ಕ್ರೀಡೆ
Wrestlers Protest: ಜೂನ್ 15ರ ತನಕ ಪ್ರತಿಭಟನೆ ಸ್ಥಗಿತಗೊಳಿಸಿದ ಕುಸ್ತಿಪಟುಗಳು
ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರ ನಿವಾಸದಲ್ಲಿ ನಡೆಸಿದ ಸಭೆಯ ಬಳಿಕ ಕುಸ್ತಿಪಟುಗಳು ಜೂನ್ 15 ತನಕ ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ.
ನವದೆಹಲಿ: ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ಭೂಷನ್ ಶರಣ್ ಸಿಂಗ್ ಬಂಧನಕ್ಕೆ ಪಟ್ಟುಹಿಡಿದು ಪ್ರತಿಭಟನೆ ನಡೆಸುತ್ತಿದ್ದ ಭಾರತದ ಅಗ್ರಮಾನ್ಯ ಕುಸ್ತಿಪಟುಗಳು ತಾತ್ಕಾಲಿಕವಾಗಿ ಈ ಪ್ರತಿಭಟನೆಯಿಂದ ಹಿಂದೆ ಸರಿದ್ದಿದ್ದಾರೆ. ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರ ನಿವಾಸದಲ್ಲಿ ನಡೆಸಿದ ಸಭೆಯ ಬಳಿಕ ಕುಸ್ತಿಪಟುಗಳು ಜೂನ್ 15 ತನಕ ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ. ಈ ವಿಚಾರವನ್ನು ಅನುರಾಗ್ ಠಾಕೂರ್ ಪ್ರಕಟಿಸಿದ್ದಾರೆ.
ಬುಧವಾರ ಕೇಂದ್ರ ಸರ್ಕಾರ ಕುಸ್ತಿಪಟುಗಳನ್ನು ಮತ್ತೊಮ್ಮೆ ಚರ್ಚೆಗೆ ಆಹ್ವಾನಿಸಿತ್ತು. ಇದಕ್ಕೂ ಮುನ್ನ ಅನುರಾಗ್ ಠಾಕೂರ್ ಅವರು ತಮ್ಮ ನಿವಾಸದಲ್ಲಿ ಕುಸ್ತಿಪಟುಗಳೊಂದಿಗೆ ಮಹತ್ವದ ಸಭೆಯೊಂದನ್ನು ನಡೆಸಿದ್ದರು. ಇದೀಗ ಸಭೆ ಮುಕ್ತಾಯ ಕಂಡಿದ್ದು ಕುಸ್ತಿ ಪಟುಗಳು ಜೂನ್ 15ರ ತನಕ ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ. ಇದರ ಜತೆಗೆ ಕುಸ್ತಿಪಟುಗಳು ಕೆಲ ಮಹತ್ವದ ಬೇಡಿಕೆ ಮುಂದಿಟ್ಟಿದ್ದಾರೆ ಎಂದು ವರದಿಯಾಗಿದೆ.
ಸಭೆಯ ಬಳಿಕ ಮಾತನಾಡಿದ ಅನುರಾಗ್ ಠಾಕೂರ್, ಕುಸ್ತಿಪಟುಗಳ ಎಲ್ಲ ಸಮಸ್ಯೆಯನ್ನು ಆಲಿಸಲಾಗಿದೆ. ಜೂನ್ 15ರೊಳಗೆ ಬ್ರಿಜ್ ಭೂಷಣ್ ವಿರುದ್ಧದ ತನಿಖೆ ಪೂರ್ಣಗೊಳ್ಳಲಿದೆ. ಹೀಗಾಗಿ ಕುಸ್ತಿಪಟುಗಳು ಜೂನ್ 15ರ ವರೆಗೆ ಪ್ರತಿಭಟನೆ ರದ್ದು ಮಾಡಲು ನಿರ್ಧರಿಸಿದ್ದಾರೆ” ಎಂದು ಹೇಳಿದ್ದಾರೆ.
ಸಭೆಯಲ್ಲಿ ಕುಸ್ತಿಪಟುಗಳು ತಮ್ಮ ಮೇಲಿನ ಎಫ್‌ಐಆರ್ ವಾಪಸ್ ಪಡೆಯುವಂತೆ ಮತ್ತು ಜೂನ್ 30ರೊಳಗೆ ನಡೆಯುವ ಡಬ್ಲ್ಯುಎಫ್‌ಐ ಚುನಾವಣೆಯಲ್ಲಿ 3 ಅವಧಿ ಪೂರೈಸಿರುವ ಬ್ರಿಜ್ ಭೂಷಣ್ ಸಿಂಗ್ ಮತ್ತು ಅವರ ಸಹಚರರನ್ನು ಮರು ಆಯ್ಕೆ ಮಾಡದಂತೆ ಒತ್ತಾಯಿಸಿದ್ದಾರೆ. ಜತೆಗೆ ಮಹಿಳಾ ಅಧ್ಯಕ್ಷರನ್ನು ನೇಮಕ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಇದೇ ವೇಳೆ ಮಾತನಾಡಿದ ಬಜರಂಗ್ ಪೂನಿಯ, ಸಚಿವರ ಭರವಸೆಯ ಮೇರೆಗೆ ನಾವು ನಮ್ಮ ಪ್ರತಿಭಟನೆಯಿಂದ ತಾತ್ಕಾಲಿಕವಾಗಿ ಹಿಂದೆ ಸರಿದಿದ್ದೇವೆ, ಆದರೆ ನಮ್ಮ ಹೋರಾಟದಿಂದ ಅಲ್ಲ ಎಂದು ಹೇಳಿದ್ದಾರೆ. ಸಾಕ್ಷಿ ಮಲಿಕ್ ಮಾತನಾಡಿ ತಮ್ಮ ವಿರುದ್ಧ ದಾಖಲಾದ ಎಲ್ಲ ಎಫ್ಐಆರ್ಗಳು ಹಿಂಪಡೆಯುವ ವಿಶ್ವಾಸವಿದೆ ಎಂದು ಹೇಳಿದರು.
