬೇರೆ ದೇಶಕ್ಕೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ.

VISTARANEWS.COM


on

Women's T20 World Cup
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಢಾಕಾ: ಬಹುನಿರೀಕ್ಷಿತ ಮಹಿಳಾ ಟಿ20 ವಿಶ್ವಕಪ್‌ ಟೂರ್ನಿ(Women’s T20 World Cup) ಅಕ್ಟೋಬರ್‌ನಲ್ಲಿ ಬಾಂಗ್ಲಾದೇಶ ಆತಿಥ್ಯದಲ್ಲಿ ನಡೆಯಲಿದೆ. ಆದರೆ, ಬಾಂಗ್ಲಾದೇಶದಲ್ಲಿ(bangladesh violence)  ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಅಲ್ಲಿನ ನಾಗರೀಕರು ನಡೆಸುತ್ತಿರುವ ಪ್ರತಿಭಟನೆ, ಗಲಭೆಗಳು ಹಿಂಸಾತ್ಮಕ ರೂಪ ತಳೆದಿದೆ. ಇದೇ ಕಾರಣಕ್ಕೆ ಬಾಂಗ್ಲಾದೇಶದಲ್ಲಿನ ಭದ್ರತೆ ಪರಿಸ್ಥಿತಿಯ ಬಗ್ಗೆ ಗಮನ ಹರಿಸುವುದಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ICC) ಹೇಳಿದೆ.

ಒಂದೊಮ್ಮೆ ಬಾಂಗ್ಲಾದೇಶದಲ್ಲಿ ಶಾಂತಿ ನೆಲೆಸದೇ ಹೋದರೆ, ಭದ್ರತಾ ಕಾರಣದಿಂದ ಟೂರ್ನಿಯನ್ನು ಬಾಂಗ್ಲಾದೇಶದಿಂದ ಬೇರೆ ದೇಶಕ್ಕೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ ಟೂರ್ನಿ ಸ್ಥಳಾಂತರಗೊಂಡರೆ ಭಾರತದಲ್ಲಿ ನಡೆಯಲಿದೆ ಎನ್ನಲಾಗಿದೆ. ಸದ್ಯ ಪೊಲೀಸರು ಢಾಕಾದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದು. ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವವರ ಮೇಲೆ ಲಾಠಿ ಚಾರ್ಜ್​ ನಡೆಸುತ್ತಿದ್ದಾರೆ. ಕೆಲವರು ಪೊಲೀಸ ಮೇಲೆಯೇ ದಾಳಿ ನಡೆಸುತ್ತಿರುವ ವಿಡಿಯೊಗಳು ಕೂಡ ವೈರಲ್​ ಆಗುತ್ತಿದೆ. ಇದುವರೆಗೆ ಹಿಂಸಾಚಾರದಲ್ಲಿ 150ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ಬಾಂಗ್ಲಾ ವಿಮೋಚನೆ ಹೋರಾಟದಲ್ಲಿ (Bangladesh Protests) ಭಾಗಿಯಾಗಿದ್ದವರ ಕುಟುಂಬದವರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ. 30ರಷ್ಟು ಮೀಸಲಾತಿ (Job Reservation) ನೀಡುವ ನಿಯಮವನ್ನು ಕೋರ್ಟ್‌ ಹಿಂತೆಗೆದುಕೊಂಡಿದೆ. ಆದರೆ ಸಂಪೂರ್ಣ ರದ್ದುಗೊಳಿಸಲಿಲ್ಲ. ಶೇ. 30ರಷ್ಟಿದ್ದ ಮೀಸಲಾತಿಯನ್ನು ಶೇ. 5ಕ್ಕೆ ಇಳಿಸಲಾಗಿದೆ. ಇದೇ ಕಾರಣಕ್ಕೆ ಇಲ್ಲಿ ಹೋರಾಟ ನಡೆಸುತ್ತಿದ್ದಾರೆ.

ಏನಿದು ವಿವಾದ?

1971ರಲ್ಲಿ ಪಾಕಿಸ್ತಾನದಿಂದ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಯೋಧರು ಮತ್ತು ಹೋರಾಟಗಾರರ ಸಂಬಂಧಿಕರಿಗೆ ಉದ್ಯೋಗಗಳಲ್ಲಿ ಶೇ. 30ರಷ್ಟು ಮೀಸಲಾತಿ ಘೋಷಣೆಯಾದ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆಗೆ ಇಳಿದಿದ್ದರು. ರಾಜಧಾನಿ ಢಾಕಾ ಮತ್ತು ಇತರ ನಗರಗಳಲ್ಲಿ ನೂರಾರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಳೆದ ತಿಂಗಳಿನಿಂದ ರ‍್ಯಾಲಿಗಳನ್ನು ಪ್ರಾರಂಭಿಸಿದರು. ಶಾಂತವಾಗಿಯೇ ನಡೆಯುತ್ತಿದ್ದ ಪ್ರತಿಭಟನೆಕಾರರ ಮೇಲೆ ಪ್ರಧಾನಿ ಶೇಖ್‌ ಹಸೀನಾ ಅವರ ಆಡಳಿತರೂಢ ಅವಾಮಿ ಲೀಗ್‌ ಪಕ್ಷದ ಕಾರ್ಯಕರ್ತರು ದಾಳಿ ನಡೆಸಿದರು. ಆ ಬಳಿಕ ಪ್ರತಿಭಟನೆ ಹಿಂಸೆಯ ರೂಪ ತಾಳಿತು.

ಇದನ್ನೂ ಓದಿ Bangla Agitation Explainer: ಬಾಂಗ್ಲಾದೇಶ ಏಕೆ ಹೊತ್ತಿ ಉರಿಯುತ್ತಿದೆ? ವಿದ್ಯಾರ್ಥಿಗಳು ಏಕೆ ಹಿಂಸಾಚಾರಕ್ಕಿಳಿದಿದ್ದಾರೆ?

ದೇಶದ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆಗಳು ಮತ್ತು ಗಲಭೆಗಳು ನಡೆಯುತ್ತಿರುವ ಕಾರಣ ಸುಮಾರು 1,000ರಷ್ಟು ಆತಂಕಿತ ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ಮರಳಿದ್ದಾರೆ. 778 ಭಾರತೀಯರು ಭೂಮಾರ್ಗದಲ್ಲಿ ತಾಯ್ನೆಲಕ್ಕೆ ಬಂದು ಸೇರಿದ್ದು, 200ಕ್ಕೂ ಅಧಿಕ ವಿದ್ಯಾರ್ಥಿಗಳು ವಿಮಾನದಲ್ಲಿ ಮರಳಿದ್ದಾರೆ.

