ನವದೆಹಲಿ: ನಿಗದಿತ ಸಮಯಕ್ಕೆ ಚುನಾವಣೆಗಳನ್ನು ನಡೆಸಲುವಲ್ಲಿ ವಿಫಲವಾದ ಕಾರಣ ಭಾರತದ ಕುಸ್ತಿ ಫೆಡರೇಶನ್(WFI) ವಿರುದ್ಧ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್(UWW) ಕಠಿಣ ಕ್ರಮವನ್ನು ಕೈಗೊಂಡಿದ್ದು, ಸದಸ್ಯತ್ವವನ್ನು ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸುವ(Wrestling Federation of India membership suspended) ನಿರ್ಧಾರವನ್ನು ತೆಗೆದುಕೊಂಡಿದೆ.
ನಿಗದಿತ ಸಮಯಕ್ಕೆ ಚುನಾವಣೆಗಳನ್ನು ನಡೆಸಲುವಲ್ಲಿ ಭಾರತದ ಕುಸ್ತಿ ಫೆಡರೇಶನ್(Wrestling Federation of India) ವಿಫಲವಾಗಿತ್ತು. ಹಲವು ಬಾರಿ ಚುನಾವಣೆಗೆ ದಿನಾಂಕ ನಿಗಧಿ ಮಾಡಿದರೂ ಒಂದಲ್ಲ ಒಂದು ಸಮಸ್ಯೆಯಿಂದ ಚುನಾವಣೆ ಮುಂದೂಡಿಕೆಯಾಗುತ್ತಲೇ ಇತ್ತು. ಹೀಗಾಗಿ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್(United World Wrestling) ಈ ಕ್ರಮವನ್ನು ಕೈಗೊಂಡಿದೆ.
ಲೈಂಗಿಕ ಕಿರುಕುಳದ ಆರೋಪ ಹೊತ್ತು ಬಿಜೆಪಿ ಸಂಸದ ಬ್ರಿಜ್ಭೂಷಣ್ ಶರಣ್ ಸಿಂಗ್(Brij Bhushan Sharan Singh) ಅವರು ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಬಳಿಕ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಮೇ 30 ರಂದು ಭಾರತೀಯ ಕುಸ್ತಿ ಫೆಡರೇಶನ್ಗೆ ಪತ್ರ ಬರೆದು ಮುಂದಿನ 45 ದಿನಗಳಲ್ಲಿ ಅದಂರೆ ಜುಲೈ 15 ರೊಳಗೆ ಚುನಾವಣೆ ನಡೆಸಬೇಕು ಇಲ್ಲವಾದಲ್ಲಿ ಸದಸ್ಯತ್ವವನ್ನು ರದ್ದುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿತ್ತು. ಇದಕ್ಕೆ ಭಾರತೀಯ ಕುಸ್ತಿ ಒಕ್ಕೂಟ ಕೂಡ ಒಪ್ಪಿಗೆ ಸೂಚಿಸಿತ್ತು.
ಒಟ್ಟಾರೆ ಮೂರು ಬಾರಿ ಮುಂದೂಡಿಕೆ
ಈ ಹಿಂದೆ ಕುಸ್ತಿ ಒಕ್ಕೂಟದ ಅಧ್ಯಕ್ಷರಾಗಿದ್ದ ಬಿಜೆಪಿ ಸಂದಸರೂ ಆಗಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್(Brij Bhushan Sharan Singh) ಅವರ ವಿರುದ್ಧ ಒಲಿಂಪಿಕ್ ಪದಕ ವಿಜೇತರಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್, ಮತ್ತು ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಟ್ ಸೇರಿದಂತೆ ಆರು ಅಗ್ರ ಕುಸ್ತಿಪಟುಗಳು ಲೈಂಗಿಕ ಕಿರುಕುಳ ಆರೋಪ ಹೊರಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ಸರಿ ಸುಮಾರು 2 ತಿಂಗಳುಕಾಲ ಪ್ರತಿಭಟನೆ ನಡೆಸಿದ್ದರು. ಈ ಕಾರಣದಿಂದ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಇದಾದ ಬಳಿಕ ನೂತನ ಸಮಿತಿಗೆ ಚುನಾವಣೆ ನಡೆಸಲು ನಿರ್ಧರಿಸಲಾಗಿತ್ತು.
