Site icon Vistara News

WPL 2024: ಮೈದಾನಕ್ಕೆ ನುಗ್ಗಿ ಪಂದ್ಯಕ್ಕೆ ಅಡ್ಡಿಪಡಿಸಿದ ವ್ಯಕ್ತಿಯ ಬಂಧನ

WPL 2024

ಬೆಂಗಳೂರು: ಬುಧವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಯುಪಿ ವಾರಿಯರ್ಸ್(UP Warriorz)​ ಮತ್ತು ಮುಂಬೈ ಇಂಡಿಯನ್ಸ್(Mumbai Indians) ನಡುವಣ ಡಬ್ಲ್ಯುಪಿಎಲ್(WPL 2024)​ ಪಂದ್ಯದಲ್ಲಿ ಭದ್ರತಾ ಸಿಬ್ಬಂದಿಗಳನ್ನು ವಂಚಿಸಿ ಮೈದಾನಕ್ಕೆ ನುಗ್ಗಿದ್ದ ವ್ಯಕ್ತಿಯೊಬ್ಬನನ್ನು ಕಬ್ಬನ್ ಪಾರ್ಕ್ ಪೊಲೀಸರು(cubbon park police station) ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಮಧು (21) ಎಂದು ಗುರುತಿಸಲಾಗಿದೆ. ಈತ ಸೆಂಚುರಿ ಕ್ಲಬ್‌ನಲ್ಲಿ ತೋಟಗಾರನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಮುಂಬೈ ತಂಡದ ಬ್ಯಾಟಿಂಗ್​ ಇನಿಂಗ್ಸ್​ನ ಅಂತಿಮ ಓವರ್​ನ 5ನೇ ಎಸೆತದಲ್ಲಿ ಈ ಘಟನೆ ನಡೆದಿದೆ. ಅಂಜಲಿ ಸೆರ್ವಾನಿ ಎಸೆದ ಈ ಓವರ್​ನ 5ನೇ ಎಸೆತದಲ್ಲಿ ಮುಂಬೈ ತಂಡದ ಬ್ಯಾಟರ್ ಎಸ್​. ಸಂಜನಾ ವಿಕೆಟ್​ ಕಳೆದುಕೊಂಡರು. ಈ ವೇಳೆ ಪ್ರೇಕ್ಷಕರ ಸ್ಯಾಂಡ್​ನಲ್ಲಿದ್ದ ಮಧು ಸಿಬಿಯ ಜೆರ್ಸಿ ಹಿಡಿದುಕೊಂಡು ಬಿಗಿ ಭದ್ರತೆಯನ್ನು ಉಲ್ಲಂಘಿಸಿ ಏಕಾಏಕಿಯಾಗಿ ಮೈದಾನದತ್ತ ಓಡಿ ಬಂದಿದ್ದ.

ಪಿಚ್​ ಕಡೆ ಓಡಿ ಬಂದ ಆತನನ್ನು ಯಪಿ ವಾರಿಯರ್ಸ್(UP Warriorz) ತಂಡದ ನಾಯಕಿ ಅಲಿಸ್ಸಾ ಹೀಲಿ(Alyssa Healy) ತಮ್ಮ ಭುಜಬಲದ ಪ್ರರಾಕ್ರಮದಿಂದ ಹೆಡೆಮುರಿ ಕಟ್ಟಿ ಭದ್ರತಾ ಸಿಬ್ಬಂದಿಗೆ ಒಪ್ಪಿಸಿದ್ದರು. ಈ ಘಟನೆಯ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. ಇದೀಗ ಈ ವ್ಯಕ್ತಿಯನ್ನು ಬಂಧಿಸಿ ಆತನ ವಿರುದ್ಧ ಐಪಿಸಿ ಸೆಕ್ಷನ್ 447 (ಕ್ರಿಮಿನಲ್ ಅತಿಕ್ರಮಣ) ಹಾಗೂ 290 (ಸಾರ್ವಜನಿಕ ತೊಂದರೆ) ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ WPL 2024 : ಲೇಡಿ ಎಬಿಡಿ; ಭಯಂಕರ ಕ್ಯಾಚ್ ಹಿಡಿದ ಆರ್​ಸಿಬಿ ಆಟಗಾರ್ತಿ

ಮುಂಬೈ ವಿರುದ್ಧದ ಈ ಪಂದ್ಯದಲ್ಲಿ ಯಪಿ ತಂಡ 7 ವಿಕೆಟ್​ಗಳ ಗೆಲುವು ಸಾಧಿಸಿ ಗೆಲುವಿನ ಖಾತೆ ತೆರೆದಿತ್ತು. ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಮುಂಬೈ ಇಂಡಿಯನ್ಸ್(Mumbai Indians vs UP Warriorz) ಉತ್ತಮ ಆರಂಭ ಪಡೆದರೂ ಆ ಬಳಿಕ ನಾಟಕೀಯ ಕುಸಿತ ಕಂಡು ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ಗೆ 161 ರನ್​ ಬಾರಿಸಿತ್ತು. ಜವಾಬಿತ್ತ ಯುಪಿ ವಾರಿಯರ್ಸ್16.3​ ಓವರ್​ಗಳಲ್ಲಿ 3 ವಿಕೆಟ್​ ಕಳೆದುಕೊಂಡು 163 ರನ್​ ಬಾರಿಸಿ ಗೆಲುವಿನ ನಗೆ ಬೀರಿತ್ತು.

ಗುರಿ ಬೆನ್ನಟ್ಟಿದ ಯುಪಿ ತಂಡಕ್ಕೆ ನಾಯಕಿ ಅಲಿಸ್ಸಾ ಹೀಲಿ ಮತ್ತು ಹಾರ್ಡ್​ ಹಿಟ್ಟರ್​ ಕಿರಣ್ ನವಗಿರೆ ಉತ್ತಮ ಜತೆಯಾಟದ ಮೂಲಕ ಭರ್ಜರಿ ಆರಂಭ ಒದಗಿಸಿದರು. ಈ ಜೋಡಿ ಮೊದಲ ವಿಕೆಟ್​ಗೆ 94 ರನ್​ಗಳನ್ನು ರಾಶಿ ಹಾಕಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

Exit mobile version