Site icon Vistara News

WPL 2024: 2ನೇ ಆವೃತ್ತಿಯ ಡಬ್ಲ್ಯೂಪಿಎಲ್​ಗೆ ದಿನಗಣನೆ; ಅಭ್ಯಾಸ ಆರಂಭಿಸಿದ ಆಟಗಾರ್ತಿಯರು

Mumbai Indians

ಬೆಂಗಳೂರು: ಮಹಿಳಾ ಕ್ರಿಕೆಟಿಗರ ವರ್ಣರಂಜಿತ ಟಿ20 ಕ್ರಿಕೆಟ್​ ಲೀಗ್ ಡಬ್ಲ್ಯೂಪಿಎಲ್ (WPL 2024) ನ ಎರಡನೇ ಆವೃತ್ತಿಗೆ ದಿನಗಣನೆ ಆರಂಭವಾಗಿದೆ. ಫೆಬ್ರವರಿ 23ರಂದು ಬೆಂಗಳೂರಿನಲ್ಲಿ ಟೂರ್ನಿ ಆರಂಭವಾಗಲಿದ್ದು ಮಾರ್ಚ್ 17ರಂದು ನವದೆಹಲಿಯಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಈ ಟೂರ್ನಿಗಾಗಿ ಎಲ್ಲ 5 ತಂಡಗಳು ಕೂಡ ಭರ್ಜರಿ ತಯಾರಿ ಆರಂಭಿಸಿದೆ. ಎಲ್ಲ ತಂಡಗಳು ಅಭ್ಯಾಸ ನಡೆಸುತ್ತಿರುವ ವಿಡಿಯೊವನ್ನು ಆಯಾ ಫ್ರಾಂಚೈಸಿ ತನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

ಕಳೆದ ವರ್ಷ ಸಂಪೂರ್ಣವಾಗಿ ಮುಂಬೈನಲ್ಲಿ ಟೂರ್ನಿ ನಡೆದಿತ್ತು. ಈ ಬಾರಿ ಬೆಂಗಳೂರು ಮತ್ತು ದೆಹಲಿಯಲ್ಲಿಯೂ ನಡೆಯಲಿದೆ. ಮೊದಲ ಪಂದ್ಯದಲ್ಲಿ ಕಳೆದ ವರ್ಷದ ಫೈನಲಿಸ್ಟ್​ಗಳಾದ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸೆಣಸಾಡಲಿದೆ. ಎಲ್ಲಾ ಪಂದ್ಯಗಳು ಸಂಜೆ 7:30ಕ್ಕೆ ಆರಂಭವಾಗಲಿವೆ. ಮಾರ್ಚ್ 15 ರಂದು ಎಲಿಮಿನೇಟರ್ ಪಂದ್ಯ ನಡೆಯಲಿದೆ.

ಹಾಲಿ ಚಾಂಪಿಯನ್​ ಮುಂಬೈ ಇಂಡಿಯನ್ಸ್​ ತಂಡದ ಅಭ್ಯಾಸ

ಡಬ್ಲ್ಯೂಪಿಎಲ್ನ 2024 ರ ಋತುವು ಕಳೆದ ವರ್ಷದಂತೆ ಅದೇ ಸ್ವರೂಪದಲ್ಲಿ ನಡೆಯಲಿದೆ. ಲೀಗ್ ಹಂತದಲ್ಲಿ ಅಗ್ರ ಮೂರು ತಂಡಗಳು ಪ್ಲೇ ಆಫ್​ಗಳಿಗೆ ಅರ್ಹತೆ ಪಡೆಯುತ್ತವೆ. ಲೀಗ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುವ ತಂಡ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯಲಿದ್ದು, ಎರಡು ಮತ್ತು ಮೂರನೇ ಸ್ಥಾನ ಪಡೆಯುವ ತಂಡಗಳು ಮಾರ್ಚ್ 15 ರಂದು ಎಲಿಮಿನೇಟರ್​ನಲ್ಲಿ ಆಡಲಿವೆ.