ಈ ಪ್ರತಿಭಟನೆಯ ಹಿಂದೆ ರಾಜಕೀಯದ ಛಾಯೆಯೂ ಇದೆ. 1971ರ ಬಾಂಗ್ಲಾ ವಿಮೋಚನೆ ಹೋರಾಟದಲ್ಲಿ ಮುಂಚೂಣಿಯಲ್ಲಿ ಇದ್ದುದು ಶೇಖ್‌ ಮುಜಿಬುರ್‌ ರೆಹಮಾನ್‌ ಅವರ ಅವಾಮಿ ಲೀಗ್‌ ಪಕ್ಷ. ಈಗ ಪ್ರಧಾನಿ ಆಗಿರುವ ಶೇಖ್‌ ಹಸೀನಾ ಇವರ ಮಗಳು. ಹಾಗಾಗಿ ಅವಾಮಿ ಲೀಗ್‌ನ ಬೆಂಬಲಿಗರಿಗೆ ಮಾತ್ರ ಈ ಮೀಸಲಾತಿಯಿಂದ ಲಾಭ ಆಗುತ್ತದೆ ಎನ್ನುವುದು ಪ್ರತಿಪಕ್ಷಗಳ ಆರೋಪ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Women’s Asia Cup : ಯುಎಇ ವಿರುದ್ಧ ಭಾರತದ ವನಿತೆಯರಿಗೆ ಭರ್ಜರಿ 78 ರನ್ ವಿಜಯ

Women’s Asia Cup : ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿ ನಿಗದಿತ 20 ಓವರ್​​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 201 ರನ್ ಬಾರಿಸಿತು. ಇದು ಭಾರತ ಮಹಿಳೆಯರ ಕ್ರಿಕೆಟ್ ತಂಡದ ಇದುವರೆಗಿನ ಗರಿಷ್ಠ ಸ್ಕೋರ್ ಆಗಿದೆ. ಪ್ರತಿಯಾಗಿ ಬ್ಯಾಟ್ ಮಾಡಿದ ಯುಎಇ ವನಿತೆಯರು ತಮ್ಮ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 123 ರನ್​ ಬಾರಿಸಿ ಹೀನಾಯವಾಗಿ ಸೋಲೊಪ್ಪಿಕೊಂಡರು.

VISTARANEWS.COM


on

Women's Asia Cup
Koo

ಡಂಬುಲ್ಲಾ: ಭಾರತದ ಮಹಿಳೆಯರ ಕ್ರಿಕೆಟ್ ತಂಡ ಏಷ್ಯಾ ಕಪ್​ನಲ್ಲಿ (Women’s Asia Cup) ತನ್ನ ಎರಡನೇ ಗೆಲುವು ಸಾಧಿಸಿದೆ. ಈ ಮೂಲಕ ಸೆಮೀಸ್​ ಪ್ರವೇಶವನ್ನು ಸುಲಭಗೊಳಿಸಿದೆ. ಯುಎಇ (UAE Women’s Cricket Team) ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ಅಮೋಘ 78 ರನ್​ ಗೆಲುವು ಸಾಧಿಸಿ ಗುಂಪು ಹಂತದಲ್ಲಿ ಒಟ್ಟು 4 ಅಂಕಗಳನ್ನು ಗಳಿಸಿದೆ. ಭಾರತ ತಂಡದ ಆಟಗಾರರು ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಪಾರಮ್ಯ ಸಾಧಿಸಿ ತನ್ನ ಅಜೇಯ ಓಟ ಮುಂದುವರಿಸಿದೆ. ಇತ್ತೀಚಿನ ದಿನಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಭಾರತ ತಂಡ ಮತ್ತೊಂದು ಸ್ಮರಣೀಯ ವಿಜಯವನ್ನು ತನ್ನದಾಗಿಸಿಕೊಂಡಿತು.

ಇಲ್ಲಿನ ರಣಗಿರಿ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತ ಭಾರತ ತಂಡ ಮೊದಲು ಬ್ಯಾಟ್ ಮಾಡಲು ಆಹ್ವಾನ ಪಡೆಯಿತು. ಅಂತೆಯೇ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿ ನಿಗದಿತ 20 ಓವರ್​​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 201 ರನ್ ಬಾರಿಸಿತು. ಇದು ಭಾರತ ಮಹಿಳೆಯರ ಕ್ರಿಕೆಟ್ ತಂಡದ ಇದುವರೆಗಿನ ಗರಿಷ್ಠ ಸ್ಕೋರ್ ಆಗಿದೆ. ಪ್ರತಿಯಾಗಿ ಬ್ಯಾಟ್ ಮಾಡಿದ ಯುಎಇ ವನಿತೆಯರು ತಮ್ಮ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 123 ರನ್​ ಬಾರಿಸಿ ಹೀನಾಯವಾಗಿ ಸೋಲೊಪ್ಪಿಕೊಂಡರು.

ಮೊದಲು ಬ್ಯಾಟ್ ಮಾಡಿದ ಭಾರತ ತಂಡ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿತು. ಶಫಾಲಿ ವರ್ಮಾ 18 ಎಸೆತಕ್ಕೆ 37 ರನ್ ಬಾರಿಸಿದರೆ ಸ್ಮೃತಿ ಮಂಧಾನಾ 9 ಎಸೆತಕ್ಕೆ 13 ರನ್ ಗಳಿಸಿದರು. ಆದರೆ, ಸ್ಮೃತಿ ಬೇಗ ನಿರ್ಗಮಿಸಿದರು. ಈ ವೇಳೆ ಭಾರತದ ಸ್ಕೋರ್​ 23. ಆದರೆ, ನಂತರ ಬಂದ ದಯಾಳನ್ ಹೇಮಲತಾ 4 ಎಸೆತಗಳನ್ನು ಎದುರಿಸಿ 2 ರನ್ ಬಾರಿಸುವ ಮೂಲಕ ನಿರಾಸೆ ಮೂಡಿಸಿದರು. 52 ರನ್​ಗೆ 2 ವಿಕೆಟ್​ ಕಳೆದುಕೊಂಡ ಹೊರತಾಗಿಯೂ ಭಾರತದ ರನ್​ ಗಳಿಕೆ ವೇಗ ಕಡಿಮೆ ಆಗಲಿಲ್ಲ. ನಾಯಕಿ ಹರ್ಮನ್​ಪ್ರೀತ್ ಕೌರ್​ (66 ರನ್​) ಅರ್ಧ ಶತಕ ಬಾರಿಸಿದರು. ತಾವೆದುರಿಸಿದ 47 ಎಸೆತಗಳಲ್ಲಿ 7 ಫೋರ್ ಹಾಗೂ 1 ಸಿಕ್ಸರ್ ಬಾರಿಸಿದರು. ಹೀಗಾಗಿ ನಾಲ್ಕನೇ ವಿಕೆಟ್ ಪತನಗೊಳ್ಳುವಾಗ ಭಾರತ 104 ರನ್ ಬಾರಿಸಿತು.

