ಲಂಡನ್: ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಜೂನ್ 7ರಂದು ಲಂಡನ್ನ ಕೆನ್ನಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಈ ಪಂದ್ಯದ ವೀಕ್ಷಣೆಗಾಗಿ ಕಾದು ಕುಳಿತಿರುವ ಅಸಂಕ್ಯಾತ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಒಂದು ಒಳ್ಳೆಯ ಸುದ್ದಿಯಿದೆ. ಆಟದ ನೇರ ಪ್ರಸಾರವನ್ನು ದೂರದರ್ಶನದಲ್ಲಿ ಉಚಿತವಾಗಿ ವೀಕ್ಷಿಸಬಹುದು. ಈ ಸುದ್ದಿಯನ್ನು ದೂರದರ್ಶನವು ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್ನಲ್ಲಿ ಒದಗಿಸಿದೆ. ಹೀಗಾಗಿ ಪೇಯ್ಡ್ ಚಾನೆಲ್ನ ರಗಳೆ ಇಲ್ಲದೇ ಡಿಡಿ ಮೂಲಕ ಪಂದ್ಯವನ್ನು ನೋಡಲು ಸಾಧ್ಯವಿದೆ.
ದೂರದರ್ಶನದ ಹೊರತಾಗಿ, ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನ ಚಾನೆಲ್ಗಳಲ್ಲಿ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ನೇರ ಪ್ರಸಾರವಾಗಿದೆ. ಲೈವ್ ಸ್ಟ್ರೀಮಿಂಗ್ ಭಾರತದಲ್ಲಿ ಡಿಸ್ನಿ ಪ್ಲಸ್ ಹಾಟ್ಸ್ಟಾರ್ನಲ್ಲಿ ಲಭ್ಯವಿರುತ್ತದೆ. ಆಸ್ಟ್ರೇಲಿಯಾದಲ್ಲಿ, ಪಂದ್ಯವನ್ನು ಫಾಕ್ಸ್ ಸ್ಪೋರ್ಟ್ಸ್ ಚಾನೆಲ್ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಇಂಗ್ಲೆಂಡ್ನಲ್ಲಿ ಸ್ಕೈ ಸ್ಪೋರ್ಟ್ಸ್ ಕ್ರಿಕೆಟ್ ಚಾನೆಲ್ನಲ್ಲಿ ವೀಕ್ಷಿಸಬಹುದು.
ಇದನ್ನೂ ಓದಿ : WTC Final 2023 : ಆಸ್ಟ್ರೇಲಿಯಾ ವಿರುದ್ಧ ಅಬ್ಬರಿಸುವ ಸೂಚನೆ ನೀಡಿದ ರೋಹಿತ್ ಶರ್ಮಾ
ಡಬ್ಲ್ಯುಟಿಸಿ 2021-23 ರ ಶ್ರೇಯಾಂಕದಲ್ಲಿ ಆಸ್ಟ್ರೇಲಿಯಾವು ಶೇಕಡಾ 66.67 ಮತ್ತು 152 ಅಂಕಗಳೊಂದಿಗೆ ಅಗ್ರಸ್ಥಾನವನ್ನು ಪಡೆದರೆ, ಭಾರತವು ಶೇಕಡಾ 58.8 ಮತ್ತು 127 ಅಂಕಗಳೊಂದಿಗೆ ಎರಡನೇ ಸ್ಥಾನವನ್ನು ಗಳಿಸಿದೆ.
ಪಂದ್ಯದ ವಿವರಗಳು
ಡಬ್ಲ್ಯುಟಿಸಿ ಫೈನಲ್ 2023 ಯಾವಾಗ ನಡೆಯಲಿದೆ? : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಪಂದ್ಯ ಜೂನ್ 7 ರಿಂದ 11 ರವರೆಗೆ ನಡೆಯಲಿದೆ.
ಡಬ್ಲ್ಯುಟಿಸಿ ಫೈನಲ್ 2023 ಎಲ್ಲಿ ನಡೆಯಲಿದೆ?: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಪಂದ್ಯ ಲಂಡನ್ನ ಕೆನ್ನಿಂಗ್ಟನ್ ಓವಲ್ನಲ್ಲಿ ನಡೆಯಲಿದೆ.
ಡಬ್ಲ್ಯುಟಿಸಿ ಫೈನಲ್ 2023 ಯಾವಾಗ ಪ್ರಾರಂಭವಾಗುತ್ತದೆ?: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಪಂದ್ಯ ಭಾರತದಲ್ಲಿ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ.
ಡಬ್ಲ್ಯುಟಿಸಿ ಫೈನಲ್ 2023: ತಂಡಗಳು
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆ.ಎಸ್.ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ. ಮೊಹಮ್ಮದ್ ಶಮಿ, ಮೊಹಮ್ಮದ್. ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್
ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಮಾರ್ಕಸ್ ಹ್ಯಾರಿಸ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಸ್ಟೀವನ್ ಸ್ಮಿತ್, ಡೇವಿಡ್ ವಾರ್ನರ್, ಮಾರ್ನಸ್ ಲಾಬುಶೇನ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯೇರಿ (ವಿಕೆಟ್ ಕೀಪರ್), ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಸ್ಕಾಟ್ ಬೋಲ್ಯಾಂಡ್, ಜೋಶ್ ಹೇಜಲ್ವುಡ್, ನಾಥನ್ ಲಿಯಾನ್, ಟಾಡ್ ಮರ್ಫಿ, ಮಿಚೆಲ್ ಸ್ಟಾರ್ಕ್.
ಜೂನ್ 7 ರಂದು ಓವಲ್ನಲ್ಲಿ ನಡೆಯಲಿರುವ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್ ಮತ್ತು ಅಜಿಂಕ್ಯ ರಹಾನೆ ಅವರಂತಹ ಹಿರಿಯ ಆಟಗಾರರ ಅನುಭವ ಬಳಸಿಕೊಳ್ಳಲಿದೆ. ಡಬ್ಲ್ಯುಟಿಸಿ ಫೈನಲ್ 2021ರಲ್ಲಿನ ಸೋಲಿನ ಬೇಸರಕ್ಕೆ ಉತ್ತರ ಹೇಳಿಕೊಳ್ಳಲಿದೆ. ಕಳೆದ ಎರಡು ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಗಳಲ್ಲಿ ಭಾರತದ ವಿರುದ್ಧ ಸೋತ ನಂತರ ಪ್ಯಾಟ್ ಕಮಿನ್ಸ್ ಭಾರತದ ವಿರುದ್ಧ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ. ಪಂದ್ಯವು ವೇಗದ ಬೌಲಿಂಗ್ ಸ್ನೇಹಿ ಪರಿಸ್ಥಿತಿಗಳಲ್ಲಿ ನಡೆಯುತ್ತಿರುವುದರಿಂದ, ಕಮಿನ್ಸ್ ತಂಡಕ್ಕೆ ಗೆಲುವಿನ ವಿಶ್ವಾಸ ಹೆಚ್ಚಿದೆ.