Site icon Vistara News

Anushka Sharma: ಕೇಕ್​ ನೀಡಿಲ್ಲವೆಂದು ಪತ್ನಿಗೆ ಇನ್​ಸ್ಟಾಗ್ರಾಮ್​ನಲ್ಲಿ ಕಮೆಂಟ್​ ಮಾಡಿದ ಕೊಹ್ಲಿ

Virat Kohli (left) and Anushka Sharma

ಮುಂಬಯಿ: ಟೀಮ್​ ಇಂಡಿಯಾ ಆಟಗಾರ ವಿರಾಟ್‌ ಕೊಹ್ಲಿ (Virat Kohli) ಮತ್ತು ಅವರ ಪತ್ನಿ, ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ(Anushka Sharma) ಸದಾ ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯರಾಗಿರುತ್ತಾರೆ. ತಮ್ಮ ಪ್ರವಾಸ ಮತ್ತು ಜಹೀರಾತಿನ ಕುರಿತ ವಿಡಿಯೊ ಮತ್ತು ಫೋಟೊಗಳನ್ನು ಪೋಸ್ಟ್​ ಮಾಡುತ್ತಲೇ ಇರುತ್ತಾರೆ. ಅನುಷ್ಕಾ ಶರ್ಮ ಮಾಡಿರುವ ಇನ್​ಸ್ಟಾಗ್ರಾಮ್​ ಪೋಸ್ಟ್​ ಒಂದಕ್ಕೆ ಕೊಹ್ಲಿ ಮಾಡಿರುವ ಕಮೆಂಟ್​ ವೈರಲ್​ ಆಗಿದೆ.

ಅನುಷ್ಕಾ ಶರ್ಮ ಅವರು ಜಾಹೀರಾತಿನ ಭಾಗವಾಗಿ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ತಮ್ಮ ಮುದ್ದಾದ ಫೋಟೊವೊಂದನ್ನು ಹಾಕಿದ್ದರು, ಇದಕ್ಕೆ ಪತಿ ವಿರಾಟ್​ ಕೊಹ್ಲಿ, “ಡ್ರಾಮ ಸಾಕು ನನ್ನ ಕೇಕ್​ ಕೂಡ ನೀನೇ ತಿಂದು ಮುಗಿಸಿದ್ದೀಯ” ಎಂದು ನಗುತ್ತಿರುವ ಎಮೊಜಿ ಹಾಕಿ ಕಮೆಂಟ್​ ಮಾಡಿದ್ದಾರೆ. ಈ ಕಮೆಂಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಸುಂದರವಾದ ಜೋಡಿ ಎಂದು ಹೇಳಿದ್ದಾರೆ. ಇನ್ನು ಕೆಲವರು ಕೊಹ್ಲಿಗೆ ಒಂದು ತುಂಡು ಕೇಟ್​ ಆದರೂ ಇಡಬಹುದಿತ್ತಲ್ಲವೇ ಎಂದು ತಮಾಷೆಯ ಕಮೆಂಟ್​ ಮಾಡಿದ್ದಾರೆ.