ಜೆಮಿಮಾ ರೋಡ್ರಿಗಸ್​ 14 ರನ್​ಗೆ ಸೀಮಿತಗೊಂಡರೆ ಕೊನೆಯಲ್ಲಿ ವಿಕೆಟ್​ ಕೀಪರ್​ ರಿಚಾ ಘೋಷ್​ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಕೇವಲ 29 ಎಸೆತಗಳನ್ನು ಎದುರಿಸಿದ ಅವರು 12 ಫೋರ್ ಹಾಗೂ 1 ಸಿಕ್ಸರ್ ಮೂಲಕ 64 ರನ್ ಬಾರಿಸಿದರು. ಇವರ ಬ್ಯಾಟಿಂಗ್​ ವೇಗಕ್ಕೆ ಯುಎಇ ಬೌಲರ್​ಗಳು ಸಂಪುರ್ಣವಾಗಿ ಮಂಕಾದರು. ಅಲ್ಲದೆ ಭಾರತ ತಂಡಕ್ಕೆ ದಾಖಲೆಯ 200 ರನ್​ಗಳ ಗುರಿ ದಾಟಲು ನೆರವಾದರು.

ಬೌಲರ್​ಗಳ ಪಾರಮ್ಯ

ದೊಡ್ಡ ಮೊತ್ತವನ್ನು ಬೆನ್ನಟ್ಟಲು ಮುಂದಾದ ಯುಎಇ ತಂಡವೂ ವೇಗದ ಆಟಕ್ಕೆ ಮೊರೆ ಹೋಗುವ ಪ್ರಯತ್ನ ಮಾಡಿತು. ಆದರೆ, ಭಾರತೀಯ ಬೌಲರ್​ಗಳು ಅದಕ್ಕೆ ಸೊಪ್ಪು ಹಾಕಲಿಲ್ಲ. ಆರಂಭಿಕ ಬ್ಯಾಟರ್​ ಇಶ್ ಒಜಾ 3 ರನ್ ಬಾರಿಸಿದ ಹೊರತಾಗಿಯೂ ತೀರ್ಥ ಸತೀಶ್​ (4), ರಿನಿತಾ ರಜಿತ್​ (7 ರನ್​), ಸಮೈರಾ (5 ರನ್​) ಬೇಗನೆ ವಿಕೆಟ್ ಒಪ್ಪಿಸಿದರು. 36ಕ್ಕೆ 3 ವಿಕೆಟ್​ ನಷ್ಟ ಮಾಡಿಕೊಂಡರ ಯುಎಇ ಸಂಕಷ್ಟಕ್ಕೆ ಒಳಗಾಯಿತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಕವಿಶಾ ಎಗೋಡ್ಗೆ 32 ಎಸೆತಕ್ಕೆ 40 ರನ್ ಬಾರಿಸಿ ಮಿಂಚಿದರು. ಆದರೆ, ಉಳಿದವರಿಂದ ಹೆಚ್ಚಿನ ನೆರವು ಸಿಗದ ಕಾರಣ ಅವರಿಗೆ ಪಂದ್ಯ ಗೆಲ್ಲಿಸಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: Paris Olympics 2024 : ಒಲಿಂಪಿಕ್ಸ್​ನಲ್ಲಿ ಅತಿ ಹೆಚ್ಚು ಪದಕಗಳನ್ನು ಪಡೆದ ಅಥ್ಲೀಟ್​ ಯಾರು? ಇಲ್ಲಿದೆ ಈ ಶ್ರೇಷ್ಠ ಕ್ರೀಡಾಪಟುವಿನ ವಿವರ

ಎ ಗುಂಪಿನಲ್ಲಿರುವ ಭಾರತ ತಂಡ ತನ್ನ ಮುಂದಿನ ಪಂದ್ಯದಲ್ಲಿ ನೇಪಾಳ ತಂಡವನ್ನು ಎದುರಿಸಲಿದೆ. ಈಗಾಗಲೇ ಎರಡು ಪಂದ್ಯ ಗೆದ್ದಿರುವ ಕಾರಣ ಭಾರತ ಬಹುತೇಕ ಸೆಮಿಫೈನಲ್ ತಲುಪಿದೆ. ಭಾರತ ಹಾಲಿ ಚಾಂಪಿಯನ್ ತಂಡವಾಗಿದ್ದು ಕಪ್ ಉಳಿಸಲು ಯತ್ನಿಸಲಿದೆ.

Continue Reading

ಕ್ರೀಡೆ

VVS Laxman: ಲಕ್ನೋ ತಂಡದ ಕೋಚ್​ ಆಗಲಿದ್ದಾರೆ ವಿವಿಎಸ್​ ಲಕ್ಷ್ಮಣ್!

VVS Laxman: ಲಕ್ಷ್ಮಣ್ ಅವರನ್ನು ಲಕ್ನೋ ಫ್ರಾಂಚೈಸಿ ಈಗಾಗಲೇ ಸಂಪರ್ಕಿಸಿದ್ದು, ಕೋಚ್​ ಆಗುವಂತೆ ಕೇಳಿಕೊಂಡಿದೆ ಎನ್ನಲಾಗಿದೆ. ಕೋಚ್​ ಆಗಲು ಲಕ್ಷ್ಮಣ್ ಕೂಡ ಒಪ್ಪಿಕೊಂಡಿದ್ದಾರೆ ಎಂದು ಕೆಲ ಆಂಗ್ಲ ಮಾಧ್ಯಮಗಳು ವರದಿ ಮಾಡಿದೆ.

VISTARANEWS.COM


on

VVS Laxman
Koo

ಬೆಂಗಳೂರು: ಪ್ರಸ್ತುತ ಎನ್​ಸಿಎ(NCA) ಅಧ್ಯಕ್ಷರಾಗಿರುವ ವಿವಿಎಸ್​ ಲಕ್ಷ್ಮಣ್​(VVS Laxman) ಅವರ ಅಧಿಕಾರಾವಧಿಯು ಸೆಪ್ಟೆಂಬರ್‌ನಲ್ಲಿ ಕೊನೆಗೊಳ್ಳಲಿದೆ. ಐಪಿಎಲ್​ನಲ್ಲಿ ಕೋಚಿಂಗ್​ ನಡೆಸುವ ಸಲುವಾಗಿ ಲಕ್ಷ್ಮಣ್​ ಮತ್ತೊಂದು ಅವಧಿಗೆ ಈ ಹುದ್ದೆಯಲ್ಲಿ ಮುಂದುವರಿಯಲು ಆಸಕ್ತಿ(VVS Laxman To Quit NCA) ಹೊಂದಿಲ್ಲ ಎನ್ನಲಾಗಿದೆ. ಮೂಲಗಳ ಪ್ರಕಾರ ಲಕ್ಷ್ಮಣ್ ಮುಂದಿನ ಆವೃತ್ತಿಯಲ್ಲಿ ಲಕ್ನೋ ಸೂಪರ್​ ಜೈಂಟ್ಸ್​(Lucknow Super Giants) ತಂಡದ ಕೋಚ್​ ಆಗಿ ಕಾರ್ಯನಿರ್ವಹಿಸಲಿದ್ದಾರೆ ಎನ್ನಲಾಗಿದೆ.

