ಸಿಡ್ನಿ: ಐಪಿಎಲ್ ಮುಗಿದು ಇದೀಗ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಆಡಲು ಸಿದ್ಧರಾಗಿದ್ದಾರೆ. ಈ ಪಂದ್ಯದ ಬಗ್ಗೆ ಈಗಾಗಲೇ ಹಲವು ಮಾಜಿ ಕ್ರಿಕೆಟ್ ದಿಗ್ಗಜರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ಸಾಲಿಗೆ ಇದೀಗ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಕೂಡ ಸೇರಿದ್ದಾರೆ. ವಿರಾಟ್ ಕೊಹ್ಲಿ ಮತ್ತು ಚೇತೇಶ್ವರ್ ಪುಜಾರ ಬಗ್ಗೆ ವಿಶೇಷ ನಿಗಾ ವಹಿಸುವಂತೆ ಆಸೀಸ್ ತಂಡಕ್ಕೆ ಎಚ್ಚರಿಕೆಯ ಸಂದೇಶವೊಂದನ್ನು ನೀಡಿದ್ದಾರೆ.
ಐಸಿಸಿ ನಡೆಸಿದ ಸಂದರ್ಶನದಲ್ಲಿ ಪಾಂಟಿಂಗ್ ಈ ವಿಚಾರವನ್ನು ಹೇಳಿದ್ದಾರೆ. “ಪೂಜಾರ ಮತ್ತು ವಿರಾಟ್ ಕೊಹ್ಲಿ ಅವರು ಆಸ್ಟ್ರೇಲಿಯಾ ವಿರುದ್ಧ ಉತ್ತಮ ದಾಖಲೆ ಹೊಂದಿದ್ದಾರೆ. ಅದರಲ್ಲೂ ಪೂಜಾರ ಆಸೀಸ್ ವಿರುದ್ದ ಆಡಿದ 24 ಟೆಸ್ಟ್‌ಗಳಲ್ಲಿ ಐದು ಶತಕಗಳನ್ನು ಗಳಿಸಿದ್ದಾರೆ. ಕೊಹ್ಲಿ ಕೂಡಾ ಉತ್ತಮ ದಾಖಲೆ ಹೊಂದಿದ್ದಾರೆ. ಅವರನ್ನು ಹೆಚ್ಚು ಸಮಯ ಕ್ರೀಸ್ನಲ್ಲಿ ಇರದಂತೆ ನೋಡಿಕೊಂಡರೆ ಆಸೀಸ್ಗೆ ಮೇಲುಗೈ ಖಚಿತ ಎಂದು ಹೇಳಿದ್ದಾರೆ.
ಮೈಂಡ್ ಗೇಮ್ ವಿಚಾರದಲ್ಲಿ ಪಾಂಟಿಂಗ್ ಅವರು ಪಂಟರ್. ಅವರು ಆಸೀಸ್ ನಾಯಕನಾಗಿದ್ದ ವೇಳೆ ಎದುರಾಳಿ ತಂಡವನ್ನು ಯಾವ ರೀತಿ ಕುಗ್ಗಿಸಬೇಕು ಎಂಬ ಕಲೆಯನ್ನು ಸರಿಯಾಗಿ ತಿಳಿದಿದ್ದರು. ಇದೇ ಅಸ್ತ್ರವನ್ನು ಬಳಸಿಕೊಂಡು ಅವರು ತಂಡಕ್ಕೆ ಹಲವು ಟ್ರೋಫಿಗಳನ್ನು ತಂದುಕೊಟ್ಟಿದ್ದಾರೆ.
ಉಭಯ ತಂಡಗಳು
ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಜೋಶ್ ಹೇಜಲ್ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಉಸ್ಮಾನ್ ಖವಾಜಾ, ಮಾರ್ನಸ್ ಲಾಬುಶೇನ್, ನಾಥನ್ ಲಿಯಾನ್, ಟಾಡ್ ಮರ್ಫಿ, ಸ್ಟೀವ್ ಸ್ಮಿತ್ (ಉಪನಾಯಕ), ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್. ಮೀಸಲು ಆಟಗಾರರು: ಮಿಚೆಲ್ ಮಾರ್ಷ್, ಮ್ಯಾಥ್ಯೂ ರೆನ್ಶಾ
ಇದನ್ನೂ ಓದಿ WTC Final 2023: ಭಾರತದ ಸ್ಪಿನ್ನರ್ಗಳ ಬಗ್ಗೆ ಎಚ್ಚರ ಅಗತ್ಯ; ಸ್ಟೀವನ್ ಸ್ಮಿತ್
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆ.ಎಸ್.ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕತ್, ಇಶಾನ್ ಕಿಶನ್ (ವಿಕೆಟ್ ಕೀಪರ್). ಮೀಸಲು ಆಟಗಾರರು: ಯಶಸ್ವಿ ಜೈಸ್ವಾಲ್, ಮುಖೇಶ್ ಕುಮಾರ್, ಸೂರ್ಯಕುಮಾರ್ ಯಾದವ್.