WTC Final 2023: ಇಬ್ಬರು ಆಟಗಾರರ ಮೇಲೆ ವಿಶೇಷ ನಿಗಾ ಅಗತ್ಯ; ಪಾಂಟಿಂಗ್​ ಹೇಳಿದ ಈ ಟೀಮ್​ ಇಂಡಿಯಾದ ಆಟಗಾರರು ಯಾರು? - Vistara News

ಕ್ರಿಕೆಟ್

WTC Final 2023: ಇಬ್ಬರು ಆಟಗಾರರ ಮೇಲೆ ವಿಶೇಷ ನಿಗಾ ಅಗತ್ಯ; ಪಾಂಟಿಂಗ್​ ಹೇಳಿದ ಈ ಟೀಮ್​ ಇಂಡಿಯಾದ ಆಟಗಾರರು ಯಾರು?

ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ವಿರಾಟ್​ ಕೊಹ್ಲಿ ಮತ್ತು ಪೂಜಾರ ಬಗ್ಗೆ ವಿಶೇಷ ನಿಗಾ ಇಡಬೇಕೆಂದು ಕಿವಿ ಮಾತು ಹೇಳಿದ್ದಾರೆ.

VISTARANEWS.COM


on

wtc final 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸಿಡ್ನಿ: ಐಪಿಎಲ್​ ಮುಗಿದು ಇದೀಗ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಆಡಲು ಸಿದ್ಧರಾಗಿದ್ದಾರೆ. ಈ ಪಂದ್ಯದ ಬಗ್ಗೆ ಈಗಾಗಲೇ ಹಲವು ಮಾಜಿ ಕ್ರಿಕೆಟ್​ ದಿಗ್ಗಜರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ಸಾಲಿಗೆ ಇದೀಗ ಆಸ್ಟ್ರೇಲಿಯಾ ಕ್ರಿಕೆಟ್​ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್​ ಕೂಡ ಸೇರಿದ್ದಾರೆ. ವಿರಾಟ್​ ಕೊಹ್ಲಿ ಮತ್ತು ಚೇತೇಶ್ವರ್​ ಪುಜಾರ ಬಗ್ಗೆ ವಿಶೇಷ ನಿಗಾ ವಹಿಸುವಂತೆ ಆಸೀಸ್​ ತಂಡಕ್ಕೆ ಎಚ್ಚರಿಕೆಯ ಸಂದೇಶವೊಂದನ್ನು ನೀಡಿದ್ದಾರೆ.

ಐಸಿಸಿ ನಡೆಸಿದ ಸಂದರ್ಶನದಲ್ಲಿ ಪಾಂಟಿಂಗ್​ ಈ ವಿಚಾರವನ್ನು ಹೇಳಿದ್ದಾರೆ. “ಪೂಜಾರ ಮತ್ತು ವಿರಾಟ್​ ಕೊಹ್ಲಿ ಅವರು ಆಸ್ಟ್ರೇಲಿಯಾ ವಿರುದ್ಧ ಉತ್ತಮ ದಾಖಲೆ ಹೊಂದಿದ್ದಾರೆ. ಅದರಲ್ಲೂ ಪೂಜಾರ ಆಸೀಸ್ ವಿರುದ್ದ ಆಡಿದ 24 ಟೆಸ್ಟ್‌ಗಳಲ್ಲಿ ಐದು ಶತಕಗಳನ್ನು ಗಳಿಸಿದ್ದಾರೆ. ಕೊಹ್ಲಿ ಕೂಡಾ ಉತ್ತಮ ದಾಖಲೆ ಹೊಂದಿದ್ದಾರೆ. ಅವರನ್ನು ಹೆಚ್ಚು ಸಮಯ ಕ್ರೀಸ್​ನಲ್ಲಿ ಇರದಂತೆ ನೋಡಿಕೊಂಡರೆ ಆಸೀಸ್​ಗೆ ಮೇಲುಗೈ ಖಚಿತ ಎಂದು ಹೇಳಿದ್ದಾರೆ.

ಮೈಂಡ್​ ಗೇಮ್​ ವಿಚಾರದಲ್ಲಿ ಪಾಂಟಿಂಗ್ ಅವರು ಪಂಟರ್​. ಅವರು ಆಸೀಸ್​ ನಾಯಕನಾಗಿದ್ದ ವೇಳೆ ಎದುರಾಳಿ ತಂಡವನ್ನು ಯಾವ ರೀತಿ ಕುಗ್ಗಿಸಬೇಕು ಎಂಬ ಕಲೆಯನ್ನು ಸರಿಯಾಗಿ ತಿಳಿದಿದ್ದರು. ಇದೇ ಅಸ್ತ್ರವನ್ನು ಬಳಸಿಕೊಂಡು ಅವರು ತಂಡಕ್ಕೆ ಹಲವು ಟ್ರೋಫಿಗಳನ್ನು ತಂದುಕೊಟ್ಟಿದ್ದಾರೆ.