ಲಕ್ಷ್ಮಣ್ ಅವರನ್ನು ಲಕ್ನೋ ಫ್ರಾಂಚೈಸಿ ಈಗಾಗಲೇ ಸಂಪರ್ಕಿಸಿದ್ದು, ಕೋಚ್​ ಆಗುವಂತೆ ಕೇಳಿಕೊಂಡಿದೆ ಎನ್ನಲಾಗಿದೆ. ಕೋಚ್​ ಆಗಲು ಲಕ್ಷ್ಮಣ್ ಕೂಡ ಒಪ್ಪಿಕೊಂಡಿದ್ದಾರೆ ಎಂದು ಕೆಲ ಆಂಗ್ಲ ಮಾಧ್ಯಮಗಳು ವರದಿ ಮಾಡಿದೆ. ಎನ್​ಸಿಎ ಅಧ್ಯಕ್ಷರಾಗುವ ಮುನ್ನ ಲಕ್ಷ್ಮಣ್ ಸನ್​ರೈಸರ್ಸ್​ ಹೈದರಾಬಾದ್​ ತಂಡದ ಪರ ಕೆಲವು ವರ್ಷ ಮೆಂಟರ್​ ಆಗಿ ಕಾರ್ಯನಿರ್ವಹಿಸಿದ್ದರು. ಇದೀಗ ಕೋಚಿಂಗ್​ ಕಡೆ ಗಮನಹರಿಸಿದ್ದಾರೆ ಎನ್ನಲಾಗಿದೆ.

ಲಕ್ನೋ ಸೂಪರ್​ ಜೈಂಟ್ಸ್​ ತಂಡಕ್ಕೆ ಪ್ರಸ್ತುತ ಆಸ್ಟ್ರೇಲಿಯಾದ ಜಸ್ಟೀನ್​ ಲ್ಯಾಂಗ್​ ಮುಖ್ಯ ಕೋಚ್​ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ವರ್ಷ ಅವರನ್ನು ತಂಡಕ್ಕೆ ಕೋಚ್​ ಆಗಿ ನೇಮಕ ಮಾಡಿಕೊಳ್ಳಲಾಗಿತ್ತು. ಆದರೆ, ಇವರ ಮಾರ್ಗದರ್ಶನದಲ್ಲಿ ತಂಡ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ವಿಫಲವಾಗಿತ್ತು. ಲೀಗ್​ ಹಂತದಲ್ಲೇ ಮುಗ್ಗರಿಸಿ ಹೊರಬಿದ್ದಿತ್ತು. ಹೀಗಾಗಿ ಫ್ರಾಂಚೈಸಿ ಹೊಸ ಕೋಚ್​ ಹುಡುಕಾಟ ಆರಂಭಿಸಿದೆ ಎಂದು ತಿಳಿದುಬಂದಿದೆ.

ಟೀಮ್​ ಇಂಡಿಯಾದ ಮುಖ್ಯ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ ಟಿ20 ವಿಶ್ವಕಪ್​ ಬಳಿಕ ತಮ್ಮ ಹುದ್ದೆಯಿಂದ ನಿವೃತ್ತರಾಗಿದ್ದರು. ದ್ರಾವಿಡ್​ ಬಳಿಕ ಲಕ್ಷ್ಮಣ್ ಅವರೇ ಭಾರತ ತಂಡದ ಮುಂದಿನ ಕೋಚ್​ ಎಂದು ಹೇಳಲಾಗಿತ್ತು. ಆದರೆ, ಅವರು ಈ ಆಫರ್​ ತಿರಸ್ಕರಿಸಿದ್ದರು. ಹೀಗಾಗಿ ಗಂಭೀರ್​ಗೆ ಈ ಅವಕಾಶ ಲಭಿಸಿತು.

ಮತ್ತೆ ಐಪಿಎಲ್​ನತ್ತ ದ್ರಾವಿಡ್​?​

ರಾಹುಲ್ ದ್ರಾವಿಡ್ ಕೂಡ ಐಪಿಎಲ್​ನಲ್ಲಿ ಕೋಚ್ ಆಗಲು ಉತ್ಸುಕರಾಗಿದ್ದಾರೆ ಎಂದು ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ. ಅಲ್ಲದೆ ದ್ರಾವಿಡ್​ ಅವರು ಈಗಾಗಲೇ ಎರಡು ವರ್ಷಗಳ ಒಪ್ಪಂದಕ್ಕಾಗಿ ಐಪಿಎಲ್ ಫ್ರಾಂಚೈಸಿಯೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ವರದಿ ಹೇಳಿದೆ.

ಇದನ್ನೂ ಓದಿ Rahul Dravid: ಮತ್ತೆ ಐಪಿಎಲ್​ ಕೋಚಿಂಗ್​ನತ್ತ ಮುಖ ಮಾಡಿದ ರಾಹುಲ್‌ ದ್ರಾವಿಡ್‌!

“ರಾಹುಲ್​ ದ್ರಾವಿಡ್​ ಅವರು ಎರಡು ವರ್ಷಗಳ ಒಪ್ಪಂದಕ್ಕಾಗಿ ಐಪಿಎಲ್ ತಂಡದೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಮೂಲಗಳ ಪ್ರಕಾರ ಒಂದು ಸುತ್ತಿನ ಮಾತುಕತೆ ಕೂಡ ನಡೆದಿದೆ” ಎಂದು ಕ್ರಿಕ್​ಬಜ್​ ವರದಿ ಮಾಡಿದೆ. ರಾಹುಲ್ ದ್ರಾವಿಡ್ ಅವರು ಈ ಹಿಂದೆ ಐಪಿಎಲ್​ನಲ್ಲಿ ರಾಜಸ್ಥಾನ ರಾಯಲ್ಸ್​ ತಂಡದ ಕೋಚ್​ ಆಗಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಅವರು ಅಂಡರ್​-19 ಮತ್ತು ಎನ್​ಸಿಎಯಲ್ಲಿ ಕಾರ್ಯನಿರ್ವಹಿಸಿದ್ದರು.

ಭಾರತಕ್ಕೆ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆಲ್ಲಿಸಿದ ಕೋಚ್​ ದ್ರಾವಿಡ್​ ಅವರನ್ನು ಕೆಕೆಆರ್​ ಮಾತ್ರವಲ್ಲದೆ ಇದುವರೆಗೂ ಕಪ್​ ಗೆಲ್ಲದ ಆರ್​ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಕೂಡ ಕೋಚ್​ ಮಾಡಲು ರೇಸ್​ನಲ್ಲಿವೆ ಎಂದು ಹೇಳಲಾಗಿದೆ. ಡೆಲ್ಲಿ ತಂಡದ ಮೆಂಟರ್​ ಆಗಿರುವ ಸೌರವ್​ ಗಂಗೂಲಿ ಅವರು ದ್ರಾವಿಡ್​ ಮನವೊಲಿಸಿ ಕೋಚ್​ ಆಗುವಂತೆ ಒಪ್ಪಿಸುವ ಸಾಧ್ಯತೆಯೂ ಇದೆ. ಏಕೆಂದರೆ ದ್ರಾವಿಡ್​ ಅವರನ್ನು ಟೀಮ್​ ಇಂಡಿಯಾದ ಕೋಚ್​ ಆಗಿ ಮಾಡಿದ್ದು ಕೂಡ ಗಂಗೂಲಿ. ಬಿಸಿಸಿಐ ಅಧ್ಯಕ್ಷರಾಗಿದ್ದ ವೇಳೆ ಗಂಗೂಲಿ ಒತ್ತಾಯ ಪೂರ್ವಕವಾಗಿ ದ್ರಾವಿಡ್​ ಅವರನ್ನು ಕೋಚ್​ ಆಗುವಂತೆ ಒಪ್ಪಿಸಿದ್ದರು. ಕುಟುಂಬಕ್ಕೆ ಹೆಚ್ಚಿನ ಒತ್ತು ನೀಡಲು ಸಾಧ್ಯವಾಗುತ್ತಿಲ್ಲ ಎನ್ನುವ ಕಾರಣಕ್ಕೆ ಕೋಚಿಂಗ್​ ಹುದ್ದೆಯಲ್ಲಿ ಮುಂದುವರಿಯಲು ಹಿಂದೇಟು ಹಾಕಿರುವ ದ್ರಾವಿಡ್​ ಐಪಿಎಲ್​ ಕೋಚಿಂಗ್​ ನಡೆಸಲಿದ್ದಾರಾ ಎಂದು ಕಾದು ನೋಡಬೇಕಿದೆ.

