Site icon Vistara News

YAJAMANA PREMIER LEAGUE SEASON-3: ಈ ಬಾರಿ ಟಿ10 ಮಾದರಿಯಲ್ಲಿ ನಡೆಯಲಿದೆ ಯಜಮಾನ ಪ್ರೀಮಿಯರ್ ಲೀಗ್​

YAJAMANA PREMIER LEAGUE SEASON-3 (2)

ಬೆಂಗಳೂರು: ಮೂರನೇ ಆವೃತ್ತಿಯ ಯಜಮಾನ ಪ್ರೀಮಿಯರ್ ಲೀಗ್(ವೈಪಿಎಲ್-3)ನ(YAJAMANA PREMIER LEAGUE SEASON-3) ದಿನಾಂಕ ಪ್ರಕಟಗೊಂಡಿದೆ. ಮೇ 4 ಮತ್ತು 5 ರಂದು ಎರಡು ದಿನಗಳ ಕಾಲ‌ ಟೂರ್ನಿ ನಡೆಯಲಿದೆ. ಶನಿವಾರ ತಂಡದ ಜರ್ಸಿ ಕೂಡ ಬಿಡುಗಡೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ನಟ ಜಯರಾಮ್ ಕಾರ್ತಿಕ್ ವಿಶೇಷ ಅತಿಥಿಯಾಗಿ ಕಾಣಿಸಿಕೊಂಡಿದ್ದರು.

ಜೆರ್ಸಿ ಬಿಡುಗಡೆಗೊಳಿಸಿದ ಬಳಿಕ ಮಾತನಾಡಿದ ನಟ ಜಯರಾಮ್ ಕಾರ್ತಿಕ್, ಒಂದು ಕ್ರಿಕೆಟ್ ಪಂದ್ಯಾವಳಿ ನಡೆಸುವುದು ಎಷ್ಟು ಕಷ್ಟ ಎನ್ನುವುದನ್ನು ನಾನು ಹತ್ತಿರದಿಂದ ನೋಡಿದ್ದೇನೆ. ಯಜಮಾನ ಪ್ರೀಮಿಯರ್ ಲೀಗ್​ ಮೂರನೇ ವರ್ಷಕ್ಕೆ ಕಾಲಿಟ್ಟಿದೆ. ಇದು ಸಂತಸದ ವಿಚಾರ. ಈ ಲೀಗ್​ 100 ಆವೃತ್ತಿಯನ್ನು ಕಾಣಲಿ ಎಂದು ಹಾರೈಸುತ್ತೇನೆ. ವಿಷ್ಣು ಸರ್​ ಎಲ್ಲರಿಗೂ ಅಚ್ಚುಮೆಚ್ಚು. ಅವರ ಹೆಸರಿಗೆ ತಕ್ಕಂತೆ ಲೀಗ್​ಗೆ ಯಜಮಾನ ಲೀಗ್​ ಎಂದು ಹೆಸರಿಟ್ಟಿದ್ದು ಚೆನ್ನಾಗಿದೆ. ಇದು ನಮ್ಮ ಹೃದಯಕ್ಕೆ ಹತ್ತಿರವಾಗಿದೆ. ವಿಷ್ಣು ಸರ್ ನಮಗೆ ಸ್ಫೂರ್ತಿ. ಈ ಲೀಗ್​ನಲ್ಲಿ ಪಾಲ್ಗೊಳ್ಳುವ ಎಲ್ಲ ತಂಡಗಳಿಗೂ ಆಲ್ ದಿ ಬೆಸ್ಟ್ ಎಂದರು.


ಇದನ್ನೂ ಓದಿ RCB vs GT: ವಿಲ್​ ಜ್ಯಾಕ್ಸ್ ಅಜೇಯ ಶತಕ; ಆರ್​ಸಿಬಿಗೆ 9 ವಿಕೆಟ್​ ಭರ್ಜರಿ ಗೆಲುವು