ಇದನ್ನೂ ಓದಿ Wrestlers Protest: ಅನುರಾಗ್ ಠಾಕೂರ್ ಮನೆಗೆ ಭೇಟಿ ನೀಡಿದ ಕುಸ್ತಿಪಟುಗಳು
#WATCH | Government has assured us that police investigation will be completed before 15th June. We have requested that all FIRs against wrestlers should be taken back and he has agreed to it. If no action is taken by 15th June, we will continue our protest: Wrestler Bajrang… pic.twitter.com/1hi9Qp0RFY
— ANI (@ANI) June 7, 2023
ಇದಕ್ಕೂ ಮೊದಲು ಜನವರಿಯಲ್ಲಿ ಕುಸ್ತಿಪಟುಗಳ ಜತೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಸಭೆ ನಡೆಸಿದ್ದರು. ಆ ವೇಳೆ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಸೂಕ್ತ ಕ್ರಮದ ಭರವಸೆ ನೀಡಿದ್ದರು. ಇದರಿಂದ ಕುಸ್ತಿಪಟುಗಳು ತಾತ್ಕಾಲಿಕವಾಗಿ ಪ್ರತಿಭಟನೆ ಕೈಬಿಟ್ಟಿದ್ದರು. ಬಳಿಕ ಲೈಂಗಿಕ ದೌರ್ಜನ್ಯ ಆರೋಪಗಳ ತನಿಖೆಗಾಗಿ ಭಾರತ ಒಲಿಂಪಿಕ್ ಸಂಸ್ಥೆಯು ಐಒಎ ಮಹಿಳಾ ಬಾಕ್ಸರ್ ಎಂಸಿ ಮೇರಿಕೋಮ್ ಮತ್ತು ಕುಸ್ತಿಪಟು ಯೋಗೇಶ್ವರ್ ದತ್ ಆರ್ಚರಿ ಸ್ಪರ್ಧಿ ಡೋಲಾ ಬ್ಯಾನರ್ಜಿ ಮತ್ತು ಭಾರತ ವೇಟ್‌ಲಿಫ್ಟಿಂಗ್ ಫೆಡರೇಷನ್ ಅಧ್ಯಕ್ಷ ಸಹದೇವ್ ಯಾದವ್ ಅವರನ್ನೊಳಗೊಂಡ ಸಮಿತಿ ರಚಿಸಲಾಗಿತ್ತು. ಇದರ ಪರಿಣಾಮ ಕುಸ್ತಿಪಟುಗಳು ಭರವಸೆ ನೀಡಿದಂತೆ ಕೆಲವು ತಿಂಗಳ ಕಾಲ ಕಾದಿದ್ದರು. ಆದರೆ ಬ್ರಿಜ್ ಭೂಷಣ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲ ಕಾರಣ ಮತ್ತೆ ಪ್ರತಿಭಟನೆ ನಡೆಸಿದ್ದರು. ಇದೀಗ ದ್ವಿತೀಯ ಬಾರಿ ಭರವಸೆ ನೀಡಿರುವ ಅನುರಾಗ್ ಠಾಕೂರ್ ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂದು ಕಾದು ನೋಡಬೇಕಿದೆ.
ಕ್ರೀಡೆ
Asian Games : ಮಹಿಳೆಯರ ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದು ದಾಖಲೆ ಬರೆದ ಅನ್ನುರಾಣಿ
ಅನ್ನು ರಾಣಿಯ ಚಿನ್ನದ ಪದಕದೊಂದಿಗೆ ಭಾರತದ ಒಟ್ಟಾರೆ ಚಿನ್ನದ ಪದಕದ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.ಬೆಳ್ಳಿ, ಕಂಚು ಸೇರಿ 69 ಪದಕಗಳೊಂದಿಗೆ (Asian Games ) ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದೆ.
ಹ್ಯಾಂಗ್ಜೌ: ಭಾರತದ ಜಾವೆಲಿನ್ ಎಸೆತಗಾರ್ತಿ ಅನ್ನುರಾಣಿ ಏಷ್ಯನ್ ಗೇಮ್ಸ್ನಲ್ಲಿ (Asian Games) ಹೊಸ ದಾಖಲೆ ಬರೆದ್ದಾರೆ. ಅವರು ಖಂಡಾಂತರ ಕ್ರೀಡಾಕೂಟದ ಮಹಿಳೆಯರ ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿರುವ ಭಾರತದ ಮೊಟ್ಟ ಮೊದಲ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಮಂಗಳವಾರ ಸಂಜೆ ನಡೆಸ ಸ್ಪರ್ಧೆಯಲ್ಲಿ ಅತ್ಯುತ್ತಮ 62.92 ಮೀಟರ್ ದೂರಕ್ಕೆ ಜಾವೆಲಿನ್ ಎಸೆತ ಅನ್ನು ರಾಣಿ ಬಂಗಾರದ ಪದಕಕ್ಕೆ ಕೊರಳೊಡ್ಡಿದರು. ಅಂದ ಹಾಗೆ ಅನ್ನು ರಾಣಿ 2014ರಲ್ಲಿ ನಡೆದಿದ್ದ ಏಷ್ಯನ ಗೇಮ್ಸ್ನಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದರು ಇದೀಗ ಅವರು ಪ್ರದರ್ಶನದಲ್ಲಿ ಸುಧಾರಣೆ ಮಾಡಿಕೊಂಡು ಸ್ವರ್ಣ ಪದಕ ತಮ್ಮದಾಗಿಸಿಕೊಂಡಿದ್ದರು.
ಅನ್ನು ರಾಣಿ ಅವರ ಚಿನ್ನದ ಪದಕದ ಸಾಧನೆಯೊಂದಿಗೆ ಭಾರತದ ಬಂಗಾರದ ಗಳಿಕೆ 15ಕ್ಕೆ ಏರಿಕೆಯಾಗಿದೆ. 26 ಬೆಳ್ಳಿ ಹಾಗೂ 28 ಕಂಚಿನ ಪದಕದ ಸಾಧನೆಯೊಂದಿಗೆ ಒಟ್ಟಾರೆ 69 ಪದಕಗಳನ್ನು ಗೆದ್ದು ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿ ಮುಂದುವರಿಸಿದೆ.
ಮಂಗಳವಾರ ಸಂಜೆ ಪಾರುಲ್ ಚೌಧರಿ, ಮಹಿಳೆಯರ 5000 ಮೀಟರ್ ಓಟದಲ್ಲಿ ಚಿನ್ನದ ಪದಕ ಗೆದ್ದಿದ್ದರು. ಓಟದ ಅಂತಿಮ ಕ್ಷಣದಲ್ಲಿ ವೇಗ ಹೆಚ್ಚಿಸಿದ ಅವರು ಅವರು 15:14.75 ಸೆಕೆಂಡುಗಳಲ್ಲಿ ಗುರಿ ತಲುಪಿ ಜಪಾನ್ ನ ರಿರಿಕಾ ಹಿರೊನಾಕಾ ಅವರನ್ನು ಹಿಂದಿಕ್ಕಿದರು.
ಮಹಿಳೆಯರ 400 ಮೀಟರ್ ಓಟದ ಫೈನಲ್‌ನಲ್ಲಿ ವಿಥ್ಯಾ ರಾಮರಾಜ್ ಕಂಚಿನ ಪದಕ ಗೆದ್ದರು. ಇದಕ್ಕೂ ಮುನ್ನ ಯಶಸ್ವಿ ಜೈಸ್ವಾಲ್ ಅವರ ಅದ್ಭುತ ಶತಕ (100), ರಿಂಕು ಸಿಂಗ್ ಅವರ ಅದ್ಭುತ ಶತಕ (37*) ಮತ್ತು ಬೌಲರ್ಗಳ ಅಬ್ಬರದಿಂದಾಗಿ ಭಾರತ ಕ್ರಿಕೆಟ್ ತಂಡವು ತಂಡವು ನೇಪಾಳ ವಿರುದ್ಧ 23 ರನ್ಗಳ ವಿಜಯ ಸಾಧಿಸಿತ್ತು. ಈ ಗೆಲುವಿನೊಂದಿಗೆ ಭಾರತ ಪುರುಷರ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಪ್ರವೇಶಿಸಿದೆ.
