ಮುಂಬಯಿ: ಬಹುನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕೆ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಸಜ್ಜಾಗಿವೆ. ಉಭಯ ತಂಡಗಳ ಈ ಪ್ರಶಸ್ತಿ ಸಮರ ಜೂನ್ 7 ರಿಂದ 11ರವರೆಗೆ ಲಂಡನ್ನ ದಿ ಓವಲ್ ಮೈದಾನದಲ್ಲಿ ನಡೆಯಲಿದೆ. ಇದೀಗ ಈ ಟೂರ್ನಿಯಲ್ಲಿ ಪಾಲ್ಗೊಳ್ಳಲು ಭಾರತ ತಂಡ ಮೊದಲ ಹಂತದಲ್ಲಿ ಲಂಡನ್ಗೆ ಪ್ರಯಾಣ ಬೆಳೆಸಲಿದೆ. ವಿರಾಟ್ ಕೊಹ್ಲಿ ಸೇರಿದಂತೆ 8 ಮಂದಿ ಆಟಗಾರರು ಮಂಗಳವಾರ ಲಂಡನ್ಗೆ ತೆರಳಲಿದ್ದಾರೆ ಎಂದು ವರದಿಯಾಗಿದೆ.
16ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ, ರಾಜಸ್ಥಾನ್ ಸೇರಿ ಕೆಲ ತಂಡಗಳು ಹೊರಬಿದ್ದಿದೆ. ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಸ್ಥಾನ ಪಡೆದಿದ್ದ ಈ ತಂಡದ ಆಟಗಾರರೆಲ್ಲ ಇದೀಗ ಮೊದಲ ಹಂತದಲ್ಲಿ ಲಂಡನ್ಗೆ ಪ್ರಯಾಣ ಬೆಳೆಸಿ ಅಭ್ಯಾಸ ನಡೆಸಲಿದ್ದಾರೆ ಎಂದು ವರದಿಯಾಗಿದೆ. ಆರ್ ಅಶ್ವಿನ್, ಮೊಹಮ್ಮದ್ ಸಿರಾಜ್, ವಿರಾಟ್ ಕೊಹ್ಲಿ, ಉಮೇಶ್ ಯಾದವ್, ಜೈದೇವ್ ಉನಾದ್ಕತ್, ಮುಕೇಶ್ ಕುಮಾರ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್ ಮೊದಲ ಹಂತದಲ್ಲಿ ತೆರಳುವ ಆಟಗಾರರು. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೇ 28ರಂದು ಐಪಿಎಲ್ 2023ರ ಫೈನಲ್ ಮುಗಿದ ಕೂಡಲೇ ಕೊನೆಯ ಬ್ಯಾಚ್ ಮೇ 30 ರಂದು ಇಂಗ್ಲೆಂಡ್ ವಿಮಾನ ಹತ್ತಲಿದೆ.
ಪೂಜಾರ ಈಗಾಗಲೇ ಕೌಂಟಿ ಕ್ರಿಕೆಟ್ ಆಡುವ ಸಲುವಾಗಿ ಇಂಗ್ಲೆಂಡ್ನಲ್ಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಭಾರತ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿ ಗೆದ್ದರೂ ವಿದೇಶದಲ್ಲಿ ಆಸೀಸ್ ತಂಡದ ಸವಾಲನ್ನು ಅಷ್ಟು ಹಗುರವಾಗಿ ಪರಿಗಣಿಸುವಂತಿಲ್ಲ. ಏಕೆಂದರೆ ಸ್ಪೀಡ್ ಪಿಚ್ಗಳಲ್ಲಿ ಆಸೀಸ್ ಉತ್ತಮ ದಾಖಲೆ ಹೊಂದಿದೆ.
ಫೈನಲ್ ಪಂದ್ಯಕ್ಕೆ ಉಭಯ ತಂಡಗಳು
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆ.ಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯ್ದೇವ್ ಉನಾದ್ಕತ್, ಇಶಾನ್ ಕಿಶನ್ (ವಿಕೆಟ್ ಕೀಪರ್). ಸ್ಟ್ಯಾಂಡ್ ಬೈ ಆಟಗಾರರು: ಋತುರಾಜ್ ಗಾಯಕ್ವಾಡ್, ಮುಖೇಶ್ ಕುಮಾರ್, ಸೂರ್ಯಕುಮಾರ್ ಯಾದವ್.
ಆಸ್ಟ್ರೇಲಿಯಾ ಟೆಸ್ಟ್ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಕಾಟ್ ಬೊಲೆಂಡ್, ಅಲೆಕ್ಸ್ ಕೇರಿ, ಕ್ಯಾಮರೂನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಜೋಶ್ ಹ್ಯಾಝಲ್ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖವಾಜ, ಮಾರ್ನಸ್ ಲಾಬುಶೇನ್, ನಥಾನ್ ಲಿಯೋನ್, ಮಿಚೆಲ್ ಮಾರ್ಷ್, ಟಾಡ್ ಮರ್ಫಿ, ಮ್ಯಾಟ್ ರೆನ್‌ಶಾ, ಸ್ಟೀವನ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್.