ಬೆಂಗಳೂರು: 2ನೇ ಆವೃತ್ತಿಯ ವುಮೆನ್ಸ್ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಮಹಿಳಾ ಟಿ20(WPL 2024) ಟೂರ್ನಿಯ ಆರಂಭಿಕ 11 ಪಂದ್ಯಗಳ ಟಿಕೆಟ್ ಮಾರಾಟ ಪ್ರಕ್ರಿಯೆ ಆರಂಭಗೊಂಡಿದೆ. ಬುಕ್ಮೈಶೋ ವೆಬ್ಸೈಟ್ನಲ್ಲಿ ಟಿಕೆಟ್ಗಳು ಲಭ್ಯವಿದ್ದು, 100 ರೂ. ಮುಖಬೆಲೆ ಹೊಂದಿವೆ. ಬೆಂಗಳೂರು ಚರಣದ ಪಂದ್ಯಗಳ ಟಿಕೆಟ್ ಇದಾಗಿದೆ.
ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಹಾಲಿ ರನ್ನರ್ಅಪ್ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯೊಂದಿಗೆ ಟೂರ್ನಿ ಆರಂಭಗೊಳ್ಳಲಿದೆ. ಇದೇ 23ರಿಂದ ಟೂರ್ನಿ ಆರಂಭಗೊಳ್ಳಲಿದೆ. ಆತಿಥೇಯ ಆರ್ಸಿಬಿ ಮಹಿಳಾ ತಂಡ ಫೆಬ್ರವರಿ 4ರಂದು ಯುಪಿ ವಾರಿಯರ್ಸ್ ವಿರುದ್ಧ ತನ್ನ ಮೊದಲ ಪಂದ್ಯ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ. ಕಳೆದ ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ತೋರಿ ಲೀಗ್ನಿಂದ ಮೊದಲ ತಂಡವಾಗಿ ಹೊರಬಿದ್ದಿದ್ದ ಆರ್ಸಿಬಿ ಈ ಬಾರಿ ತವರಿನ ಸಂಪೂರ್ಣ ಲಾಭವೆತ್ತಿ ಶ್ರೇಷ್ಠ ಪ್ರದರ್ಶನ ತೋರಬೇಕಿದೆ. ಕಳೆದ ವರ್ಷ ಸಂಪೂರ್ಣವಾಗಿ ಮುಂಬೈನಲ್ಲಿ ಟೂರ್ನಿ ನಡೆದಿತ್ತ. ಈ ಬಾರಿ ಬೆಂಗಳೂರು ಮತ್ತು ನವದೆಹಲಿಯಲ್ಲಿಯೂ ನಡೆಯಲಿದೆ.
🎫 Tickets for all Bengaluru matches in #TATAWPL 2024 are now LIVE 🤩
— Women's Premier League (WPL) (@wplt20) February 17, 2024
Hurry and get them now 👉 https://t.co/FbEJ9ruc64
See you at the stands 👋 pic.twitter.com/PSL7mUQeOn
ಡಬ್ಲ್ಯುಪಿಎಲ್ 2024 ರ ಋತುವು ಕಳೆದ ವರ್ಷದಂತೆ ಅದೇ ಸ್ವರೂಪದಲ್ಲಿ ನಡೆಯಲಿದೆ. ಲೀಗ್ ಹಂತದಲ್ಲಿ ಅಗ್ರ ಮೂರು ತಂಡಗಳು ಪ್ಲೇ ಆಫ್ಗಳಿಗೆ ಅರ್ಹತೆ ಪಡೆಯುತ್ತವೆ. ಲೀಗ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುವ ತಂಡ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯಲಿದ್ದು, ಎರಡು ಮತ್ತು ಮೂರನೇ ಸ್ಥಾನ ಪಡೆಯುವ ತಂಡಗಳು ಮಾರ್ಚ್ 15 ರಂದು ಎಲಿಮಿನೇಟರ್ನಲ್ಲಿ ಆಡಲಿವೆ.