ಭಾರತ ಪುರುಷರ ಕಬಡ್ಡಿ ತಂಡವು ಪಂದ್ಯಾವಳಿಯಲ್ಲಿ 55-18 ಅಂಕಗಳಿಂದ ಬಾಂಗ್ಲಾದೇಶವನ್ನು ಸೋಲಿಸಿದರೆ, ಮಹಿಳಾ ಹಾಕಿ ತಂಡವು ಹಾಂಗ್ ಕಾಂಗ್ ವಿರುದ್ಧ 13-0 ಅಂತರದಿಂದ ಗೆಲುವು ಸಾಧಿಸಿತು. ಅರ್ಚರಿಯಲ್ಲಿ ಭಾರತೀಯರು ಪ್ರಾಬಲ್ಯ ಮೆರೆದಿದ್ದು, ಪುರುಷರ ವಿಭಾಗದಲ್ಲಿ ಓಜಾಸ್ ಪ್ರವೀಣ್ ಡಿಯೋಟಾಲೆ ಮತ್ತು ಅಭಿಷೇಕ್ ಶರ್ಮಾ ಅಖಿಲ ಭಾರತ ಫೈನಲ್ ತಲುಪಿದರೆ, ಜ್ಯೋತಿ ಸುರೇಖಾ ವೆನ್ನಮ್ ಕೂಡ ಮಹಿಳೆಯರ ವಿಭಾಗದಲ್ಲಿ ಫೈನಲ್ ತಲುಪಿದ್ದಾರೆ.
ಇದನ್ನೂ ಓದಿ : Asian Games : ಭಾರತಕ್ಕೆ ಮತ್ತೊಂದು ಚಿನ್ನದ ಪದಕ, 5000 ಮೀಟರ್ ಓಟದಲ್ಲಿ ಮೊದಲ ಸ್ಥಾನ ಪಡೆದ ಪಾರುಲ್
ಬ್ಯಾಡ್ಮಿಂಟರ್ನಲ್ಲಿ ಭಾರತದ ಎಚ್.ಎಸ್.ಪ್ರಣಯ್, ಪಿ.ವಿ.ಸಿಂಧು ಮತ್ತು ಕಿಡಂಬಿ ಶ್ರೀಕಾಂತ್ 16ನೇ ಸುತ್ತಿಗೆ ತಲುಪಿದ್ದಾರೆ. ಮಹಿಳೆಯರ 800 ಮೀಟರ್ ಓಟದಲ್ಲಿ ಕುಮಾರಿ ಚಂದಾ ಮತ್ತು ಹರ್ಮಿಲನ್ ಬೈನ್ಸ್ ಅಂತಿಮ ಸ್ಥಾನಗಳನ್ನು ಗಳಿಸಿದರೆ. ಭಾರತವು 4×400 ಮೀಟರ್ ತಂಡ ಪುರುಷರ ಸ್ಪರ್ಧೆಯಲ್ಲಿ ಫೈನಲ್ಗೆ ಅರ್ಹತೆ ಪಡೆಯಿತು.
ಪುರುಷರ ಡೆಕಾಥ್ಲಾನ್ನಲ್ಲಿ ಅಗ್ರ ಸ್ಥಾನವನ್ನು ಗಳಿಸುವ ಗುರಿಯನ್ನು ತೇಜಸ್ವಿನ್ ಶಂಕರ್ ಹೊಂದಿದ್ದಾರೆ. 2014ರ ಏಷ್ಯನ್ ಗೇಮ್ಸ್ ನಲ್ಲಿ ಕಂಚು ಗೆದ್ದಿದ್ದ ಮಹಿಳಾ ಜಾವೆಲಿನ್ ಸ್ಪರ್ಧಿ ಅನ್ನು ರಾಣಿ ಇನ್ನೊಂದು ಪದಕದ ಮೇಲೆ ಗುರಿಯಿಟ್ಟಿದ್ದಾರೆ.
ಕ್ರೀಡೆ
Asian Games : ಭಾರತಕ್ಕೆ ಮತ್ತೊಂದು ಚಿನ್ನದ ಪದಕ, 5000 ಮೀಟರ್ ಓಟದಲ್ಲಿ ಮೊದಲ ಸ್ಥಾನ ಪಡೆದ ಪಾರುಲ್
ಪಾರುಲ್ ಅವರ ಚಿನ್ದದ ಪದಕದೊಂದಿಗೆ ಏಷ್ಯನ್ ಗೇಮ್ಸ್ನಲ್ಲಿ ಭಾರತದ ಚಿನ್ನದ ಪದಕಗಳ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.
ಹ್ಯಾಂಗ್ಜೌ: ಚೀನಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ನಲ್ಲಿ (Asian Games) ಸೋಮವಾರ ಮಹಿಳೆಯರ 3000 ಮೀಟರ್ ಸ್ಟೀಪಲ್ ಚೇಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಪಾರುಲ್ ಚೌಧರಿ, ಮಂಗಳವಾರ ನಡೆದ ಮಹಿಳೆಯರ 5000 ಮೀಟರ್ ಓಟದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಓಟದ ಅಂತಿಮ ಕ್ಷಣದಲ್ಲಿ ವೇಗ ಹೆಚ್ಚಿಸಿದ ಅವರು ಅವರು 15:14.75 ಸೆಕೆಂಡುಗಳಲ್ಲಿ ಗುರಿ ತಲುಪಿ ಜಪಾನ್ ನ ರಿರಿಕಾ ಹಿರೊನಾಕಾ ಅವರನ್ನು ಹಿಂದಿಕ್ಕಿದರು. ಈ ಮೂಲಕ ಭಾರತದ ಒಟ್ಟು ಚಿನ್ನದ ಪದಕಗಳ ಸಂಕೆಯ 14ಕ್ಕೆ ಏರಿಕೆಯಾಗಿದೆ ಹಾಗೂ ಒಟ್ಟಾರೆಯಾಗಿ 65 ಪದಕಗಳನ್ನು ಗೆದ್ದುಕೊಂಡಿದೆ.
Powerhouse Parul grabs a #GloriousGold🥇in Women's 5000m 🥳
— SAI Media (@Media_SAI) October 3, 2023
Second time around, she proves that charm and determination pay off, securing her remarkable second medal at #AsianGames2022.
Clocking 15:14.75, Parul's performance is absolutely 🔥!
Heartiest congratulations champ!… pic.twitter.com/NRfxSBJXwH
ಮಹಿಳೆಯರ 400 ಮೀಟರ್ ಓಟದ ಫೈನಲ್‌ನಲ್ಲಿ ವಿಥ್ಯಾ ರಾಮರಾಜ್ ಕಂಚಿನ ಪದಕ ಗೆದ್ದರು. ಇದಕ್ಕೂ ಮುನ್ನ ಯಶಸ್ವಿ ಜೈಸ್ವಾಲ್ ಅವರ ಅದ್ಭುತ ಶತಕ (100), ರಿಂಕು ಸಿಂಗ್ ಅವರ ಅದ್ಭುತ ಶತಕ (37*) ಮತ್ತು ಬೌಲರ್ಗಳ ಅಬ್ಬರದಿಂದಾಗಿ ಭಾರತ ಕ್ರಿಕೆಟ್ ತಂಡವು ತಂಡವು ನೇಪಾಳ ವಿರುದ್ಧ 23 ರನ್ಗಳ ವಿಜಯ ಸಾಧಿಸಿತ್ತು. ಈ ಗೆಲುವಿನೊಂದಿಗೆ ಭಾರತ ಪುರುಷರ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಪ್ರವೇಶಿಸಿದೆ.
