Site icon Vistara News

Wrestlers Protest: ಮತ್ತೆ ಪ್ರತಿಭಟನೆಗೆ ಮುಂದಾದ ಕುಸ್ತಿ ಪಟುಗಳು

Wrestlers Protest: Wrestlers protested again

ನವದೆಹಲಿ: ಲೈಂಗಿಕ ಕಿರುಕುಳ ಆರೋಪ(Sexual harassment allegations) ಎದುರಿಸುತ್ತಿರುವ ಭಾರತದ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‍ಐ) ಅಧ್ಯಕ್ಷ ಬ್ರಿಜ್​ ಭೂಷಣ್ ಶರಣ್ ಸಿಂಗ್(Brij Bhushan Sharan Singh)​ ಅವರಿಗೆ ಕ್ಲೀನ್‌ಚಿಟ್ ಸಿಗುವ ಸಾಧ್ಯತೆ ಇದೆ ಎಂದು ತಿಳಿದು ಬಂದ ಕಾರಣ, ಇದೀಗ ಮತ್ತೆ ಕುಸ್ತಿ ಪಟುಗಳು ಪ್ರತಿಭಟನೆ(Wrestlers Protest) ನಡೆಸುವ ನಿರ್ಧಾರ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.

ಕೆಲ ದಿನಗಳ ಹಿಂದೆ ಬ್ರಿಜ್​ ಭೂಷಣ್ ಶರಣ್ ಸಿಂಗ್​ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿದೆ. ಕುಸ್ತಿಪಟುಗಳು ಮಾಡಿದ ಆರೋಪಗಳಿಗೆ ಯಾವುದೇ ಸಾಕ್ಷ್ಯಾಧಾರ ನೀಡಿಲ್ಲ. ಜತೆಗೆ ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ ನೀಡಿರುವುದು ಸಹ ಕಂಡು ಬಂದಿದೆ. ಇದೇ ಕಾರಣಕ್ಕೆ ಬ್ರಿಜ್​ ಭೂಷಣ್ ಶರಣ್ ಸಿಂಗ್​ ಅವರಿಗೆ ಕ್ಲೀನ್‌ಚಿಟ್ ಸಿಗಲಿದೆ ಎಂದು ವರದಿಯಾಗಿತ್ತು. ಇದರ ಬೆನ್ನಲ್ಲೇ ಇದೀಗ ಈ ಹಿಂದೆ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದ ಕಾಮನ್‌ವೆಲ್ತ್ ಗೇಮ್ಸ್ ಹಾಗೂ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ವಿನೇಶ್ ಪೋಗಟ್, ಒಲಿಂಪಿಕ್ ಪದಕ ವಿಜೇತರಾದ ಭಜರಂಗ್ ಪೂನಿಯಾ, ಸಾಕ್ಷಿ ಮಲಿಕ್, ರವಿ ದಹಿಯಾ ಸೇರಿದಂತೆ ಪ್ರಮುಖ ಕುಸ್ತಿಪಟುಗಳು ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.

ಏನಿದು ಪ್ರಕರಣ

ವಿನೇಶ್ ಪೋಗಟ್ ಅವರು ರಾಷ್ಟ್ರೀಯ ತರಬೇತುದಾರರು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡುತ್ತಿದ್ದಾರೆ ಹಾಗೂ ಭಾರತೀಯ ಕುಸ್ತಿ ಫೆಡರೇಶನ್ ಅಧಿಕಾರಿಗಳು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಅಧ್ಯಕ್ಷರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದರು. ಇದೇ ವಿಚಾರವಾಗಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ಭಜರಂಗ್ ಪೂನಿಯಾ, ಸಾಕ್ಷಿ ಮಲಿಕ್, ರವಿ ದಹಿಯಾ ಸೇರಿದಂತೆ ಪ್ರಮುಖ ಕುಸ್ತಿಪಟುಗಳು ಮೂರು ದಿನಗಳ ಕಾಲ ಬೃಹತ್​ ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ Wrestling India: ಈಜಿಪ್ಟ್ ಕುಸ್ತಿ ಟೂರ್ನಿಯಿಂದ ಹಿಂದೆ ಸರಿದ ಭಾರತದ ಪ್ರಮುಖ ಕುಸ್ತಿ ಪಟುಗಳು

ಕುಸ್ತಿಪಟುಗಳ ಆರೋಪದ ಬಗ್ಗೆ ತನಿಖೆ ನಡೆಸಲು ಕೇಂದ್ರ ಕ್ರೀಡಾ ಸಚಿವಾಲಯವು ಮಹಿಳಾ ಬಾಕ್ಸರ್‌ ಎಂ.ಸಿ.ಮೇರಿ ಕೋಮ್‌ ನೇತೃತ್ವದ ಐವರು ಸದಸ್ಯರ ಸಮಿತಿಯನ್ನು ಮಾಡಿತ್ತು. ಇದಾದ ಬಳಿಕ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ಹಿಂದೆಗೆದುಕೊಂಡಿದ್ದರು. ಆದರೆ ಕೆಲ ದಿನಗಳ ಬಳಿಕ ಈ ತನಿಖಾ ಸಮಿತಿಯ ಮೇಲೆ ನಮಗೆ ಯಾವುದೇ ನಂಬಿಕೆ ಇಲ್ಲ ಎಂದು ಮತ್ತೆ ಕುಸ್ತಿಪಟುಗಳು ಪಟ್ಟುಹಿಡಿದಿದ್ದರು. ಬಳಿಕ ಕುಸ್ತಿಪಟುಗಳ ಒತ್ತಾಯದ ಮೇರೆಗೆ ಬಬಿತಾ ಪೋಗಾಟ್‌ ಅವರನ್ನು ಸಮಿತಿಗೆ ಸೇರ್ಪಡೆಗೊಳಿಸಿ 2 ವಾರ ಹೆಚ್ಚುವರಿ ಸಮಯ ನೀಡಿತ್ತು. ಆದರೂ ಕೂಡ ಕುಸ್ತಿ ಪಟುಗಳು ಈ ತನಿಖಾ ಸಮಿತಿಯಲ್ಲಿ ನಂಬಿಕೆ ಇಲ್ಲ ಎಂದು ಬಹಿರಂಗ ಹೇಳಿಕೆ ನೀಡಿದ್ದರು. ಇದಕ್ಕೆ ಕ್ರೀಡಾ ಸಚಿವಾಲಯ ಬೇಸರ ಕೂಡ ವ್ಯಕ್ತಪಡಿಸಿತ್ತು. ಇದೀಗ ಬ್ರಿಜ್​ ಭೂಷಣ್ ಶರಣ್ ಸಿಂಗ್​ ಅವರಿಗೆ ಕ್ಲೀನ್​ ಚೀಟ್​ ಸಿಗದಲಿದೆ ಎಂದು ತಿಳಿದು ಬಂದ ಬೆನ್ನಲ್ಲೇ ಮತ್ತೆ ಜಂತರ್​ ಮಂತರ್​ನಲ್ಲಿ ಪ್ರತಿಭಟನೆ ನಡೆಸಲು ಕುಸ್ತಿಪಟುಗಳು ಮುಂದಾಗಿದ್ದಾರೆ.

Exit mobile version