ಉಭಯ ತಂಡಗಳು

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಜೋಶ್ ಹೇಜಲ್​ವುಡ್​, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಉಸ್ಮಾನ್ ಖವಾಜಾ, ಮಾರ್ನಸ್ ಲಾಬುಶೇನ್, ನಾಥನ್ ಲಿಯಾನ್, ಟಾಡ್ ಮರ್ಫಿ, ಸ್ಟೀವ್ ಸ್ಮಿತ್ (ಉಪನಾಯಕ), ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್. ಮೀಸಲು ಆಟಗಾರರು: ಮಿಚೆಲ್ ಮಾರ್ಷ್, ಮ್ಯಾಥ್ಯೂ ರೆನ್ಶಾ

ಇದನ್ನೂ ಓದಿ WTC Final 2023: ಭಾರತದ ಸ್ಪಿನ್ನರ್​ಗಳ ಬಗ್ಗೆ ಎಚ್ಚರ ಅಗತ್ಯ; ಸ್ಟೀವನ್​ ಸ್ಮಿತ್​

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆ.ಎಸ್.ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕತ್, ಇಶಾನ್ ಕಿಶನ್ (ವಿಕೆಟ್ ಕೀಪರ್). ಮೀಸಲು ಆಟಗಾರರು: ಯಶಸ್ವಿ ಜೈಸ್ವಾಲ್, ಮುಖೇಶ್ ಕುಮಾರ್, ಸೂರ್ಯಕುಮಾರ್ ಯಾದವ್.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರಿಕೆಟ್

T20 World Cup 2024: ಟಿ20 ವಿಶ್ವಕಪ್​ನ ಅಧಿಕೃತ ಹಾಡು ಬಿಡುಗಡೆ; ಕುಣಿದು ಕುಪ್ಪಳಿಸಿದ ಕ್ರಿಸ್​ ಗೇಲ್​, ಉಸೇನ್‌ ಬೋಲ್ಟ್

T20 World Cup 2024: ಎಂಟು ಬಾರಿಯ ಒಲಂಪಿಕ್ ಚಿನ್ನದ ಪದಕ ವಿಜೇತ ಉಸೇನ್ ಬೋಲ್ಟ್, ವೆಸ್ಟ್ ಇಂಡೀಸ್ ಕ್ರಿಕೆಟ್ ಐಕಾನ್‌ಗಳಾದ ಕ್ರಿಸ್ ಗೇಲ್, ಶಿವನಾರಾಯಣ್ ಚಂದ್ರಪಾಲ್ ಮತ್ತು ಮಹಿಳಾ ಆಟಗಾರ್ತಿ ಸ್ಟಾಫಾನಿ ಟೇಲರ್, ಅಮೆರಿಕದ ಬೌಲರ್ ಅಲಿ ಖಾನ್ ಸೇರಿದಂತೆ ಇತರ ಪ್ರಮುಖ ಕೆರಿಬಿಯನ್ ವ್ಯಕ್ತಿಗಳು ಈ ಗೀತೆಯಲ್ಲಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

T20 World Cup 2024
Koo

ನವದೆಹಲಿ: ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಐಸಿಸಿ(ICC) ಪುರುಷರ ಟಿ20 ವಿಶ್ವಕಪ್​ ಟೂರ್ನಿ(T20 World Cup 2024) ಆರಂಭಕ್ಕೆ ಇನ್ನು ಕೇವಲ ಬೆರಳೆಣಿಕೆಯ ದಿನಗಳು ಮಾತ್ರ ಬಾಕಿ ಉಳಿದಿವೆ. ವಿಶ್ವಕಪ್​ ಪಂದ್ಯವಾವಳಿಗಳು ಜೂನ್​ 1ರಿಂದ ಆರಂಭವಾಗಿ ಜೂನ್​ 29ಕ್ಕೆ ಮುಕ್ತಾಯ ಕಾಣಲಿದೆ. ಒಟ್ಟು 55 ಪಂದ್ಯಗಳು ಇರಲಿದೆ. ಟೂರ್ನಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಂತೆಯೇ ಐಸಿಸಿ ಪಂದ್ಯಾವಳಿಯ ಅಧಿಕೃತ ಗೀತೆಯನ್ನು ಅನಾವರಣಗೊಳಿಸಿದೆ.

ಗ್ರ್ಯಾಮಿ ಪ್ರಶಸ್ತಿ ವಿಜೇತ ಕಲಾವಿದ ಸೀನ್ ಪಾಲ್ ಮತ್ತು ಸೋಕಾ ಸೂಪರ್‌ಸ್ಟಾರ್ ಕೇಸ್ ಅವರು ‘ಔಟ್ ಆಫ್ ದಿಸ್ ವರ್ಲ್ಡ್’ ಎಂಬ ಶೀರ್ಷಿಕೆಯ ಗೀತೆಯನ್ನು ರಚಿಸಿದ್ದಾರೆ. ಇದು ಸಂಗೀತ ಮತ್ತು ಕ್ರೀಡೆಗಳೆರಡರಲ್ಲೂ ಕೆಲವು ಪ್ರಮುಖ ವ್ಯಕ್ತಿಗಳ ನಡುವಿನ ಸಹಯೋಗವನ್ನು ಇದು ಒಳಗೊಂಡಿದೆ. ಅಮೆರಿಕದ ಈ ಮೂರು ಕ್ರೀಡಾಂಗಣಗಳಲ್ಲಿ 16 ಪಂದ್ಯಗಳು ನಡೆಯಲಿದೆ. ಉಳಿದ 39 ಪಂದ್ಯಗಳಿಗೆ ವೆಸ್ಟ್ ಇಂಡೀಸ್ ಆತಿಥ್ಯ ವಹಿಸಿದೆ. 