ಭಾರತ ಪುರುಷರ ಕಬಡ್ಡಿ ತಂಡವು ಪಂದ್ಯಾವಳಿಯಲ್ಲಿ 55-18 ಅಂಕಗಳಿಂದ ಬಾಂಗ್ಲಾದೇಶವನ್ನು ಸೋಲಿಸಿದರೆ, ಮಹಿಳಾ ಹಾಕಿ ತಂಡವು ಹಾಂಗ್ ಕಾಂಗ್ ವಿರುದ್ಧ 13-0 ಅಂತರದಿಂದ ಗೆಲುವು ಸಾಧಿಸಿತು. ಅರ್ಚರಿಯಲ್ಲಿ ಭಾರತೀಯರು ಪ್ರಾಬಲ್ಯ ಮೆರೆದಿದ್ದು, ಪುರುಷರ ವಿಭಾಗದಲ್ಲಿ ಓಜಾಸ್ ಪ್ರವೀಣ್ ಡಿಯೋಟಾಲೆ ಮತ್ತು ಅಭಿಷೇಕ್ ಶರ್ಮಾ ಅಖಿಲ ಭಾರತ ಫೈನಲ್ ತಲುಪಿದರೆ, ಜ್ಯೋತಿ ಸುರೇಖಾ ವೆನ್ನಮ್ ಕೂಡ ಮಹಿಳೆಯರ ವಿಭಾಗದಲ್ಲಿ ಫೈನಲ್ ತಲುಪಿದ್ದಾರೆ.
ಬ್ಯಾಡ್ಮಿಂಟರ್ನಲ್ಲಿ ಭಾರತದ ಎಚ್.ಎಸ್.ಪ್ರಣಯ್, ಪಿ.ವಿ.ಸಿಂಧು ಮತ್ತು ಕಿಡಂಬಿ ಶ್ರೀಕಾಂತ್ 16ನೇ ಸುತ್ತಿಗೆ ತಲುಪಿದ್ದಾರೆ. ಮಹಿಳೆಯರ 800 ಮೀಟರ್ ಓಟದಲ್ಲಿ ಕುಮಾರಿ ಚಂದಾ ಮತ್ತು ಹರ್ಮಿಲನ್ ಬೈನ್ಸ್ ಅಂತಿಮ ಸ್ಥಾನಗಳನ್ನು ಗಳಿಸಿದರೆ. ಭಾರತವು 4×400 ಮೀಟರ್ ತಂಡ ಪುರುಷರ ಸ್ಪರ್ಧೆಯಲ್ಲಿ ಫೈನಲ್ಗೆ ಅರ್ಹತೆ ಪಡೆಯಿತು.
ಪುರುಷರ ಡೆಕಾಥ್ಲಾನ್ನಲ್ಲಿ ಅಗ್ರ ಸ್ಥಾನವನ್ನು ಗಳಿಸುವ ಗುರಿಯನ್ನು ತೇಜಸ್ವಿನ್ ಶಂಕರ್ ಹೊಂದಿದ್ದಾರೆ. 2014ರ ಏಷ್ಯನ್ ಗೇಮ್ಸ್ ನಲ್ಲಿ ಕಂಚು ಗೆದ್ದಿದ್ದ ಮಹಿಳಾ ಜಾವೆಲಿನ್ ಸ್ಪರ್ಧಿ ಅನ್ನು ರಾಣಿ ಇನ್ನೊಂದು ಪದಕದ ಮೇಲೆ ಗುರಿಯಿಟ್ಟಿದ್ದಾರೆ.
ಭಾರತದ ಪದಕಗಳ ಪಟ್ಟಿ-
- ಚಿನ್ನ: 14
- ಬೆಳ್ಳಿ: 24
- ಕಂಚು: 26
10ನೇ ದಿನದಲ್ಲಿ ಭಾರತದ ಫಲಿತಾಂಶಗಳು
ಮಹಿಳೆಯರ 5000 ಮೀಟರ್ ಓಟದಲ್ಲಿ ಪಾರುಲ್ ಚೌಧರಿ ಚಿನ್ನದ ಪದಕ ಗೆದ್ದಿದ್ದಾರೆ.
ಮಹಿಳೆಯರ 400 ಮೀಟರ್ ಹರ್ಡಲ್ಸ್ನಲ್ಲಿ ವಿಥ್ಯಾ ರಾಮ್ರಾಜ್ ಕಂಚಿನ ಪದಕ ಗೆದ್ದಿದ್ದಾರೆ.
ಮಹಿಳೆಯರ 54 ಕೆಜಿ ಬಾಕ್ಸಿಂಗ್ನಲ್ಲಿ ಪ್ರೀತಿ ಪವಾರ್ ಕಂಚಿನ ಪದಕ ಗೆದ್ದಿದ್ದಾರೆ.
ಪುರುಷರ ಕ್ಯಾನೋ ಡಬಲ್ 1000 ಮೀಟರ್ನಲ್ಲಿ ಅರ್ಜುನ್ ಸಿಂಗ್ ಮತ್ತು ಸುನಿಲ್ ಸಿಂಗ್ ಕಂಚಿನ ಪದಕ ಗೆದ್ದಿದ್ದಾರೆ.
ಪುರುಷರ ಕ್ರಿಕೆಟ್: ನೇಪಾಳವನ್ನು 23 ರನ್ ಗಳಿಂದ ಮಣಿಸಿದ ಭಾರತ ಸೆಮಿಫೈನಲ್ ಗೆ
ಕಬಡ್ಡಿ: ಭಾರತ ಪುರುಷರ ತಂಡ ಬಾಂಗ್ಲಾದೇಶ ವಿರುದ್ಧ 55-18, ಮಹಿಳಾ ತಂಡ ದಕ್ಷಿಣ ಕೊರಿಯಾ ವಿರುದ್ಧ 56-23 ಅಂತರದಲ್ಲಿ ಜಯ ಸಾಧಿಸಿತು.
ಇದನ್ನೂ ಓದಿ : Asian Games 2023: ಸೆಮಿಯಲ್ಲಿ ಸೋತು ಕಂಚಿಗೆ ತೃಪ್ತಿಪಟ್ಟ ಪ್ರೀತಿ ಪವಾರ್
ಮಹಿಳಾ ಹಾಕಿ: ಹಾಂಕಾಂಗ್ ವಿರುದ್ಧ ಭಾರತಕ್ಕೆ 13-0 ಅಂತರದ ಗೆಲುವು
ಆರ್ಚರಿ (ಕಾಂಪೌಂಡ್): ಓಜಾಸ್ ಪ್ರವೀಣ್ ಡಿಯೋಟಾಲೆ ಮತ್ತು ಅಭಿಷೇಕ್ ಅಖಿಲ ಭಾರತ ಅಂತಿಮ ವೈಯಕ್ತಿಕ ಪುರುಷರ ಸ್ಪರ್ಧೆಯನ್ನು (ಅಕ್ಟೋಬರ್ 7 ರಂದು ಫೈನಲ್) ಸ್ಥಾಪಿಸಿದರು; ಮಹಿಳಾ ಫೈನಲ್‌ನಲ್ಲಿ ಜ್ಯೋತಿ ಸುರೇಖಾ ವೆನ್ನಮ್, ಕಂಚಿನ ಪದಕಕ್ಕಾಗಿ ಅದಿತಿ ಸೆಣಸಲಿದ್ದಾರೆ (ಇಬ್ಬರೂ ಅಕ್ಟೋಬರ್ 7 ರಂದು)
ಆರ್ಚರಿ (ರಿಕರ್ವ್): ಅತನು ದಾಸ್ ಮತ್ತು ಧೀರಜ್ ಬೊಮ್ಮದೇವರ ಕ್ವಾರ್ಟರ್ ಫೈನಲ್‌ನಲ್ಲಿ ನಿರ್ಗಮನ.
