Site icon Vistara News

Yashasvi Jaiswal : ಕೊಹ್ಲಿಯ ಸಾಧನೆ ಸರಿಗಟ್ಟಿದ ಯಶಸ್ವಿ ಜೈಸ್ವಾಲ್​

Yashasvi Jaiswal

ರಾಂಚಿ: ಇಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಗೆಲುವು ಸಾಧಿಸಿದೆ. ಇದರೊಂದಿಗೆ ಸರಣಿ ಭಾರತದ ಕೈವಶವಾಗಿದೆ. 192 ರನ್​​ಗಳ ಸವಾಲಿನ ಗುರಿ ಬೆನ್ನಟ್ಟಿದ ಭಾರತಕ್ಕೆ ಯಶಸ್ವಿ ಜೈಸ್ವಾಲ್ (Yashasvi Jaiswal) ಆರಂಭಿಕರಾಗಿ ಕಣಕ್ಕೆ ಇಳಿದು 44 ರನ್ ಗಳಿಸಿದರು. ರೋಹಿತ್ ಶರ್ಮಾ ಜತೆ ಶಾಂತವಾಗಿ ಆಡಿದ ಅವರು ಆರಂಭಿಕ ವಿಕೆಟ್​ಗೆ 84 ರನ್​ ಬಾರಿಸಿದರು.

ಗೆಲುವಿನಲ್ಲಿ ರೋಹಿತ್ ಶರ್ಮಾ ಅವರ 55 ರನ್​, ಶುಭ್ಮನ್ ಗಿಲ್ ಅವರ ಅಜೇಯ 52 ಮತ್ತು ಧ್ರುವ್ ಜುರೆಲ್ ಅವರ ಉಪಯುಕ್ತ 35 ರನ್​ಗಳಿವೆ. ಇವೆಲ್ಲದರ ನಡುವೆ ಯಶಸ್ವಿ ಜೈಸ್ವಾಲ್​ ಭಾರತ ಪರ ವಿಶೇಷ ಸಾಧನೆ ಮಾಡಿದ್ದಾರೆ. ಈ ಹಾದಿಯಲ್ಲಿ ಅವರು ಮಾಜಿ ನಾಯಕ ವಿರಾಟ್ ಕೊಹ್ಲಿಯ ದಾಖಲೆ ಸರಿಗಟ್ಟಿದ್ದಾರೆ.

ಜೈಸ್ವಾಲ್​ ನಾಲ್ಕು 50+ ಸ್ಕೋರ್ ಮತ್ತು ಎರಡು ದ್ವಿಶತಕಗಳೊಂದಿಗೆ, ಜೈಸ್ವಾಲ್ ಪ್ರಸ್ತುತ ಸರಣಿಯಲ್ಲಿ 93.57 ಸರಾಸರಿಯಲ್ಲಿ 655 ರನ್ ಗಳಿಸಿದ್ದಾರೆ. 2016/17ರಲ್ಲಿ ಇಂಗ್ಲೆಂಡ್ ತಂಡ ಭಾರತ ಪ್ರವಾಸ ಕೈಗೊಂಡಿದ್ದಾಗ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದರು. ಜೈಸ್ವಾಲ್​ ಸರಣಿಯಲ್ಲಿ ಇನ್ನೂ ಒಂದು ಪಂದ್ಯವನ್ನು ಹೊಂದಿದ್ದಾರೆ. ಅಂದರೆ ಅವರು ವಿರಾಟ್ ಕೊಹ್ಲಿಯನ್ನು ಮೀರಿಸುತ್ತಾರೆ. ಇಂಗ್ಲೆಂಡ್ ವಿರುದ್ಧ ಟೆಸ್ಟ್ ದ್ವಿಪಕ್ಷೀಯ ಸರಣಿಯಲ್ಲಿ ನಿರ್ವಿವಾದ

ಇಂಗ್ಲೆಂಡ್​ ವಿರುದ್ಧ ಅರ್ಧ ಶತಕ ಬಾರಿಸಿ ವಿಶೇಷ ಸಾಧನೆ ಮಾಡಿದ ರೋಹಿತ್​

ರಾಂಚಿ: ಜಾರ್ಖಂಡ್ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ರೋಹಿತ್ ಶರ್ಮಾ (Rohit Sharma) ಟೆಸ್ಟ್ ಕ್ರಿಕೆಟ್​ನಲ್ಲಿ ತಮ್ಮ 17 ನೇ ಅರ್ಧಶತಕವನ್ನು ಬಾರಿಸಿದ್ದಾರೆ. ನಾಯಕ 81 ಎಸೆತಗಳಲ್ಲಿ 5 ಬೌಂಡರಿ ಮತ್ತು ಒಂದು ಸಿಕ್ಸರ್ ಬಾರಿಸಿ 55 ರನ್ ಗಳಿಸಿದರು. ಈ ಮೂಲಕ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 9000 ರನ್ ಪೂರೈಸಿದ್ದಾರೆ. ನಾಲ್ಕನೇ ಟೆಸ್ಟ್ ನ 4 ನೇ ದಿನದ ಮೊದಲ ಸೆಷನ್ ನಲ್ಲಿ ಅವರು ತಮ್ಮ ಅರ್ಧ ಶತಕ ಗಳಿಸಿದರು. ಆ ಬಳಿಕ ಟಾಮ್ ಹಾರ್ಟ್ಲೆ ಎಸೆತದಲ್ಲಿ ಔಟ್ ಆದರು.

ಟೆಸ್ಟ್ ಕ್ರಿಕೆಟ್​​ನಲ್ಲಿ 4000 ರನ್ ಪೂರೈಸಿದ ಭಾರತದ 17ನೇ ಬ್ಯಾಟರ್​ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. ಅವರು ತಮ್ಮ ಟೆಸ್ಟ್ ವೃತ್ತಿಜೀವನದ 100ನೇ ಇನ್ನಿಂಗ್ಸ್ ನಲ್ಲಿ 4000 ರನ್ ಪೂರೈಸಿದ್ದಾರೆ. ರೋಹಿತ್ ಶರ್ಮಾ 58 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 44.83 ಸರಾಸರಿಯಲ್ಲಿ 4035 ರನ್ ಗಳಿಸಿದ್ದಾರೆ. 4035 ರನ್​ಗಳಲ್ಲಿ ಆರಂಭಿಕ ಆಟಗಾರನಾಗಿ ಸುಮಾರು 2500 ರನ್​ ಗಳಿಸಿದ್ದಾರೆ. ಅಲ್ಲಿ ಅವರು ಎಂಟು ಶತಕಗಳು ಮತ್ತು ಏಳು ಅರ್ಧಶತಕಗಳು ಸೇರಿಕೊಂಡಿವೆ.

ಇದನ್ನೂ ಓದಿ : Hardik Pandya: ಫಿಟ್‌ ಆಗಿ ಕಣಕ್ಕಿಳಿದ ಹಾರ್ದಿಕ್‌ ಪಾಂಡ್ಯ; ದಿನೇಶ್‌ ಕಾರ್ತಿಕ್‌ ಕಾಮೆಂಟರಿಗಿಲ್ಲ

ಕೊಹ್ಲಿ, ಸಚಿನ್​ ಮಾಡಿದ ವಿಶೇಷ ಸಾಧನೆ ಮಾಡಿದ ರೋಹಿತ್ ಶರ್ಮಾ

ರಾಂಚಿ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಹಿರಿಯ ಆರಂಭಿಕ ಆಟಗಾರ ದೀರ್ಘ ಸ್ವರೂಪದ ಕ್ರಿಕೆಟ್​ನಲ್ಲಿ 4000 ರನ್ ಗಳಿಸಿದ್ದಾರೆ. ಈ ಮೂಲಕ ಅವರು ಈ ಸಾಧನೆ ಮಾಡಿದ ಇಂಡಿಯಾದ 17 ನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಮೂರನೇ ದಿನದಂದು ರೋಹಿತ್ ಶರ್ಮಾ ಈ ಸಾಧನೆ ಮಾಡಿದ್ದಾರೆ. ತಂಡಗಳ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯ ರಾಂಚಿಯ ಜಾರ್ಖಂಡ್ ಕ್ರಿಕೆಟ್ ಅಸೋಸಿಯೇಷನ್ ಕಾಂಪ್ಲೆಕ್ಸ್​​ನಲ್ಲಿ ನಡೆಯುತ್ತಿದೆ. ರೋಹಿತ್ ಶರ್ಮಾ ಎರಡನೇ ಇನ್ನಿಂಗ್ಸ್ ನಲ್ಲಿ ಈ ಮೈಲಿಗಲ್ಲನ್ನು ತಲುಪಿದರು. ಭಾರತಕ್ಕೆ 192 ರನ್​ಗಳ ಗುರಿ ನೀಡಲಾಯಿತು. ಪಂದ್ಯದ ಕೊನೆಯ ಅರ್ಧ ಗಂಟೆಯಲ್ಲಿ 40 ರನ್ ಬಾರಿಸಿದೆ.

ರೋಹಿತ್ ಶರ್ಮಾ 3ನೇ ದಿನದಾಟದ ಅಂತ್ಯಕ್ಕೆ 24 ರನ್ ಗಳಿಸಿ ಔಟಾಗದೆ ಉಳಿದಿದ್ದು, 4000 ರನ್ ಗಡಿ ದಾಟಿದ್ದಾರೆ. ಪ್ರಸ್ತುತ 4003 ರನ್ ಗಳಿಸಿರುವ ಭಾರತದ ನಾಯಕ ನಾಲ್ಕನೇ ಟೆಸ್ಟ್​ನಲ್ಲಿ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲಿದ್ದಾರೆ.

ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿರು ಗೌತಮ್ ಗಂಭೀರ್ ಅವರನ್ನು ಹಿಂದಿಕ್ಕುವ ವಿಶ್ವಾಸವನ್ನು ರೋಹಿತ್ ಶರ್ಮಾ ಹೊಂದಿದ್ದಾರೆ. ಗಂಭೀರ್​ ವೃತ್ತಿಜೀವನದಲ್ಲಿ 58 ಟೆಸ್ಟ್ ಪಂದ್ಯಗಳಲ್ಲಿ 4154 ರನ್ ಗಳಿಸಿದ್ದಾರೆ. ಸರಣಿಗೆ ಇನ್ನೂ ಒಂದು ಪಂದ್ಯ ಬಾಕಿ ಉಳಿದಿದ್ದು, ಮಾರ್ಚ್ 7 ರಿಂದ ಧರ್ಮಶಾಲಾದಲ್ಲಿ ಪಂದ್ಯ ನಡೆಯಲಿದೆ.

Exit mobile version