ಇದನ್ನೂ ಓದಿ Ravindra Jadeja : ಸರ್ಫರಾಜ್​ ಖಾನ್​ ಕ್ಷಮೆ ಕೋರಿದ ರವೀಂದ್ರ ಜಡೇಜಾ!

ಆರ್​ಸಿಬಿ ತಂಡದ ಅಭ್ಯಾಸ

ಪೂರ್ಣ ವೇಳಾಪಟ್ಟಿ


ಫೆಬ್ರವರಿ 23- ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್: ಬೆಂಗಳೂರು

ಫೆಬ್ರವರಿ 24- ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಯುಪಿ ವಾರಿಯರ್ಸ್: ಬೆಂಗಳೂರು

ಫೆಬ್ರವರಿ 25- ಗುಜರಾತ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್: ಬೆಂಗಳೂರು

ಫೆಬ್ರವರಿ 26 -ಯುಪಿ ವಾರಿಯರ್ಸ್ ವಿರುದ್ಧ ದೆಹಲಿ ಕ್ಯಾಪಿಟಲ್ಸ್: ಬೆಂಗಳೂರು

ಫೆಬ್ರವರಿ 27- ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್ ಜೈಂಟ್ಸ್: ಬೆಂಗಳೂರು

ಫೆಬ್ರವರಿ 28- ಮುಂಬೈ ಇಂಡಿಯನ್ಸ್ ವಿರುದ್ಧ ಯುಪಿ ವಾರಿಯರ್ಸ್: ಬೆಂಗಳೂರು

ಫೆಬ್ರವರಿ 29- ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್: ಬೆಂಗಳೂರು

ಮಾರ್ಚ್ 1-ಯುಪಿ ವಾರಿಯರ್ಸ್ ವಿರುದ್ಧ ಗುಜರಾತ್ ಜೈಂಟ್ಸ್; ಬೆಂಗಳೂರು

ಮಾರ್ಚ್ 2-ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮುಂಬೈ ಇಂಡಿಯನ್ಸ್: ಬೆಂಗಳೂರು

ಮಾರ್ಚ್ 3- ಗುಜರಾತ್ ಜೈಂಟ್ಸ್ ವಿರುದ್ಧ ದೆಹಲಿ ಕ್ಯಾಪಿಟಲ್ಸ್: ಬೆಂಗಳೂರು

ಮಾರ್ಚ್ 4- ಯುಪಿ ವಾರಿಯರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು: ಬೆಂಗಳೂರು

ಮಾರ್ಚ್ 5 -ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್: ದೆಹಲಿ

ಮಾರ್ಚ್ 6 – ಗುಜರಾತ್ ಜೈಂಟ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು: ದೆಹಲಿ

ಮಾರ್ಚ್ 7 – ಯುಪಿ ವಾರಿಯರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್: ದೆಹಲಿ

ಮಾರ್ಚ್ 8 – ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಯುಪಿ ವಾರಿಯರ್ಸ್: ದೆಹಲಿ

ಮಾರ್ಚ್ 9-ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಜೈಂಟ್ಸ್: ದೆಹಲಿ

ಮಾರ್ಚ್ 10-ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು: ದೆಹಲಿ

ಮಾರ್ಚ್ 11- ಗುಜರಾತ್ ಜೈಂಟ್ಸ್ ವಿರುದ್ಧ ಯುಪಿ ವಾರಿಯರ್ಸ್: ದೆಹಲಿ

ಮಾರ್ಚ್ 12- ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು; ದೆಹಲಿ

ಮಾರ್ಚ್ 13-ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಜೈಂಟ್ಸ್: ದೆಹಲಿ

ಮಾರ್ಚ್ 15 -ಎಲಿಮಿನೇಟರ್: ದೆಹಲಿ

ಮಾರ್ಚ್ 17 -ಫೈನಲ್: ದೆಹಲಿ

Exit mobile version