ನವದೆಹಲಿ: ಭಾರತ ಕುಸ್ತಿ ಫೆಡರೇಶನ್ ವಿರುದ್ಧ ಹೋರಾಡುತ್ತಿರುವ(Wrestlers’ Protest) ಕುಸ್ತಿಪಟುಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.
ರಾಷ್ಟ್ರ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಬುಧವಾರದಿಂದ ನಡೆಯುತ್ತಿರುವ ಡಬ್ಲ್ಯುಎಫ್‌ಐ ಮತ್ತು ಇದರ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ ಕುಸ್ತಿಪಟುಗಳಾದ ವಿನೇಶ್ ಪೋಗಟ್, ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್, ರವಿ ದಹಿಯಾ ಮತ್ತು ದೀಪಕ್ ಪುನಿಯಾ ಸೇರಿದಂತೆ ಇತರ ಕುಸ್ತಿ ಪಟುಗಳ ಮೇಲೆ ಕುಸ್ತಿ ಫೆಡರೇಶನ್ ಎಫ್ಐಆರ್ ದಾಖಲಿಸಿದೆ ಎಂದು ತಿಳಿದುಬಂದಿದೆ.
ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ತರಬೇತುದಾರರಿಂದ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಮತ್ತು ಫೆಡರೇಶನ್‌ನ ಕಾರ್ಯನಿರ್ವಹಣೆಯಲ್ಲಿನ ದುರುಪಯೋಗದ ಆರೋಪ ಮಾಡಿರುವ ಕುಸ್ತಿಪಟುಗಳು ಒಕ್ಕೂಟದ ಸಂಪೂರ್ಣ ಪುನರ್ ರಚನೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಆರೋಪ ಕೇಳಿ ಬಂದ ಬಳಿಕ ಸೂಕ್ತ ತನಿಖೆಯನ್ನು ಮಾಡಲಾಗುವುದು ಎಂದು ಈಗಾಗಲೇ ಕ್ರೀಡಾ ಸಚಿವಾಲಯ ಕುಸ್ತಿಪಟುಗಳಿಗೆ ಭರವಸೆ ನೀಡಿದೆ. ಆದರೂ ಕುಸ್ತಿಪಟುಗಳು ಪ್ರತಿಭಟನೆ ನಿಲ್ಲಿಸಲು ಹಿಂದೇಟು ಹಾಕಿದ್ದಾರೆ. ಜತೆಗೆ ಈ ಪ್ರತಿಭಟನೆ ಹಲವು ರಾಜಕೀಯ ತಿರುವು ಪಡೆಯುತ್ತಿರುವ ಕಾರಣದಿಂದ ಭಾರತ ಕುಸ್ತಿ ಫೆಡರೇಶನ್ ಈ ನಿರ್ಧಾರಕ್ಕೆ ಬಂದಿದೆ ಎಂದು ತಿಳಿದುಬಂದಿದೆ. ಆದರೆ ಈ ಬಗ್ಗೆ ಕುಸ್ತಿ ಫೆಡರೇಶನ್ ಯಾವುದೇ ಅಧಿಕೃತ ಮಾಹಿತಿ ಪ್ರಕಟಿಸಿಲ್ಲ.
ಇದನ್ನೂ ಓದಿ | Wrestlers Protest | ಲೈಂಗಿಕ ಕಿರುಕುಳ ಪ್ರಕರಣ; ತನಿಖಾ ಸಮಿತಿ ರಚಿಸಲು ಐಒಎಗೆ ಮನವಿ ಸಲ್ಲಿಸಿದ ಕುಸ್ತಿಪಟುಗಳು