Yashasvi Jaiswal: ಜೈಸ್ವಾಲ್ ಬ್ಯಾಟಿಂಗ್​ ಆರ್ಭಟಕ್ಕೆ ಹಲವು ದಾಖಲೆ ಪುಡಿಪುಡಿ - Vistara News

ಕ್ರೀಡೆ

Yashasvi Jaiswal: ಜೈಸ್ವಾಲ್ ಬ್ಯಾಟಿಂಗ್​ ಆರ್ಭಟಕ್ಕೆ ಹಲವು ದಾಖಲೆ ಪುಡಿಪುಡಿ

ರಾಜ್​ಕೋಟ್​ನಲ್ಲಿ ದ್ವಿಶತಕ(yashasvi jaiswal double century) ಬಾರಿಸುವ ಮೂಲಕ ಯಶಸ್ವಿ ಜೈಸ್ವಾಲ್(Yashasvi Jaiswal) ​ ರಾಜನಾಗಿ ಮರೆದಿದ್ದಾರೆ.

VISTARANEWS.COM


on

Yashasvi Jaiswal soaks in the moment after reaching his double-ton
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಜ್​ಕೋಟ್​: ಇಂಗ್ಲೆಂಡ್​ ವಿರುದ್ಧದ ಮೂರನೇ(India vs England 3rd Test) ಟೆಸ್ಟ್​ ಪಂದ್ಯದಲ್ಲಿ ದ್ವಿಶತಕ(yashasvi jaiswal double century) ಬಾರಿಸುವ ಮೂಲಕ ಯಶಸ್ವಿ ಜೈಸ್ವಾಲ್(Yashasvi Jaiswal) ಅವರು​ ರಾಜ್​ಕೋಟ್​ನಲ್ಲಿ ರಾಜನಾಗಿ ಮರೆದಿದ್ದಾರೆ. ಜತೆಗೆ ಹಲವು ದಾಖಲೆಗಳನ್ನು ಕೂಡ ನಿರ್ಮಿಸಿದ್ದಾರೆ. ಜೈಸ್ವಾಲ್​ ಬರೆದ ದಾಖಲೆಗಳ(Yashasvi Jaiswal records) ಸಂಪೂರ್ಣ ಪಟ್ಟಿ ಇಲ್ಲಿದೆ.

​104 ರನ್​ ಗಳಿಸಿದ್ದಲ್ಲಿಂದ 4ನೇ ದಿನದಾಟ ಆರಂಭಿಸಿದ ಜೈಸ್ವಾಲ್​ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು. ಮೂರನೇ ದಿನದಾಟದ ವೇಳೆ ಬೆನ್ನು ನೋವಿನ ಕಾರಣದಿಂದ ಅರ್ಧದಲ್ಲೇ ಪಂದ್ಯದಿಂದ ನಿವೃತ್ತರಾಗಿದ್ದರು. ಆದರೆ, ಭಾನುವಾರ ಶತಕವನ್ನು ದ್ವಿಶತಕವನ್ನಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾದರು.

ಜಿದ್ದಿಗೆ ಬಿದ್ದವರಂತೆ ಬ್ಯಾಟ್​ ಬೀಸಿದ ಜೈಸ್ವಾಲ್​ ಮೈದಾನದ ಮೂಲೆ ಮೂಲೆಗೂ ಸಿಕ್ಸರ್​ ಮತ್ತು ಬೌಂಡರಿ ಬಾರಿಸಿ ನೆರದಿದ್ದ ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ಒದಗಿಸಿದರು. ಜತೆಗೆ ಆಂಗ್ಲ ಬೌಲರ್​ಗಳ ಬೆವರಿಳಿಸಿದರು. ಅದರಲ್ಲೂ 41 ವರ್ಷದ ಅನುಭವಿ ಬೌಲರ್​ ಜೇಮ್ಸ್​ ಆ್ಯಂಡರ್ಸನ್​ ಅವರಿಗೆ ಹ್ಯಾಟ್ರಿಕ್​ ಸಿಕ್ಸರ್​ಗಳ ಬಿಸಿ ಮುಟ್ಟಿಸಿದ್ದು ಪಂದ್ಯದ ಪ್ರಮುಖ ಆಕರ್ಷಣೆಯಾಗಿತ್ತು. ಒಟ್ಟು 236 ಎಸೆತ ಎದುರಿಸಿ ನಿಂತ ಜೈಸ್ವಾಲ್​ ಬರೋಬ್ಬರಿ 12 ಸಿಕ್ಸರ್​ ಮತ್ತು 14 ಬೌಂಡರಿ ನೆರವಿನಿಂದ ಅಜೇಯ 214 ರನ್​ ಬಾರಿಸಿದರು.

ದಾಖಲೆ ನಂ.1


ಬಿರುಸಿನ ಬ್ಯಾಟಿಂಗ್​ ಮೂಲಕ ದ್ವಿಶತಕ ಬಾರಿಸಿದ ಜೈಸ್ವಾಲ್​ ಅವರು ಟೆಸ್ಟ್ ಸರಣಿಯೊಂದರಲ್ಲಿ ಅತ್ಯಧಿಕ ರನ್​ ಗಳಿಸಿದ ಮೊದಲ ಎಡಗೈ ಬ್ಯಾಟ್​ರ್ ಎನಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಮಾಜಿ ಆಟಗಾರ ಸೌರವ್​ ಗಂಗೂಲಿ ಹೆಸರಿನಲ್ಲಿತ್ತು. ಗಂಗೂಲಿ 2007ರಲ್ಲಿ ಪಾಕಿಸ್ತಾನ ವಿರುದ್ಧದ ಸರಣಿಯಲ್ಲಿ 534 ರನ್​ ಬಾರಿಸಿದ್ದರು. ಇದೀಗ ಈ ದಾಖಲೆಯನ್ನು ಜೈಸ್ವಾಲ್​ ಮುರಿದಿದ್ದಾರೆ. ಜೈಸ್ವಾಲ್​ 545 ರನ್​ ಬಾರಿಸಿದ್ದಾರೆ.

