ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆ ಕೆಎಸ್. ಈಶ್ವರಪ್ಪ ಅವರ ನಿರ್ದೇಶನದಂತೆ ನಡೆಯುತ್ತಿದೆ ಎಂಬ ಅನುಮಾನವಿದೆ. ಹೀಗಾಗಿ ತನಿಖೆಯನ್ನು ಪಾರದರ್ಶಕವಾಗಿ ನಡೆಸಬೇಕು ಎಂದು ಸಂತೋಷ್ ಪತ್ನಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಗುರುವಾರ ನವ ದೆಹಲಿಗೆ ಪ್ರಯಾಣ ಮಾಡುತ್ತಾರೆ ಎಂಬ ವಿಚಾರ ಬಹಿರಂಗವಾದಾಗಿನಿಂದ ಪಕ್ಷದಲ್ಲಿ ಡಿಮ್ಯಾಂಡ್ ಹೆಚ್ಚಾಗಿತ್ತು. ತಮಗೂ ಸಚಿವ ಸ್ಥಾನ ಕೊಡಿಸಿ ಎನ್ನುತ್ತ ಹಿರಿಯರು, ಮಾಜಿ ಸಚಿವರುಗಳೆಲ್ಲ ದುಂಬಾಲು ಬಿದ್ದಿದ್ದರು.
CM ಬಸವರಾಜ ಬೊಮ್ಮಾಯಿ ಗುರುವಾರ ಮದ್ಯಾಹ್ನದಿಂದ ಶುಕ್ರವಾರ ಮದ್ಯಾಹ್ನದವರೆಗೆ ನವ ದೆಹಲಿಯಲ್ಲಿರಲಿದ್ದಾರೆ.
ಉಡುಪಿಗೂ ಮುನ್ನ ಸಂತೋಷ್ ಪಾಟೀಲ್ ತಮ್ಮ ಇಬ್ಬರು ಸ್ನೇಹಿತರ ಜತೆಗೆ ಚಿಕ್ಕಮಗಳೂರು ಪ್ರವಾಸ ಮಾಡಿದ್ದರು ಎಂಬ ಮಾಹಿತಿ ಮೇರೆಗೆ ಉಡುಪಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಚಿವ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡುವುದಾಗಿ ಶಿವಮೊಗ್ಗದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿದ ಈಶ್ವರಪ್ಪ ಘೋಷಣೆ ಮಾಡಿದ್ದಾರೆ.