Continue Reading

ಪ್ರಮುಖ ಸುದ್ದಿ

Paris Olympics 2024 : ಒಲಿಂಪಿಕ್ಸ್​ನಲ್ಲಿ ಅತಿ ಹೆಚ್ಚು ಪದಕಗಳನ್ನು ಪಡೆದ ಅಥ್ಲೀಟ್​ ಯಾರು? ಇಲ್ಲಿದೆ ಈ ಶ್ರೇಷ್ಠ ಕ್ರೀಡಾಪಟುವಿನ ವಿವರ

Paris Olympics 2024 : ಈ ಪಟ್ಟಿಯಲ್ಲಿ ಅಮೆರಿಕದ ಖ್ಯಾತ ಈಜುಗಾರ ಮೈಕೆಲ್ ಫೆಲ್ಪ್ಸ್ ಅಗ್ರಸ್ಥಾನದಲ್ಲಿದ್ದಾರೆ. ಒಲಿಂಪಿಕ್ಸ್​ನಲ್ಲಿ 23 ಚಿನ್ನ ಸೇರಿದಂತೆ ಒಟ್ಟು 28 ಪದಕಗಳನ್ನು ಗೆದ್ದಿದ್ದಾರೆ. 2004 ರ ಅಥೆನ್ಸ್ ಒಲಿಂಪಿಕ್ಸ್ ನಲ್ಲಿ, ಫೆಲ್ಪ್ಸ್ 6 ಚಿನ್ನದ ಪದಕಗಳು ಮತ್ತು 2 ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದರು. 2008 ರ ಆವೃತ್ತಿಯಲ್ಲಿ, ಫೆಲ್ಪ್ಸ್ ಮಾರ್ಕ್ ಸ್ಪಿಟ್ಜ್ ಅವರ ದಾಖಲೆಯನ್ನು ಮುರಿದರು ಮತ್ತು 8 ಚಿನ್ನದ ಪದಕಗಳನ್ನು ಗಳಿಸಿದ್ದರು.

VISTARANEWS.COM


on

Paris Olympics 2024
Koo

ಬೆಂಗಳೂರು: ಪ್ಯಾರಿಸ್​​ನಲ್ಲಿ ನಡೆಯಲಿರುವ 2024ನೇ ಆವೃತ್ತಿಯ (Paris Olympics 2024) ಒಲಿಂಪಿಕ್ಸ್​ ಆರಂಭಕ್ಕೆ ಕೆಲವೇ ದಿನಗಳು ಉಳಿದಿವೆ. ವಿಶ್ವದಾದ್ಯಂತದ ಕ್ರೀಡಾಪಟುಗಳು ತಮ್ಮ ಜೀವನದ ಗುರಿಯಾಗಿರುವ ಒಲಿಂಪಿಕ್​​ ಪದಕಗಳನ್ನು ಪಡೆಯುವ ಭರವಸೆಯೊಂದಿಗೆ ಪ್ರೇಮಿಗಳ ನಗರಕ್ಕೆ ಹೊರಟಿದ್ದಾರೆ. ಜುಲೈ 26 ರಂದು ಪ್ಯಾರಿಸ್​​ನಲ್ಲಿ ಉದ್ಘಾಟನಾ ಸಮಾರಂಭದೊಂದಿಗೆ ಒಲಿಂಪಿಕ್ಸ್ ಪ್ರಾರಂಭವಾಗಲಿದ್ದು, 27 ರಿಂದ ಕ್ರೀಡಾಕೂಟಗಳು ಪ್ರಾರಂಭವಾಗಲಿವೆ.

ಪದಕಗಳು ಎಲ್ಲಾ ಕ್ರೀಡಾಪಟುಗಳಿಗೆ ದೃಢವಾದ ನಂಬಿಕೆಯಾಗಿದೆ. ಈ ನಡುವೆ ಒಲಿಂಪಿಕ್ಸ್​ ಇತಿಹಾಸದಲ್ಲಿ ​​ ಹೆಚ್ಚಿನ ಪದಕಗಳನ್ನು ಗಳಿಸಿದ ಕ್ರೀಡಾಪಟುಗಳು ಮತ್ತು ತಂಡಗಳನ್ನು ಯಾವುದು ಎಂಬುದನ್ನು ನೋಡೊಣ.

ಅತಿ ಹೆಚ್ಚು ಪದಕಗಳನ್ನು ಗೆದ್ದ ಕ್ರೀಡಾಪಟುಗಳು

ಈ ಪಟ್ಟಿಯಲ್ಲಿ ಅಮೆರಿಕದ ಖ್ಯಾತ ಈಜುಗಾರ ಮೈಕೆಲ್ ಫೆಲ್ಪ್ಸ್ ಅಗ್ರಸ್ಥಾನದಲ್ಲಿದ್ದಾರೆ. ಒಲಿಂಪಿಕ್ಸ್​ನಲ್ಲಿ 23 ಚಿನ್ನ ಸೇರಿದಂತೆ ಒಟ್ಟು 28 ಪದಕಗಳನ್ನು ಗೆದ್ದಿದ್ದಾರೆ. 2004 ರ ಅಥೆನ್ಸ್ ಒಲಿಂಪಿಕ್ಸ್ ನಲ್ಲಿ, ಫೆಲ್ಪ್ಸ್ 6 ಚಿನ್ನದ ಪದಕಗಳು ಮತ್ತು 2 ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದರು. 2008 ರ ಆವೃತ್ತಿಯಲ್ಲಿ, ಫೆಲ್ಪ್ಸ್ ಮಾರ್ಕ್ ಸ್ಪಿಟ್ಜ್ ಅವರ ದಾಖಲೆಯನ್ನು ಮುರಿದರು ಮತ್ತು 8 ಚಿನ್ನದ ಪದಕಗಳನ್ನು ಗಳಿಸಿದ್ದರು.