ಭಾರತದ ಪರ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಎಡಗೈ ಬ್ಯಾಟರ್​ಗಳು


ಯಶಸ್ವಿ ಜೈಸ್ವಾಲ್-545* ರನ್​

ಸೌರವ್​ ಗಂಗೂಲಿ-534 ರನ್​

ಗೌತಮ್​ ಗಂಭೀರ್​-463 ರನ್​

ದಾಖಲೆ ನಂ.2


ಒಟ್ಟು 12 ಸಿಕ್ಸರ್​ ಬಾರಿಸಿದ ಜೈಸ್ವಾಲ್​ ಟೆಸ್ಟ್ ಕ್ರಿಕೆಟ್​ನ ಇನಿಂಗ್ಸ್​ ಒಂದರಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ವಿಶ್ವದ ಮೊದಲ ಆಟಗಾರ ಎನ್ನುವ ಹಿರಿಮೆಗೆ ಪಾತ್ರರಾದರು. ಈ ಮೂಲಕ ಪಾಕಿಸ್ತಾನ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್​ ದಾಖಲೆಯನ್ನು ಸರಿಗಟ್ಟಿದರು. ​1996ರಲ್ಲಿ ಜಿಂಬಾಬ್ವೆ ವಿರುದ್ಧದ ಟೆಸ್ಟ್​ನಲ್ಲಿ ಅಕ್ರಮ್ ಇನಿಂಗ್ಸ್​ ಒಂದರಲ್ಲಿ 12 ಸಿಕ್ಸರ್​ ಬಾರಿಸಿದ್ದರು. ಈ ಸಾಧರಕ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಮಾಜಿ ಆಟಗಾರ ಮ್ಯಾಥ್ಯೂ ಹೇಡನ್​ಗೆ ದ್ವಿತೀಯ ಸ್ಥಾನ. ಹೇಡನ್​ 11 ಸಿಕ್ಸರ್​ ಬಾರಿಸಿದ್ದರು.

ಟೆಸ್ಟ್​ ಇನಿಂಗ್ಸ್​ ಒಂದರಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರರು


ಯಶಸ್ವಿ ಜೈಸ್ವಾಲ್​- 12 ಸಿಕ್ಸರ್​, ಇಂಗ್ಲೆಂಡ್​ ವಿರುದ್ಧ

ವಾಸಿಂ ಅಕ್ರಮ್​-12 ಸಿಕ್ಸರ್​, ಜಿಂಬಾಬ್ವೆ ವಿರುದ್ಧ

ಮ್ಯಾಥ್ಯೂ ಹೇಡನ್​-11 ಸಿಕ್ಸರ್, ಜಿಂಬಾಬ್ವೆ ವಿರುದ್ಧ ​

ನಾಥನ್ ಆಸ್ಟಲ್-11 ಸಿಕ್ಸರ್​, ಇಂಗ್ಲೆಂಡ್​ ವಿರುದ್ಧ

ಬ್ರೆಂಡನ್​ ಮೆಕಲಮ್​-11 ಸಿಕ್ಸರ್​, ಪಾಕಿಸ್ತಾನ ವಿರುದ್ಧ

ಬ್ರೆಂಡನ್​ ಮೆಕಲಮ್​-11 ಸಿಕ್ಸರ್​, ಶ್ರೀಲಂಕಾ ವಿರುದ್ಧ

ಬೆನ್​ ಸ್ಟೋಕ್ಸ್​-11 ಸಿಕ್ಸರ್​, ದಕ್ಷಿಣ ಆಫ್ರಿಕಾ ವಿರುದ್ಧ

ಕುಸಾಲ್​ ಮೆಂಡೀಸ್​–11 ಸಿಕ್ಸರ್​, ಐರ್ಲೆಂಡ್​ ವಿರುದ್ಧ

ಇದನ್ನೂ ಓದಿ IND vs ENG: ದ್ವಿಶತಕದ ಜತೆಗೆ ಸಿಕ್ಸರ್​ನಲ್ಲಿಯೂ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

ದಾಖಲೆ ನಂ.3


10 ಸಿಕ್ಸರ್​ ಬಾರಿಸಿದ ವೇಳೆ ಜೈಸ್ವಾಲ್​ ನೂತನ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದರು. ಭಾರತದ ಪರ ಟೆಸ್ಟ್ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರನಾಗಿ ಮೂಡಿಬಂದರು. ಈ ಹಿಂದೆ 8 ಸಿಕ್ಸರ್​ ಬಾರಿಸಿದ್ದ ನವಜೋತ್ ಸಿಂಗ್ ದಾಖಲೆ ಪತನಗೊಂಡಿತು.

ಭಾರತದ ಪರ ಟೆಸ್ಟ್ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ ಬಾರಿಸಿದ ಆಟಗಾರರು


ಯಶಸ್ವಿ ಜೈಸ್ವಾಲ್-10* ಸಿಕ್ಸರ್ ​(2024 ಇಂಗ್ಲೆಂಡ್​ ವಿರುದ್ಧ).

ನವಜೋತ್ ಸಿಂಗ್ ಸಿಧು- 8 ಸಿಕ್ಸರ್​(1994 ಶ್ರೀಲಂಕಾ ವಿರುದ್ಧ).

ಮಯಾಂಕ್​ ಅಗರ್ವಾಲ್​-8 ಸಿಕ್ಸರ್​(2019 ಬಾಂಗ್ಲಾದೇಶ ವಿರುದ್ಧ).

