Site icon Vistara News

ICC World Cup 2023: ವಿಶ್ವ ದಾಖಲೆ ಬರೆದ ವಿಶ್ವಕಪ್​!

narendra modi stadium final crowd

ಮುಂಬಯಿ: ಭಾರತ ಆತಿಥ್ಯದಲ್ಲಿ ನಡೆದ ಈ ಬಾರಿ ಏಕದಿನ ವಿಶ್ವಕಪ್(ICC World Cup 2023)​ ಅದ್ಧೂರಿಯಾಗಿ ಮುಕ್ತಾಯ ಕಂಡಿದೆ. ಒಟ್ಟು 46 ದಿನ, 48 ಪಂದ್ಯಗಳನ್ನು ದೇಶದ ಪ್ರಮುಖ 10 ನಗರಗಳಲ್ಲಿ ನಡೆಸಲಾಗಿತ್ತು. ಇದೀಗ ಈ ವಿಶ್ವಕಪ್​ ಟೂರ್ನಿ ವಿಶ್ವ ದಾಖಲೆಯೊಂದನ್ನು ಬರೆದಿದೆ. ಒಟ್ಟಾರೆಯಾಗಿ 12.5 ಲಕ್ಷ (1.25 ಮಿಲಿಯನ್‌) ಪ್ರೇಕ್ಷಕರು ಸ್ಟೇಡಿಯಂನಲ್ಲಿ ನೇರವಾಗಿ ಪಂದ್ಯವನ್ನು ವೀಕ್ಷಣೆ ಮಾಡಿದ್ದಾರೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಮಂಗಳವಾರ ಹೇಳಿದೆ. ಇದು ವಿಶ್ವಕಪ್​ ಇತಿಹಾಸದಲ್ಲೇ ದಾಖಲೆಯ ವೀಕ್ಷಣೆ ಎಂಬ ಹಿರಿಮೆ ಪಡೆದಿದೆ.

ಈ ಹಿಂದೆ 2015ರಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್​ ಜಂಟಿ ಆತಿಥ್ಯದಲ್ಲಿ ನಡೆದ ವಿಶ್ವಕಪ್‌ ಟೂರ್ನಿಯನ್ನು ಒಟ್ಟು 10.16 ಲಕ್ಷ (1.016 ಮಿಲಿಯನ್‌) ಮಂದಿ ವೀಕ್ಷಿಸಿದ್ದರು. ಇದೀಗ ಈ ದಾಖಲೆ ಪತನಗೊಂಡಿದೆ. ಈ ಬಾರಿಯ ವಿಶ್ವಕಪ್​ ಅಕ್ಟೋಬರ್‌ 5 ರಿಂದ ಆರಂಭವಾಗಿ ನವೆಂಬರ್ 19 ರಂದು ಕೊನೆಗೊಂಡಿತು. ಫೈನಲ್​ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಸೆಣಸಾಟ ನಡೆಸಿತ್ತು. ಇಲ್ಲಿ ಆಸ್ಟ್ರೇಲಿಯಾ 6 ವಿಕೆಟ್​ಗಳಿಂದ ಗೆದ್ದು ಚಾಂಪಿಯನ್​ ಪಟ್ಟ ಅಲಂಕರಿಸಿತು.

ಒಟ್ಟಾರೆಯಾಗಿ ಈ ಬಾರಿಯ ಏಕದಿನ ವಿಶ್ವಕ‍ಪ್‌ ಪಂದ್ಯ ಅತ್ಯಂತ ಯಶಸ್ಸು ಕಂಡಿದೆ ಎಂದು ಐಸಿಸಿ ಈವೆಂಟ್‌ಗಳ ಮುಖ್ಯಸ್ಥ ಕ್ರಿಸ್ ಟೆಟ್ಲಿ ಹೇಳಿದ್ದಾರೆ.

ಫೈನಲ್​ ಪಂದ್ಯದ ವೀಕ್ಷಣೆಯಲ್ಲೂ ದಾಖಲೆ

ಭಾನುವಾರ ಅಹಮದಾಬಾದ್​ನ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಫೈನಲ್ ಪಂದ್ಯವನ್ನು 1.3 ಲಕ್ಷ ಮಂದಿ ನೇರವಾಗಿ ವೀಕ್ಷಿಸಿದ್ದಾರೆ. ಇದು ಮಾತ್ರವಲ್ಲದೆ ದೇಶದ ವಿವಿಧ ನಗರಗಳ ಪಿವಿಆರ್​ ಐನಾಕ್ಸ್​ನ 150 ಸಿನಿಮಾ ಮಂದಿರಗಳಲ್ಲಿ 70 ಸಾವಿರಕ್ಕೂ ಅಧಿಕ ಮಂದಿ ಪಂದ್ಯವನ್ನು ವೀಕ್ಷಿಸಿದ್ದಾರೆ. ಮಾತ್ರವಲ್ಲದೆ, ಕರ್ನಾಟಕ ಸರ್ಕಾರದಿಂದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ದೊಡ್ಡ ಪರದೆಯಲ್ಲಿ ಕ್ರಿಕೆಟ್ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಹೀಗೆ ಬೇರೆ ಬೇರೆ ಕಡೆಗಳಲ್ಲಿ ಇದೇಏ ರೀತಿಯ ಪರದೆಯಲ್ಲಿ ಪಂದ್ಯದ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು.

ಇದನ್ನೂ ಓದಿ IND vs AUS T20: ಎಮೋಜಿ ಮೂಲಕವೇ ಆಯ್ಕೆ ಸಮಿತಿಗೆ ತಿವಿದ ಯಜುವೇಂದ್ರ ಚಹಲ್

ಡಿಜಿಟಲ್​ ವೀಕ್ಷಣೆಯಲ್ಲೂ ದಾಖಲೆ

ಡಿಸ್ನಿ-ಹಾಟ್​ಸ್ಟಾರ್​ನಲ್ಲಿ ವಿಶ್ವಕಪ್ ಫೈನಲ್​ ಪಂದ್ಯ 5.9 ಕೋಟಿ ವೀಕ್ಷಣೆ ಕಂಡಿದೆ. ಈ ಮೂಲಕ ಡಿಜಿಟಲ್​ ಮಾಧ್ಯಮದಲ್ಲಿ ಅತಿ ಹೆಚ್ಚು ವೀಕ್ಷಣೆ ಕಂಡ ಪಂದ್ಯ ಎಂಬ ದಾಖಲೆ ಬರೆಯಿತು. ಭಾರತ ಮತ್ತು ನ್ಯೂಜಿಲ್ಯಾಂಡ್​ನ ಸೆಮಿಫೈನಲ್​ ಪಂದ್ಯ 5.3 ಕೋಟಿ ವೀವರ್​ಶಿಪ್ ಕಂಡಿತ್ತು. ಇದು ಮಾತ್ರವಲ್ಲದೆ ಭಾರತ ಮತ್ತು ಪಾಕ್​ ಹೀಗೆ ಭಾರತದ ಹಲವು ಪಂದ್ಯಗಳು ಲೈವ್​ ಸ್ಟ್ರೀಮ್​ನಲ್ಲಿ ಗರಿಷ್ಠ ಸಂಖ್ಯೆಯ ವೀಕ್ಷಕರನ್ನು ಹೊಂದಿತ್ತು ಎಂದು ಡಿಸ್ನಿ-ಹಾಟ್​ಸ್ಟಾರ್ ಸಂಸ್ಥೆ ಹೇಳಿದೆ.

Exit mobile version