ಕೊಹ್ಲಿ ಮತ್ತು ಅನುಷ್ಕಾ ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿದ್ದಾರೆ. ಈ ಜೋಡಿ ಸೇವಾ (seVVA) ಎಂಬ ಹೆಸರಿನ ಎನ್​ಜಿವೊ ನಡೆಸುತ್ತಿದ್ದು ಈ ಮೂಲಕ ಹಲವರಿಗೆ ಸಹಾಯವನ್ನು ಮಾಡುತ್ತಿದ್ದಾರೆ. ಕೊಹ್ಲಿಯ ಎಲ್ಲ ಏರಿಳಿತದಲ್ಲಿಯೂ ಪತ್ನಿ ಅನುಷ್ಕಾ ಬೆಂಬಲಕ್ಕೆ ನಿಂತು ಅವರಿಗೆ ಸಾದಾ ಪ್ರೋತ್ಸಾಹವನ್ನು ನೀಡುತ್ತಲೇ ಬಂದಿದ್ದಾರೆ. ಕೊಹ್ಲಿ ಕೂಡ ತನ್ನ ಬದುಕಿನಲ್ಲಿ ಅನುಷ್ಕಾ ಮುಖ್ಯ ಪಾತ್ರಹಿಸಿರುದಾಗಿ ಹಿಂದೊಮ್ಮೆ ಸಂದರ್ಶನದಲ್ಲಿ ಹೇಳಿದ್ದರು. “ಅನುಷ್ಕಾ ಅವರ ಭೇಟಿ ನನ್ನ ಜೀವನದಲ್ಲಿ ಹೊಸ ದೃಷ್ಟಿಕೋನವನ್ನು ಕೊಟ್ಟಿದೆ. ಹಾಗೇ ಎಲ್ಲವನ್ನೂ ಸ್ವೀಕರಿಸುವ ಭಾವನೆಯನ್ನು ಬೆಳೆಸಿಕೊಳ್ಳಲು ಸಹಕರಿಸಿದೆ” ಎಂದು ಕೊಹ್ಲಿ ಹೇಳಿದ್ದರು.

ಇದನ್ನೂ ಓದಿ Virat Kohli : ಪಾಕ್ ವಿರುದ್ಧದ ಪಂದ್ಯದಲ್ಲಿ ಶತಕ ಬಾರಿಸಿ ದಾಖಲೆಗಳ ಮೇಲೆ ದಾಖಲೆ ಬರೆದ ವಿರಾಟ್​ ಕೊಹ್ಲಿ


“ನನ್ನ ಜೀವನವು ಸಂಪೂರ್ಣವಾಗಿ ವಿಭಿನ್ನ ದೃಷ್ಟಿಕೋನವನ್ನು ಹೊಂದಿತ್ತು. ನೀವು ಒಬ್ಬ ವ್ಯಕ್ತಿಯೊಂದಿಗೆ ಪ್ರೀತಿಯಲ್ಲಿ ಬಿದ್ದಾಗ, ನಿಮ್ಮೊಳಗೆ ಆ ಬದಲಾವಣೆಗಳನ್ನು ಪ್ರಕ್ರಿಯೆಗೊಳಿಸಲು ಪ್ರಾರಂಭಿಸುತ್ತೀರಿ. ಅವಳ ಜೀವನದ ದೃಷ್ಟಿಕೋನವು ವಿಭಿನ್ನವಾಗಿತ್ತು ಮತ್ತು ಅದು ನನ್ನನ್ನು ಉತ್ತಮವಾಗಿ ಬದಲಾಯಿಸಲು ಮತ್ತು ವಿಷಯಗಳನ್ನು ಹೆಚ್ಚು ಒಪ್ಪಿಕೊಳ್ಳುವಂತೆ ಪ್ರೇರೇಪಿಸಿತು. ತಾಯಿಯಾಗಿ ಅನುಷ್ಕಾ ಮಾಡಿದ ತ್ಯಾಗಗಳು ದೊಡ್ಡವು. ಅವಳನ್ನು ನೋಡಿದಾಗ, ನನಗೆ ಏನೇ ಸಮಸ್ಯೆಗಳಿದ್ದರೂ ಏನೂ ಅಲ್ಲ ಎಂದು ಎನಿಸಿಬಿಡುತ್ತದೆ” ಎಂದು ಕೊಹ್ಲಿ ಪತ್ನಿ ಅನುಷ್ಕಾ ಬಗ್ಗೆ ಮೆಚ್ಚುಗೆಯ ಮಾತುಗಳನಾಡಿದ್ದರು. ಸದ್ಯ ವಿರಾಟ್​ ಕೊಹ್ಲಿ ವಿಶ್ವಕಪ್​ (icc world cup 2023)ಟೂರ್ನಿಯಲ್ಲಿ ಇಂದು ನಡೆಯುವ ಇಂಗ್ಲೆಂಡ್​ ವಿರುದ್ಧದ ಪಂದ್ಯಕ್ಕೆ ಸಜ್ಜಾಗುತ್ತಿದ್ದಾರೆ.

Exit mobile version