ಎಂಟು ಬಾರಿಯ ಒಲಂಪಿಕ್ ಚಿನ್ನದ ಪದಕ ವಿಜೇತ ಉಸೇನ್ ಬೋಲ್ಟ್, ವೆಸ್ಟ್ ಇಂಡೀಸ್ ಕ್ರಿಕೆಟ್ ಐಕಾನ್‌ಗಳಾದ ಕ್ರಿಸ್ ಗೇಲ್, ಶಿವನಾರಾಯಣ್ ಚಂದ್ರಪಾಲ್ ಮತ್ತು ಮಹಿಳಾ ಆಟಗಾರ್ತಿ ಸ್ಟಾಫಾನಿ ಟೇಲರ್, ಅಮೆರಿಕದ ಬೌಲರ್ ಅಲಿ ಖಾನ್ ಸೇರಿದಂತೆ ಇತರ ಪ್ರಮುಖ ಕೆರಿಬಿಯನ್ ವ್ಯಕ್ತಿಗಳು ಈ ಗೀತೆಯಲ್ಲಿ ಕಾಣಿಸಿಕೊಂಡಿದ್ದಾರೆ. ಬೀಚ್​ ಒಂದರಲ್ಲಿ ಟಿ20 ವಿಶ್ವಕಪ್​ ಎಂದು ಬರೆದಿರುವ ಚೆಂಡೊಂದು ಬಿದ್ದಿರುತ್ತದೆ. ಇದನ್ನು ಹೆಕ್ಕುವ ಮೂಲಕ ಗೀತೆ ಆರಂಭೊಂಡಿದೆ. ವಿರಾಟ್​ ಕೊಹ್ಲಿ, ರೋಹಿತ್​ ಶರ್ಮ, ಜಾಸ್​ ಬಟ್ಲರ್​, ಗ್ಲೆನ್​ ಮ್ಯಾಕ್ಸ್​ವೆಲ್ ಅವರ ಕ್ರಿಕೆಟ್​ ಶಾಟ್​ಗಳ ಶೈಲಿಯಲ್ಲಿ ನೃತ್ಯ ಮಾಡಿದ್ದು ಕೂಡ ಈ ದೃಶ್ಯದಲ್ಲಿ ನೋಡಬಹುದಾಗಿದೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ಗೆ ಪಾಕಿಸ್ತಾನ ತಂಡ ಪ್ರಕಟಿಸಲು ಹೆದರುತ್ತಿರುವುದಕ್ಕೆ ಇದುವೇ ಅಸಲಿ ಕಾರಣ

ಕ್ರಿಕೆಟ್ ಯಾವಾಗಲೂ ಕೆರಿಬಿಯನ್ ಸಂಸ್ಕೃತಿಯ ಪ್ರಮುಖ ಭಾಗವಾಗಿದೆ. ಆದ್ದರಿಂದ ಟಿ20 ವಿಶ್ವಕಪ್‌ಗಾಗಿ ಅಧಿಕೃತ ಗೀತೆಯನ್ನು ಬರೆಯಲು ಮತ್ತು ರೆಕಾರ್ಡ್ ಮಾಡಲು ನನಗೆ ಗೌರವವಿದೆ. ಈ ಗೀತೆಗೆ ಸ್ಫೂರ್ತಿ ನೀಡಿದ ಸೃಜನಾತ್ಮಕ ಇನ್‌ಪುಟ್‌ನ ಸಂಪೂರ್ಣ ಸಿಬ್ಬಂದಿಗೆ ಗೌರವವು ಸಲ್ಲುತ್ತದೆ ಎಂದು ಸೋಕಾ ಸೂಪರ್‌ಸ್ಟಾರ್ ಕೆಸ್ ಹೇಳಿದ್ದಾರೆ.

ವಿಶ್ವಕಪ್​ಗೆ ಮುನ್ನ ಎಲ್ಲ 20 ತಂಡಗಳು ತಮ್ಮ ಆಗಮನಕ್ಕೆ ತಕ್ಕಂತೆ ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿವೆ. ಟೂರ್ನಿಯ ಲೀಗ್​ ಮತ್ತು ಸೂಪರ್​ 8 ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ಈ ಪಂದ್ಯಗಳಿಗೆ ಮಳೆ ಬಂದು ಪಂದ್ಯ ರದ್ದಾದರೆ ಸಮಾನ ಅಂಕ ನೀಡಲಾಗುತ್ತದೆ. ಆದರೆ, ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು ದಿನ ಇರಲಿದೆ. ಒಂದೊಮ್ಮೆ ಸೆಮಿ ಮತ್ತು ಫೈನಲ್​ ಫೈನಲ್​ ಪಂದ್ಯಗಳು ಕೂಡ ಮೀಸಲು ದಿನವೂ ನಡೆಯದಿದ್ದರೆ ಆಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡಕ್ಕೆ ಲಾಭ ಸಿಗಲಿದೆ.

