Site icon Vistara News

WPL Points Table: ಡೆಲ್ಲಿ ಪ್ಲೇ ಆಫ್ ಪ್ರವೇಶ; ನೂತನ ಅಂಕಪಟ್ಟಿ ಹೇಗಿದೆ

Spirit of cricket alive and kicking: Meg Lanning checks up on Shreyanka Patil

ನವದೆಹಲಿ: ಪ್ರಸಕ್ತ ಸಾಗುತ್ತಿರುವ ಮಹಿಳಾ ಪ್ರೀಮಿಯರ್‌ ಲೀಗ್​ನಲ್ಲಿ 2 ತಂಡಗಳು ಈಗಾಗಲೇ ಪ್ಲೇ ಆಫ್ ಪ್ರವೇಶ ಪಡೆದಿದೆ. ಈ ತಂಡಗಳೆಂದರೆ ಡೆಲ್ಲಿ ಕ್ಯಾಪಿಟಲ್ಸ್​ ಮತ್ತು ಮುಂಬೈ ಇಂಡಿಯನ್ಸ್​. ಉಳಿದಿರುವ ಒಂದು ಸ್ಥಾನಕ್ಕೆ ಮೂರು ತಂಡಗಳ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಸದ್ಯ ಅಂಕಪಟ್ಟಿ(WPL Points Table) ಹೀಗಿದೆ.

ನಿನ್ನೆ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ವಿರುದ್ಧ ಒಂದು ರನ್​ ವಿರೋಚಿತ ಸೋಲು ಕಂಡಿತ್ತು. ಈ ಸೋಲಿನಿಂದಾಗಿ ಆರ್​ಸಿಬಿ ಪ್ಲೇ ಆಫ್ ಪ್ರವೇಶ ಟಿಕೆಟ್​ ಪಡೆಯಬೇಕಿದ್ದರೆ ಮುಂದಿನ ಪಂದ್ಯಗಳನ್ನು ಗೆಲ್ಲಬೇಕಾದ ಒತ್ತಡಕ್ಕೆ ಸಿಲುಕಿದೆ. ಆರ್​ಸಿಬಿಗೆ ಇನ್ನು ಒಂದು ಪಂದ್ಯ ಮಾತ್ರ ಬಾಕಿ ಇದೆ. ಎದುರಾಳಿ ಬಲಿಷ್ಠ ಮುಂಬೈ ಇಂಡಿಯನ್ಸ್​. ಇಲ್ಲಿ ದೊಡ್ಡ ಅಂತರದ ಗೆಲುವು ಸಾಧಿಸಿದರೆ ಪ್ಲೇ ಆಫ್ ಪ್ರವೇಶ ಪಡೆಯಬಹುದು.

ನೂತನ ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ಡೆಲ್ಲಿ ಕ್ಯಾಪಿಟಲ್ಸ್​75210 (+0.918)
ಮುಂಬೈ ಇಂಡಿಯನ್ಸ್​​75210 (+0.343)
ಆರ್​ಸಿಬಿ​​7346 (+0.027)
ಯುಪಿ ವಾರಿಯರ್ಸ್​7346 (-0.365)
ಗುಜರಾತ್​ ಜೈಂಟ್ಸ್​6142 (-1.111)

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್​​ ಮಾಡಿದ ಡೆಲ್ಲಿ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 181 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಆರ್​ಸಿಬಿ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 180 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

Exit mobile version