ಲಂಡನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಬುಧವಾರ ಆರಂಭವಾಗಲಿದೆ. ಆದರೆ ಈ ಪಂದ್ಯ ಆರಂಭಕ್ಕೂ ಮುನ್ನವೇ ಭಾರತ ತಂಡಕ್ಕೆ ದೊಡ್ಡ ಆಘಾತವೊಂದು ಎದುರಾಗಿದೆ. ತಂಡದ ನಾಯಕ ರೋಹಿತ್ ಶರ್ಮ ಅವರಿಗೆ ಅಭ್ಯಾಸದ ವೇಳೆ ಕೈ ಬೆರಳಿಗೆ ಗಾಯಗೊಂಡಿದ್ದು ಫೈನಲ್ ಪಂದ್ಯ ಆಡುವುದು ಅನುಮಾನ ಎನ್ನಲಾಗಿದೆ.
ಮಂಗಳವಾರ ನೆಟ್ಸ್ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದ ವೇಳೆ ರೋಹಿತ್ ಶರ್ಮ ಅವರು ಎಡಗೈಯ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದಾರೆ. ಗಾಯಗೊಂಡ ತಕ್ಷಣ ಅವರು ಅಭ್ಯಾಸವನ್ನು ಮೊಟಕುಗೊಳಿಸಿದ್ದಾರೆ. ಸದ್ಯ ಗಾಯದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಆದರೆ ಪ್ರಾಥಮಿಕ ವರದಿ ಪ್ರಕಾರ ಗಾಯದ ಪ್ರಮಾಣ ಗಂಭೀರವಾದಂತೆ ತೋರುತ್ತಿದೆ. ಇದೇ ಕಾರಣಕ್ಕೆ ಅವರು ಅಭ್ಯಾಸವನ್ನು ಮೊಟಕುಗೊಳಿಸಿದ್ದಾರೆ ಎನ್ನಲಾಗಿದೆ.
ರೋಹಿತ್ ಅವರ ಬೆರಳಿನ ಸ್ಕ್ಯಾನ್ ಮಾಡಲಾಗಿದ್ದು ವರದಿ ಇನ್ನಷ್ಟೇ ಬರಬೇಕಿದೆ. ಒಂದೊಮ್ಮೆ ಅವರ ಗಾಯ ಗಂಭೀರ ಸ್ವರೂಪದಿಂದ ಕೂಡಿದ್ದರೆ ತಂಡಕ್ಕೆ ಹಿನ್ನಡೆಯಾಗಿ ಪರಿಣಮಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಈಗಾಗಲೇ ರಾಹುಲ್ ಕೂಡ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇದೀಗ ರೋಹಿತ್ ಕೂಡ ಲಭ್ಯವಾಗದಿದ್ದರೆ ಬ್ಯಾಟಿಂಗ್ ಆರ್ಡರ್ನಲ್ಲಿ ಸಮಸ್ಯೆಯಾಗಲಿದೆ. ರೋಹಿತ್ ಅವರು ಈ ಪಂದ್ಯದಿಂದ ಹೊರಗುಳಿದರೆ ಆಗ ಚೇತೇಶ್ವರ್ ಪೂಜಾರ ಅಥವಾ ವಿರಾಟ್ ಕೊಹ್ಲಿ ಅವರು ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ.
ಸಂಭಾವ್ಯ ಆಡುವ ಬಳಗ
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆ.ಎಸ್.ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್/ ಉಮೇಶ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
ಇದನ್ನೂ ಓದಿ WTC Final 2023: ಹೇಗೆ ವರ್ತಿಸಲಿದೆ 140 ವರ್ಷಗಳ ಇತಿಹಾಸವುಳ್ಳ ಓವಲ್ ಸ್ಟೇಡಿಯಂನ ಪಿಚ್
ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲಾಬುಶೇನ್, ಸ್ಟೀವನ್ ಸ್ಮಿತ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಟಾಡ್ ಮರ್ಫಿ,ಮೈಕೆಲ್ ನೇಸರ್/ಸ್ಕಾಟ್ ಬೋಲ್ಯಾಂಡ್.