ಮಹಿಳಾ ಕ್ರೀಡಾಪಟುಗಳ ವಿಷಯಕ್ಕೆ ಬಂದಾಗ, ಸೋವಿಯತ್ ಒಕ್ಕೂಟದ ಲಾರಿಸಾ ಲ್ಯಾಟಿನಿನಾ ಅತಿ ಹೆಚ್ಚು ಪದಕಗಳನ್ನು ಗೆದ್ದ ದಾಖಲೆಯನ್ನು ಹೊಂದಿದ್ದಾರೆ. ಆರ್ಟಿಸ್ಟಿಕ್​ ಜಿಮ್ಯಾಸ್ಟಿಕ್​ ಪಟು ಲ್ಯಾಟಿನಿನಾ 18 ಪದಕಗಳನ್ನು ಗೆದ್ದಿದ್ದಾರೆ. ಅದರಲ್ಲಿ 9 ಕ್ಕೆ ಚಿನ್ನ. ಚಿನ್ನದ ಪದಕ ಹಾಗೂ ಒಟ್ಟು ಪದಕಗಳ ವಿಚಾರಕ್ಕೆ ಬಂದಾಗ ಮಹಿಳಾ ಕ್ರೀಡಾಪಟುವಾಗಿ ಗರಿಷ್ಠ ಸಾಧನೆಯಾಗಿದೆ.

ಇದನ್ನೂ ಓದಿ: Paris Olympics 2024 : ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಲಿರುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹಧನ

ಒಲಿಂಪಿಕ್ಸ್​​ನಲ್ಲಿ ಅತಿ ಹೆಚ್ಚು ಪದಕಗಳನ್ನು ಗೆದ್ದವರ ಪಟ್ಟಿಯಲ್ಲಿ ಮಾರಿಟ್ ಜೋರ್ಗೆನ್ ಮೂರನೇ ಸ್ಥಾನದಲ್ಲಿದ್ದಾರೆ. ನಾರ್ವೆಯ ಕ್ರಾಸ್ ಕಂಟ್ರಿ ಸ್ಕೇಟಿಂಗ್​ ಮಹಿಳಾ ಸ್ಪರ್ಧಿಯಾಗಿರುವ ಇವರು 15 ಪದಕಗಳನ್ನು ಗೆದ್ದಿದ್ದಾರೆ. ಇದರಲ್ಲಿ 8 ಚಿನ್ನದ ಪದಕಗಳು.

ಅಧಿಕ ಪದಕಗಳನ್ನು ಹೊಂದಿರುವ ರಾಷ್ಟ್ರ

ಹೆಚ್ಚಿನ ಪದಕಗಳನ್ನು ಹೊಂದಿರುವ ರಾಷ್ಟ್ರಗಳ ವಿಷಯಕ್ಕೆ ಬಂದಾಗ ಅಮೆರಿಕ ಒಲಿಂಪಿಕ್ಸ್​ ಇತಿಹಾಸದಲ್ಲಿ ಅತ್ಯಂತ ಪ್ರಬಲವಾಗಿದೆ. ಯುಎಸ್ಎ ಇದುವರೆಗೆ 2,522 ಪದಕಗಳನ್ನು ಗೆದ್ದಿದೆ, ಅದರಲ್ಲಿ 1,022 ಚಿನ್ನ. ಇದು ಒಲಿಂಪಿಕ್ಸ್​​ನಲ್ಲಿ ರಾಷ್ಟ್ರವೊಂದು ಅತಿ ಹೆಚ್ಚು ಚಿನ್ನದ ಪದಕಗಳನ್ನು ಗೆದ್ದ ದಾಖಲೆಯಾಗಿದೆ. ಜರ್ಮನಿ 1083 ಪದಕಗಳು (351 ಚಿನ್ನ,371 ಬೆಳ್ಳಿ, 361 ಕಂಚು) ಎರಡನೇ ಸ್ಥಾನದಲ್ಲಿದೆ. ಯುನೈಟೆಡ್ ಕಿಂಗ್​ಡಮ್​ 965 (304 ಚಿನ್ನ, 329 ಬೆಳ್ಳಿ, 332 ಕಂಚು) ಮೂರನೇ ಸ್ಥಾನ ಹೊಂದಿದೆ. ಫ್ರಾನ್ಸ್​ (910 ಪದಕ), ಇಟಲಿ (713 ಪದಕ), ಚೀನಾ (713 ಪದಕ) ನಂತರದಲ್ಲಿ ಸ್ಥಾನಗಳಲ್ಲಿವೆ.

ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ಚಿನ್ನದ ಪದಕಗಳನ್ನು ಗೆದ್ದ ಕ್ರೀಡಾಪಟುಗಳು

ಫೆಲ್ಪ್ಸ್ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ಚಿನ್ನದ ಪದಕಗಳನ್ನು ಗೆದ್ದ ದಾಖಲೆ ಹೊಂದಿದ್ದಾರೆ. ಮಹಿಳಾ ಅಥ್ಲೀಟ್​​ಗಳ ವಿಷಯಕ್ಕೆ ಬಂದರೆ, ಜರ್ಮನಿಯ ಈಜುಗಾರ್ತಿ ಕ್ರಿಸ್ಟಿನ್ ಒಟ್ಟೊ 1988ರ ಒಲಿಂಪಿಕ್ಸ್​ನಲ್ಲಿ 6 ಅಂಕಗಳೊಂದಿಗೆ ದಾಖಲೆಯನ್ನು ಹೊಂದಿದ್ದಾರೆ.

1984ರ ಲಾಸ್ ಏಂಜಲೀಸ್ ಒಲಿಂಪಿಕ್ಸ್​​ನಲ್ಲಿ 83 ಚಿನ್ನದ ಪದಕಗಳನ್ನು ಗೆದ್ದಿದ್ದ ಅಮೆರಿಕ, ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ಚಿನ್ನದ ಪದಕಗಳನ್ನು ಗೆದ್ದ ದಾಖಲೆ ತನ್ನದಾಗಿಸಿಕೊಂಡಿದೆ.

Continue Reading

ಕ್ರೀಡೆ

Viral Video: ವಿಂಡೀಸ್​ ವೇಗಿಯ ಸಿಕ್ಸರ್​ ಹೊಡೆತಕ್ಕೆ ಸ್ಟೇಡಿಯಂನ ಮೇಲ್ಛಾವಣಿಯ ಹೆಂಚುಗಳು ಪುಡಿಪುಡಿ

Viral Video: ಶಮಾರ್‌ ಜೋಸೆಫ್‌(Shamar Joseph) ಅವರ ಕ್ರಿಕೆಟ್​ ಜರ್ನಿಯೇ ಒಂದು ರೋಚಕ. ಅವರ ಕ್ರಿಕೆಟ್​ ಬದುಕಿನ ಸ್ಟೋರಿ ಯಾವ ಸಿನಿಮಾ ಕಥೆಗೂ ಕಡಿಮೆಯೇನಲ್ಲ. ಶಮಾರ್‌ ಜೋಸೆಫ್‌ ಶ್ರೀಮಂತ ಕುಟುಂಬದಲ್ಲಿ ಅಥವಾ ಕ್ರಿಕೆಟ್​ ಹಿನ್ನೆಲೆಯಿಂದ ಬಂದ ಪ್ರತಿಭೆಯಲ್ಲ.