Continue Reading

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ಗೆ ಪಾಕಿಸ್ತಾನ ತಂಡ ಪ್ರಕಟಿಸಲು ಹೆದರುತ್ತಿರುವುದಕ್ಕೆ ಇದುವೇ ಅಸಲಿ ಕಾರಣ

T20 World Cup 2024: ಮೇ 24 ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಲು ಅಂತಿಮ ದಿನವಾಗಿದೆ. ಹೀಗಾಗಿ ಪಾಕ್​ ಇದೇ ದಿನ ತನ್ನ ತಂಡವನ್ನು ಪ್ರಕಟಿಸಲು ಯೋಜನೆಯೊಂದನ್ನು ಹಾಕಿಕೊಂಡಂತಿದೆ. ಆದರೆ ಮೇ 1 ತಂಡದ ಆಯ್ಕೆಗೆ ಅಂತಿಮ ದಿನವಾದ ಕಾರಣ ಐಸಿಸಿ ಇದಕ್ಕೆ ಅನುಮತಿ ನೀಡಲಿದೆಯೇ ಎಂದು ಕಾದು ನೋಡಬೇಕಿದೆ.

VISTARANEWS.COM


on

T20 World Cup 2024
Koo

ಕರಾಚಿ: ಮುಂಬರುವ ಟಿ20 ವಿಶ್ವಕಪ್​ಗೆ(T20 World Cup 2024) ಈಗಾಗಲೇ ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್​, ನ್ಯೂಜಿಲ್ಯಾಂಡ್​ ಸೇರಿ ಹಲವು ದೇಶಗಳು ತಮ್ಮ ತಂಡವನ್ನು ಪ್ರಕಟಿಸಿದೆ. ತಂಡ ಪ್ರಕಟಿಸಲು ಮೇ 1 ಅಂತಿಮ ದಿನವಾಗಿದ್ದರೂ ಕೂಡ ಪಾಕ್​ ಇದುವರೆಗೆ ತಂಡವನ್ನು ಪ್ರಕಟಿಸಿಲ್ಲ. ಇದಕ್ಕೆ ಕಾರಣ ಏನೆಂಬುದು ತಿಳಿದು ಬಂದಿದೆ. ಹೌದು, ಕೆಲವು ಪ್ರಮುಖ ಆಟಗಾರರು ಫಿಟ್‌ನೆಸ್‌ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಮೇ 23 ಅಥವಾ 24ರ ವೇಳೆ ತಂಡವನ್ನು ಪ್ರಕಟಿಸುವುದು ಪಿಸಿಬಿ ಯೋಜನೆಯಾಗಿದೆ.

ಪ್ರಮುಖ ಟಿ20 ಆಟಗಾರರಾದ ಮೊಹಮ್ಮದ್‌ ರಿಜ್ವಾನ್‌, ಆಜಂ ಖಾನ್‌, ಇರ್ಫಾನ್‌ ಖಾನ್‌ ನಿಯಾಜಿ ಮತ್ತು ಹ್ಯಾರಿಸ್‌ ರೌಫ್ ಅವರು ಫಿಟ್‌ನೆಸ್‌ ಹೊಂದಿಲ್ಲ. ಹೀಗಾಗಿ ಇವರನ್ನು ಮುಂಬರುವ ಐರ್ಲೆಂಡ್‌, ಇಂಗ್ಲೆಂಡ್‌ ಸರಣಿಗಳಲ್ಲಿ ಆಡಿಸಿ ನೋಡುವುದು ಪಾಕ್​ನ ಉದ್ದೇಶವಾಗಿದೆ. ಮೇ 24 ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಲು ಅಂತಿಮ ದಿನವಾಗಿದೆ. ಹೀಗಾಗಿ ಪಾಕ್​ ಇದೇ ದಿನ ತನ್ನ ತಂಡವನ್ನು ಪ್ರಕಟಿಸಲು ಯೋಜನೆಯೊಂದನ್ನು ಹಾಕಿಕೊಂಡಂತಿದೆ. ಆದರೆ ಮೇ 1 ತಂಡದ ಆಯ್ಕೆಗೆ ಅಂತಿಮ ದಿನವಾದ ಕಾರಣ ಐಸಿಸಿ ಇದಕ್ಕೆ ಅನುಮತಿ ನೀಡಲಿದೆಯೇ ಎಂದು ಕಾದು ನೋಡಬೇಕಿದೆ.

ಭಾರತ ಮತ್ತು ಪಾಕಿಸ್ತಾನ ತಂಡಗಳು ಜೂನ್​ 9ರಂದು ನಡೆಯುವ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯಕ್ಕಾಗಿ ಉಭಯ ದೇಶಗಳ ಅಭಿಮಾನಿಗಳು ಚಾತಕ ಪಕ್ಷಿಯಂತೆ ಕಾದು ಕುಳಿತಿದ್ದಾರೆ. ನ್ಯೂಯಾರ್ಕ್​ನಲ್ಲಿ ತಾತ್ಕಾಲಿಕವಾಗಿ ತಲೆ ಎತ್ತಿದ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ(Nassau County International Cricket Stadium)ನಲ್ಲಿ ಇತ್ತಂಡಗಳ ನಡುವಣ ಪಂದ್ಯ ನಡೆಯಲಿದೆ.

