ಲಂಡನ್: ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಪಾಲ್ಗೊಳ್ಳಲು ಭಾರತದ ಕ್ರಿಕೆಟಿಗರು ಒಂದೊಂದೇ ತಂಡವಾಗಿ ಲಂಡನ್‌ಗೆ ಪ್ರಯಾಣ ಬೆಳೆಸಿದ್ದಾರೆ. ಮೊದಲ ಬ್ಯಾಚ್ ಈಗಾಗಲೇ ಲಂಡನ್ ತಲುಪಿದ್ದು ಅಭ್ಯಾಸ ಕೂಡ ಆರಂಭಿಸಿದ್ದಾರೆ. ನೂತನ ಕಿಟ್ ಪ್ರಾಯೊಜಕತ್ವದ ಅಡಿಡಾಸ್ ಜೆರ್ಸಿಯನ್ನು ತೊಟ್ಟ ಫೋಟೊವನ್ನು ಹಂಚಿಕೊಳ್ಳುವ ಮೂಲಕ ಅಭ್ಯಾಸ ಆರಂಭಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಶಾರ್ದೂಲ್ ಠಾಕೂರ್, ಉಮೇಶ್ ಯಾದವ್ ಸೇರಿ ತಂಡದ ಕೋಚ್ ರಾಹುಲ್ ದ್ರಾವಿಡ್ ಅವರು ಮೈದಾನದಲ್ಲಿ ಮಾತುಕತೆ ನಡೆಸುತ್ತಿರುವ ಹಲವು ಫೋಟೊಗಳನ್ನು ಬಿಸಿಸಿಐ ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಇದೇ ವೇಳೆ ಚೇತೇಶ್ವರ್ ಪೂಜಾರ ಅವರು ನೆಟ್ಸ್ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿರುವ ಫೋಟೊವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.
ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್, ಇತರ ಐಪಿಎಲ್ ತಂಡಗಳ ಆಟಗಾರರಾದ ಆರ್. ಅಶ್ವಿನ್, ಅಕ್ಷರ್ ಟೇಲ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಜೈದೇವ್ ಉನಾದ್ಕತ್ ಅವರು ಮೊದಲ ಬ್ಯಾಚ್ನಲ್ಲಿ ಲಂಡನ್‌ಗೆ ತೆರಳಿದ್ದರು. ಅಂತಿಮ ಬ್ಯಾಚ್ನಲ್ಲಿ ನಾಯಕ ರೋಹಿತ್ ಶರ್ಮ, ರವೀಂದ್ರ ಜಡೇಜ, ಇಶಾನ್ ಕಿಶನ್, ಶುಭಮನ್ ಗಿಲ್, ಮೊಹಮ್ಮದ್ ಶಮಿ, ಕೆ.ಎಸ್. ಭರತ್ ಮತ್ತು ಅಜಿಂಕ್ಯ ರಹಾನೆ ಐಪಿಎಲ್ ಫೈನಲ್ ಮುಗಿದ ತಕ್ಷಣವೇ ಲಂಡನ್‌ಗೆ ವಿಮಾನ ಏರಲಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ಈ ಪ್ರಶಸ್ತಿ ಸಮರ ಜೂನ್ 7 ರಿಂದ 11ರವರೆಗೆ ಲಂಡನ್ನ ದಿ ಓವಲ್ ಮೈದಾನದಲ್ಲಿ ನಡೆಯಲಿದೆ.
Unveiling #TeamIndia‘s new training kit 💙💙
— BCCI (@BCCI) May 25, 2023
Also, kickstarting our preparations for the #WTCFinal pic.twitter.com/iULctV8zL6
ಉಭಯ ತಂಡಗಳು
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆ.ಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯ್ದೇವ್ ಉನಾದ್ಕತ್, ಇಶಾನ್ ಕಿಶನ್ (ವಿಕೆಟ್ ಕೀಪರ್). ಸ್ಟ್ಯಾಂಡ್ ಬೈ ಆಟಗಾರರು: ಋತುರಾಜ್ ಗಾಯಕ್ವಾಡ್, ಮುಖೇಶ್ ಕುಮಾರ್, ಸೂರ್ಯಕುಮಾರ್ ಯಾದವ್.
ಇದನ್ನೂ ಓದಿ WTC Final 2023: ಡ್ಯೂಕ್ಸ್ ಚೆಂಡಿನಲ್ಲೇ ಫೈನಲ್ ಪಂದ್ಯ; ಬಿಸಿಸಿಐ
ಆಸ್ಟ್ರೇಲಿಯಾ ಟೆಸ್ಟ್ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಕಾಟ್ ಬೊಲೆಂಡ್, ಅಲೆಕ್ಸ್ ಕೇರಿ, ಕ್ಯಾಮರೂನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಜೋಶ್ ಹ್ಯಾಝಲ್ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖವಾಜ, ಮಾರ್ನಸ್ ಲಾಬುಶೇನ್, ನಥಾನ್ ಲಿಯೋನ್, ಮಿಚೆಲ್ ಮಾರ್ಷ್, ಟಾಡ್ ಮರ್ಫಿ, ಮ್ಯಾಟ್ ರೆನ್‌ಶಾ, ಸ್ಟೀವನ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್