ಮೊದಲ ಬಾರಿಗೆ ಜುಲೈ 6ಕ್ಕೆ ಈ ಚುನಾವಣೆಗೆ ದಿನ ನಿಗದಿ ಪಡಿಸಲಾಗಿತ್ತು. ಆದರೆ ಡಬ್ಲ್ಯುಎಫ್ಐಯಿಂದ ಮಾನ್ಯತೆ ಕಳೆದುಕೊಂಡ 5 ರಾಜ್ಯಗಳ ಘಟಕಗಳು ಮತದಾನದ ಹಕ್ಕು ಕೋರಿ ಅಹವಾಲು ಸಲ್ಲಿಸಿದ್ದವು ಇದರಿಂದ ಒಲಿಂಪಿಕ್ ಸಂಸ್ಥೆಯ ಅಡ್ ಹಾಕ್ ಸಮಿತಿ(Indian Olympic Association) ಈ ಚುನಾವಣೆಯನ್ನು ಜುಲೈ 11ಕ್ಕೆ ಮುಂದೂಡಿತ್ತು.
ಇದನ್ನೂ ಓದಿ WFI Elections: ಇಂದು ನಡೆಯಬೇಕಿದ್ದ ಡಬ್ಲ್ಯುಎಫ್ಐ ಚುನಾವಣೆಗೆ ಹೈಕೋರ್ಟ್ ಮತ್ತೆ ತಡೆಯಾಜ್ಞೆ
ಅನಿರ್ದಿಷ್ಟಾವಧಿಗೆ ಅಮಾನತು
ಪ್ರತಿ ಬಾರಿ ಒಂದಲ್ಲ ಒಂದು ಸಮಸ್ಯೆಯಿಂದ ಮುಂದೂಡಿಕೆಯಾಗುತ್ತಿದ್ದ ಈ ಚುನಾವಣೆಯ ವಿಚಾರದಲ್ಲಿ ಅಂತಿಮವಾಗಿ ಸ್ವತಃ ಸರ್ವೋಚ್ಚ ನ್ಯಾಯಾಲಯ ಮಧ್ಯಪ್ರವೇಶ ಮಾಡಿ ಜುಲೈ 12ರಂದು ಚುನಾವಣೆ ನಡೆಸಬೇಕೆಂದು ಆದೇಶಿಸಿತ್ತು. ಅದರಂತೆ ಚುನಾವಣೆಯಲ್ಲಿ 24 ರಾಜ್ಯಸಂಸ್ಥೆಗಳ 48 ಪ್ರತಿನಿಧಿಗಳು ಭಾಗವಹಿಸಲು ಸಿದ್ಧತೆ ನಡೆಸಿದ್ದರು. ಡಬ್ಲ್ಯುಎಫ್ಐ ಅಧ್ಯಕ್ಷ, ಉಪಾಧ್ಯಕ್ಷ, ನಾಲ್ಕು ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಖಜಾಂಚಿ, ಇಬ್ಬರು ಜಂಟಿ ಕಾರ್ಯದರ್ಶಿಗಳು ಮತ್ತು ಐದು ಕಾರ್ಯಕಾರಿ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಬೇಕಿತ್ತು. ಆದರೆ ಹರಿಯಾಣ ಕುಸ್ತಿ ಅಸೋಸಿಯೇಶನ್ (ಎಚ್ಡಬ್ಲ್ಯುಎ) ಸಲ್ಲಿಸಿದ ದೂರಿನ ಆಧಾರದಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್(Punjab and Haryana High Court) ಚುನಾವಣೆಗೆ ತಡೆಯಾಜ್ಞೆ ನೀಡಿತ್ತು. ಪದೇಪದೆ ಚುನಾವಣೆ ಮುಂದೂಡೊಕೆಯಿಂದ ಬೇಸತ್ತ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಸದಸ್ಯತ್ವವನ್ನು ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸಿದೆ.