ನವದೆಹಲಿ: ಭಾರತದ ಯುವ ಬ್ಯಾಟ್ಸ್ಮನ್ ಯಶಸ್ವಿ ಜೈಸ್ವಾಲ್ (Yashasvi Jaiswal) ಪ್ರಸ್ತುತ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ (Eng vs Ind) ಮಿಂಚುವುದನ್ನು ಮುಂದುವರಿಸಿದ್ದಾರೆ. ಇದೇ ವೇಳೆ ಅವರು ಕ್ಯಾಲೆಂಡರ್ ವರ್ಷದಲ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಸಿಕ್ಸರ್ಗಳನ್ನು ಬಾರಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ.
ಜೈಸ್ವಾಲ್ ಈಗಾಗಲೇ 2024 ರಲ್ಲಿ 23 ಸಿಕ್ಸರ್ಗಳನ್ನು ಬಾರಿಸಿದ್ದಾರೆ . ಈ ಈ ದಾಖಲೆಯನ್ನು ಹೊಂದಿದ್ದ ವೀರೇಂದ್ರ ಸೆಹ್ವಾಗ್ ಅವರನ್ನು ಹಿಂದಿಕ್ಕಿದ್ದಾರೆ. ಸೆಹ್ವಾಗ್ 2008 ರಲ್ಲಿ 22 ಸಿಕ್ಸರ್ಗಲನ್ನು ಬಾರಿಸಿದರೆ, ರಿಷಭ್ ಪಂತ್ 2022 ರಲ್ಲಿ 21 ಸಿಕ್ಸರ್ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
ಯಶಸ್ವಿ ಜೈಸ್ವಾಲ್ 23 ಸಿಕ್ಸರ್ಗಳನ್ನು ಬಾರಿಸುವ ಮೂಲಕ ತಮ್ಮ ಪ್ರಭಾವ ತೋರಿದ್ದಾರೆ. ಆದಾಗ್ಯೂ ಒಂದು ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್ಗಳನ್ನು ಬಾರಿಸಿದ ಕಿವೀಸ್ ದಂತಕಥೆ ಬ್ರೆಂಡನ್ ಮೆಕಲಮ್ ಅವರನ್ನು ಹಿಂದಿಕ್ಕಲು ಜೈಸ್ವಾಲ್ಗೆ 11 ಸಿಕ್ಸರ್ಗಳು ಬೇಕಾಗಿವೆ.
ಇದನ್ನೂ ಓದಿ : Sachin Tenulkar : ಒಡಿಐನಲ್ಲಿ ಸಚಿನ್ ಮೊದಲ ದ್ವಿಶತಕ ಬಾರಿಸಿ ಇತಿಹಾಸ ಸೃಷ್ಟಿಸಿದ ದಿನವಿದು
ಮೆಕಲಮ್ ಪ್ರಸ್ತುತ 2014 ರಲ್ಲಿ 33 ಸಿಕ್ಸರ್ಗಳನ್ನು ಬಾರಿಸಿ ಅತಿ ಹೆಚ್ಚು ಬಾರಿಸಿದ ದಾಖಲೆ ಹೊಂದಿದ್ದಾರೆ. ಆದರೆ ಇಂಗ್ಲೆಂಡ್ ಟೆಸ್ಟ್ ನಾಯಕ ಬೆನ್ ಸ್ಟೋಕ್ಸ್ ಪ್ರಸ್ತುತ ಕ್ಯಾಲೆಂಡರ್ ವರ್ಷದಲ್ಲಿ 26 ಸಿಕ್ಸರ್ಗಳೊಂದಿಗೆ 2 ನೇ ಸ್ಥಾನದಲ್ಲಿದ್ದಾರೆ. ಜೈಸ್ವಾಲ್ ಆಸ್ಟ್ರೇಲಿಯಾದ ಮಾಜಿ ವಿಕೆಟ್ ಕೀಪರ್ ಬ್ಯಾಟರ್ ಆಡಮ್ ಗಿಲ್ಕ್ರಿಸ್ಟ್ ಅವರನ್ನು ಹಿಂದಿಕ್ಕಿದ್ದಾರೆ ಮತ್ತು ಪ್ರಸ್ತುತ ಒಂದು ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್ಗಳನ್ನು ಬಾರಿಸಿದ ವಿಶ್ವದ ಮೂರನೇ ಬ್ಯಾಟರ್ ಆಗಿದ್ದಾರೆ.
ಭಾರತದ ಪರ ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಟೆಸ್ಟ್ ಕ್ರಿಕೆಟ್ ಸಿಕ್ಸರ್ ಬಾರಿಸಿದವರು
- 23- ಯಶಸ್ವಿ ಜೈಸ್ವಾಲ್ – 2024
- 22- ವೀರೇಂದ್ರ ಸೆಹ್ವಾಗ್ (2008)
- 21- ರಿಷಭ್ ಪಂತ್ (2022)
ಯಶಸ್ವಿ ಜೈಸ್ವಾಲ್ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಉತ್ತಮ ಫಾರ್ಮ್ನಲ್ಲಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಸರಣಿಯಲ್ಲಿ ಜೈಸ್ವಾಲ್ ಈಗಾಗಲೇ ಎರಡು ದ್ವಿಶತಕಗಳನ್ನು ಬಾರಿಸಿದ್ದಾರೆ. 6 ಇನಿಂಗ್ಸ್ಗಳಿಂದ 500 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಜೈಸ್ವಾಲ್ ನಾಲ್ಕನೇ ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಪಂದ್ಯದಲ್ಲಿ ಅದೇ ಫಾರ್ಮ್ ಅನ್ನು ಮುಂದುವರಿಸಿದ್ದಾರೆ.