34 ಸಾವಿರ ಪ್ರೇಕ್ಷಕರು ಕೂರುವಷ್ಟು ಸಾಮರ್ಥ್ಯದ ಸ್ಟೇಡಿಯಂ ಇದಾಗಿದ್ದು. ಭಾರತ-ಪಾಕ್​ ಪಂದ್ಯಕ್ಕಾಗಿಯೇ ಇದನ್ನು ತಾತ್ಕಾಲಿಕವಾಗಿ ನಿರ್ಮಿಸಲಾಗಿದೆ. ಪಂದ್ಯದ ನಂತರ ಇದನ್ನು ಕೆಡವಲಾಗುತ್ತದೆ. ಎಂದು ತಿಳಿಸಲಾಗಿದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ T20 World Cup 2024: ಡ್ರಾಪ್ -ಇನ್ ಪಿಚ್ ಅಳವಡಿಕೆ ಕಾರ್ಯ ಆರಂಭಿಸಿದ ಐಸಿಸಿ

ನ್ಯೂಯಾರ್ಕ್ ಮತ್ತು ನವದೆಹಲಿ ನಡುವೆ 10.5 ಗಂಟೆಗಳ ಸಮಯದ ವ್ಯತ್ಯಾಸವಿರುವುದರಿಂದ, ಸಂಘಟಕರು ಕೆಲವು ಪಂದ್ಯಗಳನ್ನು, ವಿಶೇಷವಾಗಿ ಭಾರತವನ್ನು ಒಳಗೊಂಡ ಪಂದ್ಯಗಳನ್ನು ಬೆಳಗ್ಗೆ ಪ್ರಾರಂಭಿಸಲು ಒಪ್ಪಿಕೊಂಡಿದ್ದಾರೆ. ಇದು ಭಾರತೀಯ ದೂರದರ್ಶನ ಪ್ರೇಕ್ಷಕರಿಗೆ ತಮ್ಮ ಅನುಕೂಲದ ಸಮಯದಲ್ಲಿ ಪಂದ್ಯವನ್ನು ನೋಡಲು ಸಹಾಯ ಮಾಡಲಿದೆ. ಜೂನ್​ 9 ಕೂಡ ಭಾನುವಾರವಾಗಿದೆ. ಅಮೆರಿಕದಲ್ಲಿ ರಾತ್ರಿ ಪಂದ್ಯ ಆಯೋಜಿಸಿದರೆ, ಭಾರತದಲ್ಲಿ ಸೋಮವಾರ ಮುಂಜಾನೆ ಪಂದ್ಯ ಪ್ರಸಾರವಾಗುತ್ತದೆ. ಹೀಗಾಗಿ ಅಮೆರಿಕದಲ್ಲಿ ರಾತ್ರಿ ಪಂದ್ಯ ನಡೆಸುವುದಾದರೆ ಜೂನ್​ 8ರಂದೇ ನಡೆಯಲಿದೆ. ಆಗ ಭಾರತದಲ್ಲಿ ಭಾನುವಾರ ಬೆಳಗ್ಗೆ ಪಂದ್ಯ ಪ್ರಸಾರವಾಗಲಿದೆ.

Continue Reading

ಕ್ರೀಡೆ

IPL 2024 Points Table: ರೋಚಕ 1 ರನ್ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಹೈದರಾಬಾದ್​

IPL 2024 Points Table: ಹೈದರಾಬಾದ್​ ಗೆಲುವಿನಿಂದ ಚೆನ್ನೈ ಸೂಪರ್​ ಕಿಂಗ್ಸ್​ ತಂಡ 1 ಸ್ಥಾನಗಳ ಕುಸಿತ ಕಂಡಿತು. ಇಂದು ನಡೆಯುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ಮತ್ತು ಕೆಕೆಆರ್​ ತಂಡಗಳು ಮುಖಾಮುಖಿಯಾಗಲಿವೆ. ಮುಂಬೈ ಸೋತರೆ ಟೂರ್ನಿಯಿಂದ ಹೊರಬೀಳಲಿದೆ.

VISTARANEWS.COM


on

IPL 2024 Points Table
Koo

ಹೈದರಾಬಾದ್​: ಅತ್ಯಂತ ರೋಚಕವಾಗಿ ಸಾಗಿದ, ಕ್ರಿಕೆಟ್​ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸುವಂತೆ ಮಾಡಿದ ಸನ್​ರೈಸರ್ಸ್​ ಹೈದರಾಬಾದ್​ ಮತ್ತು ರಾಜಸ್ಥಾನ್​ ರಾಯಲ್ಸ್​ ನಡುವಿನ ಪಂದ್ಯದಲ್ಲಿ ಕೊನೆಗೂ ಹೈದರಾಬಾದ್​ ರೋಚಕ 1 ರನ್​ ಅಂತರದ ಗೆಲುವು ಸಾಧಿಸಿ ಮೆರೆದಾಡಿತು. ಈ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ(IPL 2024 Points Table) 4ನೇ ಸ್ಥಾನಕ್ಕೇರಿತು.

ಹೈದರಾಬಾದ್​ ಗೆಲುವಿನಿಂದ ಚೆನ್ನೈ ಸೂಪರ್​ ಕಿಂಗ್ಸ್​ ತಂಡ 1 ಸ್ಥಾನಗಳ ಕುಸಿತ ಕಂಡಿತು. ಇಂದು ನಡೆಯುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ಮತ್ತು ಕೆಕೆಆರ್​ ತಂಡಗಳು ಮುಖಾಮುಖಿಯಾಗಲಿವೆ. ಮುಂಬೈ ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಕೆಕೆಆರ್​ ಗೆದ್ದರೆ 14 ಅಂಕದೊಂದಿಗೆ 2ನೇ ಸ್ಥಾನದಲ್ಲೇ ಮುಂದುವರಿಯಲಿದೆ.