VISTARANEWS.COM


on

Viral Video
Koo

ಲಂಡನ್​: ಇಂಗ್ಲೆಂಡ್​ ವಿರುದ್ಧ ಸಾಗುತ್ತಿರುವ ದ್ವಿತೀಯ ಟೆಸ್ಟ್​(England vs West Indies 2nd Test) ಪಂದ್ಯದಲ್ಲಿ ವಿಂಡೀಸ್​ ವೇಗಿ ಶಮರ್‌ ಜೋಸೆಫ್‌(Shamar Joseph) ಬಾರಿಸಿದ ಸಿಕ್ಸರ್​ನ(shamar joseph six) ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral Video)​ ಆಗಿದೆ. ಅವರ ಈ ಸಿಕ್ಸರ್​ ಹೊಡೆತಕ್ಕೆ ನಾಟಿಂಗ್‌ಹ್ಯಾಮ್​ನ ಟ್ರೆಂಟ್ ಬ್ರಿಡ್ಜ್ ಸ್ಟೇಡಿಯಂನ(Trent Bridge, Nottingham) ಮೇಲ್ಛಾವಣಿಯ ಹೆಂಚುಗಳು ಪುಡಿಪುಡಿಯಾಗಿದೆ.

ಇಂಗ್ಲೆಂಡ್‌ನ ಸ್ಟಾರ್ ಬೌಲರ್ ಗಸ್ ಅಟ್ಕಿನ್ಸನ್ ಓವರ್​ನ ಎರಡನೇ ಎಸೆತದಲ್ಲಿ ಶಮರ್ ಜೋಸೆಫ್ ಈ ಗಗನಚುಂಬಿ ಸಿಕ್ಸರ್ ಬಾರಿಸಿದರು. ಈ ಸಿಕ್ಸರ್​ಗೆ ಸ್ಟೇಡಿಯಂನ ಮೇಲ್ಛಾವಣಿಯ ಹೆಂಚುಗಳು ಪುಡಿಪುಡಿಯಾಗಿ ಗ್ಯಾಲರಿಯಲ್ಲಿ ಕುಳಿತಿದ್ದ ಪ್ರೇಕ್ಷಕರ ತಲೆ ಮೇಲೆ ಬಿದ್ದಿದೆ. ಈ ದೃಶ್ಯವನ್ನು ವಿಡಿಯೊದಲ್ಲಿ ನೋಡಬಹುದಾಗಿದೆ. ಜೋಸೆಫ್‌ ಈ ಪಂದ್ಯದಲ್ಲಿ 27 ಎಸೆತಗಳಿಂದ 33 ರನ್​ ಬಾರಿಸಿದರು. ಅವರ ಈ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 2 ಸಿಕ್ಸರ್​ ಮತ್ತು 5 ಬೌಂಡರಿ ದಾಖಲಾಯಿತು.

ಸದ್ಯ ಈ ಪಂದ್ಯ ಡ್ರಾಗೊಳ್ಳುವ ಸ್ಥಿತಿಯಲ್ಲಿದೆ. ಮೊದಲು ಬ್ಯಾಟಿಂಗ್​ ನಡೆಸಿದ ಇಂಗ್ಲೆಂಡ್​ ಮೊದಲ ಇನಿಂಗ್ಸ್​ನಲ್ಲಿ 416 ರನ್​ ಬಾರಿಸಿತ್ತು. ಇದಕ್ಕುತ್ತರವಾಗಿ ಬ್ಯಾಟಿಂಗ್​ ನಡೆಸಿದ್ದ ವಿಂಡೀಸ್​ 457 ರನ್​ ಬಾರಿಸಿ 41 ರನ್​ ಮುನ್ನಡೆ ಸಾಧಿಸಿತ್ತು. ಇದೀಗ ದ್ವಿತೀಯ ಇನಿಂಗ್ಸ್​ ಆರಂಭಿಸಿರುವ ಇಂಗ್ಲೆಂಡ್​ 3 ವಿಕೆಟ್​ಗೆ 250 ಗಡಿ ದಾಡಿ ಬ್ಯಾಟಿಂಗ್​ ನಡೆಸುತ್ತಿದೆ. ಇಂದು ನಾಲ್ಕನೇ ದಿನವಾಗಿದ್ದು ಇನ್ನೊಂದು ದಿನದ ಆಟ ಮಾತ್ರ ಬಾಕಿ ಉಳಿದಿದೆ. ಹೀಗಾಗಿ ಪಂದ್ಯ ಡ್ರಾಗೊಳ್ಳುವ ಸಾಧ್ಯತೆ ಅಧಿಕ.

ಶಮಾರ್‌ ಜೋಸೆಫ್‌(Shamar Joseph) ಅವರ ಕ್ರಿಕೆಟ್​ ಜರ್ನಿಯೇ ಒಂದು ರೋಚಕ. ಅವರ ಕ್ರಿಕೆಟ್​ ಬದುಕಿನ ಸ್ಟೋರಿ ಯಾವ ಸಿನಿಮಾ ಕಥೆಗೂ ಕಡಿಮೆಯೇನಲ್ಲ. ಶಮಾರ್‌ ಜೋಸೆಫ್‌ ಶ್ರೀಮಂತ ಕುಟುಂಬದಲ್ಲಿ ಅಥವಾ ಕ್ರಿಕೆಟ್​ ಹಿನ್ನೆಲೆಯಿಂದ ಬಂದ ಪ್ರತಿಭೆಯಲ್ಲ. ಅಚ್ಚರಿ ಎಂದರೆ ಯಾವುದೇ ವೃತ್ತಿಪರ ಕ್ರಿಕೆಟ್‌ ಕೂಡ ಆಟದೆ ಅವರು ರಾಷ್ಟ್ರೀಯ ತಂಡಕ್ಕೆ ಪದಾರ್ಪಣೆ ಮಾಡಲು ನೆರವಾದದ್ದು ಕೆರಿಬಿಯನ್‌ ಪ್ರೀಮಿಯರ್‌ ಲೀಗ್‌. ಈ ಟೂರ್ನಿಗೆ ಆಯ್ಕೆಯಾದ ಬಳಿಕ ಶಮಾರ್‌ ಅವರ ಬದುಕಿನ ದಿಕ್ಕೇ ಬದಲಾಯಿತು.