ದಾಖಲೆ ನಂ.4


ಜೈಸ್ವಾಲ್​ ಅವರು 10 ಸಿಕ್ಸರ್​ ಬಾರಿಸುತ್ತಿದ್ದಂತೆ ಹಿಟ್​ಮ್ಯಾನ್​ ಖ್ಯಾತಿಯ ರೋಹಿತ್​ ಶರ್ಮ ಅವರ ದಾಖಲೆಯನ್ನು ಹಿಂದಿಕ್ಕಿದರು. ಟೆಸ್ಟ್​ ಸರಣಿಯೊಂದರಲ್ಲಿ ಅತಿ ಹೆಚ್ಚು ಸಿಕ್ಸರ್​ ಬಾರಿಸಿದ ಭಾರತೀಯ ಆಟಗಾರರ ಪೈಕಿ ಜೈಸ್ವಾಲ್ ಅಗ್ರಸ್ಥಾನಕ್ಕೇರಿದ್ದಾರೆ. ಜೈಸ್ವಾಲ್​ ಸದ್ಯ 20 ಸಿಕ್ಸರ್​ ಬಾರಿಸಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ರೋಹಿತ್​ ಶರ್ಮ ಅವರ ಹೆಸರಿನಲ್ಲಿತ್ತು. ರೋಹಿತ್​ 19 ಸಿಕ್ಸರ್​ ಬಾರಿಸಿದ್ದರು. ಸರಣಿ ಆಡುತ್ತಿರುವ ರೋಹಿತ್​ಗೆ ಮತ್ತೆ ಅಗ್ರಸ್ಥಾನಕ್ಕೇರುವ ಅವಕಾಶವಿದೆ. ಒಟ್ಟಾರೆ ಈ ಸರಣಿಯಲ್ಲಿ ಉಭಯ ಆಟಗಾರರ ಮಧ್ಯೆ ಸಿಕ್ಸರ್ ದಾಖಲೆಯ​ ಪೈಪೋಟಿಯೊಂದು ನಡೆಯಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024 Eliminator: ಎಲಿಮಿನೇಟರ್​ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ಆಘಾತ; ಇಬ್ಬರು ಸ್ಟಾರ್​ ಆಟಗಾರರು ಅಲಭ್ಯ!

IPL 2024 Eliminator: ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ತಂಡ ರಾಜಸ್ಥಾನ್​ ರಾಯಲ್ಸ್(Rajasthan Royals)​ ವಿರುದ್ಧ ಆಡಲಿದೆ. ಈ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

VISTARANEWS.COM


on

IPL 2024 Eliminato
Koo

ಬೆಂಗಳೂರು: ರಾಯಲ್​ ಚಾಲೆಂಜರ್ಸ್​ ಬೆಂಗಳೂರು(Royal Challengers Bengaluru) ತಂಡದ ಎಲಿಮಿನೇಟರ್(IPL 2024 Eliminator)​ ಎದುರಾಳಿ ಯಾರೆಂದು ಫಿಕ್ಸ್​ ಆಗಿದೆ. ಇದರ ಬೆನ್ನಲ್ಲೇ ತಂಡಕ್ಕೆ ದೊಡ್ಡ ಆಘಾತವೊಂದು ಎದುರಾಗಿದೆ. ಟಿ20 ವಿಶ್ವಕಪ್​ ಟೂರ್ನಿಯ ಅಭ್ಯಾಸ ನಡೆಸುವ ಸಲುವಾಗಿ ಆಸ್ಟ್ರೇಲಿಯಾದ ಸ್ಟಾರ್​ ಆಲ್​ರೌಂಡರ್​ಗಳಾದ ಕ್ಯಾಮರೂನ್​ ಗ್ರೀನ್​ ಮತ್ತು ಗ್ಲೆನ್​ ಮ್ಯಾಕ್ಸ್​ವೆಲ್​ ತಂಡ ತೊರೆಯಲಿದ್ದಾರೆ ಎನ್ನಲಾಗಿದೆ.

ಈಗಾಗಲೇ ಇಂಗ್ಲೆಂಡ್​ನ ಆಟಗಾರರು ಐಪಿಎಲ್​ ಪಂದ್ಯವಾವಳಿಯನ್ನು ಅರ್ಧಕ್ಕೆ ಮೊಟಕುಗೊಳಿಸಿ ತವರಿಗೆ ಮರಳಿದ್ದಾರೆ. ಇದೀಗ ಆಸ್ಟ್ರೇಲಿಯಾ ಸರದಿ ಎನ್ನಲಾಗಿದೆ. ಕೇವಲ ಆರ್​ಸಿಬಿ ಮಾತ್ರವಲ್ಲದೆ ಇತರ ತಂಡದ ಪರ ಆಡುತ್ತಿರುವ ಆಸ್ಟ್ರೇಲಿಯಾ ಆಟಗಾರರು ಕೂಡ ಐಪಿಎಲ್​ ತೊರೆಯಲಿದ್ದಾರೆ ಎಂದು ವರದಿಯಾಗಿದೆ. ಒಂದೊಮ್ಮೆ ಆಸೀಸ್​ ಆಟಗಾರರು ಐಪಿಎಲ್​ನಿಂದ ಹೊರಹೋದರೆ ಸನ್​ರೈಸರ್ಸ್​ ಮತ್ತು ಆರ್​ಸಿಬಿ ತಂಡಗಳಿಗೆ ದೊಡ್ಡ ಹೊಡೆತ ಬೀಳಲಿದೆ. ಏಕೆಂದರೆ ಈ 2 ತಂಡಗಳಲ್ಲಿಯೇ ತಲಾ 2 ಆಸೀಸ್​ ಆಟಗಾರರಿದ್ದಾರೆ.

ಟಿ20 ವಿಶ್ವಕಪ್​ ಟೂರ್ನಿಯ ಅಭ್ಯಾಸ ಪಂದ್ಯಗಳು ಮೇ 27ರಿಂದ ಆರಂಭಗೊಳ್ಳಲಿದೆ. ಆಸ್ಟ್ರೇಲಿಯಾ ತನ್ನ ಮೊದಲ ಅಭ್ಯಾಸ ಪಂದ್ಯವನ್ನು ನಮೀಬಿಯಾ ವಿರುದ್ಧ ಮೇ 29ಕ್ಕೆ ಆಡಲಿದೆ. ಮೂಲಗಳ ಪ್ರಕಾರ ಆಸ್ಟ್ರೇಲಿಯಾ ತಂಡ ಮೇ 21ರಂದು ಕೆರಿಬಿಯನ್​ ದ್ವೀಪಕ್ಕೆ ಪ್ರಯಾಣ ಬೆಳೆಸಲಿದೆ ಎಂದು ಹೇಳಲಾಗಿದೆ.