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ರಾಜಸ್ಥಾನ್​ ರಾಯಲ್ಸ್​98116 (+0.694)
ಕೆಕೆಆರ್​​96312 (+1.096)
ಲಕ್ನೋ​​106412 (+0.094)
ಹೈದರಾಬಾದ್​106512 (+0.072)
ಚೆನ್ನೈ​105510 (+0.627)
ಡೆಲ್ಲಿ115610 (-0.442)
ಪಂಜಾಬ್​10488 (-0.062)
ಗುಜರಾತ್​10468 (-1.113)
ಮುಂಬೈ10376 (-0.272)
ಆರ್​ಸಿಬಿ10376 (-0.415)

ರಾಜೀವ್​ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಎಸ್​ಆರ್​ಎಚ್​ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 201 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ರಾಜಸ್ಥಾನ್ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 200 ರನ್ ಬಾರಿಸಿ ಸೋಲೊಪ್ಪಿಕೊಂಡಿತು. ಕೊನೇ ಓವರ್​ನಲ್ಲಿ ರಾಯಲ್ಸ್ ತಂಡಕ್ಕೆ 13 ರನ್​ಗಳು ಬೇಕಾಗಿತ್ತು. ಪೊವೆಲ್​ ನಿಖರವಾಗಿ ರನ್​ ಗಳಿಸಿ ತಂಡವನ್ನು ಗೆಲುವಿನ ಹೊಸ್ತಿಲಲ್ಲಿ ತಂದು ನಿಲ್ಲಿಸಿದ್ದರು. ಆದರೆ, ಭುವನೇಶ್ವರ್ ಕುಮಾರ್​ ಲೊ ಪುಲ್​ಟಾಸ್​ ಹಾಕುವ ಮೂಲಕ ಪೊವೆಲ್ ಅವರನ್ನು ಎಲ್​ಬಿಡಬ್ಲ್ಯು ಬಲೆಗೆ ಕೆಡವಿದರು.

ಇದನ್ನೂ ಓದಿ IPL 2024 Points Table: ಚೆನ್ನೈ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ಪ್ರಗತಿ ಸಾಧಿಸಿದ ಪಂಜಾಬ್​

ಮೊದಲು ಬ್ಯಾಟಿಂಗ್​ ನಡೆಸಿದ ಎಸ್​ಆರ್​​ಎಚ್​ ತಂಡ ಅಭಿಶೇಕ್​ ಶರ್ಮಾ ಅವರನ್ನು 12 ರನ್​ಗೆ ಕಳೆದುಕೊಂಡಿತು. ಈ ವೇಳೆ ತಂಡದ ಮೊತ್ತ 25 ಆಗಿತ್ತು. ನಂತರ ಬಂದ ಅನ್ಮೋಲ್ ಪ್ರೀತ್ ಸಿಂಗ್​ 5 ರನ್​ಗೆ ಔಟಾಗಿ ನಿರಾಸೆ ಮೂಡಿಸಿದರು. ಆ ಬಳಿಕ ಜತೆಯಾದ ನಿತೀಶ್​ ಕುಮಾರ್ ರೆಡ್ಡಿ ಅರಂಭಿಕ ಬ್ಯಾಟರ್​ ಟ್ರಾವಿಸ್​ ಹೆಡ್​ ಜತೆ ಉತ್ತಮವಾಗಿ ಬ್ಯಾಟ್ ಬೀಸಿದರು. ಅವರಿಬ್ಬರೂ ನಾಲ್ಕನೇ ವಿಕೆಟ್​ಗೆ 96 ರನ್ ಜತೆಯಾಟ ನೀಡಿದರು. ಹೆಡ್​ 58 ರನ್ ಬಾರಿಸಿದರೆ ನಿತೀಶ್​ 76 ರನ್ ಬಾರಿಸಿ ಅಜೇಯವಾಗಿ ಉಳಿದರು. ಕೊನೆಯಲ್ಲಿ ಹೆನ್ರಿಚ್ ಕ್ಲಾಸೆನ್​ 19 ಎಸೆತಕ್ಕೆ 42 ರನ್​ ಬಾರಿಸುವ ಮೂಲಕ ತಂಡದ ಮೊತ್ತವನ್ನು 200 ರ ಗಡಿ ದಾಟಿಸಲು ನೆರವಾದರು.

Continue Reading

ಪ್ರಮುಖ ಸುದ್ದಿ

IPL 2024 : ರಾಜಸ್ಥಾನ್ ವಿರುದ್ಧ ಎಸ್​​ಆರ್​ಎಚ್​​ ತಂಡಕ್ಕೆ ರೋಚಕ 1 ರನ್ ಗೆಲುವು

IPL 2024: ಟಾಸ್ ಗೆದ್ದ ಎಸ್​ಆರ್​ಎಚ್​ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 201 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ರಾಜಸ್ಥಾನ್ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 200 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