ಇದನ್ನೂ ಓದಿ WPL 2024 : ಜರ್ಸಿ ಅನಾವರಣಗೊಳಿಸಿದ ಅದಾನಿ ನೇತೃತ್ವದ ಗುಜರಾತ್ ಜೈಂಟ್ಸ್ ತಂಡ
ಪೂರ್ಣ ವೇಳಾಪಟ್ಟಿ
ಫೆಬ್ರವರಿ 23- ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್: ಬೆಂಗಳೂರು
ಫೆಬ್ರವರಿ 24- ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಯುಪಿ ವಾರಿಯರ್ಸ್: ಬೆಂಗಳೂರು
ಫೆಬ್ರವರಿ 25- ಗುಜರಾತ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್: ಬೆಂಗಳೂರು
ಫೆಬ್ರವರಿ 26 -ಯುಪಿ ವಾರಿಯರ್ಸ್ ವಿರುದ್ಧ ದೆಹಲಿ ಕ್ಯಾಪಿಟಲ್ಸ್: ಬೆಂಗಳೂರು
ಫೆಬ್ರವರಿ 27- ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್ ಜೈಂಟ್ಸ್: ಬೆಂಗಳೂರು
ಫೆಬ್ರವರಿ 28- ಮುಂಬೈ ಇಂಡಿಯನ್ಸ್ ವಿರುದ್ಧ ಯುಪಿ ವಾರಿಯರ್ಸ್: ಬೆಂಗಳೂರು
ಫೆಬ್ರವರಿ 29- ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್: ಬೆಂಗಳೂರು
ಮಾರ್ಚ್ 1-ಯುಪಿ ವಾರಿಯರ್ಸ್ ವಿರುದ್ಧ ಗುಜರಾತ್ ಜೈಂಟ್ಸ್; ಬೆಂಗಳೂರು
ಮಾರ್ಚ್ 2-ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮುಂಬೈ ಇಂಡಿಯನ್ಸ್: ಬೆಂಗಳೂರು
ಮಾರ್ಚ್ 3- ಗುಜರಾತ್ ಜೈಂಟ್ಸ್ ವಿರುದ್ಧ ದೆಹಲಿ ಕ್ಯಾಪಿಟಲ್ಸ್: ಬೆಂಗಳೂರು
ಮಾರ್ಚ್ 4- ಯುಪಿ ವಾರಿಯರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು: ಬೆಂಗಳೂರು
ಮಾರ್ಚ್ 5 -ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್: ದೆಹಲಿ
ಮಾರ್ಚ್ 6 – ಗುಜರಾತ್ ಜೈಂಟ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು: ದೆಹಲಿ
ಮಾರ್ಚ್ 7 – ಯುಪಿ ವಾರಿಯರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್: ದೆಹಲಿ
ಮಾರ್ಚ್ 8 – ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಯುಪಿ ವಾರಿಯರ್ಸ್: ದೆಹಲಿ
ಮಾರ್ಚ್ 9-ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಜೈಂಟ್ಸ್: ದೆಹಲಿ
ಮಾರ್ಚ್ 10-ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು: ದೆಹಲಿ
ಮಾರ್ಚ್ 11- ಗುಜರಾತ್ ಜೈಂಟ್ಸ್ ವಿರುದ್ಧ ಯುಪಿ ವಾರಿಯರ್ಸ್: ದೆಹಲಿ
ಮಾರ್ಚ್ 12- ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು; ದೆಹಲಿ
ಮಾರ್ಚ್ 13-ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಜೈಂಟ್ಸ್: ದೆಹಲಿ
ಮಾರ್ಚ್ 15 -ಎಲಿಮಿನೇಟರ್: ದೆಹಲಿ
ಮಾರ್ಚ್ 17 -ಫೈನಲ್: ದೆಹಲಿ