ಬ್ಯಾಡ್ಮಿಂಟನ್: ಪಿ.ವಿ.ಸಿಂಧು, ಎಚ್.ಎಸ್.ಪ್ರಣಯ್, ಕಿಡಂಬಿ ಶ್ರೀಕಾಂತ್ ಕ್ರಮವಾಗಿ ಮಹಿಳಾ ಮತ್ತು ಪುರುಷರ ಸಿಂಗಲ್ಸ್ನಲ್ಲಿ 16ನೇ ಸುತ್ತಿಗೆ ಪ್ರವೇಶಿಸಿದ್ದಾರೆ.
ಮಹಿಳೆಯರ 800 ಮೀಟರ್ ಓಟ: ಫೈನಲ್ಗೆ ಅರ್ಹತೆ ಪಡೆದ ಕುಮಾರಿ ಚಂದಾ ಮತ್ತು ಹರ್ಮಿಲನ್ ಬೈನ್ಸ್
ಪುರುಷರ 4*400 ಮೀಟರ್: ಫೈನಲ್ಸ್ ಅರ್ಹತೆ ಪಡೆದ ಭಾರತ
ಸ್ಕ್ವಾಷ್: ಪುರುಷರ ಸಿಂಗಲ್ಸ್ನಲ್ಲಿ ಸೌರವ್ ಘೋಷಾಲ್, ಮಿಶ್ರ ಡಬಲ್ಸ್ನಲ್ಲಿ ಅಭಯ್-ಅನಾಹತ್ ಮತ್ತು ದೀಪಿಕಾ-ಹರಿಂದರ್ಪಾಲ್ ಸೆಮಿಫೈನಲ್ ಪ್ರವೇಶಿಸಿದ್ದಾರೆ.
ಕ್ರಿಕೆಟ್
ICC World Cup 2023 : ಭಾರತ- ನೆದರ್ಲ್ಯಾಂಡ್ಸ್ ಅಭ್ಯಾಸ ಪಂದ್ಯವೂ ರದ್ದು
ಎರಡೂ ಅಭ್ಯಾಸ ಪಂದ್ಯಗಳು ಮಳೆಯಿಂದ ರದ್ದಾಗಿರುವ ಕಾರಣ ವಿಶ್ವ ಕಪ್ನಲ್ಲಿ (ICC World Cup 2023) ಭಾರತ ತಂಡ ನೇರವಾಗಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ.
ತಿರುವನಂತಪುರ : ನೆದರ್ಲ್ಯಾಂಡ್ಸ್ ವಿರುದ್ಧದ ಭಾರತ ತಂಡದ ವಿಶ್ವ ಕಪ್ (ICC World Cup 2023) ಅಭ್ಯಾಸ ಪಂದ್ಯವೂ ರದ್ದಾಗಿದೆ. ಗುವಾಹಟಿಯಲ್ಲಿ ನಿಗದಿಯಾಗಿದ್ದ ಇಂಗ್ಲೆಂಡ್ ವಿರುದ್ಧದ ಮೊದಲ ಪಂದ್ಯವೂ ಮಳೆಯ ಕಾರಣಕ್ಕೆ ರದ್ದಾಗಿತ್ತು. ಆ ಪಂದ್ಯ ಗುವಾಹಟಿಯಲ್ಲಿ ಆಯೋಜನೆಗೊಂಡಿತ್ತು. ಹೀಗಾಗಿ ಯಾವುದೇ ಅಭ್ಯಾಸ ಪಂದ್ಯಗಳು ಇಲ್ಲದೆ ಭಾರತ ತಂಡ ನೇರವಾಗಿ ವಿಶ್ವ ಕಪ್ ಆಡಲಿದೆ. ಬಲಿಷ್ಠ ಆಸ್ಟ್ರೇಲಿಯಾ ತಂಡದ ವಿರುದ್ಧ ತನ್ನ ವಿಶ್ವ ಕಪ್ ಅಭಿಯಾನ ಆರಂಭಿಸಲಿದೆ. ಅಕ್ಟೋಬರ್ 8ರಂದು ಚೆನ್ನೈನ ಚೆಪಾಕ್ ಸ್ಟೇಡಿಯಮ್ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯ ಆಯೋಜನೆಗೊಂಡಿದೆ.
ಅಕ್ಟೋಬರ್ 5 ರಿಂದ ಪ್ರಾರಂಭವಾಗಲಿರುವ ವಿಶ್ವಕಪ್ 2023 ಕ್ಕೆ ಮುಂಚಿತವಾಗಿ ಭಾರತ ಮತ್ತು ನೆದರ್ಲ್ಯಾಂಡ್ಸ್ ಇಂದು ತಮ್ಮ ಅಂತಿಮ ಅಭ್ಯಾಸ ಪಂದ್ಯದಲ್ಲಿ ಮುಖಾಮುಖಿಯಾಗಬೇಕಾಗಿತ್ತು.. ಇಂಗ್ಲೆಂಡ್ ವಿರುದ್ಧದ ಭಾರತದ ಹಿಂದಿನ ಅಭ್ಯಾಸ ಪಂದ್ಯಗಳು ಒಂದು ಎಸೆತವೂ ನಡೆಯದೇ ರದ್ದಾಗಿದ್ದವು. ಮತ್ತೊಂದೆಡೆ, ಆಸ್ಟ್ರೇಲಿಯಾ ವಿರುದ್ಧದ ನೆದರ್ಲ್ಯಾಂಡ್ಸ್ ಪಂದ್ಯವು ಯಾವುದೇ ಫಲಿತಾಂಶವಿಲ್ಲದೆ ಕೊನೆಗೊಂಡಿತ್ತು. ಆ ಪಂದ್ಯದಲ್ಲಿ ನೆದರ್ಲ್ಯಾಂಡ್ ಬೌಲರ್ಗಳು ಉತ್ತಮ ಪ್ರದರ್ಶನ ನೀಡಿ ಆಸ್ಟ್ರೇಲಿಯಾ ತಂಡವನ್ನು 23 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 188 ರನ್ಗಳಿಗೆ ನಿಯಂತ್ರಿಸಿತ್ತು,
UPDATE: The warm-up match between India & Netherlands is abandoned due to persistent rain. #TeamIndia | #CWC23 https://t.co/rbLo0WHrVJ pic.twitter.com/0y4Ey1Dvye
— BCCI (@BCCI) October 3, 2023
ಇದೀಗ ನೆದಲ್ಯಾಂಡ್ಸ್ ತಂಡದ ಮತ್ತೊಂದು ಪಂದ್ಯವೂ ಫಲಿತಾಂಶವೇ ಇಲ್ಲದೆ ರದ್ದಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕನಿಷ್ಠ ಬೌಲಿಂಗ್ ಮಾಡುವ ಅವಕಾಶವಾದರೂ ಆ ತಂಡಕ್ಕೆ ಸಿಕ್ಕಿತ್ತು. ಆದರೆ, ಭಾರತ ವಿರುದ್ಧ ಒಂದೇ ಒಂದು ಎಸೆತ ಮಾಡಲು ಅವಕಾಶ ಸಿಗಲಿಲ್ಲ.