IPL 2024
Koo

ಹೈದರಾಬಾದ್​​: ಕೊನೇ ಓವರ್​ನ ಕೊನೇ ಎಸೆತದ ತನಕವೂ ಕುತೂಹಲ ಮೂಡಿಸಿದ್ದ ರಾಜಸ್ಥಾನ್​ ರಾಯಲ್ಸ್​ ಹಾಗೂ ಸನ್​ ರೈಸರ್ಸ್​ ಹೈದರಾಬಾದ್​ ನಡುವಿನ ಪಂದ್ಯದಲ್ಲಿ ರೋಚಕ ಒಂದು ರನ್ ಗೆಲುವಿನ ಫಲಿತಾಂಶ ಮೂಡಿ ಬಂತು. ಇದರೊಂದಿಗೆ ಐಪಿಎಲ್​ 17ನೇ ಆವೃತ್ತಿಯಲ್ಲಿ (IPL 2024) ಸತತ ಎರಡು ಸೋಲುಗಳ ಮೂಲಕ ನಿರಾಸೆ ಎದುರಿಸಿದ್ದ ಹೈದರಾಬಾದ್ ತಂಡ ಗೆಲುವಿನ ಹಾದಿಗೆ ಮರಳಿತು. ಅತ್ತ ರಾಜಸ್ಥಾನ್​ ​ ತಂಡ ಎರಡನೇ ಸೋಲಿಗೆ ಒಳಗಾಯಿತು. ಕೊನೇ ಎಸೆತದಲ್ಲಿ ರಾಯಲ್ಸ್ ತಂಡದ ಗೆಲುವಿಗೆ ಎರಡು ರನ್​ ಬೇಕಾಗಿದ್ದವು. ಆದರೆ, ಭುವನೇಶ್ವರ್ ಕುಮಾರ್​ ರಾಯಲ್ಸ್​ ಬ್ಯಾಟರ್​ ಪೊವೆಲ್​ ರೊವ್ಮನ್​ ಪೊವೆಲ್​ ಅವರನ್ನು ಎಲ್​ಬಿಡಬ್ಲ್ಯು ಮಾಡಿ ತವರು ತಂಡಕ್ಕೆ ಗೆಲುವು ತಂದುಕೊಟ್ಟರು.

ಇಲ್ಲಿನ ರಾಜೀವ್​ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಎಸ್​ಆರ್​ಎಚ್​ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 201 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ರಾಜಸ್ಥಾನ್ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 200 ರನ್ ಬಾರಿಸಿ ಸೋಲೊಪ್ಪಿಕೊಂಡಿತು. ಕೊನೇ ಓವರ್​ನಲ್ಲಿ ರಾಯಲ್ಸ್ ತಂಡಕ್ಕೆ 13 ರನ್​ಗಳು ಬೇಕಾಗಿತ್ತು. ಪೊವೆಲ್​ ನಿಖರವಾಗಿ ರನ್​ ಗಳಿಸಿ ತಂಡವನ್ನು ಗೆಲುವಿನ ಹೊಸ್ತಿಲಲ್ಲಿ ತಂದು ನಿಲ್ಲಿಸಿದ್ದರು. ಆದರೆ, ಭುವನೇಶ್ವರ್ ಕುಮಾರ್​ ಲೊ ಪುಲ್​ಟಾಸ್​ ಹಾಕುವ ಮೂಲಕ ಪೊವೆಲ್ ಅವರನ್ನು ಎಲ್​ಬಿಡಬ್ಲ್ಯು ಬಲೆಗೆ ಕೆಡವಿದರು.

ನಿತೀಶ್ ಅರ್ಧ ಶತಕ

ಬ್ಯಾಟಿಂಗ್ ಆರಂಭಿಸಿದ ಎಸ್​ಆರ್​​ಎಚ್​ ತಂಡ ಅಭಿಶೇಕ್​ ಶರ್ಮಾ ಅವರನ್ನು 12 ರನ್​ಗೆ ಕಳೆದುಕೊಂಡಿತು. ಈ ವೇಳೆ ತಂಡದ ಮೊತ್ತ 25 ಆಗಿತ್ತು. ನಂತರ ಬಂದ ಅನ್ಮೋಲ್ ಪ್ರೀತ್ ಸಿಂಗ್​ 5 ರನ್​ಗೆ ಔಟಾಗಿ ನಿರಾಸೆ ಮೂಡಿಸಿದರು. ಆ ಬಳಿಕ ಜತೆಯಾದ ನಿತೀಶ್​ ಕುಮಾರ್ ರೆಡ್ಡಿ ಅರಂಭಿಕ ಬ್ಯಾಟರ್​ ಟ್ರಾವಿಸ್​ ಹೆಡ್​ ಜತೆ ಉತ್ತಮವಾಗಿ ಬ್ಯಾಟ್ ಬೀಸಿದರು. ಅವರಿಬ್ಬರೂ ನಾಲ್ಕನೇ ವಿಕೆಟ್​ಗೆ 96 ರನ್ ಜತೆಯಾಟ ನೀಡಿದರು. ಹೆಡ್​ 58 ರನ್ ಬಾರಿಸಿದರೆ ನಿತೀಶ್​ 76 ರನ್ ಬಾರಿಸಿ ಅಜೇಯವಾಗಿ ಉಳಿದರು. ಕೊನೆಯಲ್ಲಿ ಹೆನ್ರಿಚ್ ಕ್ಲಾಸೆನ್​ 19 ಎಸೆತಕ್ಕೆ 42 ರನ್​ ಬಾರಿಸುವ ಮೂಲಕ ತಂಡದ ಮೊತ್ತವನ್ನು 200 ರ ಗಡಿ ದಾಟಿಸಲು ನೆರವಾದರು.

ಇದನ್ನೂ ಓದಿ: M S Dhoni : ಧೋನಿಯನ್ನು ರನ್​ಔಟ್ ಮಾಡಿದ ಜಿತೇಶ್​ ಶರ್ಮಾ ನಿಂದಿಸಿದ ಅಭಿಮಾನಿಗಳು!

