ಲಂಡನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್(WTC Final 2023) ಕದನಕ್ಕೆ ಪಿಚ್ ಸಿದ್ಧವಾಗುತ್ತಿದೆ. ಲಂಡನ್ನ ಓವಲ್ ಸ್ಟೇಡಿಯಂನಲ್ಲಿ ರೆಡಿಯಾಗುತ್ತಿರುವ ಈ ಪಿಚ್ನ ಫೋಟೊವನ್ನು ಐಸಿಸಿ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಸದ್ಯ ಈ ಪಿಚ್ ಕಂಡು ಭಾರತ ತಂಡಕ್ಕೆ ಆತಂಕವೊಂದು ಸೃಷ್ಟಿಯಾಗಿದೆ.
ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ಈ ಪ್ರಶಸ್ತಿ ಸಮರ ಜೂನ್ 7 ರಿಂದ 11ರವರೆಗೆ ಲಂಡನ್ನ ದಿ ಓವಲ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಈಗಾಗಲೇ ಉಭಯ ತಂಡಗಳು ಕೂಡ ಪ್ರಕಟಗೊಂಡಿದೆ. ಆದರೆ ಇದರಲ್ಲಿ ಕೆಲ ಆಟಗಾರರು ಗಾಯದಿಂದ ಹೊರಬಿದ್ದಿದ್ದು, ಅವರ ಸ್ಥಾನಕ್ಕೆ ಬದಲಿ ಆಟಗಾರರು ಕೂಡ ಆಯ್ಕೆಯಾಗಿದ್ದಾರೆ. ಕಳೆದ ಬಾರಿಯ ಫೈಲ್ನಲ್ಲಿ ಭಾರತ ನ್ಯೂಜಿಲ್ಯಾಂಡ್ ವಿರುದ್ಧ ಎಡವಿ ಸೋಲು ಕಂಡಿತ್ತು. ಈ ಬಾರಿಯಾದರೂ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಲಿದೆಯಾ ಎಂದು ಕಾದು ನೋಡಬೇಕಿದೆ.
ಕಳೆದ ಕೆಲವು ವರ್ಷಗಳಿಂದ ಐಸಿಸಿ ಟ್ರೋಫಿ ಗೆಲ್ಲದ ಭಾರತ ವಿಶ್ವ ಟೆಸ್ಟ್ ಗೆಲ್ಲುವ ವಿಶ್ವಾಸದಲ್ಲಿದೆ. ಆದರೆ ಇಲ್ಲಿನ ಪಿಚ್ ಇದೀಗ ಭಾರತಕ್ಕೆ ಕೊಂಚ ಹಿನ್ನಡೆ ಉಂಟುಮಾಡುವ ಸಾಧ್ಯತೆಯೊಂದು ಭಾಸವಾಗಿದೆ. ದಿ ಓವಲ್ ಮೈದಾನದಲ್ಲಿ ಪಕ್ಕಾ ಹಸಿರು, ಬೌನ್ಸಿ ಪಿಚ್ ಸಿದ್ಧಪಡಿಸಲಾಗುತ್ತಿದೆ. ಇದು ಆಸೀಸ್ ಆಟಗಾರರಿಗೆ ಹೆಚ್ಚು ಉಪಕಾರಿಯಾಗುವ ಸಾಧ್ಯತೆ ಇದೆ. ಏಕೆಂದರೆ ಆಸ್ಟ್ರೇಲಿಯಾದಲ್ಲಿ ಎಲ್ಲ ಪಿಚ್ಗಳು ಬೌನ್ಸಿ ಪಿಚ್ಗಳಾಗಿವೆ. ಇನ್ನು ಬೌನ್ಸಿ ಪಿಚ್ಗಳಲ್ಲಿ ಆಸೀಸ್ ಆಟಗಾರರು ಉತ್ತಮ ಪ್ರದರ್ಶನ ತೋರುವಲ್ಲಿ ಎತ್ತಿದ ಕೇ. ಇನ್ನೊಂದೆಡೆ ಚಳಿಯ ವಾತಾವರಣವೂ ಆಸೀಸ್ಗೆ ವರದಾನವಾಗುವ ಸಾಧ್ಯತೆ ಇದೆ.
ಇದನ್ನೂ ಓದಿ WTC Final 2023 : ಭಾರತ, ಆಸ್ಟ್ರೇಲಿಯಾ ನಡುವಿನ ಡಬ್ಲ್ಯುಟಿಸಿ ಫೈನಲ್ ಪಂದ್ಯದಿಂದ ಹೊಸ ನಿಯಮ ಜಾರಿ
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆ.ಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯ್ದೇವ್ ಉನಾದ್ಕತ್, ಇಶಾನ್ ಕಿಶನ್ (ವಿಕೆಟ್ ಕೀಪರ್). ಸ್ಟ್ಯಾಂಡ್ ಬೈ ಆಟಗಾರರು: ಋತುರಾಜ್ ಗಾಯಕ್ವಾಡ್, ಮುಖೇಶ್ ಕುಮಾರ್, ಸೂರ್ಯಕುಮಾರ್ ಯಾದವ್.
ಆಸ್ಟ್ರೇಲಿಯಾ ಟೆಸ್ಟ್ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಕಾಟ್ ಬೊಲೆಂಡ್, ಅಲೆಕ್ಸ್ ಕೇರಿ, ಕ್ಯಾಮರೂನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಜೋಶ್ ಹ್ಯಾಝಲ್ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖವಾಜ, ಮಾರ್ನಸ್ ಲಾಬುಶೇನ್, ನಥಾನ್ ಲಿಯೋನ್, ಮಿಚೆಲ್ ಮಾರ್ಷ್, ಟಾಡ್ ಮರ್ಫಿ, ಮ್ಯಾಟ್ ರೆನ್‌ಶಾ, ಸ್ಟೀವನ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್.