ಆರ್​ಸಿಬಿಗೆ ರಾಜಸ್ಥಾನ್​ ಎದುರಾಳಿ


ಇಂದು ರಾತ್ರಿ ನಡೆಯಬೇಕಿದ್ದ ಐಪಿಎಲ್​ನ ಅಂತಿಮ ಲೀಗ್​ ಪಂದ್ಯವಾದ ರಾಜಸ್ಥಾನ್​ ರಾಯಲ್ಸ್​(RR vs KKR) ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders)​ ನಡುವಣ ಪಂದ್ಯ ಮಳೆಯಿಂದ ರದ್ದುಗೊಂಡ ಕಾರಣ ರಾಜಸ್ಥಾನ್​ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿತು. ಹೀಗಾಗಿ ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ತಂಡ ರಾಜಸ್ಥಾನ್​ ರಾಯಲ್ಸ್(Rajasthan Royals)​ ವಿರುದ್ಧ ಆಡಲಿದೆ. ಈ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಸತತವಾಗಿ 6 ಪಂದ್ಯಗಳನ್ನು ಗೆದ್ದು ಪ್ಲೇ ಆಫ್​ ಆಫ್​ಗೆ ಲಗ್ಗೆಯಿಟ್ಟ ಆರ್​ಸಿಬಿಗೆ ಎಲಿಮಿನೇಟರ್​ ಪಂದ್ಯದಲ್ಲೂ ಲಕ್​ ಹೈ ಹಿಡಿಯುವುದೇ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ IPL 2024 : ಐಪಿಎಲ್‌ ಬೆಟ್ಟಿಂಗ್‌ಗಾಗಿ ಮೈ ತುಂಬಾ ಸಾಲ; ನೇಣಿಗೆ ಶರಣಾದ ಯುವಕ

ಕೆಕೆಆರ್​ ಮಣಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಿಯಾಗಿ ಕ್ವಾಲಿಫೈಯರ್​ ಪಂದ್ಯವನ್ನಾಡುವ ನಿರೀಕ್ಷೆಯಲ್ಲಿದ್ದ ರಾಜಸ್ಥಾನ್​ಗೆ(Rajasthan Royals)​ ಮಳೆ ತಣ್ಣೀರೆರಚಿತು. ಸನ್​ರೈಸರ್ಸ್​ ಹೈದರಾಬಾದ್​ 2ನೇ ತಂಡವಾಗಿ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು. ರಾಜಸ್ಥಾನ್​ ಮತ್ತು ಹೈದರಾಬಾದ್ ಸಮಾನ 17 ಅಂಕ ಹೊಂದಿದರೂ ರನ್​ ರೇಟ್​ನಲ್ಲಿ ಮುಂದಿದ್ದ ಕಾರಣ ಈ ಲಾಭ ಕಮಿನ್ಸ್​ ಪಡೆಗೆ ಲಭಿಸಿತು. ಮಂಗಳವಾರ(ಮೇ 21) ನಡೆಯುವ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಹೈದರಾಬಾದ್​ ಕಣಕ್ಕಿಳಿಯಲಿದೆ. ಈ ಪಂದ್ಯ ಅಹಮದಾಬಾದ್​ನಲ್ಲಿ ನಡೆಯಲಿದೆ.

Continue Reading

ಕ್ರೀಡೆ

RR vs KKR: ಮಳೆಯಿಂದ​ ಪಂದ್ಯ ರದ್ದು; ಎಲಿಮಿನೇಟರ್‌ ಪಂದ್ಯದಲ್ಲಿ​ ಆರ್​ಸಿಬಿಗೆ ರಾಜಸ್ಥಾನ್​ ಎದುರಾಳಿ

RR vs KKR: ಕೆಕೆಆರ್​ ಮಣಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಿಯಾಗಿ ಕ್ವಾಲಿಫೈಯರ್​ ಪಂದ್ಯವನ್ನಾಡುವ ನಿರೀಕ್ಷೆಯಲ್ಲಿದ್ದ ರಾಜಸ್ಥಾನ್​ಗೆ(Rajasthan Royals)​ ಮಳೆ ತಣ್ಣೀರೆರಚಿತು. ಸನ್​ರೈಸರ್ಸ್​ ಹೈದರಾಬಾದ್​ 2ನೇ ತಂಡವಾಗಿ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು.

VISTARANEWS.COM


on

RR vs KKR
Koo

ಗುವಾಹಟಿ: 17ನೇ ಆವೃತ್ತಿಯ ಐಪಿಎಲ್​ನ(IPL 2024) ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​(RR vs KKR) ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders)​ ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗಬೇಕಿತ್ತು. ಆದರೆ ಮಳೆಯಿಂದ ಒಂದೂ ಎಸೆತ ಕಾಣದೆ ಈ ಪಂದ್ಯ ರದ್ದಾದ ಕಾರಣ ಉಭಯ ತಂಡಗಳಿಗೂ ತಲಾ ಒಂದು ಅಂಕ ನೀಡಲಾಯಿತು.

10 ಗಂಟೆ ಸುಮಾರಿಗೆ ಮಳೆ ನಿಂತಿತು. ಮಳೆ ನಿಂತ ಕಾರಣ ಪಂದ್ಯವನ್ನು ಡಕ್​ವರ್ತ್​ ನಿಯಮದ ಪ್ರಕಾರ 7 ಓವರ್​ಗೆ ಸೀಮಿತಗೊಳಿಸಿ ಟಾಸ್​ ಕೂಡ ಹಾರಿಸಲಾಯಿತು. ಟಾಸ್​ ಗೆದ್ದು ಕೆಕೆಆರ್​ ಫೀಲ್ಡಿಂಗ್​ ಆಯ್ದುಕೊಂಡಿತು. ಇನ್ನೇನು ಆಟಗಾರರು ಮೈದಾನಕ್ಕೆ ಇಳಿಯಬೇಕು ಎನ್ನುವಷ್ಟರಲ್ಲಿ ಮಳೆ ಮತ್ತೆ ಆರಂಭಗೊಂಡಿತು. ಹೀಗಾಗಿ ಅಂಪೈರ್​ಗಳು ಕೊನೆಗೆ ಪಂದ್ಯವನ್ನು ರದ್ದು ಎಂದು ಘೋಷಣೆ ಮಾಡಿದರು.