ದೊಡ್ಡ ಗುರಿ ಬೆನ್ನಟ್ಟಲು ಅರಂಭಿಸಿದ ಎಸ್​ಆರ್​​ಎಚ್​ 1 ರನ್​ಗೆ 2 ವಿಕೆಟ್ ಕಳೆದುಕೊಂಡಿತು. ಜೋಸ್ ಬಟ್ಲರ್​ ಹಾಗೂ ನಾಯಕ ಸಂಜು ಸ್ಯಾಮ್ಸನ್​ ಶೂನ್ಯಕ್ಕೆ ಔಟಾಗಿದ್ದರು. ಆದರೆ, ಆರಂಭಿಕ ಬ್ಯಾಟರ್​ ಜೈಸ್ವಾಲ್ 67 ರನ್ ಬಾರಿಸಿ ವಿಕೆಟ್​ ಬೀಳದಂತೆ ನೋಡಿಕೊಂಡರು. ರಿಯಾನ್ ಪರಾಗ್​ 77 ರನ್ ಬಾರಿಸಿ ತಂಡಕ್ಕೆ ಗೆಲುವಿನ ಆಸೆ ಮೂಡಿಸಿದರು. ಆದರೆ, ಆ ಬಳಿಕ ಸತತವಾಗಿ ವಿಕೆಟ್ ಕಳೆದುಕೊಂಡು ಸೋಲೊಪ್ಪಿಕೊಂಡಿತು. ಭುವನೇಶ್ವರ್ ಕುಮಾರ್​ 3 ವಿಕೆಟ್​ ಪಡೆದು ಮಿಂಚಿದರು.

Continue Reading
Advertisement
Elephant attack in Shivamogga
ಶಿವಮೊಗ್ಗ11 mins ago

Elephant attack : ನಿಲ್ಲದ ಕಾಡು ಪ್ರಾಣಿಗಳ ಹಾವಳಿ; ಶಿವಮೊಗ್ಗದಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿ

Lalu Prasad Yadav
ದೇಶ14 mins ago

Lalu Prasad Yadav: ಬಿಹಾರದಲ್ಲಿ ಲಾಲೂ ಪ್ರಸಾದ್‌ ಯಾದವ್‌ v/s ಲಾಲೂ ಪುತ್ರಿ

Kiccha Sudeep jailer fame kevin has composed stunt in max
ಸ್ಯಾಂಡಲ್ ವುಡ್17 mins ago

Kiccha Sudeep: ಕಿಚ್ಚ ಸುದೀಪ್ ಸಿನಿಮಾಗೆ ‘ಜೈಲರ್’ ಸ್ಟಂಟ್ ಮಾಸ್ಟರ್ ಎಂಟ್ರಿ!

prajwal revanna case hd revanna farm house
ಕ್ರೈಂ22 mins ago

Prajwal Revanna Case: ಪ್ರಜ್ವಲ್‌ ರೇವಣ್ಣ, ರೇವಣ್ಣ ಮನೆ ಇಂಚಿಂಚೂ ತಲಾಶ್, ಸಿಗ್ತಾ ಮಹತ್ವದ ಕ್ಲೂ?

Thomas Cup 2024
ಕ್ರೀಡೆ57 mins ago

Thomas Cup 2024: ಉಬೆರ್‌ ಕಪ್‌ ಬಳಿಕ ಥಾಮಸ್‌ ಕಪ್​ನಲ್ಲಿಯೂ ಮುಗ್ಗರಿಸಿದ ಭಾರತ

ACTOR DHANUSH Nagarjuna mysterious first look from Kubera
ಕಾಲಿವುಡ್59 mins ago

Actor Dhanush: ಧನುಷ್‌ ನಟನೆಯ ʻಕುಬೇರʼ ಸಿನಿಮಾದ ನಾಗಾರ್ಜುನ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌!

Viral News
ವೈರಲ್ ನ್ಯೂಸ್1 hour ago

Viral News: ಶಾಕಿಂಗ್‌ ವಿಡಿಯೊ; ಹಾವು ಕಚ್ಚಿದ್ದ ಯುವಕ ಗುಣಮುಖನಾಗಲೆಂದು ಗಂಗಾ ನದಿಯಲ್ಲಿ ನೇತಾಡಿಸಿದರು!

T20 World Cup 2024
ಕ್ರಿಕೆಟ್1 hour ago

T20 World Cup 2024: ಟಿ20 ವಿಶ್ವಕಪ್​ನ ಅಧಿಕೃತ ಹಾಡು ಬಿಡುಗಡೆ; ಕುಣಿದು ಕುಪ್ಪಳಿಸಿದ ಕ್ರಿಸ್​ ಗೇಲ್​, ಉಸೇನ್‌ ಬೋಲ್ಟ್

woman assault case haveri
ಕ್ರೈಂ2 hours ago

Assault Case: ಇನ್ನೊಂದು ವಂಟಮೂರಿ ಮಾದರಿ ಕೇಸ್‌, ಮಹಿಳೆಯನ್ನು ಕಂಬಕ್ಕೆ ಕಟ್ಟಿ ಥಳಿತ

West Bengal Governor
ದೇಶ2 hours ago

West Bengal Governor: ರಾಜ್ಯಪಾಲರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ; TMC ಆಕ್ರೋಶ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ16 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