ಯದುನಂದನ್ ಗೌಡ ಮಾತನಾಡಿ, ಯಜಮಾನ ಪ್ರೀಮಿಯರ್ ಲೀಗ್ ನ ಮೂರು ವರ್ಷಗಳ ಹಿಂದೆ ಸಣ್ಣ ಪ್ರಮಾಣದಲ್ಲಿ ಶುರು ಮಾಡಿದ್ದೇವು.‌ ಪ್ರೀಮಿಯರ್, ಐಪಿಎಲ್ ಅಂತಾ ಕ್ರಿಕೆಟ್ ಪಂದ್ಯಾವಳಿ ಮಾಡುತ್ತಾರೆ. ನಾವು ಯಾಕೆ ವಿಷ್ಣು ಸರ್(Dr.Vishnu Sena Samiti) ಹೆಸರಿನಲ್ಲಿ ಮಾಡಬಾರದು ಎಂದು ಅವರ ಹೆಸರಲ್ಲಿ ಶುರು ಮಾಡಿದೆವು. ಕನ್ನಡ ಇಂಡಸ್ಟ್ರೀಗೆ ಕ್ರಿಕೆಟ್ ಪರಿಚಯಿಸಿದ್ದು,ನಮ್ಮ ಯಜಮಾನರು. ವಿಷ್ಣು ಸರ್ ಕನಸುಗಳಿಗೆ ಬಣ್ಣ ಹಚ್ಚುವ ಕೆಲಸ ನಡೆಯುತ್ತಿಲ್ಲ. ಹೀಗಾಗಿ ಅಭಿಮಾನಿಗಳೇ ಸೇರಿಕೊಂಡು ಯಜಮಾನ ಪ್ರೀಮಿಯರ್ ಲೀಗ್ ಪ್ರಾರಂಭಿಸಿದೆವು. ಸ್ಟಾರ್​ ವಾರ್​ ಬಿಟ್ಟು ಕನ್ನಡ ಚಿತ್ರರಂಗದ ಅಭಿಮಾನಿಗಳನ್ನು ಒಂದೇ ವೇದಿಕೆಯಲ್ಲಿ ತರುವ ಕೆಲಸವನ್ನು ಯಜಮಾನ ಪ್ರೀಮಿಯರ್ ಲೀಗ್ ಮೂಲಕ ಮಾಡಲಾಗಿದೆ. ನಿಮ್ಮ ಸಹಕಾರ ಇದ್ದರೆ ಈ ಪಂದ್ಯಾವಳಿಯನ್ನು ಮುಂದುವರೆಸಿಕೊಂಡು ಹೋಗುತ್ತೇವೆ ಎಂದರು.

ಟಿ10 ಮಾದರಿಯಲ್ಲಿ ಟೂರ್ನಿ


ಬೆಂಗಳೂರಿನ ಅಶೋಕ್ ರೈಸಿಂಗ್ ಕ್ರಿಕೆಟ್ ಗ್ರೌಂಡ್ ನಲ್ಲಿ ಪಂದ್ಯಾವಳಿ ನಡೆಯಲಿದೆ. ಈ ಬಾರಿ ISPL ಮಾದರಿಯಲ್ಲಿ ಯಜಮಾನ ಪ್ರೀಮಿಯರ್ ಲೀಗ್ T10 ಟಚ್ ಕೊಡಲಾಗಿದೆ. ಪ್ರತಿ ತಂಡಗಳಿಗೂ ಮೆಂಟರ್ಸ್ ಗಳಿದ್ದು, ಶ್ರೇಯಸ್ ಮಂಜು, ಸಿಂಪಲ್ ಸುನಿ, ರೋಷನ್ ಬಚ್ಚನ್, ಜಯರಾಮ್ ಕಾರ್ತಿಕ್ ಸೇರಿದಂತೆ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಸಾಥ್ ಕೊಟ್ಟಿದ್ದಾರೆ. ವೈಪಿಎಲ್ ಅನ್ನು ವಿಷ್ಣು ಸೇನಾ ಸಮಿತಿಯ ಬೆಂಗಳೂರಿನ ಜಿಲ್ಲಾಧ್ಯಕ್ಷ ಯದುನಂದನ್ ಗೌಡ ನಡೆಸುತ್ತಿದ್ದು, ರಾಜ್ಯ ಪ್ರಧಾನ ಕಾರ್ಯದರ್ಶಿಸಿ ಮಲ್ಲಿಕಾರ್ಜುನ್ ಅವರಿಗೆ ಸಾಥ್ ಕೊಡುತ್ತಿದ್ದಾರೆ.


ಸ್ಯಾಂಡಲ್ ವುಡ್ ನಲ್ಲಿ ಕ್ರಿಕೆಟ್ ಪಂದ್ಯ ಶುರು ಮಾಡಿದ ಕೀರ್ತಿ ಡಾ.ವಿಷ್ಣುವರ್ಧನ್ ಅವರಿಗೆ ಸಲ್ಲುತ್ತದೆ. ಸಿನಿಮಾ ತಂಡಗಳನ್ನು ಕಟ್ಟಿಕೊಂಡು ವಿಷ್ಣುವರ್ಧನ್​ ಸದಾ ಕ್ರಿಕೆಟ್ ಆಡುತ್ತಿದ್ದರು. ವೃತ್ತಿಪರ ಕ್ರಿಕೆಟ್ ಆಟಗಾರರ ಜತೆಯೂ ಅವರು ಪಂದ್ಯಾವಳಿಗಳನ್ನು ಆಡಿದ್ದರು. ಆ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ನಿಟ್ಟಿನಲ್ಲಿ ಅವರ ಅಭಿಮಾನಿಗಳು ಕೂಡ ‘ಯಜಮಾನ ಪ್ರೀಮಿಯರ್ ಲೀಗ್’ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜನೆ ಮಾಡುತ್ತಾ ಬಂದಿದ್ದಾರೆ.

Exit mobile version