ಕೆಕೆಆರ್​ ಮಣಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಿಯಾಗಿ ಕ್ವಾಲಿಫೈಯರ್​ ಪಂದ್ಯವನ್ನಾಡುವ ನಿರೀಕ್ಷೆಯಲ್ಲಿದ್ದ ರಾಜಸ್ಥಾನ್​ಗೆ(Rajasthan Royals)​ ಮಳೆ ತಣ್ಣೀರೆರಚಿತು. ಸನ್​ರೈಸರ್ಸ್​ ಹೈದರಾಬಾದ್​ 2ನೇ ತಂಡವಾಗಿ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು. ರಾಜಸ್ಥಾನ್​ ಮತ್ತು ಹೈದರಾಬಾದ್ ಸಮಾನ 17 ಅಂಕ ಹೊಂದಿದರೂ ರನ್​ ರೇಟ್​ನಲ್ಲಿ ಮುಂದಿದ್ದ ಕಾರಣ ಈ ಲಾಭ ಕಮಿನ್ಸ್​ ಪಡೆಗೆ ಲಭಿಸಿತು. ಮಂಗಳವಾರ(ಮೇ 21) ನಡೆಯುವ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಹೈದರಾಬಾದ್​ ಕಣಕ್ಕಿಳಿಯಲಿದೆ. ಈ ಪಂದ್ಯ ಅಹಮದಾಬಾದ್​ನಲ್ಲಿ ನಡೆಯಲಿದೆ.

ಆರ್​ಸಿಬಿ-ರಾಜಸ್ಥಾನ್​ ಮಧ್ಯೆ ಎಲಿಮಿನೇಟರ್​ ಪಂದ್ಯ


ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ತಂಡ ರಾಜಸ್ಥಾನ್​ ರಾಯಲ್ಸ್​ ವಿರುದ್ಧ ಆಡಲಿದೆ. ಈ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಸತತವಾಗಿ 6 ಪಂದ್ಯಗಳನ್ನು ಗೆದ್ದು ಪ್ಲೇ ಆಫ್​ ಆಫ್​ಗೆ ಲಗ್ಗೆಯಿಟ್ಟ ಆರ್​ಸಿಬಿಗೆ ಎಲಿಮಿನೇಟರ್​ ಪಂದ್ಯದಲ್ಲೂ ಲಕ್​ ಹೈ ಹಿಡಿಯುವುದೇ ಎಂದು ಕಾದು ನೋಡಬೇಕಿದೆ.

ಪಂಜಾಬ್​ ವಿರುದ್ಧ ಗೆದ್ದ ಹೈದರಾಬಾದ್​


ದಿನದ ಮೊದಲ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್​ ತಂಡ ಪಂಜಾಬ್​ ಕಿಂಗ್ಸ್​ ವಿರುದ್ಧ 4 ವಿಕೆಟ್​ಗಳ ಗೆಲುವು ಸಾಧಿಸಿತು. ಈ ಗೆಲುವಿನೊಂದಿಗೆ 17 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿತು. ಬ್ಯಾಟಿಂಗ್​ ಸ್ನೇಹಿಯಾದ ಉಪ್ಪಳದ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಪಂಜಾಬ್​ ಕಿಂಗ್ಸ್​ 5 ವಿಕೆಟ್​ಗೆ 214 ರನ್​ ಬಾರಿಸಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು. ಆದರೆ ಈ ಮೊತ್ತ ಹೈದರಾಬಾದ್​ ತಂಡವನ್ನು ಕಟ್ಟಿ ಹಾಕಲು ಸಾಕಾಗಲಿಲ್ಲ. ಗುರಿ ಬೆನ್ನಟ್ಟಿದ ಸನ್​ರೈಸರ್ಸ್​ ಹೈದರಾಬಾದ್ 19.1​ ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 215 ಬಾರಿಸಿ ತವರಿನಲ್ಲಿ ವಿಜಯ ಪತಾಕೆ ಹಾರಿಸಿತು. ಉಭಯ ತಂಡಗಳ ಜಿದ್ದಾಜಿದ್ದಿನ ಬ್ಯಾಟಿಂಗ್​ ಪರಾಕ್ರಮದಿಂದಾಗಿ ಈ ಪಂದ್ಯದಲ್ಲಿ ಒಟ್ಟು 429 ರನ್​ ದಾಖಲಾಯಿತು.

Continue Reading

ಕ್ರೀಡೆ

SRH vs PBKS: ಆರ್​ಸಿಬಿಯ ಸಿಕ್ಸರ್​ ದಾಖಲೆ ಮುರಿದ ಹೈದರಾಬಾದ್​

SRH vs PBKS: ಆರ್​ಸಿಬಿ ಮತ್ತು ಹೈದರಾಬಾದ್(SRH vs PBKS)​ ತಂಡಗಳು ಪ್ಲೇ ಆಫ್​ ಪ್ರವೇಶಿಸಿದ ಕಾರಣ ತಮ್ಮ ತಂಡಗಳ ಸಿಕ್ಸರ್​ಗಳ ಸಂಖ್ಯೆ ಇನ್ನೂ ಹೆಚ್ಚಿಸುವ ಅವಕಾಶವಿದೆ. ಅಂತಿಮವಾಗಿ ಯಾರು ಹೆಚ್ಚು ಸಿಕ್ಸರ್​ ಬಾರಿಸುತ್ತಾರೋ ಅವರಿಗೆ ಅಗ್ರಸ್ಥಾನ ಸಿಗಲಿದೆ. ಈ ತಂಡ ಯಾವುದು ಎಂಬುದು ಸದ್ಯದ ಕುತೂಹಲ.