ಪ್ರಯಾಣದ ಸುಸ್ತು
ಸ್ಥಳೀಯ ಅನುಕೂಲಗಳನ್ನು ಬಳಸಿಕೊಂಡು ಭಾರತ ತಂಡ ವಿಶ್ವ ಕಪ್ ಗೆಲ್ಲುತ್ತದೆ ಎಂದು ವಿಶ್ಲೇಷಣೆ ಮಾಡಲಾಗಿದೆ. ಅದಕ್ಕೆ ಪೂರವಕಾಗಿ ಭಾರತ ತಂಡವೂ ಅತ್ಯಂತ ಉಮೇದಿನಲ್ಲಿದೆ. ಹೀಗಾಗಿ ವಿಶ್ವ ಕಪ್ಗೆ ಮೊದಲು ಅಭ್ಯಾಸ ಪಂದ್ಯದಲ್ಲಿ ಆಡುವುದು ಈ ತಂಡಕ್ಕೆ ಅನಿವಾರ್ಯವಾಗಿತ್ತು. ಆದರೆ, ತಂಡಕ್ಕೆ ಎರಡೂ ಅಭ್ಯಾಸ ಪಂದ್ಯಗಳು ದೊರಕಿಲ್ಲ.
ಭಾರತ ತಂಡದ ಪಂದ್ಯಗಳು ಭಾರತದ 10 ಪ್ರದೇಶಗಳಲ್ಲಿ ನಡೆಯಲಿದೆ. ಹೀಗಾಗಿ ತಂಡವು ಒಂದೂವರೆ ತಿಂಗಳ ಅವಧಿಯಲ್ಲಿ ಸುಮಾರು ಸಾವಿರಾರು ಕಿಲೋ ಮೀಟರ್ ಪ್ರಯಾಣ ಮಾಡಬೇಕಾಗಿದೆ. ಹೀಗಾಗಿ ಅಭ್ಯಾಸ ಪಂದ್ಯದ ಪ್ರಯಾಣ ತಂಡಕ್ಕೆ ಹೊರೆಯೆನಿಸಬಹುದು. ಮೂರು ದಿನಗಳ ಹಿಂದೆ 15 ಆಟಗಾರರು ನೇರವಾಗಿ ಗುವಾಹಟಿಗೆ ಹೋಗಿತ್ತು. ಆದರೆ ಆ ಪ್ರಯಾಣದಿಂದ ತಂಡಕ್ಕೆ ಏನೂ ಲಾಭವಾಗಿರಲಿಲ್ಲ. ಮಳೆಯಿಂದಾಗಿ ಆಟ ರದ್ದಾಗಿತ್ತು. ಅಲ್ಲಿಂದ 2604 ಕಿಲೋ ಮೀಟರ್ ಪ್ರಯಾಣಿಸಿ ತಿರುವನಂತಪುರಕ್ಕೆ ಬಂದಿದ್ದ ಭಾರತ ತಂಡ ಇಲ್ಲಿಯೂ ನೆಟ್ ಪ್ರಾಕ್ಟೀಸ್ ಮಾಡಿದ್ದಷ್ಟೇ ಬಂತು. ಪಂದ್ಯ ನಡೆಯದ ಕಾರಣ ಹೆಚ್ಚಿನ ಪ್ರಯೋಜನ ದೊರಕಿಲ್ಲ.
ತಂಡಗಳು
ಭಾರತ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್ (ವಿಕೆ), ಸೂರ್ಯಕುಮಾರ್ ಯಾದವ್.
ನೆದರ್ಲ್ಯಾಂಡ್ಸ್: ಸ್ಕಾಟ್ ಎಡ್ವರ್ಡ್ಸ್ (ಸಿ & ವಿಕೆ), ಮ್ಯಾಕ್ಸ್ ಒ’ಡೌಡ್, ಬಾಸ್ ಡಿ ಲೀಡ್, ವಿಕ್ರಮ್ಜಿತ್ ಸಿಂಗ್, ತೇಜಾ ನಿಡಮನೂರು, ಪಾಲ್ ವ್ಯಾನ್ ಮೀಕೆರೆನ್, ಕಾಲಿನ್ ಆಕರ್ಮ್ಯಾನ್, ರೋಲೊಫ್ ವ್ಯಾನ್ ಡೆರ್ ಮೆರ್ವೆ, ಲೋಗನ್ ವ್ಯಾನ್ ಬೀಕ್, ಆರ್ಯನ್ ದತ್, ರಿಯಾನ್ ಕ್ಲೈನ್, ವೆಸ್ಲಿ ಬಾರೆಸಿ, ಸಾಕಿಬ್ ಜುಲ್ಫಿಕರ್, ಶರೀಜ್ ಅಹ್ಮದ್, ಸಿಬ್ರಾಂಡ್ ಎಂಗೆಲ್ಬ್ರೆಕ್ಟ್.
ಕ್ರಿಕೆಟ್
ICC World Cup 2023: ವಿಶ್ವಕಪ್ ಫೈಟ್‌ಗೆ ಪಾಕ್ ಸಜ್ಜು; ತಂಡದ ಬಲ-ದೌರ್ಬಲ್ಯಗಳೇನು? ಇಲ್ಲಿದೆ ವಿವರಣೆ
ICC World Cup 2023: ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ತಂಡವು ಭಾರತಕ್ಕೆ ಬಂದಿಳಿದಿದ್ದು, ಭರ್ಜರಿ ಸ್ವಾಗತ ದೊರೆತಿದೆ. ವಿಶ್ವಕಪ್‌ಗೆ ಪಾಕ್ ತಂಡ ಹೇಗೆ ಸಿದ್ಧವಾಗಿದೆ? ತಂಡದ ಪ್ಲಸ್ ಹಾಗೂ ಮೈನಸ್ ಏನು ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.
ಬೆಂಗಳೂರು: 2019ರ ಏಕದಿನ ವಿಶ್ವಕಪ್‌ನಲ್ಲಿ ಸೆಮಿಫೈನಲ್ ತಲುಪುವಲ್ಲಿಯೂ ವಿಫಲ. 2021 ಹಾಗೂ 2022ರಲ್ಲಿ ನಡೆದ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಹಿನ್ನಡೆ. 2022ರ ಏಷ್ಯಾಕಪ್ ಫೈನಲ್‌ನಲ್ಲಿ ಸೋಲು. 2023ರ ಏಷ್ಯಾಕಪ್‌ನಲ್ಲೂ ಫೈನಲ್ ತಲುಪುವಲ್ಲಿ ವಿಫಲ. ಅತ್ಯುತ್ತಮ ತಂಡವನ್ನೇ ಹೊಂದಿದ್ದರೂ ಪಾಕಿಸ್ತಾನ ಕ್ರಿಕೆಟ್ ತಂಡವು ಹೀಗೆ ಸಾಲು ಸಾಲು ವಿಶ್ವ ಕ್ರಿಕೆಟ್ ಟೂರ್ನಿಗಳಲ್ಲಿ ಸೋಲನುಭವಿಸಿದೆ. ಆದರೆ, ಈ ಸೋಲನ್ನು ಮರೆತು, ಗೆಲುವಿನ ಸಂಭ್ರಮ ಆಚರಿಸುವ ಮನೋಭಾವದೊಂದಿಗೆ ಪಾಕ್ ಕ್ರಿಕೆಟ್ ತಂಡವು ಭಾರತಕ್ಕೆ ಆಗಮಿಸಿದೆ. ಹಾಗಾದರೆ, 2023ರ ವಿಶ್ವಕಪ್‌ಗೆ ಪಾಕ್ ಕ್ರಿಕೆಟ್ ತಂಡ ಹೇಗೆ ಸಿದ್ಧವಾಗಿದೆ? ಅದರ ಬಲಾಬಲವೇನು ಎಂಬುದರ ಇಣುಕು ನೋಟ ಇಲ್ಲಿದೆ.