ಇದನ್ನೂ ಓದಿ IPL 2025: ರಾಹುಲ್​ ಆರ್​ಸಿಬಿಗೆ, ಪಂತ್​ ಸಿಎಸ್​ಕೆ ಸೇರ್ಪಡೆ ಖಚಿತ

ಸಾವನ್ನೇ ಗೆದಿದ್ದ ಶಮಾರ್‌ ಜೋಸೆಫ್‌


ಜೋಸೆಫ್‌ ಅವರು ಊರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ತಮ್ಮ ಮೇಲೆ ಮರ ಬೀಳುವುದರಿಂದ ಅಲ್ಪದರಲ್ಲೇ ಪಾರಾಗಿ, ಸಾವಿನಿಂದ ಬಚಾವಾಗಿದ್ದರು. ಕೇವಲ 400 ಜನಸಂಖ್ಯೆಯುಳ್ಳ ಕೆರಿಬಿಯನ್‌ನ ಹಳ್ಳಿಯೊಂದರ ಪ್ರತಿಭೆಯಾಗಿರುವ ಜೋಸೆಫ್​ ಕಾಡಲ್ಲಿ ಮರ ಕಡಿಯುವ ವೃತ್ತಿ ಮಾಡುತ್ತಿದ್ದರು. ಇದಾದ ಬಳಿಕ ಅವರು 2021ರ ವರೆಗೆ ಬಾರ್ಬಿಸ್‌ ಎಂಬಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು.

ಹಣ್ಣು, ಬಾಟಲ್​ ಮೂಲಕ ಬೌಲಿಂಗ್​ ಅಭ್ಯಾಸ


ಜೋಸೆಫ್​ ಅವರು ಕ್ರಿಕೆಟ್​ಗೆ ಮರಳಿದ್ದು ಮತ್ತು ಬೌಲಿಂಗ್​ ಅಭ್ಯಾಸ ನಡೆಸಿದ್ದು ಪ್ಲಾಸ್ಟಿಕ್‌ ಬಾಟಲ್‌ ಮತ್ತು ಹಣ್ಣುಗಳನ್ನೇ ಎಸೆದು. ಈ ವಿಚಾರ ನಂಬಲು ಕಷ್ಟವಾದರೂ ಕೂಡ ಇದನ್ನು ನಂಬಲೇ ಬೇಕು. 2018ರ ವರೆಗೂ ಅವರ ಊರಿನಲ್ಲಿ ಮೊಬೈಲ್, ಇಂಟರ್ನೆಟ್‌ ಸೇವೆ ಕೂಡ ಇರಲಿಲ್ಲ. ಇಂತಹ ಕುಗ್ರಾಮದಿಂದ ಬಂದ ಜೋಸೆಫ್ ಇಂದು ವಿಂಡೀಸ್‌ನ ಆಪತ್ಬಾಂಧವ. ಅವರ ಪ್ರದರ್ಶನಕ್ಕೆ ಇಡೀ ಕ್ರಿಕೆಟ್​ ಜಗತ್ತೇ ಸಲಾಂ ಹೊಡೆದಿದೆ. ಸಚಿನ್‌ ತೆಂಡೂಲ್ಕರ್‌, ಬ್ರಿಯಾನ್​ ಲಾರಾ, ಕಾರ್ಲ್‌ ಹೂಪರ್‌ ಸೇರಿದಂತೆ ಹಲವರು ಜೋಸೆಫ್​ ಕ್ರಿಕೆಟ್​ ಸಾಧನೆಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Continue Reading
Advertisement
Vande Mataram
ದೇಶ10 mins ago

Vande Mataram: ಸಂಸತ್ತಿನಲ್ಲಿ ವಂದೇ ಮಾತರಂ, ಥ್ಯಾಂಕ್ಸ್‌ ಎಂದು ಹೇಳುವಂತಿಲ್ಲ; ಏಕಿಂಥ ಆದೇಶ?

karnataka Weather Forecast
ಮಳೆ36 mins ago

Karnataka Weather : ಥಂಡಿ ಮಿಶ್ರಿತ ಗಾಳಿ-ಮಳೆಗೆ ಹೈರಣಾದ ಜನತೆ; ಜು.25ರವರಗೆ ಮಳೆ ಮುಂದುವರಿಕೆ

Karnataka Rain
ಕರ್ನಾಟಕ1 hour ago

Karnataka Rain: ಶಿರೂರು ಗುಡ್ಡ ಕುಸಿತದ ಸ್ಥಳ ವೀಕ್ಷಿಸಿದ ಸಿಎಂ; NDRF-SDRF ತಂಡಗಳ ಕಾರ್ಯಕ್ಕೆ ಮೆಚ್ಚುಗೆ

Women's Asia Cup
ಪ್ರಮುಖ ಸುದ್ದಿ1 hour ago

Women’s Asia Cup : ಯುಎಇ ವಿರುದ್ಧ ಭಾರತದ ವನಿತೆಯರಿಗೆ ಭರ್ಜರಿ 78 ರನ್ ವಿಜಯ

karnataka rain
ಮಳೆ1 hour ago

Karnataka Rain : ಭರ್ತಿಯತ್ತ ಜಲಾಶಯಗಳು; ಪ್ರವಾಹ ಭೀತಿ ಹಿನ್ನೆಲೆ ನದಿ ತೀರದಲ್ಲಿ ಹೈ ಅಲರ್ಟ್

Guru Purnima 2024
ಅಂಕಣ1 hour ago

Guru Purnima 2024: ಗುರು ಎಂದರೆ ವ್ಯಕ್ತಿಯಲ್ಲ, ಅದ್ಭುತವಾದ ಶಕ್ತಿ!

Fatty liver disease
ಆರೋಗ್ಯ1 hour ago

Fatty Liver Problem: ಫ್ಯಾಟಿ ಲಿವರ್‌ ಸಮಸ್ಯೆ ಎದುರಿಸುತ್ತಿದ್ದೀರಾ? ಈ ಮೂರು ಪೇಯಗಳಿಂದ ಎಂದೆಂದಿಗೂ ದೂರವಿರಿ

Lakshmi Hebbalkar
ಉಡುಪಿ2 hours ago

Lakshmi Hebbalkar: ಮಳೆಗೆ ತತ್ತರಿಸಿದ ಉಡುಪಿ; ನನ್ನ ಅವಶ್ಯಕತೆ ಇದ್ದಾಗಷ್ಟೇ ಬರ್ತೀನಿ ಎಂದ ಲಕ್ಷ್ಮೀ ಹೆಬ್ಬಾಳಕರ್

Kanwar Yatra
ದೇಶ2 hours ago

Kanwar Yatra: ನೇಮ್‌ಪ್ಲೇಟ್‌ ಅಳವಡಿಕೆಗೆ ಆದೇಶ ಪ್ರಶ್ನಿಸಿ ಅರ್ಜಿ; ಸುಪ್ರೀಂ ಕೋರ್ಟ್‌ನಲ್ಲಿ ನಾಳೆ ವಿಚಾರಣೆ

HD Kumaraswamy
ಕರ್ನಾಟಕ2 hours ago

HD Kumaraswamy: ದರೋಡೆ, ಲೂಟಿ ತಡೆಯಲು ಸೇನೆ ಕರೆಸಬೇಕಿತ್ತಾ? ಡಿಕೆಶಿಗೆ ತಿರುಗೇಟು ಕೊಟ್ಟ ಎಚ್‌ಡಿಕೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ1 day ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ2 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ2 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ3 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ5 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ6 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ6 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