VISTARANEWS.COM


on

SRH vs PBKS
Koo

ಹೈದರಾಬಾದ್​: ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ ತಂಡ ಐಪಿಎಲ್​(IPL 2024) ಆವೃತ್ತಿಯಲ್ಲಿ ಮತ್ತು ಟಿ20 ಸರಣಿಯಲ್ಲಿ ಅತಿ ಹೆಚ್ಚು ಸಿಕ್ಸರ್​ ಬಾರಿಸಿದ ಮೊದಲ ತಂಡ ಎಂಬ ದಾಖಲೆ ಬರೆದಿದೆ. ಈ ಮೂಲಕ ಆರ್​ಸಿಬಿ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದೆ. ಆರ್​ಸಿಬಿ ಈ ಆವೃತ್ತಿಯಲ್ಲಿ ಒಟ್ಟು 157 ಸಿಕ್ಸರ್​ ಬಾರಿಸಿ ಅಗ್ರಸ್ಥಾನ ಪಡೆದಿತ್ತು. ಆದರೆ, ಇದೀಗ ಹೈದರಾಬಾದ್​ 160 ಸಿಕ್ಸರ್​ ಬಾರಿಸುವ ಮೂಲಕ ದಾಖಲೆಯನ್ನು ತನ್ನ ಹೆಸರಿಗೆ ಬರೆದಿದೆ.

ಅತಿ ಹೆಚ್ಚು ಸಿಕ್ಸರ್​ ಬಾರಿಸಿದ 5 ತಂಡಗಳು


ಸನ್​ರೈಸರ್ಸ್​ ಹೈದರಾಬಾದ್​-160
ಸಿಕ್ಸರ್​, 2024

ಆರ್​ಸಿಬಿ-157 ಸಿಕ್ಸರ್​, 2024

ಚೆನ್ನೈ ಸೂಪರ್​ ಕಿಂಗ್ಸ್​-145 ಸಿಕ್ಸರ್​, 2018

ಸರ್ರೆ-144 (ಟಿ20 ಬ್ಲಾಸ್ಟ್​ 2013)

ಕೆಕೆಆರ್​-143 ಸಿಕ್ಸರ್​, 2019

ಆರ್​ಸಿಬಿ ಮತ್ತು ಹೈದರಾಬಾದ್(SRH vs PBKS)​ ತಂಡಗಳು ಪ್ಲೇ ಆಫ್​ ಪ್ರವೇಶಿಸಿದ ಕಾರಣ ತಮ್ಮ ತಂಡಗಳ ಸಿಕ್ಸರ್​ಗಳ ಸಂಖ್ಯೆ ಇನ್ನೂ ಹೆಚ್ಚಿಸುವ ಅವಕಾಶವಿದೆ. ಅಂತಿಮವಾಗಿ ಯಾರು ಹೆಚ್ಚು ಸಿಕ್ಸರ್​ ಬಾರಿಸುತ್ತಾರೋ ಅವರಿಗೆ ಅಗ್ರಸ್ಥಾನ ಸಿಗಲಿದೆ. ಈ ತಂಡ ಯಾವುದು ಎಂಬುದು ಸದ್ಯದ ಕುತೂಹಲ.

ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್​


ಪಂಜಾಬ್​ ಕಿಂಗ್ಸ್​ ವಿರುದ್ಧ ಪ್ರಚಂಡ ಬ್ಯಾಟಿಂಗ್​ ಮೂಲಕ ಸಿಕ್ಸರ್​ಗಳ ಸುರಿಮಳೆಯನ್ನೇ ಸುರಿಸಿದ ಅಭಿಷೇಕ್​ ಬರೋಬ್ಬರಿ 6 ಸಿಕ್ಸರ್​ ಬಾರಿಸಿ ಮಿಂಚಿದರು. ಇದೇ ವೇಳೆ ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ವಿರಾಟ್​ ಕೊಹ್ಲಿ(37) ಅವರ ದಾಖಲೆಯನ್ನು ಹಿಂದಿಕ್ಕಿದರು. ಸದ್ಯ ಅಭಿಷೇಕ್​ 41* ಸಿಕ್ಸರ್​ ಬಾರಿಸಿದ ಸಾಧನೆ ಮಾಡಿದ್ದಾರೆ. ಆರ್​ಸಿಬಿ ಕೂಡ ಪ್ಲೇ ಆಫ್​ ಪ್ರವೇಶಿಸಿದ ಕಾರಣ ಕೊಹ್ಲಿಗೆ ಈ ದಾಖಲೆಯನ್ನು ಮುರಿಯುವ ಅವಕಾಶ ಇನ್ನೂ ಜೀವಂತವಿದೆ. ಒಟ್ಟಾರೆಯಾಗಿ ಉಭಯ ಆಟಗಾರರ ಮಧ್ಯೆ ಸಿಕ್ಸರ್​ ಪೈಪೋಟಿ ಏರ್ಪಟ್ಟಿದೆ.

ಇದನ್ನೂ ಓದಿ SRH vs PBKS: ಒಂದು ದಿನ ಕಳೆಯುವ ಮುನ್ನವೇ ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್

ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಟಾಪ್​ 5 ಆಟಗಾರರು


ಅಭಿಷೇಕ್ ಶರ್ಮ-41 ಸಿಕ್ಸರ್​​

ವಿರಾಟ್​ ಕೊಹ್ಲಿ-37 ಸಿಕ್ಸರ್​

ನಿಕೋಲಸ್​ ಪೂರನ್​-36 ಸಿಕ್ಸರ್​

ಹೆನ್ರಿಚ್​ ಕ್ಲಾಸೆನ್​-33 ಸಿಕ್ಸರ್​

ಸುನೀಲ್​ ನರೈನ್​-32 ಸಿಕ್ಸರ್

ಹೈದರಾಬಾದ್​ಗೆ 4 ವಿಕೆಟ್​ ಜಯ

ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಪಂಜಾಬ್​ ಕಿಂಗ್ಸ್​ 5 ವಿಕೆಟ್​ಗೆ 214 ರನ್​ ಬಾರಿಸಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು. ಆದರೆ ಈ ಮೊತ್ತ ಹೈದರಾಬಾದ್​ ತಂಡವನ್ನು ಕಟ್ಟಿ ಹಾಕಲು ಸಾಕಾಗಲಿಲ್ಲ. ಗುರಿ ಬೆನ್ನಟ್ಟಿದ ಸನ್​ರೈಸರ್ಸ್​ ಹೈದರಾಬಾದ್ 19.1​ ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 215 ಬಾರಿಸಿ ತವರಿನಲ್ಲಿ ವಿಜಯ ಪತಾಕೆ ಹಾರಿಸಿತು. ಉಭಯ ತಂಡಗಳ ಜಿದ್ದಾಜಿದ್ದಿನ ಬ್ಯಾಟಿಂಗ್​ ಪರಾಕ್ರಮದಿಂದಾಗಿ ಈ ಪಂದ್ಯದಲ್ಲಿ ಒಟ್ಟು 429 ರನ್​ ದಾಖಲಾಯಿತು.