ಪಾಕಿಸ್ತಾನದ 15 ಸದಸ್ಯರ ತಂಡ
ಬಾಬರ್ ಅಜಂ (ನಾಯಕ), ಶದಾಬ್ ಖಾನ್ (ಉಪ ನಾಯಕ), ಫಖರ್ ಜಮಾನ್, ಇಮಾಮ್ ಉಲ್ ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್, ಇಫ್ತಿಕಾರ್ ಅಹ್ಮದ್, ಅಘಾ ಸಲ್ಮಾನ್, ಸೌದ್ ಶಕೀಲ್, ಮೊಹಮ್ಮದ್ ನವಾಜ್, ಶಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ಹಸನ್ ಅಲಿ, ಉಸಾಮ ಮಿರ್, ಮೊಹಮ್ಮದ್ ವಸೀಂ.
ಬಾಬರ್ ಅಜಂ ಬಳಗದ ಸಾಮರ್ಥ್ಯವೇನು?
- ಬಲಿಷ್ಠ ಬ್ಯಾಟಿಂಗ್ ಲೈನ್‌ಅಪ್ ಹೊಂದಿರುವುದು ಪಾಕ್ ತಂಡದ ಸಾಮರ್ಥ್ಯ. ಬಾಬರ್ ಅಜಂ, ಫಖರ್ ಜಮಾನ್, ಇಮಾಮ್ ಉಲ್ ಹಕ್, ಮೊಹಮ್ಮದ್ ರಿಜ್ವಾನ್, ಇಫ್ತಿಕಾರ್ ಅಹ್ಮದ್ ಅವರು ವಿಶ್ವ ದರ್ಜೆಯ ಬ್ಯಾಟ್ಸ್‌ಮನ್‌ಗಳಾಗಿದ್ದಾರೆ. ಇವರು ಯಾವುದೇ ಪಂದ್ಯದ ಗತಿ ಬದಲಿಸುವ ಸಾಮರ್ಥ್ಯ ಹೊಂದಿದ್ದಾರೆ.
- ಪಾಕಿಸ್ತಾನದ ವೇಗದ ಬೌಲಿಂಗ್ ಅಟ್ಯಾಕ್‌ಗೆ ಜಗತ್ತಿನ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳೇ ಒಂದು ಕ್ಷಣ ಯೋಚಿಸುತ್ತಾರೆ. ಶಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ಮೊಹಮ್ಮದ್ ವಸೀಂ ಪ್ರಮುಖ ಪೇಸರ್‌ಗಳಾಗಿದ್ದಾರೆ.
- ಬ್ಯಾಟಿಂಗ್ ಹಾಗೂ ಬೌಲಿಂಗ್ ಜತೆಗೆ ಫೀಲ್ಡಿಂಗ್‌ನಲ್ಲೂ ಪಾಕಿಸ್ತಾನ ತಂಡವು ಬಲಿಷ್ಠವಾಗಿದೆ. ಜಗತ್ತಿನಲ್ಲೇ ಉತ್ತಮ ಫೀಲ್ಡರ್‌ಗಳಿರುವ ರಾಷ್ಟ್ರದಲ್ಲಿ ಪಾಕ್ 2ನೇ ಸ್ಥಾನದಲ್ಲಿರುವುದೇ ಇದಕ್ಕೆ ಸಾಕ್ಷಿಯಾಗಿದೆ. ಹಾಗಾಗಿ, ಪ್ರತಿ ಪಂದ್ಯದಲ್ಲಿ ಪಾಕ್ ತಂಡವು 20-30 ರನ್ ಉಳಿಸುವುದರಲ್ಲಿ ಎರಡು ಮಾತಿಲ್ಲ.
- ಬಾಬರ್ ಅಜಂ ಉತ್ತಮ ನಾಯಕತ್ವ ಹಾಗೂ ಅವರ ಅತ್ಯದ್ಭುತ ಬ್ಯಾಟಿಂಗ್ ಕೂಡ ಪಾಕ್‌ಗೆ ಸಕಾರಾತ್ಮಕವಾಗಿದೆ. ಮಹತ್ವದ ಟೂರ್ನಿಗಳಲ್ಲಿ ಇದು ಸಾಬೀತಾಗಿದೆ.
ಪಾಕ್ ತಂಡದ ದೌರ್ಬಲ್ಯಗಳೇನು?
- ಸ್ಪಿನ್ ವಿಭಾಗವೇ ಪಾಕ್ ಕ್ರಿಕೆಟ್ ತಂಡದ ದೊಡ್ಡ ತಲೆನೋವಾಗಿದೆ. ಉಪ ನಾಯಕ ಶದಾಬ್ ಖಾನ್ ಅವರು ಅಲ್‌ರೌಂಡರ್ ಆಗದ್ದರೂ ಏಷ್ಯಾ ಕಪ್ ಟೂರ್ನಿಯಲ್ಲ ಅವರ ಆಟ ನಡೆದಿರಲಿಲ್ಲ. ಸ್ಪಿನ್ನರ್‌ಗಳಿಗೆ ಭಾರತದ ಪಿಚ್‌ಗಳು ಹೇಳಿ ಮಾಡಿಸಿದಂತಿರುವ ಕಾರಣ ಸ್ಪಿನ್ ವಿಭಾಗವು ಪಾಕ್‌ಗೆ ತಲೆನೋವಾಗಿದೆ.
- ಏಷ್ಯಾ ಕಪ್ ಟೂರ್ನಿಯಲ್ಲಿ ಭಾರತದ ವಿರುದ್ಧ ನಡೆದ ಪಂದ್ಯದ ವೇಳೆ ಗಾಯಗೊಂಡಿರುವ ನಸೀಮ್ ಶಾ ಅನುಪಸ್ಥಿತಿಯೂ ಪಾಕ್‌ಗೆ ಕಾಡಲಿದೆ. ಇವರ ಜಾಗಕ್ಕೆ ಅಷ್ಟೇನೂ ಫಾರ್ಮ್‌ನಲ್ಲಿರುವ ಹಸನ್ ಅಲಿಗೆ ಪಾಕ್ ಮಣೆ ಹಾಕಿದೆ. ಆದರೂ, ವೇಗಿ ನಸೀಮ್ ಶಾ ಅಲಭ್ಯತೆಯು ಪಾಕಿಸ್ತಾನಕ್ಕೆ ಕಾಡಲಿದೆ.
- ಇತ್ತೀಚಿನ ಸರಣಿಗಳಲ್ಲಿ ಮೊಹಮ್ಮದ್ ರಿಜ್ವಾನ್ ಹಾಗೂ ಸಲ್ಮಾನ್ ಅಲಿ ಅಘಾ ಅವರಿಂದ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ಕಾಣದಿರುವುದು ಬಾಬರ್ ಅಜಂ ಅವರಿಗೆ ನುಂಗಲಾರದ ತುತ್ತಾಗಿದೆ. ಪ್ರಮುಖ ಪಂದ್ಯಗಳಲ್ಲಿಯೇ ಇವರು ಕೈಕೊಡುವುದು ಕೂಡ ಹೆಚ್ಚು ರೂಢಿಯಾಗಿದೆ.
