ಲಂಡನ್: ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ಬಹುನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಈಗಾಗಲೇ ಭಾರತದ ಮೊದಲ ಬ್ಯಾಚ್ ಲಂಡನ್ ತಲುಪಿದ್ದು ಅಭ್ಯಾಸದಲ್ಲಿ ನಿರತವಾಗಿದೆ. ಸದ್ಯ ಓವಲ್ ಮೈದಾನದಲ್ಲಿ ಆಟಗಾರು ಫೀಲ್ಡಿಂಗ್ ಅಭ್ಯಾಸ ನಡೆಸುತ್ತಿರುವ ವಿಡಿಯೊವೊಂದು ಇದೀಗ ವೈರಲ್ ಆಗಿದೆ.
ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಅಕ್ಷರ್ ಪಟೇಲ್ ಸೇರಿ ಕೆಲ ಸಿಬ್ಬಂದಿಗಳು ಕಠಿಣ ಫೀಲ್ಡಿಂಗ್ ನಡೆಸುವ ವಿಡಿಯೊವನ್ನು ಬಿಸಿಸಿಐ ಅಧಿಕೃತ ಟ್ವಿಟರ್ನಲ್ಲಿ ಹಂಚಿಕೊಂಡಿದೆ. ‘ನಿಮ್ಮ ಸ್ನೇಹಿತರ ಜತೆಗೆ ವೃತ್ತವೊಂದನ್ನು ರಚಿಸಿ ಈ ರೀತಿಯ ಡ್ರಿಲ್ ಮಾಡಿ’ ಎಂದು ಬರೆದುಕೊಂಡಿದೆ. ಸದ್ಯ ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್, ಇತರ ಐಪಿಎಲ್ ತಂಡಗಳ ಆಟಗಾರರಾದ ಆರ್. ಅಶ್ವಿನ್, ಅಕ್ಷರ್ ಟೇಲ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಜೈದೇವ್ ಉನಾದ್ಕತ್ ಅವರು ಮೊದಲ ಬ್ಯಾಚ್ನಲ್ಲಿ ಲಂಡನ್ಗೆ ಆಗಮಿಸಿ ಅಭ್ಯಾಸ ನಡೆಸುತ್ತಿದ್ದಾರೆ. ಚೇತೇಶ್ವರ್ ಪೂಜಾರ ಅವರು ಕೌಂಟಿ ಆಡುವ ಸಲುವಾಗಿ ಲಂಡನ್ನಲ್ಲಿಯೇ ಇದ್ದ ಕಾರಣ ಅವರು ಎಲ್ಲರಿಗಿಂತ ಮೊದಲೆ ನೆಟ್ಸ್ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿರುವ ಫೋಟೊವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದರು.
ಅಂತಿಮ ಬ್ಯಾಚ್ನಲ್ಲಿ ನಾಯಕ ರೋಹಿತ್ ಶರ್ಮ, ರವೀಂದ್ರ ಜಡೇಜ, ಇಶಾನ್ ಕಿಶನ್, ಶುಭಮನ್ ಗಿಲ್, ಮೊಹಮ್ಮದ್ ಶಮಿ, ಕೆ.ಎಸ್. ಭರತ್ ಮತ್ತು ಅಜಿಂಕ್ಯ ರಹಾನೆ ಐಪಿಎಲ್ ಫೈನಲ್ ಮುಗಿದ ತಕ್ಷಣವೇ ಲಂಡನ್ಗೆ ವಿಮಾನ ಏರಲಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ಈ ಪ್ರಶಸ್ತಿ ಸಮರ ಜೂನ್ 7 ರಿಂದ 11ರವರೆಗೆ ಲಂಡನ್ನ ದಿ ಓವಲ್ ಮೈದಾನದಲ್ಲಿ ನಡೆಯಲಿದೆ.
ಐಪಿಎಲ್ನಲ್ಲಿ ಶ್ರೇಷ್ಠ ಪ್ರದರ್ಶನ ತೋರಿದ ವಿರಾಟ್ ಕೊಹ್ಲಿ ಮತ್ತು ಶುಭಮನ್ ಗಿಲ್ ಅವರ ಮೇಲೆ ಈ ಪಂದ್ಯದಲ್ಲಿಯೂ ಹೆಚ್ಚಿನ ನಿರೀಕ್ಷೆ ಇರಿಸಲಾಗಿದೆ. ಕಳೆದ ಬಾರಿ ಕೈತಪ್ಪಿದ ಟ್ರೋಫಿ ಈ ಬಾರಿ ವಶಪಡಿಸಿಕೊಳ್ಳಬೇಕಿದೆ. ಈ ಮೂಲಕ ಹಲವು ವರ್ಷಗಳ ಐಸಿಸಿ ಟ್ರೋಫಿಯ ಕನಸು ನನಸಾಗಬೇಕಿದೆ.
ಇದನ್ನೂ ಓದಿ IPL 2023: ಚೆನ್ನೈ,ಗುಜರಾತ್ ಫೈನಲ್ ಪಂದ್ಯದ ಪಿಚ್ ರಿಪೋರ್ಟ್, ಹವಾಮಾನ ವರದಿಯ ಸಂಪೂರ್ಣ ಮಾಹಿತಿ
Get your friends, form a circle and replicate this fun drill! 😉😀😀🏏#TeamIndia pic.twitter.com/X6iOuXPrhY
— BCCI (@BCCI) May 26, 2023
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆ.ಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯ್ದೇವ್ ಉನಾದ್ಕತ್, ಇಶಾನ್ ಕಿಶನ್ (ವಿಕೆಟ್ ಕೀಪರ್). ಸ್ಟ್ಯಾಂಡ್ ಬೈ ಆಟಗಾರರು: ಋತುರಾಜ್ ಗಾಯಕ್ವಾಡ್, ಮುಖೇಶ್ ಕುಮಾರ್, ಸೂರ್ಯಕುಮಾರ್ ಯಾದವ್.