ಈಗಾಗಲೇ ಪ್ಲೇ ಆಫ್​ ಪ್ರವೇಶಿಸಿರುವ ಹೈದರಾಬಾದ್​ ಈ ಗೆಲುವಿನೊಂದಿಗೆ 17 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ರಾತ್ರಿ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್​ ತಂಡ ಕೆಕೆಆರ್​ ವಿರುದ್ಧ ಗೆದ್ದರೆ ಹೈದರಾಬಾದ್​ ಮೂರನೇ ಸ್ಥಾನಕ್ಕೆ ಕುಸಿದು ಎಲಿಮಿನೇಟರ್​​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಆಡಲಿದೆ. ​ಎಲಿಮಿನೇಟರ್ ಪಂದ್ಯ ಬುಧವಾರ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

Continue Reading

ಕ್ರೀಡೆ

SRH vs PBKS: ಒಂದು ದಿನ ಕಳೆಯುವ ಮುನ್ನವೇ ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್

SRH vs PBKS: ಪಂಜಾಬ್​ ವಿರುದ್ಧದ ಪಂದ್ಯದಲ್ಲಿ 21 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿದ ಅಭಿಷೇಕ್​ ಒಟ್ಟು 28 ಎಸೆತಗಳಿಂದ 66 ರನ್​ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಅವರ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 6 ಸಿಕ್ಸರ್​ ಮತ್ತು 5 ಬೌಂಡರಿ ಸಿಡಿಯಿತು.

VISTARANEWS.COM


on

SRH vs PBKS
Koo

ಹೈದರಾಬಾದ್: ವಿರಾಟ್​ ಕೊಹ್ಲಿ(Virat Kohli) ಅವರು ಶನಿವಾರ ಚೆನ್ನೈ ವಿರುದ್ಧದ ಪಂದ್ಯದಲ್ಲಿ 4 ಸಿಕ್ಸರ್​ ಬಾರಿಸುವ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ(IPL 2024) ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರ ಎಂಬ ದಾಖಲೆ ಬರೆದಿದ್ದರು. ಆದರೆ ಈ ದಾಖಲೆ ಒಂದು ದಿನ ಕಳೆಯುವ ಮುನ್ನವೇ ಪತನಗೊಂಡಿದೆ. ಸನ್​ರೈಸರ್ಸ್ ಹೈದರಾಬಾದ್(SRH vs PBKS)​ ತಂಡದ ಯುವ ಆಟಗಾರ ಅಭಿಷೇಕ್​ ಶರ್ಮ(Abhishek Sharma) ಈ ದಾಖಲೆಯನ್ನು ಮರಿದಿದ್ದಾರೆ.

ಇಂದು(ಭಾನುವಾರ) ನಡೆದ ಐಪಿಎಲ್​ನ 69ನೇ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್​ ವಿರುದ್ಧ ಪ್ರಚಂಡ ಬ್ಯಾಟಿಂಗ್​ ಮೂಲಕ ಸಿಕ್ಸರ್​ಗಳ ಸುರಿಮಳೆಯನ್ನೇ ಸುರಿಸಿದ ಅಭಿಷೇಕ್​ ಬರೋಬ್ಬರಿ 6 ಸಿಕ್ಸರ್​ ಬಾರಿಸಿ ಮಿಂಚಿದರು. ಇದೇ ವೇಳೆ ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ವಿರಾಟ್​ ಕೊಹ್ಲಿ(37) ಅವರ ದಾಖಲೆಯನ್ನು ಹಿಂದಿಕ್ಕಿದರು. ಸದ್ಯ ಅಭಿಷೇಕ್​ 41* ಸಿಕ್ಸರ್​ ಬಾರಿಸಿದ ಸಾಧನೆ ಮಾಡಿದ್ದಾರೆ. ಆರ್​ಸಿಬಿ ಕೂಡ ಪ್ಲೇ ಆಫ್​ ಪ್ರವೇಶಿಸಿದ ಕಾರಣ ಕೊಹ್ಲಿಗೆ ಈ ದಾಖಲೆಯನ್ನು ಮುರಿಯುವ ಅವಕಾಶ ಇನ್ನೂ ಜೀವಂತವಿದೆ. ಒಟ್ಟಾರೆಯಾಗಿ ಉಭಯ ಆಟಗಾರರ ಮಧ್ಯೆ ಸಿಕ್ಸರ್​ ಪೈಪೋಟಿ ಏರ್ಪಟ್ಟಿದೆ.

ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಟಾಪ್​ 5 ಆಟಗಾರರು


ಅಭಿಷೇಕ್ ಶರ್ಮ-41 ಸಿಕ್ಸರ್​​

ವಿರಾಟ್​ ಕೊಹ್ಲಿ-37 ಸಿಕ್ಸರ್​

ನಿಕೋಲಸ್​ ಪೂರನ್​-36 ಸಿಕ್ಸರ್​

ಹೆನ್ರಿಚ್​ ಕ್ಲಾಸೆನ್​-33 ಸಿಕ್ಸರ್​

ಸುನೀಲ್​ ನರೈನ್​-32 ಸಿಕ್ಸರ್

ಇದನ್ನೂ ಓದಿ PBKS vs SRH: ಸೋಲಿನ ಮೂಲಕ ಅಭಿಯಾನ ಮುಗಿಸಿದ ಪಂಜಾಬ್​; ಹೈದರಾಬಾದ್​​ಗೆ 4 ವಿಕೆಟ್​ ಜಯ

ಪಂಜಾಬ್​ ವಿರುದ್ಧದ ಪಂದ್ಯದಲ್ಲಿ 21 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿದ ಅಭಿಷೇಕ್​ ಒಟ್ಟು 28 ಎಸೆತಗಳಿಂದ 66 ರನ್​ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಅವರ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 6 ಸಿಕ್ಸರ್​ ಮತ್ತು 5 ಬೌಂಡರಿ ಸಿಡಿಯಿತು.

ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಪಂಜಾಬ್​ ಕಿಂಗ್ಸ್​ 5 ವಿಕೆಟ್​ಗೆ 214 ರನ್​ ಬಾರಿಸಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು. ಆದರೆ ಈ ಮೊತ್ತ ಹೈದರಾಬಾದ್​ ತಂಡವನ್ನು ಕಟ್ಟಿ ಹಾಕಲು ಸಾಕಾಗಲಿಲ್ಲ. ಗುರಿ ಬೆನ್ನಟ್ಟಿದ ಸನ್​ರೈಸರ್ಸ್​ ಹೈದರಾಬಾದ್ 19.1​ ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 215 ಬಾರಿಸಿ ತವರಿನಲ್ಲಿ ವಿಜಯ ಪತಾಕೆ ಹಾರಿಸಿತು. ಉಭಯ ತಂಡಗಳ ಜಿದ್ದಾಜಿದ್ದಿನ ಬ್ಯಾಟಿಂಗ್​ ಪರಾಕ್ರಮದಿಂದಾಗಿ ಈ ಪಂದ್ಯದಲ್ಲಿ ಒಟ್ಟು 429 ರನ್​ ದಾಖಲಾಯಿತು.

ಈಗಾಗಲೇ ಪ್ಲೇ ಆಫ್​ ಪ್ರವೇಶಿಸಿರುವ ಹೈದರಾಬಾದ್​ ಈ ಗೆಲುವಿನೊಂದಿಗೆ 17 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ರಾತ್ರಿ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್​ ತಂಡ ಕೆಕೆಆರ್​ ವಿರುದ್ಧ ಗೆದ್ದರೆ ಹೈದರಾಬಾದ್​ ಮೂರನೇ ಸ್ಥಾನಕ್ಕೆ ಕುಸಿದು ಎಲಿಮಿನೇಟರ್​​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಆಡಲಿದೆ. ​ಎಲಿಮಿನೇಟರ್ ಪಂದ್ಯ ಬುಧವಾರ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

Continue Reading
Advertisement
Lok Sabha Election 2024
Lok Sabha Election 20243 mins ago

Lok Sabha Election 2024: ಇಂಡಿಗನತ್ತ ಮತಗಟ್ಟೆ ಧ್ವಂಸ ಪ್ರಕರಣ; ಬಂಧಿತರಾಗಿದ್ದ 46 ಮಂದಿಗೆ ಜಾಮೀನು

actor Chetan Kumar Ahimsa
ಸಿನಿಮಾ33 mins ago

Actor Chetan Kumar Ahimsa: ಸಿಎಂ ಸಿದ್ದರಾಮಯ್ಯಗೆ “ಸೋಮಾರಿ” ಎಂದ ನಟ ಚೇತನ್!‌

Ebrahim Raisi
ವಿದೇಶ52 mins ago

Ebrahim Raisi: ಹೆಲಿಕಾಫ್ಟರ್‌ ಪತನದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ವಿಧ್ವಂಸಕ ಕೃತ್ಯವೇ?

Viral News
ವೈರಲ್ ನ್ಯೂಸ್56 mins ago

Viral News: ಮೇಲಿಂದ ಬಿದ್ದು ಬದುಕುಳಿದಿದ್ದ ಮಗುವಿನ ತಾಯಿ ಸೂಸೈಡ್‌; ಸೋಶಿಯಲ್‌ ಮೀಡಿಯಾ ಕಮೆಂಟ್‌ನಿಂದಲೇ ಖಿನ್ನತೆಗೊಳಗಾಗಿದ್ಳಾ?

Actor Rajinikanth attends grandson Ved cricket themed birthday party
ಕಾಲಿವುಡ್57 mins ago

Actor Rajinikanth: ಮೊಮ್ಮಗನ ಕ್ರಿಕೆಟ್‌ ಥೀಮ್‌ ಬರ್ತ್‌ಡೇ ಪಾರ್ಟಿಯಲ್ಲಿ ಭಾಗಿಯಾದ ತಲೈವಾ!

Kamal Haasan Indian 2 to release on July 12
ಕಾಲಿವುಡ್1 hour ago

Kamal Haasan: ಕಮಲ್‌ ಹಾಸನ್‌ ಅಭಿನಯದ ‘ಇಂಡಿಯನ್ 2′  ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

rain news charamadi ghat traffic jam
ಮಳೆ2 hours ago

Rain news: ಚಾರ್ಮಾಡಿ ಘಾಟಿಯಲ್ಲಿ ಮಳೆಗೆ ಸಿಲುಕಿಕೊಂಡ ನೂರಾರು ಪ್ರಯಾಣಿಕರು

CET Result
ಶಿಕ್ಷಣ2 hours ago

CET Result: ಅಧಿಕಾರಿಗಳ ಎಡವಟ್ಟಿನಿಂದ ವಿಳಂಬ; ಸಿಇಟಿ ಫಲಿತಾಂಶ ಯಾವಾಗ ಪ್ರಕಟವಾಗಬಹುದು?

Lok Sabha Election 2024 Akshay Kumar casts vote for the first time
ಬಾಲಿವುಡ್2 hours ago

Lok Sabha Election 2024: ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌!

Ebrahim Raisi
ವಿದೇಶ2 hours ago

Ebrahim Raisi: ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತ್ತೆ; ದುರ್ಘಟನಾ ಸ್ಥಳದ ವಿಡಿಯೋ ಲಭ್ಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ19 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ20 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ21 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