- ಅಗ್ರ ಕ್ರಮಾಂಕದ ಸದೃಢ ಬ್ಯಾಟಿಂಗ್ ಪಾಕಿಸ್ತಾನದ ಬಲವಾದರೆ, ಇದೇ ದೌರ್ಬಲ್ಯವೂ ಆಗಿದೆ. ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಔಟಾದರೆ ಸಾಕು, ಪಾಕ್ ಇನಿಂಗ್ಸ್ ಮುಗಿದಂತೆಯೇ ಎಂಬಂತಾಗಿದೆ. ಅದರಲ್ಲೂ, ದೀರ್ಘ ಸಮಯದ ನಂತರ ಭಾರತದ ಪಿಚ್‌ಗಳಲ್ಲಿ ಆಡುತ್ತಿದ್ದು, ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ.
ಇದನ್ನೂ ಓದಿ: ICC World Cup 2023 : ವಿಶ್ವ ಕಪ್ಗೆ ಆಡುವ ಭಾರತ ತಂಡದ ಬಲಾಬಲವೇನು? ಗೆಲುವಿನ ಅವಕಾಶ ಎಷ್ಟಿದೆ?
ಪಾಕ್‌ಗೆ ಇರುವ ಒಳ್ಳೆಯ ಅವಕಾಶಗಳೇನು?
ಪಾಕಿಸ್ತಾನ ತಂಡವು ಕಳೆದ 12 ತಿಂಗಳಿಂದ ಸತತವಾಗಿ ಉತ್ತಮ ಪ್ರದರ್ಶನ ತೋರಿದೆ. ವಿಶ್ವ ಏಕದಿನ ರ‍್ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನದಲ್ಲಿರುವ ಪಾಕ್ ತಂಡವು ಏಕದಿನ ಕ್ರಿಕೆಟ್‌ನ ಅತ್ಯುತ್ತಮ ತಂಡ ಎನಿಸಿದೆ. ಬಾಬರ್ ಅಜಂ ನಾಯಕತ್ವವೂ ಉತ್ತಮವಾಗಿದೆ. ಕಳೆದ 27 ವರ್ಷಗಳಿಂದ ಪಾಕಿಸ್ತಾನ ಏಕದಿನ ವಿಶ್ವಕಪ್ ಗೆದ್ದಿಲ್ಲ. ಬಲಿಷ್ಠ ತಂಡ, ಉತ್ತಮ ನಾಯಕತ್ವ, ಏಷ್ಯಾದಲ್ಲಿಯೇ ಪಂದ್ಯ ಆಯೋಜನೆಗೊಂಡಿರುವ ಕಾರಣ ವಿಶ್ವಕಪ್ ಗೆಲ್ಲಲು ಪಾಕ್‌ಗೆ ಒಳ್ಳೆಯ ಅವಕಾಶಗಳಿವೆ.
ಹೀಗಿದೆ ಪಾಕ್ ತಂಡದ ವೇಳಾಪಟ್ಟಿ
ಅಕ್ಟೋಬರ್ 5ರಿಂದ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿ ಆರಂಭವಾಗಲಿದೆ. ಪಾಕಿಸ್ತಾನವು ಮೊದಲ ಪಂದ್ಯವನ್ನು ಅಕ್ಟೋಬರ್ 6ರಂದು ನೆದರ್ಲೆಂಡ್ಸ್ ವಿರುದ್ಧ ಆಡಲಿದೆ. ಅ.10ರಂದು ಶ್ರೀಲಂಕಾ, ಅ.14ರಂದು ಭಾರತ, ಅ.20 ಆಸ್ಟ್ರೇಲಿಯಾ, ಅ.23 ಅಫಘಾನಿಸ್ತಾನ, ಅ.26 ದಕ್ಷಿಣ ಆಫ್ರಿಕಾ, ಅ.31 ಬಾಂಗ್ಲಾದೇಶ, ನವೆಂಬರ್ 4 ನ್ಯೂಜಿಲ್ಯಾಂಡ್ ಹಾಗೂ ನವೆಂಬರ್ 11ರಂದು ಇಂಗ್ಲೆಂಡ್ ವಿರುದ್ಧ ಆಡಲಿದೆ. ಅದರಲ್ಲೂ, ಅಹ್ಮದಾಬಾದ್‌ನಲ್ಲಿ ನಡೆಯುವ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯವು ತೀವ್ರ ಕುತೂಹಲ ಕೆರಳಿಸಿದೆ.
ವಿಶ್ವಕಪ್ ಕುರಿತ ಇನ್ನಷ್ಟು ಆಸಕ್ತಿದಾಯಕ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
-
ದೇಶ19 hours ago
Viral Video: ಫ್ರಿಡ್ಜ್ ಡೋರ್ ತೆಗೆಯಲು ಹೋದ 4 ವರ್ಷದ ಬಾಲಕಿಗೆ ಕರೆಂಟ್ ಶಾಕ್, ಸ್ಥಳದಲ್ಲೇ ಸಾವು
-
ಪ್ರಮುಖ ಸುದ್ದಿ14 hours ago
Dina Bhavishya : ಈ ರಾಶಿಯವರಿಗೆ ಮಾತೇ ಮುತ್ತು, ಮಾತೇ ಮೃತ್ಯು!
-
ಟಾಪ್ 10 ನ್ಯೂಸ್21 hours ago
VISTARA TOP 10 NEWS : ನಮಗೆ ರಕ್ಷಣೆ ಇಲ್ಲವೇ ಎಂದ ಹಿಂದೂಗಳು, ಸಿದ್ದರಾಮಯ್ಯ ವಿರುದ್ಧ ಮತ್ತೆ ಗುಡುಗಿದ ಶಾಮನೂರು ಇತರ ದಿನದ ಪ್ರಮುಖ ಸುದ್ದಿಗಳು
-
ದೇಶ23 hours ago
Plane Crash: ಜಿಂಬಾಬ್ವೆಯಲ್ಲಿ ವಿಮಾನ ಪತನ, ಭಾರತದ ಉದ್ಯಮಿ ಹಾಗೂ ಅವರ ಪುತ್ರ ದುರ್ಮರಣ
-
ದೇಶ21 hours ago
K Annamalai: ಲೇಡಿ ರಿಪೋರ್ಟರ್ ಜತೆ ಅಣ್ಣಾಮಲೈ ಕಿರಿಕ್! ಆಕೆ ಕೇಳಿದ ಪ್ರಶ್ನೆಗೆ ರೇಗಿದ ಬಿಜೆಪಿ ನಾಯಕ
-
ಕ್ರಿಕೆಟ್22 hours ago
ICC World Cup 2023 : ಭಾರತದ ಮಾಜಿ ಆಟಗಾರ ಅಫಘಾನಿಸ್ತಾನ ತಂಡದ ಮೆಂಟರ್
-
ದೇಶ10 hours ago
Raid On NewsClick: ನ್ಯೂಸ್ಕ್ಲಿಕ್ನ 30 ಪತ್ರಕರ್ತರ ಮನೆಗಳ ಮೇಲೆ ಪೊಲೀಸರ ದಾಳಿ, ಏನಿದು ಕೇಸ್?
-
ಕ್ರೈಂ11 hours ago
4 ವರ್ಷದಿಂದ ಇಬ್ಬರು ಪುತ್ರಿಯರ ಮೇಲೆಯೇ ಅತ್ಯಾಚಾರ ಎಸಗಿದ ಪಾಪಿಯ ಬಂಧನ; ಇವನೆಂಥಾ ತಂದೆ?