ಮುಂಬಯಿ: ಬಹುನಿರೀಕ್ಷಿತ ಮಹಿಳಾ ಪ್ರೀಮಿಯರ್ ಲೀಗ್(WPL 2023) ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಮಾರ್ಚ್ 4 ರಂದು ಚೊಚ್ಚಲ ಆವೃತ್ತಿಗೆ ಚಾಲನೆ ದೊರೆಯಲಿದೆ. ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದೆ. ಈ ಟೂರ್ನಿಗಾಗಿ ಆರ್ಸಿಬಿ(RCB) ತಂಡದ ಆಟಗಾರ್ತಿಯರು ಈಗಾಗಲೇ ಅಭ್ಯಾಸ ಆರಂಭಿಸಿದ್ದಾರೆ.
ಮುಂಬಯಿಯ ಡಿ.ವೈ. ಪಾಟೀಲ್ ಸ್ಟೇಡಿಯಂನಲ್ಲಿ ಆರ್ಸಿಬಿ ತಂಡದ ಆಟಗಾರ್ತಿಯರು ಬೆನ್ ಸಾಯರ್ ಅವರ ಮಾರ್ಗದರ್ಶನದಲ್ಲಿ ಅಭ್ಯಾಸ ನಡೆಸುತ್ತಿರುವ ಫೋಟೊವನ್ನು ಆರ್ಸಿಬಿ ಫ್ರಾಂಚೈಸಿ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡವು ಮಾರ್ಚ್ 5 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಅಭಿಯಾನ ಆರಂಭಿಸಲಿದೆ.
ಇದನ್ನೂ ಓದಿ WPL 2023 : ಉದ್ಘಾಟನಾ ಆವೃತ್ತಿಯ ಮಹಿಳೆಯರ ಪ್ರೀಮಿಯರ್ ಲೀಗ್ಗೆ ಜೆರ್ಸಿ ಅನಾವರಣ ಮಾಡಿದ ಮುಂಬಯಿ ಇಂಡಿಯನ್ಸ್
ಆರ್ಸಿಬಿ ಮಹಿಳಾ ತಂಡದ ಮೆಂಟರ್ ಆಗಿರುವ ಭಾರತದ ಮಾಜಿ ಟೆಸಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಕೂಡ ಆರ್ಸಿಬಿ ಕ್ಯಾಂಪ್ ಸೇರಿದ್ದಾರೆ ಎಂದು ವರದಿಯಾಗಿದೆ.